Homeಮುಖಪುಟತಮಿಳುನಾಡು: AIADMK ಪಕ್ಷದಿಂದ ಇ.ಪಳನಿಸ್ವಾಮಿ ಮುಖ್ಯಮಂತ್ರಿ ಅಭ್ಯರ್ಥಿ; ಅಧಿಕೃತ ಘೋಷಣೆ

ತಮಿಳುನಾಡು: AIADMK ಪಕ್ಷದಿಂದ ಇ.ಪಳನಿಸ್ವಾಮಿ ಮುಖ್ಯಮಂತ್ರಿ ಅಭ್ಯರ್ಥಿ; ಅಧಿಕೃತ ಘೋಷಣೆ

2021ರಲ್ಲಿ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆಯಾಗಲು ಇ.ಪಳನಿಸ್ವಾಮಿ ಮತ್ತು ಒ.ಪನ್ನೀರ್‌ಸೆಲ್ವಂ ಅವರ ನಡುವೆ ಬಿರುಸಿನ ಪೈಪೋಟಿ ನಡೆದಿತ್ತು.

- Advertisement -
- Advertisement -

ಮುಂದಿನ ವರ್ಷ ನಡೆಯಲಿರುವ ತಮಿಳುನಾಡು ರಾಜ್ಯ ವಿಧಾನಸಭಾ ಚುನಾವಣೆಯ ಪ್ರಯುಕ್ತ ಅಖಿಲ ಭಾರತ ಅಣ್ಣಾ ದ್ರಾವಿಡ ಕಳಗಂನಿಂದ (AIADMK) ಇ.ಪಳನಿಸ್ವಾಮಿ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಹೊರಹೊಮ್ಮಿದ್ದಾರೆ.

ಈ ವಿಷಯವನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಬಲ ಪೈಪೋಟಿ ನಿಡುತ್ತಿದ್ದ ಪಕ್ಷದ ಜಂಟಿ ಸಂಯೋಜಕರಾದ ಒ.ಪನ್ನೀರ್‌ಸೆಲ್ವಂ ಘೋಷಿಸಿರುವುದು ಮಹತ್ವದ್ದಾಗಿದೆ. ಇದು ಇಪಿಎಸ್ (ಇ.ಪಳನಿಸ್ವಾಮಿ) ಮತ್ತು ಒಪಿಎಸ್ (ಒ.ಪನ್ನೀರ್ಸೆಲ್ವಂ) ಬಣಗಳ ಒಗ್ಗೂಡಿಸುವಿಕೆಯನ್ನು ಸೂಚಿಸುತ್ತದೆ.

ಇದನ್ನೂ ಓದಿ: ಹತ್ರಾಸ್ ಸಂತ್ರಸ್ತ ಕುಟುಂಬ ಕೇಳುತ್ತಿರುವುದೇನು?: 5 ಪ್ರಶ್ನೆಗಳನ್ನು ಮುಂದಿಟ್ಟ ಪ್ರಿಯಾಂಕ ಗಾಂಧಿ

11 ಜನ ಸದಸ್ಯರ ಸಮಿತಿಯನ್ನು ಪಕ್ಷವು ಚುನಾವಣೆಯ ಅಭ್ಯರ್ಥಿಗಳನ್ನು ಪರೀಕ್ಷಿಸಲು ಸಭೆಯಲ್ಲಿ ರಚಿಸಿತ್ತು. ಈ ಸಮಿತಿಯು ಇ.ಪಳನಿಸ್ವಾಮಿಯವರನ್ನು ಆಯ್ಕೆ ಮಾಡಿದೆ.

2021ರಲ್ಲಿ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆಯಾಗಲು ಇ.ಪಳನಿಸ್ವಾಮಿ ಮತ್ತು ಒ.ಪನ್ನೀರ್‌ಸೆಲ್ವಂ ಅವರ ನಡುವೆ ಬಿರುಸಿನ ಪೈಪೋಟಿ ನಡೆದಿತ್ತು.

