HomeUncategorizedಯುಪಿ: ಸೋದರ ಸಂಬಂಧಿಯಿಂದ ಅತ್ಯಾಚಾರ; 6 ವರ್ಷದ ಬಾಲಕಿ ಸಾವು

ಯುಪಿ: ಸೋದರ ಸಂಬಂಧಿಯಿಂದ ಅತ್ಯಾಚಾರ; 6 ವರ್ಷದ ಬಾಲಕಿ ಸಾವು

ಬಾಲಕಿಯ ತಂದೆ ಹತ್ರಾಸ್‌ ಜಿಲ್ಲೆಯ ಹಳ್ಳಿಯೊಂದರ ನಿವಾಸಿಯಾಗಿದ್ದು, ಸೆ.21ರಂದು  ದೂರು ನೀಡಿದ್ದರು. ಸಂಬಂಧಿಯ ಮನೆಯಲ್ಲೇ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆ ಎಂದು ಅವರು ಆರೋಪಿಸಿದ್ದರು.

- Advertisement -
- Advertisement -

ಹತ್ರಾಸ್ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇನ್ನು ಹಸಿಯಾಗಿರುವಾಗಲೇ ಅದೇ ಜಿಲ್ಲೆಯಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ವರದಿಯಾಗಿದೆ. ಸುಮಾರು 10 ದಿನಗಳ ಹಿಂದೆ ತನ್ನ ಸೋದರ ಸಂಬಂಧಿಯಿಂದ ಅತ್ಯಾಚಾರಕ್ಕೊಳಗಾದ ಆರು ವರ್ಷದ ಬಾಲಕಿ ಮಂಗಳವಾರ ದೆಹಲಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮೃತ ಸಂತ್ರಸ್ತ ಬಾಲಕಿ ಹತ್ರಾಸ್‌ಗೆ ಸೇರಿದ್ದು, ಕಳೆದ ವರ್ಷ ತಾಯಿ ತೀರಿಕೊಂಡ ನಂತರ ಅಲಿಗಢದ ಇಗ್ಲಾಸ್‌ನಲ್ಲಿ ತಾಯಿಯ ಚಿಕ್ಕಮ್ಮನೊಂದಿಗೆ ವಾಸಿಸುತ್ತಿದ್ದರು. ಸಂತ್ರಸ್ತೆಯ 15 ವರ್ಷದ ಸಂಬಂಧಿಯೊಬ್ಬನನ್ನು ಬಂಧಿಸಿದ್ದಾರೆ. ಬಾಲಕನ ತಾಯಿ, ಸಂತ್ರಸ್ತೆಯ ಚಿಕ್ಕಮ್ಮ ಪರಾರಿಯಾಗಿದ್ದಾರೆ. ಅವರನ್ನು ಹುಡುಕಲು ಎರಡು ಪೊಲೀಸ್‌ ತಂಡಗಳನ್ನು ರಚಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಬಾಲಕಿಯ ತಂದೆ ಹತ್ರಾಸ್‌ ಜಿಲ್ಲೆಯ ಹಳ್ಳಿಯೊಂದರ ನಿವಾಸಿಯಾಗಿದ್ದು, ಸೆ.21ರಂದು  ದೂರು ನೀಡಿದ್ದರು. ಸಂಬಂಧಿಯ ಮನೆಯಲ್ಲೇ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆ ಎಂದು ಅವರು ಆರೋಪಿಸಿದ್ದರು.

ಇದನ್ನೂ ಓದಿ: ಹತ್ರಾಸ್ ಕುರಿತು ಪ್ರಧಾನಿ ಒಂದೂ ಮಾತಾಡಲಿಲ್ಲ ಏಕೆ? : ರಾಹುಲ್ ಗಾಂಧಿ ಪ್ರಶ್ನೆ

ಅಲೀಗಡ ಜಿಲ್ಲೆಯ ಇಗ್ಲಾಸ್‌ ಪ್ರದೇಶದಲ್ಲಿ ಇರುವ ಸಂಬಂಧಿಯೊಬ್ಬರ ಮನೆಯಲ್ಲೇ ಬಾಲಕಿಯನ್ನು ಕೂಡಿಹಾಕಲಾಗಿತ್ತು.  ಆಕೆಯ ಸ್ಥಿತಿ ಹದಗೆಟ್ಟಿದ್ದರಿಂದ ಆಕೆಯನ್ನು ದೆಹಲಿಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಯಿತು. ಚಿಕಿತ್ಸೆ ಫಲಕಾರಿಯಾಗದೆ ಆಕೆ ಸಾವನ್ನಪ್ಪಿದ್ದಾರೆ.

