Homeಕರ್ನಾಟಕಕಾರ್ಮಿಕ ಕಾಯ್ದೆಗಳ ತಿದ್ದುಪಡಿಯಿಂದ ಒಳ್ಳೆಯದಾಗಿದೆ: ಕಾರ್ಮಿಕ ಸಚಿವರ ಹೇಳಿಕೆಗೆ ತೀವ್ರ ವಿರೋಧ

ಕಾರ್ಮಿಕ ಕಾಯ್ದೆಗಳ ತಿದ್ದುಪಡಿಯಿಂದ ಒಳ್ಳೆಯದಾಗಿದೆ: ಕಾರ್ಮಿಕ ಸಚಿವರ ಹೇಳಿಕೆಗೆ ತೀವ್ರ ವಿರೋಧ

ಇಡೀ ದೇಶದಲ್ಲಿನ ಯಾವ ರಾಜ್ಯ ಸರ್ಕಾರಗಳಿಗೂ ಸಾಂಕ್ರಾಮಿಕದ ಸಮಯದಲ್ಲಿ ಕಾರ್ಮಿಕರಿಗೆ ಪೂರ್ಣ ಪ್ರಮಾಣದಲ್ಲಿ ನ್ಯಾಯ ಕೊಡಲು ಸಾಧ್ಯವಾಗಿಲ್ಲ - ಶಿವರಾಮ್ ಹೆಬ್ಬಾರ್

- Advertisement -
- Advertisement -

“ಕಳೆದ ಆರೇಳು ತಿಂಗಳಿನಿಂದ ಕಾರ್ಮಿಕರು ಸಾಕಷ್ಟು ಕಷ್ಟ ಅನುಭವಿಸಿದರು. ಎಷ್ಟೋ ಕಾರ್ಮಿಕರು ಬದುಕುವ ಹಕ್ಕು ಹಾಗೂ ಶಕ್ತಿಯನ್ನು ಕಳೆದುಕೊಂಡಿದ್ದನ್ನು ನಾವು ಗಮನಿಸಿದ್ದೇವೆ. ಕಾರ್ಮಿಕ ಇಲಾಖೆ ಇರುವುದು ಕಾರ್ಮಿಕರ ರಕ್ಷಣೆಗಾಗಿ. ಆದರೆ ಈ ಆರೇಳು ತಿಂಗಳಿನ ಸಂದರ್ಭದ್ಲಿ ಕಾರ್ಮಿಕರಿಗೆ ನೂರಕ್ಕೆ ನೂರರಷ್ಟು ನ್ಯಾಯ ಕೊಡಲು ಸಾಧ್ಯವಾಗಿಲ್ಲ ಇದು ನಮಗೆ ಗೊತ್ತಿದೆ. ಆದರೂ ಅನೇಕ ಕಾರ್ಮಿಕ ಕಾನೂನು ತಿದ್ದುಪಡಿಗಳಿಂದ ಕಾರ್ಮಿಕರಿಗೆ ನ್ಯಾಯವು ಸಿಕ್ಕಿದೆ. ಅನೇಕ ಸಂದರ್ಭಗಳಲ್ಲಿ ನ್ಯಾಯ ಸಿಕ್ಕಿಲ್ಲ” ಎಂದು ರಾಜ್ಯ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದರು.

ಈ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ಕಾರ್ಮಿಕರು ಕಾರ್ಮಿಕ ಕಾಯ್ದೆಗಳ ತಿದ್ದುಪಡಿಯಿಂದ ಕಾರ್ಮಿಕರಿಗೆ ನ್ಯಾಯ ಸಿಗುವ ಬದಲು ಅನ್ಯಾಯವಾಗಿದೆ. ತಿದ್ದುಪಡಿ ಮಾಡುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಧಿಕ್ಕಾರ ಎಂದು ಘೋಷಣೆ ಕೂಗಿದರು. ಇದರಿಂದ ಸಚಿವರು ತಬ್ಬಿಬ್ಬಾದರೆ ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು. ನಂತರ ಕಾರ್ಮಿಕರ ಮುಖಂಡರು ಪರಿಸ್ಥಿತಿ ತಿಳಿಗೊಳಿಸಿದರು.

