Homeಅಂತರಾಷ್ಟ್ರೀಯಮೋದಿ ಸರ್ಕಾರದ ’ಸರ್ವಾಧಿಕಾರಿ ಧೋರಣೆ’ ಖಂಡಿಸಿ ಬ್ರಿಟಿಷ್ ಸಂಸದರು, ತಜ್ಞರ ಪತ್ರ

ಮೋದಿ ಸರ್ಕಾರದ ’ಸರ್ವಾಧಿಕಾರಿ ಧೋರಣೆ’ ಖಂಡಿಸಿ ಬ್ರಿಟಿಷ್ ಸಂಸದರು, ತಜ್ಞರ ಪತ್ರ

ಪತ್ರದಲ್ಲಿ ’ಮೋದಿ ಆಡಳಿತವು ಮಾನವ ಹಕ್ಕುಗಳ ಕಾರ್ಯಕರ್ತರ ಮೇಲೆ ನಡೆಸುತ್ತಿರುವ ಆಕ್ರಮಣ ಮತ್ತು ಪ್ರಜಾಪ್ರಭುತ್ವ ಭಿನ್ನಾಭಿಪ್ರಾಯದ ವಿರುದ್ಧದ ಜಾಗತಿಕ ಆಕ್ರೋಶಕ್ಕೆ ನಾವು ನಮ್ಮ ಧ್ವನಿಯನ್ನು ಸೇರಿಸುತ್ತೇವೆ’ ಎನ್ನಲಾಗಿದೆ.

- Advertisement -
- Advertisement -

ಯುನೈಟೆಡ್ ಕಿಂಗ್‌ಡಂನ 200ಕ್ಕೂ ಹೆಚ್ಚು ಪ್ರಮುಖ ನಾಗರಿಕರು, ಕಲಾವಿದರು, ಪತ್ರಕರ್ತರು, ವಕೀಲರು, ರಾಜಕಾರಣಿಗಳು ಮತ್ತು 50ಕ್ಕೂ ಹೆಚ್ಚು ಹಿರಿಯ ಶಿಕ್ಷಣ ತಜ್ಞರು ಭಾರತೀಯ ಜನತಾ ಪಕ್ಷದ ನೇತೃತ್ವದ ಸರ್ಕಾರವು ಅನುಸರಿಸುತ್ತಿರುವ “ಸರ್ವಾಧಿಕಾರಿ ಮತ್ತು ಬಹುಸಂಖ್ಯಾತ ಧೋರಣೆ” ಖಂಡಿಸಿ ಮುಕ್ತ ಪತ್ರಕ್ಕೆ ಸಹಿ ಹಾಕಿದ್ದಾರೆ.

ಲೇಬರ್ ಪಕ್ಷದ ಜೆರೆಮಿ ಕಾರ್ಬಿನ್ ಮತ್ತು ಜಾನ್ ಮೆಕ್‌ಡೊನೆಲ್, ಗ್ರೀನ್ ಪಾರ್ಟಿಯ ಕ್ಯಾರೋಲಿನ್ ಲ್ಯೂಕಾಸ್, ಸ್ಕಾಟಿಷ್ ನ್ಯಾಷನಲ್ ಪಾರ್ಟಿಯ ಬ್ರೆಂಡನ್ ಒಹರಾ (ಅಂತರರಾಷ್ಟ್ರೀಯ ಮಾನವ ಹಕ್ಕುಗಳ ವಕ್ತಾರ), ಶಮಿ ಚಕ್ರವರ್ತಿ (ನಾಗರಿಕ ಸ್ವಾತಂತ್ರ್ಯ ಗುಂಪು ಲಿಬರ್ಟಿಯ ಮಾಜಿ ನಿರ್ದೇಶಕ) ಮತ್ತು ಹೌಸ್ ಆಫ್ ಲಾರ್ಡ್ಸ್ ಸದಸ್ಯರು ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬ್ರಿಟಿಷ್ ಸಂಸದರು ಪತ್ರಕ್ಕೆ ಸಹಿ ಹಾಕಿದ್ದಾರೆ.

