Homeಮುಖಪುಟಸುಶಾಂತ್ ಸಿಂಗ್ 'ಕೊಲೆ ಸಿದ್ದಾಂತ' ಸಂಪೂರ್ಣ ಸುಳ್ಳು: ಏಮ್ಸ್ ಮೂಲಗಳು

ಸುಶಾಂತ್ ಸಿಂಗ್ ‘ಕೊಲೆ ಸಿದ್ದಾಂತ’ ಸಂಪೂರ್ಣ ಸುಳ್ಳು: ಏಮ್ಸ್ ಮೂಲಗಳು

ಸಿಬಿಐ 57 ದಿನಗಳಲ್ಲಿ 20 ಜನರನ್ನು ಪ್ರಶ್ನಿಸಿದ್ದಾರೆ. ತಾನು ವಶಪಡಿಸಿಕೊಂಡ ಲ್ಯಾಪ್‌ಟಾಪ್‌ಗಳು, ಹಾರ್ಡ್‌ಡ್ರೈವ್‌ಗಳು, ಕ್ಯಾಮರಗಳು ಮತ್ತು ಮೊಬೈಲ್‌ಗಳನ್ನು ವಿಧಿವಿಜ್ಞಾನವಾಗಿ ಪರಿಶೀಲಿಸಲಾಗಿದೆ.

- Advertisement -
- Advertisement -

ನಟ ಸುಶಾಂತ್ ಸಿಂಗ್ ರಜಪೂತ್‌ರವರನ್ನು ಕೊಲೆ ಮಾಡಿಲ್ಲ ಮತ್ತು ಅದು ಆತ್ಮಹತ್ಯೆ ಪ್ರಕರಣ ಎಂದು ಏಮ್ಸ್ ವೈದ್ಯರು ಸಿಬಿಐಗೆ ವರದಿ ನೀಡಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ. ಅಲ್ಲದೇ ಸುಶಾಂತ್‌ಗೆ ವಿಷವುಣಿಸಿ, ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂಬ ಎಲ್ಲಾ ಉಹಾಪೋಹಗಳನ್ನು ಅದು ತಳ್ಳಿಹಾಕಿದೆ.

ಜೂನ್ 14 ರಂದು ಸುಶಾಂತ್ ಸಿಂಗ್ ರಜಪೂತ್ ಮುಂಬೈನ ತನ್ನ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದರು. ಶವಪರೀಕ್ಷೆಯ ಆಧಾರದ ಮೇಲೆ ಮುಂಬೈ ಪೊಲೀಸರು ಅದನ್ನು ಆತ್ಮಹತ್ಯೆ ಎಂದು ಕರೆದಿದ್ದರು. ಆದರೆ ಸುಶಾಂತ್ ಕುಟುಂಬ ಸೇರಿದಂತೆ ಹಲವರು ಇದನ್ನು ಕೊಲೆ ಎಂದು ಕರೆದು ನ್ಯಾಯಕ್ಕಾಗಿ ಪ್ರಚಾರಾಂದೋಲನ ಕೈಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿತ್ತು.

ಈ ಕುರಿತು ಏಮ್ಸ್ ವೈದ್ಯರ ತಂಡ ತನ್ನ ಪರೀಕ್ಷೆಯನ್ನು ಪೂರ್ಣಗೊಳಿಸಿದ್ದು, ವೈದ್ಯಕೀಯ ಕಾನೂನು ಅಭಿಪ್ರಾಯಗಳನ್ನು ವರದಿಯಲ್ಲಿ ದಾಖಲಿಸಿದೆ. ಸಿಬಿಐಗೆ ವರದಿ ನೀಡಿದ ವರದಿಯಲ್ಲಿ ಮುಂಬೈ ಆಸ್ಪತ್ರೆ ನೀಡಿದ್ದ ಸುಶಾಂತ್ ಮರಣೋತ್ತರ ವರದಿಯನ್ನು ಅದು ಎತ್ತಿಹಿಡಿದಿದ್ದು, ನೇಣು ಬಿಗಿದ ಕಾರಣ ಉಸಿರುಕಟ್ಟುವಿಕೆಯಿಂದ ಮರಣವುಂಟಾಗಿದೆ ಎಂದು ತಿಳಿಸಿದೆ.

ಅಲ್ಲದೇ ಅಂದಿನ ಸಾಂಧರ್ಬಿಕ ಸಾಕ್ಷಿಗಳು ಸಹ ಇದು ಕೊಲೆಯಲ್ಲ ಆತ್ಮಹತ್ಯೆ ಎಂದು ನಿರೂಪಿಸಿದ್ದವು. ಆದರೆ ಸಿಬಿಐ ಆತ್ಮಹತ್ಯೆಗೆ ಪ್ರಚೋದನೆ ಆಧಾರದಲ್ಲಿ ತನಿಖೆ ಮುಂದುವರಿಸಲು ನಿರ್ಧರಿಸಿದೆ ಎಂದು ಬಿಹಾರ ಪೊಲೀಸ್ ಮೂಲಗಳು ತಿಳಿಸಿವೆ.

ಸಿಬಿಐ 57 ದಿನಗಳಲ್ಲಿ 20 ಜನರನ್ನು ಪ್ರಶ್ನಿಸಿದ್ದಾರೆ. ತಾನು ವಶಪಡಿಸಿಕೊಂಡ ಲ್ಯಾಪ್‌ಟಾಪ್‌ಗಳು, ಹಾರ್ಡ್‌ಡ್ರೈವ್‌ಗಳು, ಕ್ಯಾಮರಗಳು ಮತ್ತು ಮೊಬೈಲ್‌ಗಳನ್ನು ವಿಧಿವಿಜ್ಞಾನವಾಗಿ ಪರಿಶೀಲಿಸಲಾಗಿದೆ. ಈ ತನಿಖೆಯಲ್ಲಿ ಕೊಲೆ ಎನ್ನಲು ಆಧಾರವಾದ ಯಾವ ಸಾಕ್ಷ್ಯಗಳು ಸಿಕ್ಕಿಲ್ಲ. ಈಗಲೂ ಮುಕ್ತವಾಗಿ ತನಿಖೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಸುಶಾಂತ್ ಸಿಂಗ್ ಕುಟುಂಬವು “ಆತನ ಗೆಳತಿ ರಿಯಾ ಚಕ್ರವರ್ತಿ ಮಾನಸಿಕವಾಗಿ ಕಿರುಕುಳ ನೀಡಿದ್ದಾಳೆ, ಹಲವು ಔ‍ಷಧಿ ನೀಡಿದ್ದಾಳೆ, ಹಣಕ್ಕಾಗಿ ಪೀಡಿಸಿದ್ದಾಳೆ ಎಂದು ಆರೋಪಿಸಿ ಸಮರ್ಪಕ ತನಿಖೆಗೆ ಒತ್ತಾಯಿಸಿದ್ದರು. ತದನಂತರವಷ್ಟೇ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿತ್ತು.

ಮೂಲ: ಎನ್‌ಡಿಟಿವಿ


ಇದನ್ನೂ ಓದಿ; ಸುಶಾಂತ್ ಸಿಂಗ್ ಪ್ರಕರಣ: ಕೇಂದ್ರಕ್ಕೆ ಬಾಂಬೆ ಹೈಕೋರ್ಟ್ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...