Homeಮುಖಪುಟ'ಯೋಗಿ ಆದಿತ್ಯನಾಥ್' ಅಲ್ಲ, ಅಜಯ್ ಮೋಹನ್ ಬಿಷ್ಠ್ ಎಂದು ಕರೆಯಿರಿ!

‘ಯೋಗಿ ಆದಿತ್ಯನಾಥ್’ ಅಲ್ಲ, ಅಜಯ್ ಮೋಹನ್ ಬಿಷ್ಠ್ ಎಂದು ಕರೆಯಿರಿ!

1988ರಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ ಅಜಯ್ ಮೋಹನ್ ಬಿಷ್ಠ್, ತಮ್ಮ ಹೆಸರನ್ನು ಯೋಗಿ ಆದಿತ್ಯನಾಥ್‌ ಎಂದು ಮರು ನಾಮಕರಣ ಮಾಡಿಕೊಂಡರು.

- Advertisement -
- Advertisement -

ದೇಶದಾದ್ಯಂತ ಉತ್ತರಪ್ರದೇಶದ ಹತ್ರಾಸ್ ಅತ್ಯಾಚಾರ ಪ್ರಕರಣದ ವಿರುದ್ಧ ಖಂಡನೆ ವ್ಯಕ್ತವಾಗುತ್ತಿದೆ. ಈ ಪ್ರಕರಣವನ್ನು ಅಲ್ಲಿನ ಮುಖ್ಯಮಂತ್ರಿ ನಿಭಾಯಿಸುತ್ತಿರುವ ರೀತಿಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ, ಯುಪಿ ಮುಖ್ಯಮಂತ್ರಿಯವರ ಮೂಲ ಹೆಸರಿನ ಚರ್ಚೆಯೂ ಕೂಡ ಮುನ್ನೆಲೆಗೆ ಬಂದಿದೆ. ಯೋಗಿ ಎನಿಸಿಕೊಳ್ಳಲು ಅವರು ಲಾಯಕ್ಕಿಲ್ಲ, ‘ಅಜಯ್ ಮೋಹನ್ ಬಿಷ್ಠ್’ ಎಂದು ಅವರ ಮೂಲ ಹೆಸರನ್ನು ಕರೆಯಿರಿ ಎಂದು ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಉತ್ತರಪ್ರದೇಶ: ವಾರೆಂಟ್ ಇಲ್ಲದೆ ಶೋಧಿಸುವ, ಬಂಧಿಸುವ ವಿಶೇ‍ಷ ಭದ್ರತಾ ಪಡೆ (UPSSF) ಸ್ಥಾಪನೆ!

ಉತ್ತರ ಪ್ರದೇಶದ ಹತ್ರಾಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಅಜಯ್ ಮೋಹನ್ ಬಿಷ್ಠ್ ಸರ್ಕಾರದ ನಡವಳಿಕೆ ತೀವ್ರ ಟೀಕೆಗೆ ಒಳಗಾಗಿದೆ. ಮುಖ್ಯಮಂತ್ರಿ ತಮ್ಮ ಠಾಕೂರ್ ಜಾತಿಯ ಆರೋಪಿಗಳನ್ನು ರಕ್ಷಿಸಲು ಇಡೀ ಆಡಳಿತ ಯಂತ್ರಾಂಗವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಮತ್ತು ಸಂತ್ರಸ್ತ ಕುಟುಂಬವನ್ನೇ ಆರೋಪಿ ಸ್ಥಾನದಲ್ಲಿ ನಿಲ್ಲಿಸಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.

ಉತ್ತರ ಪ್ರದೇಶದ ಮುಖ್ಯಮಂತ್ರಿಯನ್ನು "ಯೋಗಿ" ಎಂದೇಕೆ ಕರೆಯುತ್ತೀರಿ? ಅವನ ಮೂಲ ಹೆಸರಾದ ಅಜಯ ಮೋಹನ ಬಿಷ್ತ್ ಎಂದೇ ಕರೆಯಿರಿ! ಯಾವ ಸೀಮೆಯ ಯೋಗಿ ಆತ?