ಇದು ಇಂದು ಮಧ್ಯಾಹ್ನ ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ನಡೆದ ಘಟನೆ. ಸಿಐಟಿಯು ನೇತೃತ್ವದಲ್ಲಿ ಸಾವಿರಾರು ಕಾರ್ಮಿಕರು ಹಲವು ಹಕ್ಕೊತ್ತಾಯಗಳ ಈಡೇರಿಕೆಗೆ ಒತ್ತಾಯಿಸಿ ಇಂದಿನಿಂದ ಬೃಹತ್ ಧರಣಿ ಆರಂಭಿಸಿದ್ದಾರೆ. ಈ ಸಮಯದಲ್ಲಿ ಕಾರ್ಮಿಕರ ಮನವಿ ಸ್ವೀಕರಿಸಲು ಬಂದಿದ್ದ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್‌ ವಿರುದ್ಧ ಕಾರ್ಮಿಕರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಂತರ ಮಾತನಾಡಿದ ಸಚಿವರು “ಇಡೀ ದೇಶದಲ್ಲಿನ ಯಾವ ರಾಜ್ಯ ಸರ್ಕಾರಗಳಿಗೂ ಸಾಂಕ್ರಾಮಿಕದ ಸಮಯದಲ್ಲಿ ಕಾರ್ಮಿಕರಿಗೆ ಪೂರ್ಣ ಪ್ರಮಾಣದಲ್ಲಿ ನ್ಯಾಯ ಕೊಡಲು ಸಾಧ್ಯವಾಗಿಲ್ಲ. ಆದರೆ ಈ ಸಮಯದಲ್ಲಿ ನಾವು ಸಾಧ್ಯವಾದಷ್ಟು ಸೌಹಾರ್ದಯುತವಾಗಿ ಕಾರ್ಮಿಕ ಸಂಘಟನೆಗಳೊಂದಿಗೆ ಮಾತಾಡಿದ್ದೇವೆ. ಕಾರ್ಮಿಕರು ಮತ್ತು ಮಾಲೀಕರ ನಡುವೆ ಸೇತುವೆಯಾಗಿ ಕೆಲಸ ಮಾಡಿದ್ದೇವೆ ಎಂದರು.

ಕಾರ್ಮಿಕ ಕಾಯ್ದೆಗಳ ತಿದ್ದುಪಡಿಗಳ ಬಗ್ಗೆ ಕಾರ್ಮಿಕರಲ್ಲಿ ಅಸಮಾಧಾನ ಇರುವುದನ್ನು ಗಮನಿಸಿದ್ದೇವೆ. ಇದನ್ನು ಮುಖ್ಯಮಂತ್ರಿಗಳು ಜೊತೆ ಕೂತು ಚರ್ಚೆ ಮಾಡುತ್ತೇವೆ. ಕಾರ್ಮಿಕರ ಭಾವನೆಯನ್ನು ಸರ್ಕಾರಕ್ಕೆ ತಲುಪಿಸುತ್ತೇನೆ. ಕಾರ್ಮಿಕರಿಗೆ ಬದುಕುವ ಶಕ್ತಿ ನೀಡುವುದು ನಮ್ಮ ಮೊದಲ ಆದ್ಯತೆಯಾದರೆ, ಕಾರ್ಮಿಕರ ಹಕ್ಕುಗಳನ್ನು ರಕ್ಷಣೆ ಮಾಡುವುದು ಎರಡನೇ ಆದ್ಯತೆಯಾಗಿದೆ ಎಂದರು. ಹಾಗಾಗಿ ಮುಖ್ಯಮಂತ್ರಿಗಳೊಂದಿಗೆ ಶೀಘ್ರದಲ್ಲಿಯೇ ಸಭೆ ಏರ್ಪಡಿಸುವುದಾಗಿ ಭರವಸೆ ನೀಡಿದರು.

