Homeಮುಖಪುಟ3 ತಿಂಗಳಲ್ಲಿ 350 ಆನ್‌ಲೈನ್ ಕೋರ್ಸ್; ವಿಶ್ವದಾಖಲೆ ಮಾಡಿದ ಆರತಿ ರಂಗನಾಥ್!

3 ತಿಂಗಳಲ್ಲಿ 350 ಆನ್‌ಲೈನ್ ಕೋರ್ಸ್; ವಿಶ್ವದಾಖಲೆ ಮಾಡಿದ ಆರತಿ ರಂಗನಾಥ್!

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗದ ಮಧ್ಯೆ, ಜನರು ಅನೇಕ ಹವ್ಯಾಸಗಳನ್ನ ರೂಡಿಸಿಕೊಂಡರು. ಕೆಲವು ಹೊಸ ಹೊಸ ಅಡಿಗೆ ಕಲಿಯಲು ಪ್ರಯತ್ನಿಸಿದರು. ಕೆಲವರು ಮನೆಯಲ್ಲೇ ಮಾಸ್ಕ್​ ತಯಾರಿಸೋದು, ಕೈದೋಟದ ಕೆಲಸ, ಮನೆಯಲ್ಲೇ ಜಿಮ್, ಡಯಟಿಂಗ್, ಹಾಡು, ಡ್ಯಾನ್ಸ್​ ತರಬೇತಿ ಮುಂತಾದವನ್ನು ಪ್ರಯತ್ನಿಸಿ ತಮ್ಮ ಬೇಸರ ಕಳೆದುಕೊಂಡಿದ್ದಾರೆ.

ಆದರೆ ಕೇರಳದ ಈ ಯುವತಿ ಲಾಕ್‌ಡೌನ್ ಸಮಯವನ್ನು ಅಧ್ಯಯನಕ್ಕಾಗಿ ಬಳಸಿ, 3 ತಿಂಗಳಲ್ಲಿ 350 ಆನ್‌ಲೈನ್ ಕೋರ್ಸ್‌ಗಳನ್ನು ಮಾಡಿದ್ದಾರೆ. ಈ ಮೂಲಕ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಆರತಿ ಕೊಚ್ಚಿಯ ಎಲಂಕಾರ ಮೂಲದವರಾಗಿದ್ದು, ಎಂಇಎಸ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ಎಂಎಸ್ಸಿ ಬಯೋಕೆಮಿಸ್ಟ್ರಿ ವಿದ್ಯಾರ್ಥಿನಿಯಾಗಿದ್ದಾರೆ.

ಇದನ್ನೂ ಓದಿ: ಹತ್ರಾಸ್ ಜಿಲ್ಲಾಧಿಕಾರಿ ಮೇಲೆ ಕ್ರಮ ಏಕಿಲ್ಲ?: ಮಾಯಾವತಿ ಪ್ರಶ್ನೆ

ವಿದ್ಯಾರ್ಥಿನಿ ಆರತಿ ಹೇಳುವಂತೆ, ’ನನ್ನ ಕಾಲೇಜು ಅಧ್ಯಾಪಕರು ನನಗೆ ಆನ್‌ಲೈನ್ ಕೋರ್ಸ್​​ಗಳನ್ನ ನನಗೆ ಪರಿಚಯಿಸಿದರು. ಆನ್‌ಲೈನ್ ಕೋರ್ಸ್‌ಗಳದ್ದು ಒಂದು ದೊಡ್ಡ ಶ್ರೇಣಿಯಿದೆ. ಪ್ರತಿ ಕೋರ್ಸ್​ನ ಅವಧಿ ಹಾಗೂ ಪಠ್ಯಕ್ರಮ ಭಿನ್ನವಾಗಿರುತ್ತದೆ. ನನ್ನ ಕಾಲೇಜು ಪ್ರಾಂಶುಪಾಲರಾದ ಪಿ.ಮೊಹಮ್ಮದ್, ಹನೀಫಾ ಕೆ.ಜಿ.ಮತ್ತು ಬೋಧಕ ಸಿಬ್ಬಂದಿ ನೀಲಿಮಾ ಟಿ.ಕೆ. ಅವರ ಸಹಾಯದಿಂದ ನಾನು ಪ್ರತಿ ಕೋರ್ಸ್ ಅನ್ನು ಸಮಯಕ್ಕೆ ಪೂರ್ಣಗೊಳಿಸಿದೆ’ ಎನ್ನುತ್ತಾರೆ.

ಆರತಿಯ ತಂದೆಯ ಹೆಸರು ಮಾಲಿಯೆಕ್ಕಲ್ ಮೇದತಿಲ್ ಎಂ.ಆರ್.ರಘುನಾಥ್ ಮತ್ತು ತಾಯಿಯ ಹೆಸರು ಕಲಾದೇವಿ. ವಿಶ್ವದಾಖಲೆ ನಿರ್ಮಿಸಿರುವ ಮಗಳ ಸಾಧನೆ ಬಗ್ಗೆ ತಂದೆ-ತಾಯಿ ಸಂತಸ ವ್ಯಕ್ತಪಡಿಸುತ್ತಾರೆ.

ಜಾನ್ ಹಾಕಿನ್ಸ್ ವಿಶ್ವವಿದ್ಯಾಲಯ, ವರ್ಜೀನಿಯಾ ವಿಶ್ವವಿದ್ಯಾಲಯ, ಕೊಲೊರಾಡೋ ಬೌಲ್ಡರ್ ವಿಶ್ವವಿದ್ಯಾಲಯ, ಕೋಪನ್ ಹ್ಯಾಗನ್ ವಿಶ್ವವಿದ್ಯಾಲಯ, ರೋಚೆಸ್ಟರ್ ವಿಶ್ವವಿದ್ಯಾಲಯ, ಎಮೋರಿ ವಿಶ್ವವಿದ್ಯಾಲಯ, ಕೊರ್ಸೆರಾ ಪ್ರಾಜೆಕ್ಟ್ ನೆಟ್‌ವರ್ಕ್ ಮತ್ತು ಡೆನ್ಮಾರ್ಕ್‌ನ ತಾಂತ್ರಿಕ ವಿಶ್ವವಿದ್ಯಾಲಯಗಳು ಆರತಿ ಕೋರ್ಸ್‌ಗಳನ್ನು ಪಡೆದ ವಿಶ್ವವಿದ್ಯಾಲಯಗಳಲ್ಲಿ ಸೇರಿವೆ ಎಂದು ವರದಿಯಾಗಿದೆ.


ಇದನ್ನೂ ಓದಿ: ಮೋದಿ ಸರ್ಕಾರದ ’ಸರ್ವಾಧಿಕಾರಿ ಧೋರಣೆ’ ಖಂಡಿಸಿ ಬ್ರಿಟಿಷ್ ಸಂಸದರು, ತಜ್ಞರ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...