Homeಮುಖಪುಟಸುಶಾಂತ್ ಸಿಂಗ್ ಕೇಸ್: ನಟಿ ರಿಯಾ ಚಕ್ರವರ್ತಿಗೆ ಬಾಂಬೆ ಹೈಕೋರ್ಟ್ ಜಾಮೀನು

ಸುಶಾಂತ್ ಸಿಂಗ್ ಕೇಸ್: ನಟಿ ರಿಯಾ ಚಕ್ರವರ್ತಿಗೆ ಬಾಂಬೆ ಹೈಕೋರ್ಟ್ ಜಾಮೀನು

ಪ್ರಕರಣದಲ್ಲಿ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ಏಮ್ಸ್) ಪ್ಯಾನಲ್, ನಟನನ್ನು ಕೊಲೆ ಮಾಡಲಾಗಿದೆ ಎಂಬ ಆರೋಪವನ್ನು ತಳ್ಳಿ ಹಾಕಿದ್ದು, ಅವರು ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದಾರೆ ಎಂದು ತೀರ್ಪು ನೀಡಿದೆ.

- Advertisement -
- Advertisement -

ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದ ಡ್ರಗ್ಸ್ ಪ್ರಕರಣದಲ್ಲಿ ಬಂಧಿತ ನಟಿ ರಿಯಾ ಚಕ್ರವರ್ತಿಗೆ ಬಾಂಬೆ ಹೈಕೋರ್ಟ್ ಬುಧವಾರ ಜಾಮೀನು ನೀಡಿದೆ. ಆಕೆಯ ಸಹೋದರ ಶೋಯಿಕ್ ಚಕ್ರವರ್ತಿಯ ಜಾಮೀನು ಅರ್ಜಿಯನ್ನು ತಿರಸ್ಕರಿಸಲಾಗಿದೆ.

ಇದೇ ಪ್ರಕರಣದಲ್ಲಿ ಬಂಧನದಲ್ಲಿದ್ದ ಸುಶಾಂತ್ ನೌಕರರರಾದ ದೀಪೇಶ್ ಸಾವಂತ್ ಮತ್ತು ಸ್ಯಾಮ್ಯುಯೆಲ್ ಮಿರಾಂಡಾ ಅವರಿಗೂ ನ್ಯಾಯಾಲಯ ಜಾಮೀನು ನೀಡಿದೆ. ಆದರೆ ರಿಯಾ ಸಹೋದರ ಶೋಯಿಕ್ ಚಕ್ರವರ್ತಿಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.

ರಿಯಾ ಚಕ್ರವರ್ತಿಯನ್ನು ಸೆಪ್ಟೆಂಬರ್ 8 ರಂದು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಬಂಧಿಸಿತ್ತು. ಶೋಯಿಕ್ ಮತ್ತು ಸ್ಯಾಮ್ಯುಯೆಲ್ ಮಿರಾಂಡಾ ಅವರನ್ನು ಸೆಪ್ಟೆಂಬರ್ 4 ರಂದು ಏಜೆನ್ಸಿ ವಶಕ್ಕೆ ತೆಗೆದುಕೊಂಡಿತ್ತು.

ಇದನ್ನೂ ಓದಿ: ಸುಶಾಂತ್ ಪ್ರಕರಣದಲ್ಲಿ ಮುಂಬೈ ಪೊಲೀಸರನ್ನು ಹಣಿಯಲು 80 ಸಾವಿರ ಫೇಕ್ ಅಕೌಂಟ್‌ಗಳ ಸೃಷ್ಠಿ : BJP ಕೈವಾಡದ ಆರೋಪ

ನಟ ಸುಶಾಂತ್‌ ಸಿಂಗ್‌ ರಜಪೂತ್‌ ಸಾವಿನ ಪ್ರಕರಣದಲ್ಲಿ ಡ್ರಗ್ಸ್‌ ವಿಚಾರಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿದ್ದ ನಟಿ ರಿಯಾ ಚಕ್ರವರ್ತಿಗೆ  28 ದಿನಗಳ ಬಳಿಕ ಬಾಂಬೆ ಹೈಕೋರ್ಟ್ ನ್ಯಾಯಮೂರ್ತಿ ಎಸ್‌.ವಿ.ಕೋಟ್ವಾಲ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ್ದಾರೆ. 1ಲಕ್ಷ ಮೌಲ್ಯದ ಬಾಂಡ್ ನೀಡುವಂತೆ ಸೂಚಿಸಿರುವ ಕೋರ್ಟ್, ಬಾಂಬೆ ಬಿಟ್ಟು ಹೊರ ಹೋಗದಂತೆ ತಿಳಿಸಿದೆ. ಹಾಗೆಯೇ ಪಾಸ್ ಪೋರ್ಟ್ ವಶಕ್ಕೆ ಪಡೆಯುವಂತೆ ಸೂಚನೆ ನೀಡಿದೆ.