ಈ ಪತ್ರವನ್ನು ಬೆಂಬಲಿಸುವ ಪ್ರಮುಖ ಸಾಂಸ್ಕೃತಿಕ ವ್ಯಕ್ತಿಗಳಲ್ಲಿ ಡ್ಯಾನಿ ಬೊಯೆಲ್ (ಸ್ಲಮ್‌ಡಾಗ್ ಮಿಲೆನಿಯರ್ ನಿರ್ದೇಶಕ), ಚಲನಚಿತ್ರ ನಿರ್ಮಾಪಕ ಕೆನ್ ಲೋಚ್, ನಟಿ ಮ್ಯಾಕ್ಸಿನ್ ಪೀಕ್, ಸಂಗೀತಗಾರ ಲೋಕಿ, ಕಾದಂಬರಿಕಾರ ಹರಿ ಕುಂಜ್ರು, ನಿರ್ಮಾಪಕ ಟೋಬಿ ಕೈರೆಮಾಟೆಂಗ್, ಪರಿಸರವಾದಿ ಜಾರ್ಜ್ ಮೊನ್‌ಬಿಯೊಟ್ ಮತ್ತು ಬರಹಗಾರ ಪಾಲ್ ಗಿಲ್ರಾಯ್ ಪ್ರಮುಖರಾಗಿದ್ದಾರೆ.

ಇದನ್ನೂ ಓದಿ: ಹತ್ರಾಸ್ ಸಂತ್ರಸ್ತ ಕುಟುಂಬ ಕೇಳುತ್ತಿರುವುದೇನು?: 5 ಪ್ರಶ್ನೆಗಳನ್ನು ಮುಂದಿಟ್ಟ ಪ್ರಿಯಾಂಕ ಗಾಂಧಿ

ಪತ್ರದಲ್ಲಿ ’ಮೋದಿ ಆಡಳಿತವು ಮಾನವ ಹಕ್ಕುಗಳ ಕಾರ್ಯಕರ್ತರ ಮೇಲೆ ನಡೆಸುತ್ತಿರುವ ಆಕ್ರಮಣ ಮತ್ತು ಪ್ರಜಾಪ್ರಭುತ್ವ ಭಿನ್ನಾಭಿಪ್ರಾಯದ ವಿರುದ್ಧದ ಜಾಗತಿಕ ಆಕ್ರೋಶಕ್ಕೆ ನಾವು ನಮ್ಮ ಧ್ವನಿಯನ್ನು ಸೇರಿಸುತ್ತೇವೆ’ ಎನ್ನಲಾಗಿದೆ.

’ಮೋದಿ ಆಡಳಿತವು ವಿದ್ಯಾರ್ಥಿ ಪ್ರತಿಭಟನಾಕಾರರು, ಸ್ತ್ರೀಸಮಾನತಾವಾದಿಗಳು, ಮಾನವ ಹಕ್ಕುಗಳ ಕಾರ್ಯಕರ್ತರು ಮತ್ತು ಸಮಾಜದ ಪ್ರಮುಖ ವ್ಯಕ್ತಿಗಳನ್ನು ಬಂಧಿಸಿದೆ. ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ (ಯುಎಪಿಎ) ನಂತಹ ಆರೋಪಗಳಲ್ಲಿ ತುರ್ತು ಕಾನೂನುಗಳ ಆಧಾರದ ಮೇಲೆ ಅನೇಕರನ್ನು ಬಂಧಿಸಿದೆ.

ಕೆಲವು ಸಂದರ್ಭಗಳಲ್ಲಿ, ಶಾಂತಿಯುತ ಮತ್ತು ಸಾಂವಿಧಾನಿಕವಾಗಿ ನಡೆಯುತ್ತಿದ್ದ ಪ್ರತಿಭಟನೆಗಳಿಗೂ, ಗಲಭೆಯ ಅಸಂಬದ್ಧ ಆರೋಪಗಳನ್ನು ಹೊರಿಸಲಾಗಿದೆ ಎಂದು ಬರೆಯಲಾಗಿದೆ.

ಭಿನ್ನಾಭಿಪ್ರಾಯದ ಈ ಅಪರಾಧೀಕರಣವು ಇತ್ತೀಚಿನ ತಿಂಗಳುಗಳಲ್ಲಿಆತಂಕಗೊಳಿಸುವ ರೀತಿಯಲ್ಲಿ ತೀವ್ರಗೊಂಡಿದೆ. ಕೊರೊನಾ ಲಾಕ್‌ಡೌನ್‌ ಸಮಯದಲ್ಲಿ ಹಲವು ಮಂದಿಯನ್ನು ಬಂಧಿಸಲಾಯಿತು.  ಬಿಜೆಪಿ ನೇತೃತ್ವದ ಸರ್ಕಾರವು ವಲಸೆ ಕಾರ್ಮಿಕರರನ್ನು ಕಷ್ಟಕ್ಕೆ ದೂಡಿದ್ದು ಮಾತ್ರವಲ್ಲದೇ, ಭಾರತದ ಅನಾರೋಗ್ಯಕರ ಜೈಲುಗಳಿಗೆ ಕಾರ್ಯಕರ್ತರನ್ನು ದೂಡ್ಡಿದೆ. ಜೈಲಿನಲ್ಲಿದ್ದ ಹಲವಾರು ಕಾರ್ಯಕರ್ತರಿಗೆ ಈ ವೈರಸ್ ಸೋಂಕು ತಾಗಿದೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ: ದೆಹಲಿ ಗಲಭೆ: ನ್ಯಾಯಯುತ ತನಿಖೆಗೆ ಒತ್ತಾಯ; ಮಾಜಿ IPS ಅಧಿಕಾರಿಗಳ ಪತ್ರ!

