Homeಕರ್ನಾಟಕಸೆ. 26ಕ್ಕೆ ವಿಧಾನಸಭಾ ಅಧಿವೇಶನ ಅಂತ್ಯ: ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯ

ಸೆ. 26ಕ್ಕೆ ವಿಧಾನಸಭಾ ಅಧಿವೇಶನ ಅಂತ್ಯ: ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯ

ರಾಜ್ಯ ಸರ್ಕಾರ ನಮ್ಮ ಶಾಸಕರ 1600 ಪ್ರಶ್ನೆಗಳಿಗೂ ಉತ್ತರ ನೀಡಿಲ್ಲ. ಜನಪರ ಚರ್ಚೆಗೂ ಇಲ್ಲಿ ಅವಕಾಶವಿಲ್ಲ. ಈ ಸರ್ಕಾರ ಸಂಪೂರ್ಣವಾಗಿ ಜನರ ವಿಶ್ವಾಸ ಕಳೆದುಕೊಂಡಿದೆ- ಡಿ.ಕೆ.ಶಿವಕುಮಾರ್

- Advertisement -
- Advertisement -

ಕರ್ನಾಟಕ ವಿಧಾನಸಭೆ ಅಧಿವೇಶನವು ಸೆ.26 ರಂದು ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಆ ದಿನದಂದು, ಎಲ್ಲಾ ಇಲಾಖೆಗಳ ಮುಖ್ಯ ಕಾರ್ಯದರ್ಶಿ/ಪ್ರಧಾನ ಕಾರ್ಯದರ್ಶಿಗಳು ಹಾಜರಿದ್ದು ಸಚಿವರುಗಳ ಪ್ರಶ್ನೆಗಳಿಗೆ ಸಂಬಂಧಿಸಿದಂತೆ ಉತ್ತರಗಳು ಮತ್ತು ಅಗತ್ಯ ಮಾಹಿತಿಯನ್ನು ನೀಡುವಂತೆ ಸರ್ಕಾರದ ಅಧೀನ ಕಾರ್ಯದರ್ಶಿಗಳಾದ ಮೊಹಮ್ಮದ್ ನಯೀಮ್ ಮೊಮಿನ್ ಇಂದು ಸುತ್ತೋಲೆ ಹೊರಡಿಸಿದ್ದಾರೆ.

ಸೆ.21 ರಿಂದ ವಿಧಾನಸಭಾ ಅಧಿವೇಶನವು ಆರಂಭವಾಗಿದ್ದು, ಹಲವು ದಿನಗಳು ನಡೆಯಬೇಕಿದ್ದ ಸದನವನ್ನು ಕೊರೊನಾ ಕಾರಣದಿಂದ ಕೇವಲ 6 ದಿನಗಳಿಗೆ ಸೀಮಿತಗೊಳಿಸಲಾಗಿದೆ. ಹಾಗಾಗಿ ಸೆ. 26ರಂದು ಅಧಿವೇಶನದ ಕಾರ್ಯಕಲಾಪಗಳು ಕೊನೆಗೊಳ್ಳಲಿವೆ.

ಈ ಹಿಂದೆ ಕೇವಲ 3 ದಿನಗಳಿಗೆ ಸೀಮಿತಗೊಳಿಸುತ್ತೇವೆ ಎಂದು ಯಡಿಯೂರಪ್ಪನವರು ಹೇಳಿದ್ದರು. ಇದಕ್ಕೆ ವಿರೋಧ ಪಕ್ಷ ತೀವ್ರವಾದ ವಿರೋಧ ವ್ಯಕ್ತಪಡಿಸಿದ್ದರಿಂದ 6 ದಿನಗಳಿಗೆ ವಿಸ್ತರಿಸಲಾಗಿದೆ.