Posted by Nikhil Kolpe on Thursday, October 1, 2020

ಇದನ್ನೂ ಓದಿ:ದಲಿತ ಹೆಣ್ಣುಮಕ್ಕಳ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ, ಅತ್ಯಾಚಾರದ ಈ ಅಂಕಿ-ಅಂಶಗಳನ್ನು ನೋಡಿ: ನೀವೇ ಪ್ರಶ್ನಿಸಿಕೊಳ್ಳಿ

ಅಜಯ್ ಮೋಹನ್ ಬಿಷ್ಠ್ ತಮ್ಮ 21ನೇ ವಯಸ್ಸಿನಲ್ಲಿ ಗೋರಖನಾಥ ಮಠದ ಪ್ರಧಾನ ಅರ್ಚಕ ಮಹಂತ್ ಅವಿದ್ಯಾನಾಥ್ ಅವರ ಶಿಷ್ಯರಾಗಿ ಸೇರಿದ್ದರು. ರಾಜಕಾರಣಿಯೂ ಅರ್ಚರೂ ಆಗಿದ್ದ ಮಹಂತ್‌ ಅವಿದ್ಯಾನಾಥ್‌ ಗೋರಕ್‌ಪುರ್‌ ಲೋಕಸಭಾ ಕ್ಷೇತ್ರದ ಸಂಸದರೂ ಆಗಿದ್ದರು. 1996ರಲ್ಲಿ ನಡೆದ ಚುನಾವಣೆಯಲ್ಲಿ ಅಜಯ್ ಸಿಂಗ್ ಬಿಷ್ಠ್ ಅವರು ಮಹಂತ್ ಅವಿದ್ಯಾನಾಥ್ ಅವರ ಚುನಾವಣಾ ಪ್ರಚಾರವನ್ನು ನಿರ್ವಹಿಸುವ ಉಸ್ತುವಾರಿ ವಹಿಸಿಕೊಂಡು ರಾಜಕೀಯ ಪ್ರವೇಶಿದರು.

ನಂತರದಲ್ಲಿ, 1998 ರಲ್ಲಿ, ಮಹಂತ್‌ ಅವಿದ್ಯಾನಾಥ್ ಸಕ್ರಿಯ ರಾಜಕಾರಣದಿಂದ ನಿವೃತ್ತರಾದರು. ತಮ್ಮ ನಿವೃತ್ತಿಯ ಸಂದರ್ಭದಲ್ಲಿ ಅಜಯ್ ಮೋಹನ್ ಬಿಷ್ಠ್ ಅವರನ್ನು ತಮ್ಮ ಉತ್ತರಾಧಿಕಾರಿ ಎಂದು ಘೋಷಿಸಿದರು. ನಂತರ, 1988ರಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ ಅಜಯ್ ಮೋಹನ್ ಬಿಷ್ಠ್, ತಮ್ಮ ಹೆಸರನ್ನು ಯೋಗಿ ಆದಿತ್ಯಾನಾಥ್‌ ಎಂದು ಮರು ನಾಮಕರಣ ಮಾಡಿಕೊಂಡರು.

ಈಗ ಇವರ ವಿರುದ್ಧ ಭಾರಿ ಟೀಕೆ ವ್ಯಕ್ತವಾಗುತ್ತಿದೆ. ಕಾರಣ ಉತ್ತರಪ್ರದೇಶದಲ್ಲಿ ಹೆಚ್ಚುತ್ತಿರುವ ಅಪರಾಧಗಳ ಸಂಖ್ಯೆ. ಅಜಯ್ ಮೋಹನ್ ಬಿಷ್ಠ್ ಅಧಿಕಾರ ವಹಿಸಿಕೊಂಡಾಗಿನಿಂದ ರಾಜ್ಯದಲ್ಲಿ ಅಪರಾಧಗಳ ಸಂಖ್ಯೆ ಹೆಚ್ಚಾಗಿದ್ದು, ಇದರ ನಿಯಂತ್ರಣಕ್ಕೆ ಯಾವುದೇ ಸೂಕ್ತ ಕ್ರಮಕೈಗೊಳ್ಳದಿರುವುದೇ ಆಗಿದೆ. ಇನ್ನು ರಾಷ್ಟ್ರೀಯ ಅಪರಾಧ ದಾಖಲೆ ವಿಭಾಗದ (NCRB) ವರದಿಯಂತೆ, ಗೃಹ ಸಚಿವಾಲಯ (MHA) ಬಿಡುಗಡೆ ಮಾಡಿದ ದತ್ತಾಂಶಗಳ ಪ್ರಕಾರ, 2019 ಏಪ್ರಿಲ್ 1 ರಿಂದ 2020 ಮಾರ್ಚ್‌ವರೆಗೆ, ಉತ್ತರ ಪ್ರದೇಶದಲ್ಲಿ ಅತಿ ಹೆಚ್ಚು ಲಾಕಪ್ ಡೆತ್‌ ಪ್ರಕರಣಗಳು ದಾಖಲಾಗಿದೆ.

