Homeಕರೋನಾ ತಲ್ಲಣಅನ್‌ಲಾಕ್‌ 5.0: ಅಕ್ಟೋಬರ್ 15 ರಿಂದ ಚಿತ್ರಮಂದಿರ, ಸ್ವಿಮ್ಮಿಂಗ್ ಪೂಲ್ ಓಪನ್

ಅನ್‌ಲಾಕ್‌ 5.0: ಅಕ್ಟೋಬರ್ 15 ರಿಂದ ಚಿತ್ರಮಂದಿರ, ಸ್ವಿಮ್ಮಿಂಗ್ ಪೂಲ್ ಓಪನ್

ಶಾಲೆಗಳು ಮತ್ತು ತರಬೇತಿ ಸಂಸ್ಥೆಗಳನ್ನು ಪುನಃ ತೆರೆಯಲು, ರಾಜ್ಯ ಸರ್ಕಾರಗಳಿಗೆ ನಿರ್ಧಾರ ತೆಗೆದುಕೊಳ್ಳುವ ಸ್ವಾತಂತ್ರ್ಯ ನೀಡಲಾಗಿದೆ.

- Advertisement -
- Advertisement -

ಇಷ್ಟು ದಿನ ಸಿನಿ ಪ್ರೇಕ್ಷಕರು, ಕಲಾವಿದರು ಕಾಯುತ್ತಿದ್ದ ಚಿತ್ರಮಂದಿರಗಳ ಕಾರ್ಯಾಚರಣೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಅನ್‌ಲಾಕ್ 5.0 ಮಾರ್ಗಸೂಚಿ ಬಿಡುಗಡೆ ಮಾಡಿರುವ ಕೇಂದ್ರ ಗೃಹ ಸಚಿವಾಲಯ ಅಕ್ಟೋಬರ್‌ 15ರಿಂದ ಚಿತ್ರಮಂದಿರ, ಮಲ್ಟಿಪ್ಲೆಕ್ಸ್ ಮತ್ತು ಸ್ವಿಮ್ಮಿಂಗ್ ಪೂಲ್‌ಗಳನ್ನು ತೆರೆಯಲು ಅನುಮತಿ ನೀಡಿದೆ.

ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದರೂ, ಅನ್‌ಲಾಕ್‌ 5.0 ಮಾರ್ಗಸೂಚಿಯಲ್ಲಿ ಹೆಚ್ಚಿನ ಸಡಿಲಿಕೆ ಮತ್ತು ಕಡಿಮೆ ನಿರ್ಬಂಧಗಳನ್ನು ಗೃಹ ಸಚಿವಾಲಯ ನೀಡಿದೆ. ಆದರೆ ತಾನು ಹೊರಡಿಸಿರುವ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರ ಹಾಗೂ ಸ್ಥಳೀಯ ಆಡಳಿತಗಳು ಶಿಸ್ತುಬದ್ಧವಾಗಿ ಅನುಸರಿಸಬೇಕೆಂದು ಕೇಂದ್ರ ಸೂಚಿಸಿದೆ.

ಇದನ್ನೂ ಓದಿ: ಮಥುರಾ: ಈದ್ಗಾ ಮಸೀದಿ ತೆರವು ಕೋರಿದ್ದ ಮನವಿ ವಜಾ

ಚಿತ್ರಮಂದಿರ ಹಾಗೂ ಮಲ್ಟಿಪ್ಲೆಕ್ಸ್‌ಗಳು ಸಿನಿಮಾ ಪ್ರದರ್ಶನಕ್ಕೆ ಶೇಕಡಾ 50ರಷ್ಟು ಜನರನ್ನು ಮಾತ್ರ ಸೇರಿಸಲು ಸೂಚಿಸಲಾಗಿದೆ. ಕ್ರೀಡಾಪಟುಗಳ ತರಬೇತಿಗಾಗಿ ಬಳಸಲಾಗುವ ಈಜು ಕೊಳಗಳು, ಮನರಂಜನಾ ಉದ್ಯಾನವನಗಳನ್ನು ತೆರೆಯಬಹುದು.

ಶಾಲೆಗಳು ಮತ್ತು ತರಬೇತಿ ಸಂಸ್ಥೆಗಳನ್ನು ಪುನಃ ತೆರೆಯಲು, ರಾಜ್ಯ ಸರ್ಕಾರಗಳಿಗೆ ನಿರ್ಧಾರ ತೆಗೆದುಕೊಳ್ಳುವ ಸ್ವಾತಂತ್ರ್ಯ ನೀಡಲಾಗಿದೆ. ಖುದ್ದು ಶಾಲೆಗೆ ಹಾಜರಾಗಲು ನಿರಾಕರಿಸಿ ಆನ್‌ಲೈನ್ ತರಗತಿಗಳಿಗೆ ಹಾಜರಾಗಲು ಬಯಸುವ ವಿದ್ಯಾರ್ಥಿಗಳಿಗೆ ಅನುಮತಿ ನೀಡಬಹುದು. ಆದರೆ ಪೋಷಕರ ಲಿಖಿತ ಒಪ್ಪಿಗೆಯೊಂದಿಗೆ ಮಾತ್ರ ವಿದ್ಯಾರ್ಥಿಗಳು ಶಾಲೆ ಅಥವಾ ಸಂಸ್ಥೆಗಳಿಗೆ ಹಾಜರಾಗಬಹುದು.


ಇದನ್ನೂ ಓದಿ: ಹತ್ರಾಸ್ ಗ್ಯಾಂಗ್ ರೇಪ್ ಕೇಸ್: ಸಾಮಾಜಿಕ ಮಾಧ್ಯಮಗಳಲ್ಲಿ ಸ್ಫೋಟಗೊಂಡ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...