ಕಾರ್ಮಿಕರ ಹಕ್ಕೊತ್ತಾಯಗಳು

  • ಕೆಲಸದ ಅವಧಿ ಹೆಚ್ಚಳ, ವಾರದ ಕೆಲಸದ ಮಿತಿಯ ಹೆಚ್ಚಳದಂತಹ ತಿದ್ದುಪಡಿಗಳನ್ನು ಕೈಬಿಡಬೇಕು.
  • 2021-21 ರ ಸಾಲಿನ ತುಟ್ಟಿಭತ್ಯೆ ಮುಂದೂಡಿಕೆ ಆದೇಶ ರದ್ದು ಮಾಡಿ, ಬಾಕಿ ಹಣ ನೀಡಬೇಕು.
  • ಅಂತರರಾಜ್ಯ ವಲಸೆ ಕಾರ್ಮಿಕ (ಉದ್ಯೋಗ ಮತ್ತು ಸೇವಾ ಶರತ್ತುಗಳ) ಕಾಯ್ದೆ-1970 ಅನ್ನು ಜಾರಿಗೊಳಿಸಬೇಕು.
  • ಕೇಂದ್ರ ಸರ್ಕಾರ ರಾಜ್ಯದ ಜಿಎಸ್‌ಟಿ ಪಾಲು ಮತ್ತು ಪ್ರವಾಹ ಪರಿಹಾರವನ್ನು ಕೂಡಲೇ ನೀಡಬೇಕು.
  • ಎಪಿಎಂಸಿ ಕಾಯ್ದೆ, ಭೂ ಸುಧಾರಣಾ ಕಾಯ್ದೆ, ಅಗತ್ಯ ಸರಕುಗಳ ಕಾಯ್ದೆ, ವಿದ್ಯುತ್ ಕಾಯ್ದೆಗಳಿಗೆ ರಾಜ್ಯ ಸರ್ಕಾರ ತಂದಿರುವ ತಿದ್ದುಪಡಿ ಸುಗ್ರೀವಾಜ್ಞೆಗಳನ್ನು ವಾಪಸ್ ಪಡೆಯಬೇಕು.
  • ಶಿಕ್ಷಣ, ಆರೋಗ್ಯ, ರೈಲು, ರಸ್ತೆ, ವಿದ್ಯುತ್, ದೂರಸಂಪರ್ಕ, ವಿಮಾ, ಬ್ಯಾಂಕ್ ಮುಂತಾದ ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ನಿಲ್ಲಬೇಕು.
  • ಆದಾಯ ತೆರಿಗೆ ವ್ಯಾಪ್ತಿಗೆ ಬಾರದ ಎಲ್ಲಾ ಕುಟುಂಬಗಳಿಗೆ ಮಾಸಿಕ 7,500 ರೂಗಳ ನೆರವನ್ನು ಆರು ತಿಂಗಳ ಕಾಲ ನೀಡಬೇಕು. ಎಲ್ಲಾ ಕುಟುಂಬಗಳ ಪ್ರತಿ ಸದಸ್ಯರಿಗೆ ಮಾಸಿಕ ತಲಾ 10 ಕೆ.ಜಿ. ಆಹಾರ ಪದಾರ್ಥಗಳನ್ನು ನೀಡಬೇಕು.
  • ನಗರ ಹಾಗೂ ಗ್ರಾಮೀಣ ಪ್ರದೇಶದ ಅಗತ್ಯವಿರುವ ಎಲ್ಲರಿಗೂ ಉದ್ಯೋಗ ಖಾತ್ರಿ ಯೋಜನೆಯಡಿ ವರ್ಷಕ್ಕೆ 200 ದಿನಗಳ ಉದ್ಯೋಗ ನೀಡಬೇಕು. ಕನಿಷ್ಟ ಕೂಲಿ 600 ರೂಗಳಿಗೆ ಹೆಚ್ಚಿಸಬೇಕು.
  • ವಿದ್ಯಾವಂತ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಗೆ ನಿರುದ್ಯೋಗ ಭತ್ಯೆ ಮಾಸಿಕ 10,000 ರೂಗಳನ್ನು ನೀಡಬೇಕು.
  • ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಬಲಪಡಿಸಬೇಕು. ಜಿಡಿಪಿಯ 3 ಶೇಕಡ ಹಣವನ್ನು ಆರೋಗ್ಯಕ್ಕೆ ಒದಗಿಸಬೇಕು.
  • ಆನ್ ಲೈನ್ ಶಿಕ್ಷಣ ನೆಪದ ಲೂಟಿ ತಡೆಯಬೇಕು. ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ಉದ್ಯೋಗ ಮತ್ತು ವೇತನ ಸಂರಕ್ಷಿಸಬೇಕು.
  • ಕೇಂದ್ರೀಕರಣ, ವಾಣಿಜ್ಯೀಕರಣ ಮತ್ತು ಕೋಮುವಾದೀಕರಣಕ್ಕೆ ಎಡೆ ಮಾಡುವ ನೂತನ ಶಿಕ್ಷಣ ನೀತಿ-2020 (NEP) ರದ್ದುಪಡಿಸಬೇಕು. ಸಾರ್ವತ್ರಿಕ ಶಿಕ್ಷಣ ಬಲಪಡಿಸಬೇಕು. ಐಸಿಡಿಎಸ್ ಯೋಜನೆ ಬಲಪಡಿಸಬೇಕು.
  • ರೂ.21,000/- ಸಮಾನ ಕನಿಷ್ಟ ವೇತನ ನಿಗದಿ ಮಾಡಬೇಕು. ಕಾರ್ಮಿಕ ಸಂಘದ ಕಡ್ಡಾಯ ಮಾನ್ಯತೆಯ ಶಾಸನ ರೂಪಿಸಬೇಕು, ಗುತ್ತಿಗೆ ಕಾರ್ಮಿಕರ ಖಾಯಂಗೆ ಅಸ್ಸಾಂ ಮತ್ತು ತಮಿಳುನಾಡು ಮಾದರಿಯಲ್ಲಿ ಶಾಸನ ರೂಪಿಸಬೇಕು.

ಇದನ್ನೂ ಓದಿ: ಭಾರತ ಮೋದಿ, ಯಡಿಯೂರಪ್ಪನವರದಲ್ಲ, ಭಾರತವನ್ನು ಕಟ್ಟಿದವರು ನಾವು – ಕೆ.ಎನ್ ಉಮೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....