Photo Courtesy: Dhruv Rathee Facebook

ಇದನ್ನೂ ಓದಿ: ಹತ್ರಾಸ್ ಗ್ಯಾಂಗ್ ರೇಪ್: ಉತ್ತರ ಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ವಕೀಲರ ಒತ್ತಾಯ

ಮಹಿಳೆಯರು ಮತ್ತು ದಲಿತರು ಮತ್ತು ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯವಂತೂ ದಿನೇ ದಿನೇ ಹೆಚ್ಚುತ್ತಲೇ ಇದೆ. ಯೋಗಿಯ ರಾಮರಾಜ್ಯ ದಲಿತರ ಪಾಲಿಗೆ ಸ್ಮಶಾನವಾಗಿದೆ ಎಂದು ಭೀಮ್‌ ಆರ್ಮಿ ಸಂಸ್ಥಾಪಕ ಚಂದ್ರಶೇಖರ್‌ ಅಜಾದ್‌ ರಾವಣ್‌ ಇತ್ತೀಚೆಗೆ ಆರೋಪಿಸಿದ್ದರು. NCRB ಪ್ರಕಾರ ಕಳೆದ 3 ವರ್ಷಗಳಲ್ಲಿ ಮಹಿಳೆಯರ ಮೇಲೆ ಅದರಲ್ಲೂ ದಲಿತ ಮಹಿಳೆಯರ ಮೇಲೆ ಹಲ್ಲೆ, ಲೈಂಗಿಕ ಕಿರುಕುಳ, ಅತ್ಯಾಚಾರ ಮತ್ತು ಕೊಲೆ ಸೇರಿದಂತೆ ಅತಿ ಹೆಚ್ಚಿನ ಪ್ರಕರಣಗಳು ದಾಖಲಾಗುತ್ತಿವೆ. NCRB ದತ್ತಾಂಶಗಳ ಪ್ರಕಾರ 2018ರಲ್ಲಿ ಸುಮಾರು 4,322 ಅತ್ಯಾಚಾರ ಪ್ರಕರಣಗಳು ಉತ್ತರಪ್ರದೇಶದಲ್ಲಿ ವರದಿಯಾಗಿವೆ. ಇನ್ನು ದಾಖಲೆಗೆ ಸಿಗದ ಸಾವಿರಾರು ಪ್ರಕರಣಗಳಿವೆ. 2017 ರಲ್ಲಿ 59,445 ಮಹಿಲೆಯರ ವಿರುದ್ಧದ ಅಪರಾಧಗಳು ದಾಖಲಾಗಿದೆ. ಇದು ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಲೇ ಇದೆ ಎಂದು ಹಲವರು ಕಳವಳ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಲಾಕಪ್ ಡೆತ್: ಉತ್ತರ ಪ್ರದೇಶದಲ್ಲಿ ಅತಿಹೆಚ್ಚು ಪ್ರಕರಣ ದಾಖಲು!

ಉತ್ತರ ಪ್ರದೇಶ ಮಕ್ಕಳ ಮೇಲೆ ದೌರ್ಜನ್ಯದಲ್ಲಿ, ದಲಿತರ ಮೇಲಿನ ದೌರ್ಜನ್ಯದಲ್ಲಿ, ಮಹಿಳೆಯರ ಮೇಲಿನ ದೌರ್ಜನ್ಯದಲ್ಲಿ, ಹತ್ಯೆಗಳಲ್ಲಿ ಒಂದನೇ ಸ್ಥಾನದಲ್ಲಿದೆ ಎಂದು ಉಲ್ಲೇಖಿಸಿ, ಪ್ರದೇಶದ ಕಾನೂನು ಮತ್ತು ಸುವ್ಯವಸ್ಥೆಯೂ ಹದಗೆಟ್ಟಿದೆ ಎಂದು ಪ್ರಿಯಾಂಕಾ ಗಾಂಧಿ ಈ ಹಿಂದೆ ಆರೋಪಿಸಿದ್ದರು.