ಇದನ್ನೂ ಓದಿ: ಅಂಬೇಡ್ಕರ್ ಕನಸಿನ ಭೂ ಹಂಚಿಕೆ ಜಾರಿಯಾಗಲಿ: ನೂರ್ ಶ್ರೀಧರ್

ವಿಧಾನಸಭೆ ಅಧಿವೇಶನ ಆರಂಭಾವಾದಂದಿನಿಂದ, ಕೃಷಿಗೆ ಸಂಬಂಧಿಸಿದ ಸರ್ಕಾರದ ಸುಗ್ರೀವಾಜ್ಞೆಗಳನ್ನು ವಿರೋಧಿಸಿ ರಾಜ್ಯದ ರೈತ, ಕಾರ್ಮಿಕ ಮತ್ತು ದಲಿತ ಸಂಘಟನೆಗಳು ಒಟ್ಟಾಗಿ ಐಕ್ಯ ಹೋರಾಟ ಮತ್ತು ಪರ್ಯಾಯ ಅಧಿವೇಶನವನ್ನು ನಡೆಸುತ್ತಿವೆ. ಇಷ್ಟೇ ಅಲ್ಲದೇ ಇನ್ನೂ ಹಲವಾರು ಸಂಘಟನೆಗಳು ತಮ್ಮ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿವೆ.

ಈ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿ, “ರಾಜ್ಯ ಸರ್ಕಾರ ನಮ್ಮ ಶಾಸಕರ 1600 ಪ್ರಶ್ನೆಗಳಿಗೂ ಉತ್ತರ ನೀಡಿಲ್ಲ. ಜನಪರ ಚರ್ಚೆಗೂ ಇಲ್ಲಿ ಅವಕಾಶವಿಲ್ಲ. ಈ ಸರ್ಕಾರ ಸಂಪೂರ್ಣವಾಗಿ ಜನರ ವಿಶ್ವಾಸ ಕಳೆದುಕೊಂಡಿದೆ, ಇದನ್ನು ನಮ್ಮ ಪಕ್ಷ ಸದನದಲ್ಲಿ ಮಂಡನೆ ಮಾಡಲಿದೆ. ಅದಕ್ಕೆ ಇವತ್ತೇ ಅವಕಾಶ ಕೊಡಬೇಕು. ಈ ಸರ್ಕಾರ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಕಳೆದುಕೊಂಡಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಆಗ ಉಳುವವನೆ ಭೂಮಿಯ ಒಡೆಯ, ಈಗ ದುಡ್ಡಿದ್ದವನೇ ಭೂಮಿಯ ಒಡೆಯ: ಸಿದ್ದರಾಮಯ್ಯ ಆತಂಕ

ಕೇಂದ್ರ ಮತ್ತು ರಾಜ್ಯ ಸರ್ಕಾರದ ರೈತ ಮತ್ತು ಕಾರ್ಮಿಕ ವಿರೋಧಿ ಸುಗ್ರೀವಾಜ್ಞೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ, ಸೆ.25 ರಂದು ಭಾರತ್ ಬಂದ್ ಮಾಡಲಾಗುತ್ತಿದೆ. ಇದಕ್ಕೆ ಈಗಾಗಲೇ ದೇಶದಾದ್ಯಂತ ಹಲವು ಸಂಘಟನೆಗಳು ಬೆಂಬಲ ಸೂಚಿಸಿವೆ. ಕರ್ನಾಟಕದಲ್ಲಿಯೂ ಐಕ್ಯ ಹೋರಾಟದ ಸಂಘಟನೆಗಳ ವತಿಯಿಂದ ನಾಳೆ (ಸೆ.5) ರಸ್ತೆ ತಡೆ ಚಳುವಳಿಯನ್ನು ಮಾಡಲಾಗುತ್ತಿದೆ. ಇದಕ್ಕೆ ಮಣಿದು ರಾಜ್ಯ ಸರ್ಕಾರ ಸುಗ್ರೀವಾಜ್ಞೆಗಳನ್ನು ಹಿಂಪಡೆಯದಿದ್ದರೆ, ಸೆ.28 ರಂದು ರಾಜ್ಯದಾದ್ಯಂತ ಬಂದ್ ಆಚರಿಸಲಾಗುವುದು ಎಂದು ಐಕ್ಯ ಹೋರಾಟ ಸಮಿತಿ ತಿಳಿಸಿದೆ.


ಇದನ್ನೂ ಓದಿ: ಇಡೀ ಕುಟುಂಬವನ್ನೇ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿರುವ ಯಡಿಯೂರಪ್ಪ: ಸಿದ್ದರಾಮಯ್ಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...