ಇದನ್ನೂ ಓದಿ: NEP ಯ ತ್ರಿಭಾಷಾ ಸೂತ್ರ ಅಳವಡಿಸುವುದಿಲ್ಲ: ತಮಿಳುನಾಡು ಮುಖ್ಯಮಂತ್ರಿ

ಮುಖ್ಯಮಂತ್ರಿ ಪಳನಿಸ್ವಾಮಿ ಮತ್ತು ಪನ್ನೀರ್ ಸೆಲ್ವಂ ಅವರ ಬೆಂಬಲಿಗರು ತಮ್ಮ ನಾಯಕ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಹೇಳಿಕೊಂಡು ಪೋಸ್ಟರ್‌ಗಳನ್ನು ಹಾಕಿದಾಗ ಈ ವಿವಾದ ಉಲ್ಬಣಗೊಂಡಿತ್ತು.

ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಕುರಿತು ಚರ್ಚಿಸಲು ಎಐಎಡಿಎಂಕೆ ಕಾರ್ಯಕಾರಿ ಸಮಿತಿ ಸೆಪ್ಟೆಂಬರ್ 28 ರಂದು ಚೆನ್ನೈನ ಎಐಎಡಿಎಂಕೆ ಕೇಂದ್ರ ಕಚೇರಿಯಲ್ಲಿ ಸಭೆ ನಡೆಸಿತ್ತು. ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪನ್ನೀರ್ ಸೆಲ್ವಂ ಮತ್ತು ಎಡಪ್ಪಾಡಿ ಪಳನಿಸ್ವಾಮಿ ಇಬ್ಬರೂ ತಮ್ಮನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಸುವಂತೆ ಒತ್ತಾಯಿಸಿದ್ದರು.

ಇದನ್ನೂ ಓದಿ: ವಿನಾಯಕ ಚತುರ್ಥಿ: ತಮಿಳುನಾಡಿನಲ್ಲಿ ಮಿತ್ರಪಕ್ಷಗಳಾದ AIADMK ಮತ್ತು BJP ಟ್ವೀಟ್ ಸಮರ

ಉಪಮುಖ್ಯಮಂತ್ರಿ ಪನ್ನೀರ್‌ಸೆಲ್ವಂಗೆ ಬೆಂಬಲದ ಕೊರತೆ ಇದ್ದು, ಪಳನಿಸ್ವಾಮಿ ಅವರಿಗೆ ಬಹುತೇಕ ಶಾಸಕರು, ಮುಖಂಡರ ಬೆಂಬಲವಿದೆ ಎನ್ನಲಾಗಿದೆ.

’ಪಕ್ಷದಲ್ಲಿ ಯಾವುದೇ ಬದಲಾವಣೆಗಳಾಗುವುದಿಲ್ಲ. ಯಥಾಸ್ಥಿತಿ ಮುಂದುವರಿಯುತ್ತದೆ. ಪಳನಿಸ್ವಾಮಿ ಉಸ್ತುವಾರಿಯಲ್ಲಿ ಪಕ್ಷವು ಚುನಾವಣೆಯನ್ನು ಎದುರಿಸಲಿದೆ, ಆದರೆ ಪನ್ನೀರ್‌ ಸೆಲ್ವಂ ಪಕ್ಷದ ಸಂಯೋಜಕರಾಗಿರುತ್ತಾರೆ’ ಎಂದು ಹೆಸರು ಹೇಳಲು ಬಯಸದ ಹಿರಿಯ ಅಧಿಕಾರಿ ತಿಳಿಸಿದ್ದಾರೆ ಎಂದು ವರದಿಯಾಗಿದೆ.


ಇದನ್ನೂ ಓದಿ: ತಮಿಳುನಾಡು ಸಿಎಂ ಅಭ್ಯರ್ಥಿ ಪಟ್ಟಕ್ಕಾಗಿ ಪಳನಿಸ್ವಾಮಿ ಮತ್ತು ಪನ್ನೀರ್ ಸೆಲ್ವಂ ನಡುವೆ ಪೈಪೋಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...