ಮಥುರಾದ ಶ್ರೀ ಕೃಷ್ಣ ದೇವಾಲಯ ಸಂಕೀರ್ಣದ ಪಕ್ಕದಲ್ಲಿರುವ ಶಾಹಿ ಈದ್ಗಾವನ್ನು ತೆಗೆದುಹಾಕುವಂತೆ ಕೋರಿ ಮಥುರಾ ನ್ಯಾಯಾಲಯದ ಹಿರಿಯ ವಿಭಾಗದ ಸಿವಿಲ್ ನ್ಯಾಯಾಧೀಶರ ಮುಂದೆ ಸಿವಿಲ್ ಮೊಕದ್ದಮೆ ಹೂಡಲಾಗಿದೆ.
ಉತ್ತರ ಪ್ರದೇಶದ ಲಕ್ನೋ ನಿವಾಸಿ ರಂಜನಾ ಅಗ್ನಿಹೋತ್ರಿ ಎಂಬವರು ಮೊಕದ್ದಮೆ ಹೂಡಿದ್ದು, ಯುಪಿ ಸುನ್ನಿ ಸೆಂಟ್ರಲ್ ವಕ್ಫ್ ಮಂಡಳಿ ಮತ್ತು ಶಾಹಿ ಈದ್ಗಾ ಟ್ರಸ್ಟ್‌ನ ನಿರ್ವಹಣಾ ಸಮಿತಿಯನ್ನು ಮೊಕದ್ದಮೆಯಲ್ಲಿ ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.
ಮೊಕದ್ದಮೆಯು ದೇವಾಲಯದ ವ್ಯಾಪ್ತಿಯಲ್ಲಿರುವ 13.37 ಎಕರೆ ಭೂಮಿಯನ್ನು ಪಡೆಯಲು ಪ್ರಯತ್ನಿಸುತ್ತದೆ.
ಇದನ್ನೂ ಓದಿ: ಓದುಗರ ಪತ್ರ: ಅಯೋಧ್ಯೆಯಲ್ಲಿ ಶ್ರೀರಾಮನಿದ್ದ ಎಂಬುದಕ್ಕೆ ಕೆಲವು ಪ್ರಶ್ನೆಗಳು
ಕೆಲವು ಮುಸ್ಲಿಮರ ಸಹಾಯದಿಂದ ಈದ್ಗಾ ಟ್ರಸ್ಟ್ ಶ್ರೀ ಕೃಷ್ಣ ಜನಂಸ್ಥಾನ್ ಟ್ರಸ್ಟ್ ಮತ್ತು ದೇವತೆಗೆ ಸೇರಿದ ಭೂಮಿಯನ್ನು ಅತಿಕ್ರಮಣ ಮಾಡಿ ಈದ್ಗಾ ಮಸೀದಿ ನಿರ್ಮಿಸಿದೆ ಎಂದು ಮೊಕದ್ದಮೆಯಲ್ಲಿ ದೂರಲಾಗಿದೆ.
ಶ್ರೀಕೃಷ್ಣನ ಜನ್ಮಸ್ಥಳವು ಟ್ರಸ್ಟ್ ರಚಿಸಿದ ಮಸೀದಿಯ ಕೆಳಗೆ ಇದೆ ಎಂದು ಮೊಕದ್ದಮೆ ಆರೋಪಿಸಿದೆ.
ಅಲ್ಲದೆ ದೇವಾಲಯ ಆಡಳಿತ ಮಂಡಳಿಯಾಗಿರುವ ಶ್ರೀ ಕೃಷ್ಣ ಜನಂಸ್ಥಾನ್ ಸೇವಾ ಸಂಸ್ಥೆಯು ಆಸ್ತಿಯನ್ನು ಕಸಿದುಕೊಳ್ಳುವ ಉದ್ದೇಶದಿಂದ ಶಾಹಿ ಈದ್ಗಾ ಟ್ರಸ್ಟ್‌ನೊಂದಿಗೆ ಅಕ್ರಮ ರಾಜಿ ಮಾಡಿಕೊಂಡಿದೆ ಎಂದು ಆರೋಪಿಸಲಾಗಿದೆ.
