Homeಮುಖಪುಟಒಂದು ಸ್ವತಂತ್ರ ಮಾಧ್ಯಮವನ್ನು ನನಗೆ ಕೊಡಿ, ಮರುಕ್ಷಣ ಈ ಸರ್ಕಾರ ಅಧಿಕಾರದಲ್ಲಿರುವುದಿಲ್ಲ: ರಾಹುಲ್ ಗಾಂಧಿ

ಒಂದು ಸ್ವತಂತ್ರ ಮಾಧ್ಯಮವನ್ನು ನನಗೆ ಕೊಡಿ, ಮರುಕ್ಷಣ ಈ ಸರ್ಕಾರ ಅಧಿಕಾರದಲ್ಲಿರುವುದಿಲ್ಲ: ರಾಹುಲ್ ಗಾಂಧಿ

ಗೆಳಯರೇ, ನೀವೂ ಸಹ ಗುಲಾಮಗಿರಿಗೆ ಒಳಗಾಗುತ್ತಿದ್ದೀರಿ. ಒಂದು ದೇಶದ ಭೂಭಾಗವನ್ನು ಇನ್ನೊಂದು ದೇಶ ಆಕ್ರಮಿಸಿದೆ. ಆದರೆ ಮಾಧ್ಯಮಗಳೂ ಕೂಡ ಸರ್ಕಾರವನ್ನು ಪ್ರಶ್ನಿಸದೇ ಇರುವಂತಹ ಪರಿಸ್ಥಿತಿಯನ್ನು ಜಗತ್ತಿನಲ್ಲಿ ಯಾವುದೇ ದೇಶ ಇಂದು ಎದುರಿಸುತ್ತಿಲ್ಲ.

- Advertisement -
- Advertisement -

“ಒಂದು ಸ್ವತಂತ್ರ ಮಾಧ್ಯಮವನ್ನು ನನಗೆ ಕೊಡಿ. ಸ್ವತಂತ್ರ ಸಂಸ್ಥೆಗಳನ್ನು ನೀಡಿ. ಮರುಕ್ಷಣ ಈ ಕೇಂದ್ರ ಸರ್ಕಾರ ಆಡಳಿತದಲ್ಲಿರುವುದಿಲ್ಲ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ ವಿವಾದಾತ್ಮಕ ಕೃಷಿ ಮಸೂದೆಗಳನ್ನು ವಿರೋಧಿಸಿ ಕೈಗೊಂಡಿದ್ದ ಯಾತ್ರೆಯ ಅಂತಿಮ ದಿನವಾದ ಇಂದು ಪಂಜಾಬಿನ ಪಟಿಯಾಲದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಅವರು ನರೇಂದ್ರ ಮೋದಿ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ

ಇದನ್ನೂ ಓದಿ: ಕೃಷಿ ಮಸೂದೆಗಳ ವಿರುದ್ಧ ರಾಹುಲ್ ಗಾಂಧಿ ನೇತೃತ್ವದಲ್ಲಿ ಟ್ರ್ಯಾಕ್ಟರ್‌ ರ್‍ಯಾಲಿ

ವಿರೋಧ ಪಕ್ಷಗಳು ದುರ್ಬಲವಾಗಿವೆ ಎಂಬ ಆರೋಪವನ್ನು ಸಾರಾಸಗಟಾಗಿ ತಳ್ಳಿಹಾಕಿದ ರಾಹುಲ್ ಗಾಂಧಿ, “ದುರ್ಬಲಗೊಂಡಿರುವುದು ವಿರೋಧ ಪಕ್ಷಗಳಲ್ಲ. ನಮ್ಮ ಸುದ್ದಿ ಮಾಧ್ಯಮಗಳನ್ನು, ಸಂಸ್ಥೆಗಳನ್ನು ಎಲ್ಲವನ್ನೂ ಕೈವಶ ಮಾಡಿಕೊಳ್ಳಲಾಗಿದೆ. ಒಂದು ಸ್ವತಂತ್ರ ಮಾಧ್ಯಮವನ್ನು ನನಗೆ ಕೊಡಿ, ಸ್ವತಂತ್ರವಾಗಿರುವ ಸಂಸ್ಥೆಗಳನ್ನು ಕೊಡಿ. ಮರುಗಳಿಗೆ ಈ ಸರಕಾರ ಅಧಿಕಾರದಲ್ಲಿ ಇರುವುದಿಲ್ಲ” ಎಂದು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಈ ಕರಾಳ ಕಾಯ್ದೆಗಳನ್ನು ತೆಗೆದುಹಾಕುತ್ತದೆ: ರಾಹುಲ್ ಗಾಂಧಿ

