Homeಕರ್ನಾಟಕಹೋರಾಟಗಾರ ದೊಡ್ಡಿಪಾಳ್ಯ ನರಸಿಂಹಮೂರ್ತಿ ವಿರುದ್ಧದ ಎಲ್ಲಾ ಕೇಸುಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಹೋರಾಟಗಾರ ದೊಡ್ಡಿಪಾಳ್ಯ ನರಸಿಂಹಮೂರ್ತಿ ವಿರುದ್ಧದ ಎಲ್ಲಾ ಕೇಸುಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

"ನಾನಿನ್ನೂ ಕೋರ್ಟ್ ಆವರಣದಲ್ಲಿದ್ದೇನೆ. ಎಲ್ಲಾ ಕೇಸುಗಳಿಂದ ಮುಕ್ತ ಆಗಿದ್ದೇನೆಂದು ಜಡ್ಜ್ ಸಾಹೇಬರು ಹೇಳಿದರು. ಬಹಳಷ್ಟು ಜನ ವಾಟ್ಸಾಪ್‌ನಲ್ಲಿ ಅಭಿನಂದನೆಗಳನ್ನು ತಿಳಿಸುತ್ತಿದ್ದಾರೆ" ಎಂದು ದೊಡ್ಡಿಪಾಳ್ಯ ನರಸಿಂಹ ಮೂರ್ತಿ ಪ್ರತಿಕ್ರಿಯೆ ನೀಡಿದ್ದಾರೆ.

- Advertisement -
- Advertisement -

ನಕ್ಸಲ್ ಆರೋಪದಲ್ಲಿ ಕಳೆದ ವರ್ಷ ಅಕ್ಟೋಬರ್ 24 ರಂದು ಬಂಧಿತರಾಗಿ ನಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಹೋರಾಟಗಾರ, ಸ್ವರಾಜ್ ಇಂಡಿಯಾ ಪಕ್ಷದ ರಾಜ್ಯ ಕಾರ್ಯದರ್ಶಿ ದೊಡ್ಡಿಪಾಳ್ಯ ನರಸಿಂಹಮೂರ್ತಿ ವಿರುದ್ಧದ ಎಲ್ಲಾ ಕೇಸುಗಳನ್ನು ರಾಯಚೂರು ಜಿಲ್ಲಾ ನ್ಯಾಯಾಲಯ ಖುಲಾಸೆಗೊಳಿಸಿದೆ.

ದೊಡ್ಡಿಪಾಳ್ಯ ನರಸಿಂಹಮೂರ್ತಿಯವರನ್ನು ವಿನೋದ ಎಂಬ ಹೆಸರಿನ ನಕ್ಸಲ್ ಎಂದು ಆರೋಪಿಸಿದ್ದ ರಾಯಚೂರು ಪೊಲೀಸರು 1994ರ ರಾಯಚೂರು ಗ್ರಾಮೀಣ (ಯಾಪಲದಿನ್ನಿ) ಪೊಲೀಸ್ ಠಾಣೆಯಲ್ಲಿ ಮೂರು ಕೇಸುಗಳನ್ನು, ರಾಯಚೂರು ನೇತಾಜಿ ನಗರ ಠಾಣೆಯಲ್ಲಿ ದಾಖಲಾಗಿದ್ದ 25 ವರ್ಷಗಳಷ್ಟು ಹಿಂದಿನ ಪ್ರಕರಣದ ಆಧಾರದಲ್ಲಿ ಬಂಧಿಸಿದ್ದರು. ಕಲಂ 143, 147, 148, 307, 355, 385, 120(ಬಿ) 124(ಎ) ಸೇರಿದಂತೆ ಸುಮಾರು 21 ಸೆಕ್ಷನ್ ಗಳನ್ನು ಹಾಕಿದ್ದಲ್ಲದೇ 25 ವರ್ಷಗಳಿಂದ ತಲೆಮರೆಸಿಕೊಂಡಿದ್ದರು ಎಂದು ಆರೋಪಿಸಿದ್ದರು.


