Homeಮುಖಪುಟಹತ್ರಾಸ್ ಪ್ರಕರಣದ ಆರೋಪಿಗಳು ಈಗ 'ಬಿಂಬಿಸಿರುವಷ್ಟು ತಪ್ಪಿತಸ್ಥರಲ್ಲ’: ಬಿಜೆಪಿ ಮುಖಂಡ

ಹತ್ರಾಸ್ ಪ್ರಕರಣದ ಆರೋಪಿಗಳು ಈಗ ‘ಬಿಂಬಿಸಿರುವಷ್ಟು ತಪ್ಪಿತಸ್ಥರಲ್ಲ’: ಬಿಜೆಪಿ ಮುಖಂಡ

ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಬಗ್ಗೆ ರಾಷ್ಟ್ರವ್ಯಾಪಿ ಕೋಲಾಹಲದ ಮಧ್ಯೆಯೇ ಬಿಜೆಪಿ ಮಾಜಿ ಶಾಸಕ ರಾಜವೀರ್ ಪಹಲ್ವಾನ್ ಹತ್ರಾಸ್‌ನ ತಮ್ಮ ನಿವಾಸದಲ್ಲಿ ಮೇಲ್ವರ್ಗದ ಸದಸ್ಯರ ಮಹಾಪಂಚಾಯತ್ ನಡೆಸಿದ್ದಾರೆ.

- Advertisement -
- Advertisement -

ಹತ್ರಾಸ್‌ನ ದಲಿತ ಯುವತಿಯ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ರಕ್ಷಿಸುವ ಕೆಲಸ ಮೇಲ್ಜಾತಿ ಸಮುದಾಯದಿಂದ ನಡೆಯುತ್ತಿದೆ. ಆರೋಪಿಗಳು ಅಮಾಯಕರು, ಅವರನ್ನು ಸುಕಾ ಸುಮ್ಮನೆ ಪ್ರಕರಣದಲ್ಲಿ ಎಳೆದು ತರಲಾಗುತ್ತಿದೆ ಎನ್ನುತ್ತಿದ್ದಾರೆ. ಹತ್ರಾಸ್‌ನಲ್ಲಿ ಇಂದು ನಡೆದ ಮೇಲ್ವರ್ಗದ ಸದಸ್ಯರ ಮಹಾಪಂಚಾಯತ್ 2ನೇ ಸಭೆಯಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಮಾಜಿ ಶಾಸಕ ರಾಜವೀರ್ ಪಹಲ್ವಾನ್, ’ಈ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಆರೋಪಿಗಳು ಈಗ ಬಿಂಬಿಸಿರುವಷ್ಟು ತಪ್ಪಿತಸ್ಥರಲ್ಲ ಎಂದು ಹೇಳಿದ್ದಾರೆ.

ಸೆಪ್ಟೆಂಬರ್ 14 ರಂದು ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ದಲಿತ ಯುವತಿಯ ಮೇಲೆ ನಾಲ್ವರು ಮೇಲ್ಜಾತಿಯ ಪುರುಷರು ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಸೆಪ್ಟೆಂಬರ್ 29 ರಂದು ಯುವತಿ ಸಾವನ್ನಪ್ಪಿದ್ದರು. ಸ್ಥಳೀಯ ಪೊಲೀಸರು ಮರುದಿನ ಮುಂಜಾನೆ 2.30ಕ್ಕೆ ಮೃತ ಯುವತಿಯ ದೇಹವನ್ನು ಕುಟುಂಬಕ್ಕೆ ಒಪ್ಪಿಸದೇ ಸುಟ್ಟುಹಾಕಿದ್ದರು. ಈ ಪ್ರಕರಣ ದೇಶಾದ್ಯಂತ ಭಾರಿ ಪ್ರತಿಭಟನೆಗೆ ಕಾರಣವಾಗಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಲಾಗುತ್ತಿದೆ.

ಇದನ್ನೂ ಓದು: ಸಂತ್ರಸ್ತ ಕುಟುಂಬದ ಮೇಲೆ FIR ದಾಖಲಿಸಿ: ಮೇಲ್ಜಾತಿಗಳ ಬೃಹತ್ ಸಭೆಯಲ್ಲಿ ಒತ್ತಾಯ!

ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಬಗ್ಗೆ ರಾಷ್ಟ್ರವ್ಯಾಪಿ ಕೋಲಾಹಲದ ಮಧ್ಯೆಯೇ, ಬಿಜೆಪಿ ಮಾಜಿ ಶಾಸಕ ರಾಜವೀರ್ ಪಹಲ್ವಾನ್ ಹತ್ರಾಸ್‌ನ ತಮ್ಮ ನಿವಾಸದಲ್ಲಿ ಮೇಲ್ವರ್ಗದ ಸದಸ್ಯರ ಮಹಾಪಂಚಾಯತ್ ಸಭೆ ನಡೆಸಿದ್ದಾರೆ.