ರಿಯಾ ಚಕ್ರವರ್ತಿಗೆ ಜಾಮೀನು ನೀಡಿರುವ ಬಾಂಬೆ ಹೈಕೋರ್ಟ್ ಆದೇಶದಿಂದ ನಾವು ಸಂತೋಷಗೊಂಡಿದ್ದೇವೆ. ಸತ್ಯ ಮತ್ತು ನ್ಯಾಯವು ಮೇಲುಗೈ ಸಾಧಿಸಿದೆ ಎಂದು ರಿಯಾ ಪರ ವಕೀಲ ಸತೀಶ್ ಮನೇಶಿಂದೆ ಹೇಳಿದರು.

‘ರಿಯಾ ಬಂಧನ ಕಾನೂನಿನ ವ್ಯಾಪ್ತಿಯನ್ನು ಮೀರಿತ್ತು. ಸಿಬಿಐ, ಜಾರಿ ನಿರ್ದೇಶನಾಲಯ ಮತ್ತು ಎನ್‌ಸಿಬಿ ಸಂಸ್ಥೆಗಳು ರಿಯಾ ವಿರುದ್ಧ ನಡೆಸುತ್ತಿರುವ ಅನಗತ್ಯ ವಿಚಾರಣೆ ಕೊನೆಗೊಳ್ಳಬೇಕು. ನಾವು ಸತ್ಯಕ್ಕೆ ಬದ್ಧರಾಗಿರುತ್ತೇವೆ’ ಎಂದು ವಕೀಲ ಮನೇಶಿಂದೆ ತಿಳಿಸಿದ್ದಾರೆ.

ಜೂನ್ 14ರಂದು ಸುಶಾಂತ್ ಸಿಂಗ್ ರಜಪೂತ್ ಬಾಂದ್ರಾದಲ್ಲಿರುವ ಅವರ ಅಪಾರ್ಟ್ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದರು. ಅಕ್ಟೋಬರ್ 3 ರಂದು, ಅವರ ಶವಪರೀಕ್ಷೆಯ ವರದಿಗಳನ್ನು ಪರಿಶೀಲಿಸುವ ಉಸ್ತುವಾರಿ ವಹಿಸಿದ್ದ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ಏಮ್ಸ್) ಪ್ಯಾನಲ್, ನಟನನ್ನು ಕೊಲೆ ಮಾಡಲಾಗಿದೆ ಎಂಬ ಆರೋಪ ತಳ್ಳಿ ಹಾಕಿದ್ದು, ಅವರು ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದಾರೆ ಎಂದು ತೀರ್ಪು ನೀಡಿತ್ತು.

ಈ ಪ್ರಕರಣವನ್ನು ಈಗಾಗಲೇ ಕೇಂದ್ರ ತನಿಖಾ ದಳ ಮತ್ತು ಜಾರಿ ನಿರ್ದೇಶನಾಲಯ ಪರಿಶೀಲಿಸುತ್ತಿದೆ. ಡ್ರಗ್ಸ್ ಪ್ರಕರಣದಲ್ಲಿ ದೀಪಿಕಾ ಪಡುಕೋಣೆ, ಶ್ರದ್ಧಾ ಕಪೂರ್ ಮತ್ತು ಸಾರಾ ಅಲಿ ಖಾನ್ ಸೇರಿದಂತೆ ಹಲವಾರು ನಟ ನಟಿಯರನ್ನು ತನಿಖೆಗೆ ಒಳಪಡಿಸಲಾಗಿದೆ.


ಇದನ್ನೂ ಓದಿ: ಸುಶಾಂತ್ ಸಿಂಗ್ ಕೊಲೆಯಾಗಿಲ್ಲ; ಇದು ಆತ್ಮಹತ್ಯೆ: ಮುಂಬೈ ಪೊಲೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...