“ಸರಿ ವಿರೋಧ ಪಕ್ಷಗಳು ದುರ್ಬಲವಾಗಿವೆ ಎಂಬುದು ನಿಮ್ಮ ಆರೋಪ. ಆದರೆ ಗೆಳಯರೇ, ನೀವೂ ಸಹ ಗುಲಾಮಗಿರಿಗೆ ಒಳಗಾಗುತ್ತಿದ್ದೀರಿ. ಒಂದು ದೇಶದ ಭೂಭಾಗವನ್ನು ಇನ್ನೊಂದು ದೇಶ ಆಕ್ರಮಿಸಿದೆ. ಆದರೆ ಮಾಧ್ಯಮಗಳೂ ಕೂಡ ಸರ್ಕಾರವನ್ನು ಪ್ರಶ್ನಿಸದೇ ಇರುವಂತಹ ಪರಿಸ್ಥಿತಿಯನ್ನು ಜಗತ್ತಿನಲ್ಲಿ ಯಾವುದೇ ದೇಶ ಇಂದು ಎದುರಿಸುತ್ತಿಲ್ಲ. ನೀವೇಕೆ ಅವರನ್ನು ಪತ್ರಿಕಾಗೋಷ್ಠಿಗಳಲ್ಲಿ ಪ್ರಶ್ನಿಸಬಾರದು?” ಎಂದು ಮಾಧ್ಯಮಗಳಿಗೆ ಮರುಪ್ರಶ್ನೆ ಮಾಡಿದ್ದಾರೆ.


“ಸರ್ಕಾರ ವಿವಿಧ ಸಂಸ್ಥೆಗಳನ್ನು ತನ್ನ ಕೈವಶ ಮಾಡಿರಬಹುದು. ಆದರೆ ರೈತರನ್ನು, ಯುವಜನತೆಯನ್ನು ಹಾಗೂ ಸಣ್ಣ ವರ್ತಕರ ವಿಚಾರದಲ್ಲಿ ಹಾಗೆ ಮಾಡಲು ಸಾಧ್ಯವಿಲ್ಲ. ಮೋದಿ ಸರ್ಕಾರದ ನೀತಿಗಳಿಂದ ತೀವ್ರ ಬಾಧಿತಕ್ಕೊಳಗಾಗಿರುವ ಜನರೊಂದಿಗೆ ನಾನಿದ್ದೇನೆ. ನಾನು ತಾಳ್ಮೆ ಇರುವ ವ್ಯಕ್ತಿ. ಜನರಿಗೆ ಸತ್ಯದ ಅರಿವು ಆಗುವ ತನಕ ಕಾಯುತ್ತೇನೆ” ಎಂದು ಹೇಳಿದರು.

ಇದನ್ನೂ ಓದಿ: ವಿವಾದಾತ್ಮಕ ಮಸೂದೆ ವಿರುದ್ಧ ನಿಲ್ಲದ ರೈತರ ಪ್ರತಿಭಟನೆ: ಜೈ ಕಿಸಾನ್ ಆಂದೋಲನ

ಕೃಷಿ ಮಸೂದೆಗಳನ್ನು ವಿರೋಧಿಸಿ ರಾಹುಲ್ ಗಾಂಧಿ ಮುಂದಾಳತ್ವದಲ್ಲಿ ಪಂಜಾಬ್‌ನಿಂದ ದೆಹಲಿಯವರೆಗೆ ಟ್ರ್ಯಾಕ್ಟರ್ ರ‍್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು. ಆದರೆ ಹರಿಯಾಣ ಗಡಿಯ ಬಳಿ ಅವರನ್ನು ತಡೆಯಲಾಗಿದೆ. ವಿಶೇಷವೆಂದರೆ ಈ ರ‍್ಯಾಲಿಯಲ್ಲಿ ರಾಹುಲ್ ಗಾಂಧಿಯವರೇ ಸ್ವತಃ ಟ್ರ್ಯಾಕ್ಟರ್ ಚಲಾಯಿಸಿದ್ದರು.

ತಮ್ಮನ್ನು ಗಡಿಯಲ್ಲಿ ತಡೆದಿದ್ದನ್ನು ವಿರೋಧಿಸಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, “ಅವರು ನಮ್ಮನ್ನು ಹರಿಯಾಣ ಗಡಿಯ ಬ್ರಿಡ್ಜ್ ಬಳಿ ತಡೆಯಲಾಗಿದೆ. ನಾನು ಅಲುಗಾಡುವುದಿಲ್ಲ. ಇಲ್ಲಿ ಕಾಯುವುದಕ್ಕೆ ನನಗೆ ಸಂತೋಷವಿದೆ. 1 ಗಂಟೆ, 5 ಗಂಟೆ, 24 ಗಂಟೆ, 100 ಗಂಟೆಗಳು, 1000 ಗಂಟೆಗಳು ಅಥವಾ 5000 ಗಂಟೆಗಳು ಬೇಕಾದರೂ ಕಾಯುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಕೃಷಿ ಮಸೂದೆಗಳ ವಿರುದ್ಧ ದೇಶಾದ್ಯಂತ ”ಅನ್ನದಾತ’ರ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...