ಕುಟುಂಬವು ಅಪ್ರಾಪ್ತೆಯ ಮೃತದೇಹವನ್ನು ಸದಾಬಾದ್-ಬಾಲ್ದೇವ್ ರಸ್ತೆಯಲ್ಲಿ ಇರಿಸಿ ಪ್ರತಿಭಟನೆ ನಡೆಸಿ, ಆರೋಪಿಯ ಕುಟುಂಬ ಮತ್ತು ತಪ್ಪಿತಸ್ಥ ಪೊಲೀಸ್ ಸಿಬ್ಬಂದಿಯನ್ನು ಬಂಧಿಸುವಂತೆ ಒತ್ತಾಯಿಸಿತ್ತು.

ಘಟನೆ ಕುರಿತು ಹೇಳಿಕೆ ನೀಡಿರುವ ಹತ್ರಾಸ್ ಎಸ್‌ಪಿ ವಿನೀತ್ ಜೈಸ್ವಾಲ್ ಆರೋಪಿಗಳ ಮೇಲೆ ವಿವಿಧ ಪ್ರಕರಣಗಳನ್ನು ದಾಖಲಾಗಿದೆ ಎಂದಿದ್ದಾರೆ.

’ಅಲೀಗಢ್ ಜಿಲ್ಲೆಯ ಇಗ್ಲಾಸ್ ಪೊಲೀಸ್ ಠಾಣೆಯಲ್ಲಿ ಮೃತ ಸಂತ್ರಸ್ತ ಬಾಲಕಿಯ ಅಪ್ರಾಪ್ತ ಸೋದರ ಸಂಬಂಧಿ ವಿರುದ್ಧ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ಅಲೀಗಢ್ ಪೊಲೀಸರು ಬಾಲಾಪರಾಧಿ ನ್ಯಾಯಾಲಯದಲ್ಲಿ ಬಂಧಿಸಿ ಹಾಜರುಪಡಿಸಿದ್ದಾರೆ ಮತ್ತು ಅವರು ಈ ಪ್ರಕರಣದಲ್ಲಿ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರ’ ಎಂದು ವಿನೀತ್ ಜೈಸ್ವಾಲ್ ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಹತ್ರಾಸ್: ಘಟನೆಯನ್ನು ’ಅಸಾಧಾರಣ ಮತ್ತು ಆಘಾತಕಾರಿ’ ಎಂದು ಕರೆದ ಸುಪ್ರೀಂ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಣಿಪುರ ಹಿಂಸಾಚಾರಕ್ಕೆ ಬಲಿಯಾದವರ ಬಗ್ಗೆ ಮೋದಿ ಸರ್ಕಾರಕ್ಕೆ ಸ್ವಲ್ಪವೂ ಸಹಾನುಭೂತಿ ಇಲ್ಲ: ಮಲ್ಲಿಕಾರ್ಜುನ ಖರ್ಗೆ

0
ಮಣಿಪುರದ ಪರಿಸ್ಥಿತಿಯ ಬಗ್ಗೆ ಮೋದಿ ಸರಕಾರ ನಿರಾಸಕ್ತಿಯನ್ನು ಹೊಂದಿದ್ದು, ಪಶ್ಚಾತ್ತಾಪವಿಲ್ಲದಂತೆ ವರ್ತಿಸುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿಯನ್ನು ನಡೆಸಿದೆ. ಈ ಕುರಿತು ಎಕ್ಸ್‌ನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...