ಉತ್ತರ ಪ್ರದೇಶ ಸರ್ಕಾರ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿರುವುದನ್ನು ಸ್ವಾಗತಿಸಿರುವ ಪಹಲ್ವಾನ್, ತನಿಖೆ ಘಟನೆಯ ಸತ್ಯವನ್ನು ಬಹಿರಂಗಪಡಿಸುತ್ತದೆ ಎಂದರು. ಸಭೆಯಲ್ಲಿ ಮೇಲ್ಜಾತಿಯ ಸದಸ್ಯರು, ಸಂತ್ರಸ್ತೆಯ ಕುಟುಂಬ ನಾರ್ಕೋ ಪರೀಕ್ಷೆ ನಿರಾಕರಿಸುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.

ಇನ್ನು, ಮಹಾಪಂಚಾಯತ್‌ನಲ್ಲಿ ಭಾಗವಹಿಸಿದ ವಕೀಲರು, ಈ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ಭೇಟಿಯಾಗುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: ಹಿಂದುತ್ವದ ಬೆಳವಣಿಗೆ: ಮೇಲ್ಜಾತಿಗಳ ಧ್ರುವೀಕರಣದ ಬಂಡಾಯವೇ? – ಜಾನ್ ಡ್ರೀಜ್ ವಿಶೇಷ ಲೇಖನ

ಯುವತಿಯ ಕುಟುಂಬ ಸದಸ್ಯರು ಸೇರಿದಂತೆ ಪ್ರಕರಣದಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬರಿಗೂ ನಾರ್ಕೊ-ಅನಾಲಿಸಿಸ್ ಪಾಲಿಗ್ರಾಫ್ ಪರೀಕ್ಷೆಗಳನ್ನು ನಡೆಸಲು ರಾಜ್ಯ ಸರ್ಕಾರ ಶುಕ್ರವಾರ ಆದೇಶಿಸಿತ್ತು. ಸೆಪ್ಟೆಂಬರ್ 14 ರಂದು ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎಂಬ ಯುವತಿಯ ಆರೋಪಕ್ಕೆ ರಾಜ್ಯ ಸರ್ಕಾರ ನಡೆಸಿದ ಶವಪರೀಕ್ಷೆಯ ವರದಿಯು ವಿರುದ್ಧವಾಗಿದ್ದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಆದರೆ ಸಂತ್ರಸ್ತೆ ಕುಟುಂಬ ನಾರ್ಕೊ ಪರೀಕ್ಷೆಗೆ ಒಳಗಾಗಲು ನಿರಾಕರಿಸಿದೆ ಮತ್ತು ಈ ವಿಷಯದಲ್ಲಿ ಸುಪ್ರೀಂಕೋರ್ಟ್ ಮೂಲಕ ನ್ಯಾಯಾಂಗ ತನಿಖೆಗೆ ಒತ್ತಾಯಿಸಿದೆ.

ಶುಕ್ರವಾರವೂ (ಅ.02) ಸಹ ಮೃತ ಸಂತ್ರಸ್ತ ಯುವತಿ ವಾಸಿಸುತ್ತಿದ್ದ ಹಳ್ಳಿಯ ಸಮೀಪದಲ್ಲೇ ಮೇಲ್ಜಾತಿ ಸಮುದಾಯದವರು ಸಭೆ ನಡೆಸಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಮೊದಲ ಸಭೆಯಲ್ಲಿ ಪ್ರಕರಣದ ನಾಲ್ವರು ಆರೋಪಿಗಳು ನಿರಪರಾಧಿಗಳು ಎಂದು ಹೇಳಿದರು. ಈ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ಅವರು ಒತ್ತಾಯಿಸಿದ್ದರು. ಬಂಧಿತ ಆರೋಪಿಗಳನ್ನು ಬಿಡುಗಡೆ ಮಾಡದಿದ್ದರೆ ಆಂದೋಲನ ನಡೆಸುವುದಾಗಿ ಬೆದರಿಕೆ ಕೂಡ ಹಾಕಿದರು.


ಇದನ್ನೂ ಓದಿ: ಇದು ಎಲ್ಲಾ ಮೇಲ್ಜಾತಿ ಜನರೂ ಪ್ರತಿಕ್ರಿಯಿಸಲೇಬೇಕಾದ ಸಮಯ, ಮಾಧ್ಯಮಗಳಲ್ಲಿರುವ ಮೇಲ್ಜಾತಿಯವರನ್ನೂ ಒಳಗೊಂಡು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...