Homeಕರ್ನಾಟಕಹತ್ರಾಸ್‌‌: ರಾಹುಲ್ ಗಾಂಧಿ ಮೇಲಿನ ಪೊಲೀಸ್‌ ದೌರ್ಜನ್ಯ ಖಂಡಿಸಿದ ಕುಮಾರಸ್ವಾಮಿ

ಹತ್ರಾಸ್‌‌: ರಾಹುಲ್ ಗಾಂಧಿ ಮೇಲಿನ ಪೊಲೀಸ್‌ ದೌರ್ಜನ್ಯ ಖಂಡಿಸಿದ ಕುಮಾರಸ್ವಾಮಿ

ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ನಾಯಕರ ಕೊರಳಪಟ್ಟಿಗೆ ಕೈ ಹಾಕುತ್ತಾರೆ ಎಂದರೆ, ಉತ್ತರ ಪ್ರದೇಶ ಪೊಲೀಸರ ಹಿಂದೆ ಅಲ್ಲಿ ಅಧಿಕಾರ ಹಿಡಿದವರ ’ನಿರ್ದೇಶನ’ ಇಲ್ಲದಿರಲು ಸಾಧ್ಯವೇ? ಎಂದು ಪ್ರಶ್ನಿಸಿದ್ದಾರೆ.

- Advertisement -
- Advertisement -

ಅತ್ಯಾಚಾರ ಹಾಗೂ ಹತ್ಯೆಗೀಡಾದ ದಲಿತ ಯುವತಿಯ ಪೋಷಕರಿಗೆ ಸಾಂತ್ವನ ಹೇಳಲು ಹೊರಟಿದ್ದ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಮೇಲೆ ಉತ್ತರ ಪ್ರದೇಶ ಪೊಲೀಸರು ನಡೆಸಿದ ದೌರ್ಜನ್ಯವನ್ನು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತೀವ್ರವಾಗಿ ಖಂಡಿಸಿದ್ದಾರೆ.

“ಅಹಿಂಸಾ ಪ್ರತಿಪಾದಕ ರಾಷ್ಟ್ರಪಿತ ಮಹಾತ್ಮಗಾಂಧಿ ಅವರ ಜನ್ಮದಿನದ ಮುನ್ನ ಇಂದು ಉತ್ತರ ಪ್ರದೇಶ ಪೊಲೀಸರು ರಾಷ್ಟ್ರೀಯ ಪಕ್ಷದ ನಾಯಕರ ಮೇಲೆ ಅಮಾನವೀಯ ವರ್ತನೆ ತೋರಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿನ ಪ್ರತಿಭಟನಾ ಅಸ್ತ್ರವನ್ನು ಹಾಡುಹಗಲೇ ದಹಿಸುವ ಯತ್ನ” ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ: ಹತ್ರಾಸ್‌‌ ಅತ್ಯಾಚಾರ: ಸಂತ್ರಸ್ಥೆಯ ತಂದೆಗೆ ಧಮಕಿ ಹಾಕುತ್ತಿರುವ ಜಿಲ್ಲಾಧಿಕಾರಿ ವಿಡಿಯೋ ವೈರಲ್‌

“ವಿಶ್ವದ ಬಹುದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ರಾಜಕೀಯ ವಿರೋಧಿಗಳನ್ನು ಹಣಿಯಲು ಉತ್ತರ ಪ್ರದೇಶ ಪೊಲೀಸರು ಮುಂದಾಗಿದ್ದಾರೆ ಎಂದರೆ, ದಲಿತ ಬಾಲಕಿಯ ಪೋಷಕರನ್ನು ಹೊರಗಿಟ್ಟು ಆಕೆಯ ಶವವನ್ನು ಕತ್ತಲಲ್ಲಿ ಸುಟ್ಟಿದ್ದಾರೆ ಎಂಬುದರಲ್ಲಿ ನನಗೆ ಉತ್ಪ್ರೇಕ್ಷೆ ಕಾಣುತ್ತಿಲ್ಲ” ಎಂದು ಅವರು ಹೇಳಿದ್ದಾರೆ.

“ಯಾವುದೇ ಸರಕಾರ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ನಾಯಕರ ಕೊರಳಪಟ್ಟಿಗೆ ಕೈ ಹಾಕುತ್ತಾರೆ ಎಂದರೆ, ಉತ್ತರ ಪ್ರದೇಶ ಪೊಲೀಸರ ಹಿಂದೆ ಅಲ್ಲಿ ಅಧಿಕಾರ ಹಿಡಿದವರ ’ನಿರ್ದೇಶನ’ ಇಲ್ಲದಿರಲು ಸಾಧ್ಯವೇ? ಇಂತಹ ಧೋರಣೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕೊಡಲಿ ಪೆಟ್ಟು ಕೊಟ್ಟಂತಾಗಿದೆ” ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಮೈತ್ರಿಗೆ ಯೋಗ್ಯ ಪಕ್ಷವಲ್ಲ: ಎಚ್.‌ಡಿ ಕುಮಾರಸ್ವಾಮಿ ವಾಗ್ದಾಳಿ

ವಿಡಿಯೋ ನೋಡಿ: ರಾಮ ರಾಜ್ಯ ಎಂದರೆ ದಲಿತ, ಮಹಿಳೆ, ಅಲ್ಪ ಸಂಖ್ಯಾತರ ಮೇಲೆ ಅತ್ಯಾಚಾರ, ದಾಳಿ ಮಾಡುವಂತದ್ದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...