ಇದನ್ನೂ ಓದಿ: ಸುಳ್ಳು ಕೇಸಿನಲ್ಲಿ ಪತ್ರಕರ್ತ ದೊಡ್ಡಿಪಾಳ್ಯ ನರಸಿಂಹಮೂರ್ತಿ ಬಂಧನ: ಎಲ್ಲೆಡೆ ತೀವ್ರ ಖಂಡನೆ


ಅಕ್ಟೋಬರ್ 24ರ ಗುರುವಾರ ರಾಯಚೂರಿನಲ್ಲಿ ನಡೆದ ಗೌರಿಲಂಕೇಶ್ ಬಳಗದ ವಿಚಾರಸಂಕಿರಣದಲ್ಲಿ ಭಾಗವಹಿಸಿದ ನಂತರ ದೊಡ್ಡಿಪಾಳ್ಯರವರನ್ನು ವಶಕ್ಕೆ ಪಡೆದಿದ್ದರು. ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ ವೇದಮೂರ್ತಿ ಮತ್ತು ಡಿವೈಎಸ್ಪಿ ಶೀಲವಂತರ್ ಸೇರಿದಂತೆ ಹಲವು ಪೊಲೀಸರು ಒಂದು ದಿನಗಳ ಕಾಲ ಸತತ ವಿಚಾರಣೆ ನಡೆಸಿದ್ದರು. ಆದರೆ ಅವರ ಮೇಲಿನ ಎಲ್ಲಾ ಆರೋಪಗಳನ್ನು ದೊಡ್ಡಿಪಾಳ್ಯ ನರಸಿಂಹ ಮೂರ್ತಿಯವರು ನಿರಾಕರಿಸಿದ್ದರು.

ದೊಡ್ಡಿಪಾಳ್ಯ ನರಸಿಂಹಮೂರ್ತಿಯವರು ಬಂಧನಕ್ಕೆ ರಾಜ್ಯಾದ್ಯಂತ ತೀವ್ರ ಖಂಡನೆ ವ್ಯಕ್ತವಾಗಿತ್ತು. ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆದಿತ್ತು. ಅವರ ಬಿಡುಗಡೆಗೆ ಒತ್ತಾಯಿಸಿ ಹಲವು ಗಣ್ಯರು ದನಿಯೆತ್ತಿದ್ದರು.

ಸುಮಾರು 77 ದಿನಗಳ ಕಾಲ ರಾಯಚೂರು ಜೈಲಿನಲ್ಲಿ ವಿಚಾರಣಾಧೀನ ಖೈದಿಯಾಗಿ ಬಂಧಿಯಾಗಿದ್ದ ದೊಡ್ಡಿಪಾಳ್ಯ ನರಸಿಂಹ ಮೂರ್ತಿಯವರು 2020ರ ಜನವರಿಲ್ಲಿ ಜಾಮೀನು ಪಡೆದು ಹೊರಬಂದಿದ್ದರು. ನಂತರದ ವಿಚಾರಣೆಯಲ್ಲಿ ಅವರ ವಿರುದ್ಧ ಯಾವುದೇ ಸಾಕ್ಷ್ಯವಿಲ್ಲದ ಕಾರಣ ಅವರನ್ನು ವಿನೋದ್ ಎಂದು ಅಭಿಪ್ರಾಯಪಡುವುದು ಸರಿಯಲ್ಲ ಎಂದು ನ್ಯಾಯಾಲಯ ಹೇಳಿದೆ. ಅಲ್ಲದೇ ದೊಡ್ಡಿಪಾಳ್ಯ ನರಸಿಂಹಮೂರ್ತಿಯವರನ್ನು ನಿರ್ದೋಷಿ ಎಂದು ಘೋಷಿಸಿದ ನ್ಯಾಯಾಲಯ ಅವರ ಮೇಲಿದ್ದ ಎಲ್ಲಾ ಪ್ರಕರಣಗಳನ್ನು ಖುಲಾಸೆಗೊಳಿಸಿದೆ.

“ನಾನಿನ್ನೂ ಕೋರ್ಟ್ ಆವರಣದಲ್ಲಿದ್ದೇನೆ. ಎಲ್ಲಾ ಕೇಸುಗಳಿಂದ ಮುಕ್ತ ಆಗಿದ್ದೇನೆಂದು ಜಡ್ಜ್ ಸಾಹೇಬರು ಹೇಳಿದರು. ಬಹಳಷ್ಟು ಜನ ವಾಟ್ಸಾಪ್‌ನಲ್ಲಿ ಅಭಿನಂದನೆಗಳನ್ನು ತಿಳಿಸುತ್ತಿದ್ದಾರೆ” ಎಂದು ದೊಡ್ಡಿಪಾಳ್ಯ ನರಸಿಂಹ ಮೂರ್ತಿ ಪ್ರತಿಕ್ರಿಯೆ ನೀಡಿದ್ದಾರೆ.


ಇದನ್ನೂ ಓದಿ: ದೊಡ್ಡಿಪಾಳ್ಯ ನರಸಿಂಹಮೂರ್ತಿ ಬಂಧನ ಖಂಡಿಸಿದ ಕರ್ನಾಟಕದ ಹಿರಿಯ ಗಣ್ಯರು : ಜಂಟಿ ಹೇಳಿಕೆ ಬಿಡುಗಡೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...