ದೇಶದ ಪ್ರತಿಯೊಂದು ರಾಜ್ಯದಲ್ಲಿಯೂ ಅಪರಾಧ ಪ್ರಕರಣಗಳು ದಾಖಲಾಗುತ್ತವೆ. ಆದರೆ ತನಗೆ ಬೇಕಾದವರ ವಿರುದ್ಧದ ಅಪರಾಧಗಳನ್ನು ಸರ್ಕಾರವೇ ಮುಚ್ಚಿಹಾಕುವಂತಹ ಅಪರೂಪದ ಘಟನೆಗಳು ಯುಪಿಯಂತಹ ರಾಜ್ಯದಲ್ಲಿ ಮಾತ್ರ ನಡೆಯುತ್ತವೆ.

ಇದನ್ನೂ ಓದಿ: ಉತ್ತರ ಪ್ರದೇಶದ ಅತ್ಯಾಚಾರ, ಕೊಲೆ, ಕಿರುಕುಳ ಪ್ರಕರಣಗಳಿಗೆ ಇನ್ನೊಂದು ಸೇರ್ಪಡೆ; ವೈದ್ಯಕೀಯ ವಿದ್ಯಾರ್ಥಿನಿ ಶವ ಪತ್ತೆ

ಇನ್ನು ಶಿಕ್ಷಣ ವ್ಯವಸ್ಥೆಯಲ್ಲಿ ಸೇಡಿನ ರಾಜಕಾರಣ ಮಾಡುತ್ತಿರುವ ಅಜಯ್ ಸಿಂಗ್ ಬಿಷ್ಠ್ ಸರ್ಕಾರ, ಕಾಂಗ್ರೆಸ್ ನಾಯಕರಿಗೆ ಸಂಬಂಧಿಸಿದ ಮತ್ತು ಸ್ವತಂತ್ರ ಚಳುವಳಿಗೆ ಸಂಬಂಧಿಸಿದ ಪಾಠಗಳನ್ನು ಪಠ್ಯದಿಂದ ಕೈಬಿಟ್ಟಿದೆ ಎಂಬ ಆರೋಪ ಎದುರಿಸುತ್ತಿದ್ದಾರೆ

ಇದನ್ನೂ ಓದಿ: ಉತ್ತರ ಪ್ರದೇಶ: ಬ್ರಾಹ್ಮಣರ ಬಗ್ಗೆ ಸದನಕ್ಕೆ ಪ್ರಶ್ನೆ ಕೇಳಿ ತಮ್ಮದೇ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಜೆಪಿ ಶಾಸಕ

ಇತ್ತೀಚೆಗೆ ನಕಲಿ ಎನ್‌ಕೌಂಟರ್‌ಗಳಲ್ಲಿ ಉತ್ತರಪ್ರದೇಶ ದೇಶದಲ್ಲಿಯೇ ಮೊದಲ ಸ್ಥಾನದಲ್ಲಿದ್ದು, ಇದಕ್ಕೆ ಸಂಬಂಧಿಸಿದಂತೆ NCRB ದತ್ತಾಂಶಗಳು ವಿವರವಾದ ದಾಖಲೆಯನ್ನು ನೀಡುತ್ತದೆ. ಉತ್ತರಪ್ರದೇಶದಲ್ಲಿ ಗೂಂಡಾಗಳಿಗೂ ಕೂಡ ರಕ್ಷಣೆ ಕೊಡಲಾಗುತ್ತಿದೆ ಎಂದು ಹಲವರು ಆರೋಪಿಸಿದ್ದು, ಉತ್ತರಪ್ರದೇಶವನ್ನು ಜಂಗಲ್‌ರಾಜ್/ಗೂಂಡಾರಾಜ್ ಎಂದು ವಿರೋಧ ಪಕ್ಷಗಳು ಅಣಕಿಸಿವೆ. ಕೆಲವು ತಿಂಗಳುಗಳ ಹಿಂದೆ ನಡೆದ 8 ಪೊಲೀಸರ ನರಮೇಧಕ್ಕೆ ಕಾರಣಕರ್ತನಾಗಿದ್ದ ವಿಕಾಸ್‌ದುಬೆಯನ್ನು ಬಂಧಿಸಿ ಕರೆದೊಯ್ಯವ ಮಾರ್ಗಮಧ್ಯೆ ಎನ್‌ಕೌಂಟರ್ ಮಾಡಲಾಗಿತ್ತು. ಇದನ್ನು ಪೊಲೀಸರು ಮತ್ತು ಸರ್ಕಾರ ಸೇರಿ ಮಾಡಿದ ಹತ್ಯೆ ಎಂದು ಹಲವರು ಆರೋಪಿಸಿದ್ದರು. ವಿಕಾಸ್ ದುಬೆ ಬಾಯಿ ಬಿಟ್ಟರೆ ಉತ್ತರಪ್ರದೇಶ ಸರ್ಕಾರಕ್ಕೆ ತೊಂದರೆಯಾಗುತ್ತದೆ ಎಂದು ಆತನನ್ನು ಕೊಲ್ಲಲಾಗಿದೆ ಎಂದೂ ಕೆಲವರು ಅಭಿಪ್ರಾಯಪಟ್ಟಿದ್ದರು.

