Homeಕರ್ನಾಟಕಮುಖ್ಯಮಂತ್ರಿಗಳ ದಾಳಿಗೆ ಬಗ್ಗುವುದಿಲ್ಲ, ಪವರ್ ಟಿವಿ ಪುಟಿದೇಳಲಿದೆ: ರಹಮಾನ್ ಹಾಸನ್

ಮುಖ್ಯಮಂತ್ರಿಗಳ ದಾಳಿಗೆ ಬಗ್ಗುವುದಿಲ್ಲ, ಪವರ್ ಟಿವಿ ಪುಟಿದೇಳಲಿದೆ: ರಹಮಾನ್ ಹಾಸನ್

ಬಿ.ವೈ ವಿಜಯೇಂದ್ರ ಭ್ರಷ್ಟಾಚಾರ ನಡೆಸಿದ್ದಾರೆಂದು ಕಳೆದ ಹಲವು ದಿನಗಳಿಂದ ದಾಖಲೆ ಸಹಿತ ಸತತವಾಗಿ ವರದಿ ಮಾಡಿ ರಾಜ್ಯದ ಗಮನ ಸೆಳೆದಿದ್ದ ಕನ್ನಡದ ಸುದ್ದಿ ಮಾಧ್ಯಮ “Power TV” ಪ್ರಸಾರವನ್ನು ನಿನ್ನೆ ರಾತ್ರಿಯಿಂದ ತಡೆಹಿಡಿಯಲಾಗಿದೆ.

- Advertisement -
- Advertisement -

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರ ಮಗ ಬಿ.ವೈ ವಿಜಯೇಂದ್ರ ಭ್ರಷ್ಟಾಚಾರವನ್ನು ಬಯಲಿಗೆಳೆದಿದ್ದಕ್ಕೆ Power TV ಯ ಪ್ರಸಾರಕ್ಕೆ ತೆಡೆಯೊಡ್ಡಲಾಗಿದೆ. ಇದನ್ನು ಸಿಎಂ ಮತ್ತು ಅವರ ಮಗ ವಿಜಯೇಂದ್ರ ಮಾಡುತ್ತಿದ್ದಾರೆ. ಇದು ಅಧಿಕಾರದ ದುರುಪಯೋಗವಾಗಿದ್ದು, ಪವರ್‌ ಟಿವಿ ಇದಕ್ಕೆ ಬಗ್ಗುವುದಿಲ್ಲ. ನಾವು ಕಾನೂನಾತ್ಮವಾಗಿ ಹೋರಾಡುತ್ತೇವೆ ಎಂದು ಪವರ್‌ ಟಿವಿಯ ಪ್ರಿನ್ಸಿಪಲ್ ಎಡಿಟರ್‌ ರಹಮಾನ್ ಹಾಸನ್ ಹೇಳಿದ್ದಾರೆ.

ಬಿ.ವೈ ವಿಜಯೇಂದ್ರ ಭ್ರಷ್ಟಾಚಾರ ನಡೆಸಿದ್ದಾರೆಂದು ಕಳೆದ ಹಲವು ದಿನಗಳಿಂದ ದಾಖಲೆ ಸಹಿತ ಸತತವಾಗಿ ವರದಿ ಮಾಡಿ ರಾಜ್ಯದ ಗಮನ ಸೆಳೆದಿದ್ದ ಕನ್ನಡದ ಸುದ್ದಿ ಮಾಧ್ಯಮ “Power TV”ಯ ಪ್ರಸಾರವನ್ನು ನಿನ್ನೆ ರಾತ್ರಿಯಿಂದ ತಡೆಹಿಡಿಯಲಾಗಿದೆ.

ಇದನ್ನೂ ಓದಿ: ಸಿಎಂ ಮಗನ ಭ್ರಷ್ಟಾಚಾರ ಬಯಲು: Power TV ಪ್ರಸಾರಕ್ಕೆ ತಡೆ!