ಬಿಜೆಪಿ ನಾಯಕರು ಸರ್ಕಾರವನ್ನು ಪ್ರಶ್ನಿಸುವವರ ಮೇಲೆ ದ್ವೇಷ ಭಾಷಣಗಳನ್ನು ಮಾಡಿದ್ದಾರೆ. ದೆಹಲಿಯಲ್ಲಿ ನಡೆದ ಪ್ರಚೋದಿತ ಭೀಕರ ಗಲಭೆಗಳಲ್ಲಿ ಮುಸ್ಲಿಮರ ವಿರುದ್ಧ ಪೊಲೀಸ್ ಪಡೆಗಳು ಸಹಕರಿಸಿದವು ಎಂಬುದಕ್ಕೆ ಸಾಕಷ್ಟು ಪುರಾವೆಗಳಿವೆ ಎಂದಿದ್ದಾರೆ.

ಮೋದಿ ಆಡಳಿತವು ತನ್ನ ಸರ್ವಾಧಿಕಾರಿ ಮತ್ತು ಬಹುಸಂಖ್ಯಾತ ಅಜೆಂಡಾ ಅನುಸರಿಸುವಲ್ಲಿ ಭಾರತದ ಸಾಂವಿಧಾನಿಕ ಪ್ರಜಾಪ್ರಭುತ್ವವನ್ನು ವ್ಯವಸ್ಥಿತವಾಗಿ ನಾಶಪಡಿಸುತ್ತಿದೆ. ಈ ಕೆಟ್ಟ ಆಡಳಿತವನ್ನು ವಿರೋಧಿಸುತ್ತಿರುವ ಭಾರತದ ಧೈರ್ಯಶಾಲಿ ಕಾರ್ಯಕರ್ತರೊಂದಿಗೆ ನಾವು ನಿಲ್ಲುತ್ತೇವೆ ಮತ್ತು ಎಲ್ಲಾ ರಾಜಕೀಯ ಕೈದಿಗಳನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಕರೆ ನೀಡುತ್ತೇವೆ ಎಂಬ ಪತ್ರಕ್ಕೆ 200ಕ್ಕೂ ಅಧಿಕ ಮಂದಿ ಸಹಿ ಮಾಡಿದ್ದಾರೆ.

ವಿಶೇಷವೆಂದರೆ, ಹಲವಾರು ಬ್ರಿಟಿಷ್-ಭಾರತೀಯ ಸಾಂಸ್ಕೃತಿಕ ವ್ಯಕ್ತಿಗಳು ಕೂಡ ಈ ಪತ್ರಕ್ಕೆ ಸಹಿ ಹಾಕಿದ್ದಾರೆ. ಪತ್ರಕರ್ತರಾದ ಆಶ್ ಸರ್ಕಾರ್, ಏಂಜೆಲಾ ಸೈನಿ, ಬರಹಗಾರರಾದ ನಿಕೇಶ್ ಶುಕ್ಲಾ, ಪ್ರೀತಿ ತನೇಜಾ, ಸಂದೀಪ್ ಪಾರ್ಮಾರ್, ಜೆಮ್ಮಾ ದೇಸಾಯಿ, ಸಂಗೀತಗಾರರಾದ ಆಡಮ್ ಬೈನ್‌ಬ್ರಿಡ್ಜ್, ಕಪಿಲ್ ಶೇಷಾಸಾಯೀ, ಶಾರತಿ ಕೊರ್ವಾರ್ ಮತ್ತು ರಂಗಭೂಮಿ ಕಲಾವಿದರಾದ ತನಿಕಾ ಗುಪ್ತಾ, ವಿನಯ್ ಪಟೇಲ್, ಅಂಜ್ಲಿ ಮೊಹಿಂದ್ರಾ, ರಾಖೀ ಠಕ್ರಾರ್, ಮಿಲ್ಲಿ ಭಾಟಿಯಾ ಮುಕ್ತ ಪತ್ರಕ್ಕೆ ಸಹಿ ಹಾಕಿದ್ದಾರೆ.


ಇದನ್ನೂ ಓದಿ: ಸುಶಾಂತ್ ಸಿಂಗ್ ‘ಕೊಲೆ ಸಿದ್ದಾಂತ’ ಸಂಪೂರ್ಣ ಸುಳ್ಳು: ಏಮ್ಸ್ ಮೂಲಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...