ಬಿಹಾರದ ಪೂರ್ಣಿಯಾ ಜಿಲ್ಲೆಯ ದಲಿತ ಮುಖಂಡ ಶಕ್ತಿ ಮಲಿಕ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಜೆಡಿ ಮುಖಂಡರಾದ ತೇಜಸ್ವಿ ಪ್ರಸಾದ್ ಯಾದವ್, ತೇಜ್ ಪ್ರತಾಪ್ ಯಾದವ್ ಸೇರಿದಂತೆ 6 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಬಿಹಾರ ಚುನಾವಣೆವರೆಗೂ ಮುಂದುವರೆಯಲಿದೆ ಸುಶಾಂತ್ ಸಿಂಗ್- ಕಂಗನಾ ವಿವಾದಗಳು
ಶಕ್ತಿ ಮಲಿಕ್ ಕೊಲೆಯ ನಂತರ ವೈರಲ್ ಆಗುತ್ತಿರುವ ಅವರ ವಿಡಿಯೋದಲ್ಲಿ, “ರಾಜ್‌ಗಂಜ್ ಸ್ಥಾನದಿಂದ ಸ್ಪರ್ಧಿಸವುದಕ್ಕೆ ಟಿಕೆಟ್ ನೀಡಬೇಕೆಂದರೆ 50 ಲಕ್ಷ ನೀಡಬೇಕು ಎಂದು ತೇಜಸ್ವಿ ಪ್ರಸಾದ್ ಯಾದವ್ ಕೇಳಿದ್ದರು. ಜೊತೆಗೆ ಈ ಕ್ಷೇತ್ರದಲ್ಲಿ ಮಾಡುತ್ತಿರುವ ಒಳ್ಳೆಯ ಕೆಲಸಗಳನ್ನು ನಿಲ್ಲಿಸದಿದ್ದರೆ ನಿನ್ನನ್ನು ಮುಗಿಸುವುದಾಗಿ ಹೇಳಿದ್ದಾರೆ” ಎಂದು ಮಲಿಕ್ ಆರೋಪಿಸಿದ್ದಾರೆ.
ಇದನ್ನೂ ಓದಿ: ಬಿಹಾರ ಚುನಾವಣೆಯಲ್ಲಿ ಆಜಾದ್ ಸಮಾಜ ಪಕ್ಷ ಸ್ಪರ್ಧೆ: ಚಂದ್ರಶೇಖರ್ ಆಜಾದ್
ಕೊಲೆಗೆ ಸಂಬಂಧಿಸಿದಂತೆ ಆರ್‌ಜೆಡಿ ಮುಖಂಡ ತೇಜಶ್ವಿ ಪ್ರಸಾದ್ ಯಾದವ್ ಮತ್ತು ಅವರ ಸಹೋದರ ತೇಜ್ ಪ್ರತಾಪ್ ಯಾದವ್ ಸೇರಿದಂತೆ ಆರು ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೂರ್ಣಿಯಾ ಪೊಲೀಸ್ ವರಿಷ್ಠಾಧಿಕಾರಿ ವಿಶಾಲ್ ಶರ್ಮಾ ತಿಳಿಸಿದ್ದಾರೆ ಎಂಬುದಾಗಿ ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.
ಇದನ್ನೂ ಓದಿ: ಬಿಹಾರ ವಿಧಾನಸಭಾ ಚುನಾವಣೆ: ಶುರುವಾಗಿದೆ NDA ವಿರುದ್ಧ ’ಬ್ಯಾನರ್’ ಯುದ್ಧ!
ನಿನ್ನೆ ಬೆಳಿಗ್ಗೆ ಬೈಕ್‌ನಲ್ಲಿ ಬಂದ ಮೂವರು ಪುರುಷರು, ಶಕ್ತಿ ಮಲಿಕ್ ತನ್ನ ಮನೆಯಲ್ಲಿ ಮಲಗಿದ್ದಾಗ ಒಳಗೆ ಪ್ರವೇಶಿಸಿ ಅವರ ತಲೆಗೆ ಗುಂಡು ಹಾರಿಸಿದ್ದರಿಂದ ಮಲಿಕ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ಬಿಹಾರ ಚುನಾವಣೆ: ಎನ್‌ಡಿಎ ಮೈತ್ರಿ ತೊರೆದ ಚಿರಾಗ್ ಪಾಸ್ವಾನ್!