ಈ ಕುರಿತು ಇಂದು ಬೆಳಿಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ರಹಮಾನ್ ಹಾಸನ್, “ಸಿಸಿಬಿ ಅಧಿಕಾರಿಗಳು ನಿನ್ನೆ ಸರ್ಚ್‌ ವಾರೆಂಟ್ ತಂದು ಪವರ್‌ ಟಿವಿಯ ಲೈವ್‌ ಅನ್ನು ತಡೆ ಹಿಡಿದಿದ್ದಾರೆ. ನಮ್ಮ ಹಾರ್ಡ್‌ಡಿಸ್ಕ್‌, ಲ್ಯಾಪ್‌ಟಾಪ್‌ ಇತ್ಯಾದಿ ಎಲ್ಲಾ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ನಂತರ ನಮ್ಮ ಸರ್ವರ್‌ ರೂಮ್‌‌ಗೆ ತೆರಳಿ ನಮ್ಮ ಮುಖ್ಯವಾದ ಸರ್ವರ್‌‌ನಲ್ಲಿರುವ ಡಾಟಾ ಎಲ್ಲವೂ ಬೇಕು ಎಂದಿದ್ದಾರೆ, ಅದಕ್ಕೆ ನಾವು ಡಾಟಾ ಎಲ್ಲವನ್ನೂ ನಿಮಗೆ ಕಾಪಿ ಮಾಡಿ ಕೊಡುತ್ತೇವೆ ಎಂದೆವು ಆದರೆ ಅವನ್ನು ಕೇಳದೆ ಸಂಪೂರ್ಣ ಸರ್ವರ್‌ ಸಿಸ್ಟಂ ಅನ್ನೇ ಪಡೆದುಕೊಂಡಿದ್ದಾರೆ. ಇದರಿಂದಾಗಿ ನಮ್ಮ ಲೈವ್‌ ಕಟ್‌ ಆಗಿದೆ” ಎಂದಿದ್ದಾರೆ.

“ಇಷ್ಟೇ ಅಲ್ಲದೆ, ಫೇಸ್‌ಬುಕ್‌ ಖಾತೆಗಳನ್ನು, ಯೂಟ್ಯೂಬ್‌ ಚಾನೆಲ್‌ನ ಪಾಸ್‌ವರ್ಡ್ ಚೇಂಜ್ ಮಾಡಿ ಅದರ ಪ್ರಸಾರ ನಿಲ್ಲಿಸಿದ್ದಾರೆ. ಇದು ಖಂಡಿತವಾಗಿಯೂ ಅಧಿಕಾರದ ದುರುಪಯೋಗ, ಇದನ್ನು ಸಿಎಂ ಮತ್ತು ಅವರ ಮಗ ಇದನ್ನು ಮಾಡಿದ್ದಾರೆ ಎಂಬುವುದರಲ್ಲಿ ಅನುಮಾನವೆ ಇಲ್ಲ. ಯಾಕೆಂದರೆ ನಾವು ಅವರ ಭ್ರಷ್ಟಾಚಾರವನ್ನು ಸುದ್ದಿ ಮಾಡಿದ್ದೆವು. ಮಾಧ್ಯಮದ ಸ್ವಾತಂತ್ಯ್ರವನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದಾರೆ” ಎಂದು ರಹಮಾನ್ ಹೇಳಿದ್ದಾರೆ.

“ಆದರೆ ನಮ್ಮ ಪ್ರತಿಪಾದನೆಯೇನೆಂದರೆ ನಮ್ಮ ಎಂ.ಡಿ ರಾಕೇಶ್‌ ಶೆಟ್ಟಿಯವರ ಮೇಲೆ ಏನೇ ಪ್ರಕರಣಗಳಿದ್ದರೂ ಅದನ್ನು ಕೋರ್ಟ್‌ನಲ್ಲಿ ಇತ್ಯರ್ಥ ಮಾಡಬೇಕು. ಆದರೆ ಚಾನೆಲ್ ತಡೆಹಿಡಿಯುವುದು ಉದ್ಯೋಗಿಗಳ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಉಂಟುಮಾಡುತ್ತದೆ. ಇದು ಖಂಡನೀಯ. ಪತ್ರಕರ್ತರ ಹಕ್ಕನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಇದಕ್ಕೆ ನಾವು ಬಗ್ಗುವುದಿಲ್ಲ. ಇದನ್ನು ನಾವು ಕಾನೂನಾತ್ಮಕವಾಗಿ ಹೋರಾಡುತ್ತೇವೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಸಿಎಂ ಪುತ್ರನ ಭ್ರಷ್ಟಾಚಾರದ ಬಗ್ಗೆ ನಿರಂತರ ವರದಿ ಮಾಡಿದ Power TV MD ಮನೆ ಮೇಲೆ ಪೊಲೀಸರ ದಾಳಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...