ಇದನ್ನೂ ಓದಿ: ಗುಂಡು ಹಾರಿಸಿ ಉತ್ತರ ಪ್ರದೇಶ ಬಿಜೆಪಿ ಮುಖಂಡನ ಹತ್ಯೆ

ವಾಕ್ ಸ್ವಾತಂತ್ರಯಕ್ಕೆ ತೊಡಕುಂಟುಮಾಡುತ್ತಿರುವ ಯುಪಿ ಸರ್ಕಾರ ಪತ್ರಕರ್ತರ ಮೇಲೆ ಹಲ್ಲೆ ಮಾಡುತ್ತಿದೆ. ಹಲವು ಪತ್ರ ಕರ್ತರನ್ನು ಬಂಧಿಸಿದ್ದಕ್ಕಾಗಿ ಸುಪ್ರೀಂ ಕೋರ್ಟ್ ಈ ಹಿಂದೆ ಸರ್ಕಾರಕ್ಕೆ ನೋಟೀಸ್ ನೀಡಿತ್ತು.

ಈ ಮೇಲಿನ ಎಲ್ಲಾ ಕಾರಣಗಳಿಂದ ವಿಪಕ್ಷಗಳು ಸೇರಿದಂತೆ ಪ್ರಜ್ಞಾವಂತ ನಾಗರೀಕರು ಅಜಯ್ ಮೋಹನ್ ಬಿಷ್ಠ್ ರಾಜಿನಾಮೆ ನೀಡಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಹೇರುವಂತೆ ಒತ್ತಾಯಿಸುತ್ತಿದ್ದಾರೆ.

ಹಾಗಾಗಿ ಇದು ಅಯೋಗ್ಯ ಸರ್ಕಾರ ಎಂದು ಹೇಳಲು ಇಂತಹ ಸಾವಿರಾರು ಉದಾಹರಣೆಗಳನ್ನು ಕೊಡಬಹುದು. ಹಾಗಾಗಿ ಯುಪಿ ಮುಖ್ಯಮಂತ್ರಿಯನ್ನು ಯೋಗಿ ಆದಿತ್ಯನಾಥ್ ಎನ್ನುವುದಕ್ಕಿಂತ, ಅವರ ಮೂಲ ಹೆಸರಾದ ‘ಅಜಯ್ ಮೋಹನ್ ಬಿಷ್ಠ್ ಎಂದು ಕರೆಯುವುದು ಉತ್ತಮ ಎಂಬುದು ಹಲವರ ಅಭಿಪ್ರಾಯವಾಗಿದೆ.


ಇದನ್ನೂ ಓದಿ: ಹತ್ರಾಸ್ ಸಂತ್ರಸ್ತೆ ತನ್ನ ಅಂತಿಮ ವಿಡಿಯೋದಲ್ಲಿ ಹೇಳಿದ್ದೇನು? ಪೋಸ್ಟ್‌ಮಾರ್ಟಂ ವರದಿ ಸುಳ್ಳೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...