“ಶ್ರೀ ಕೃಷ್ಣ ಜನಂಸ್ಥಾನ್ ಸೇವಾ ಸಂಸ್ಥೆಯು ದೇವತೆ ಮತ್ತು ಭಕ್ತರ ಹಿತಾಸಕ್ತಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಿದೆ ಮತ್ತು 1968 ರಲ್ಲಿ ಟ್ರಸ್ಟ್ ಮಸ್ಜಿದ್ ಈದ್ಗಾ (ಟ್ರಸ್ಟ್) ದ ನಿರ್ವಹಣಾ ಸಮಿತಿಯೊಂದಿಗೆ ಮೋಸದಿಂದ ರಾಜಿ ಮಾಡಿಕೊಂಡಿದೆ” ಮೊಕದ್ದಮೆ ಹೇಳಿದೆ.
ಇದನ್ನೂ ಓದಿ: ಅಯೋಧ್ಯೆ ತೀರ್ಪು ಹೊರಬಂದಿರುವ ಸಂದರ್ಭದಲ್ಲಿ… : ಎಚ್.ಎಸ್.ದೊರೆಸ್ವಾಮಿ ಅಭಿಪ್ರಾಯ
ಜುಲೈ 20, 1973 ರಂದು ಮಥುರ ಸಿವಿಲ್ ನ್ಯಾಯಾಧೀಶರು ತೀರ್ಪು ನೀಡಿದ್ದ, “ಕೃಷ್ಣ ಜನ್ಮಸ್ಥಾನ್ ಸೇವಾ ಸಂಸ್ಥಾನ ಮತ್ತು ಟ್ರಸ್ಟ್ ನಡುವಿನ ರಾಜಿ” ಯ ಬಗೆಗಿನ ತೀರ್ಪನ್ನು ರದ್ದುಗೊಳಿಸಬೇಕೆಂದು ಮೊಕದ್ದಮೆಯಲ್ಲಿ ವಿನಂತಿಸಲಾಗಿದೆ.
ಅದಾಗ್ಯೂ 1991 ರಲ್ಲಿ ಅಂಗೀಕರಿಸಲ್ಪಟ್ಟ Places of Worship (Special Provisions Act) ಪ್ರಕಾರ, ಅಯೋಧ್ಯೆಯಲ್ಲಿನ ವಿವಾದಿತ ಸ್ಥಳವನ್ನು ಹೊರತುಪಡಿಸಿ ದೇಶಕ್ಕೆ ಸ್ವಾತಂತ್ರ್ಯ ಸಿಗುವ ಸಮಯದಲ್ಲಿ ಅಸ್ತಿತ್ವದಲ್ಲಿದ್ದಂತೆ ಎಲ್ಲಾ ಧಾರ್ಮಿಕ ರಚನೆಗಳನ್ನು ರಕ್ಷಿಸಬೇಕು ಎಂದು ಹೇಳುತ್ತದೆ.
ಹೀಗಾಗಿ, ಮಸೀದಿಗಳನ್ನು ದೇವಾಲಯಗಳಾಗಿ ಪರಿವರ್ತಿಸುವುದು ಅಥವಾ ದೇವಾಲಯವನ್ನು ಮಸೀದಿಯಾಗಿ ಪರಿವರ್ತಿಸುವುದು ಕಾಯಿದೆಯು ನಿರ್ಬಂಧಿಸಿದೆ.
ಇದನ್ನೂ ಓದಿ: ಅಯೋಧ್ಯೆ ತೀರ್ಪು- ವಿಚಿತ್ರ ತರ್ಕದ ಆಧಾರ: ಮಾರ್ಕಂಡೇಯ ಕಟ್ಜು


