ಹತ್ರಾಸ್ ಸಂತ್ರಸ್ತೆಯ ಕುಟುಂಬವನ್ನು ಭೇಟಿಯಾಗಲು ಹೋಗುತ್ತಿದ್ದ ಕೇರಳ ಮೂಲದ ಪತ್ರಕರ್ತನನ್ನು ಪೊಲೀಸರು ಬಂಧಿಸಿದ್ದರು. ಈಗ ಅವರ ಮೇಲೆ ಭಯೋತ್ಪಾದನೆ ನಿಗ್ರಹ ಕಾನೂನಿಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.
ಇದನ್ನೂ ಓದಿ: ಹತ್ರಾಸ್: ಘಟನೆಯನ್ನು ’ಅಸಾಧಾರಣ ಮತ್ತು ಆಘಾತಕಾರಿ’ ಎಂದು ಕರೆದ ಸುಪ್ರೀಂ
ಕೇರಳದ ಪತ್ರಕರ್ತ ಮತ್ತು ಮಥುರಾದಲ್ಲಿ ಬಂಧಿಸಲ್ಪಟ್ಟ ಇತರ ಮೂವರ ಮೇಲೆ ಉತ್ತರ ಪ್ರದೇಶ ಪೊಲೀಸರು ದೇಶದ್ರೋಹದ (ಭಯೋತ್ಪಾದನೆ ನಿಗ್ರಹ) ಆರೋಪ ಹೊರಿಸಿದ್ದಾರೆ.
ಇದನ್ನೂ ಓದಿ: ಹತ್ರಾಸ್ ಸಂತ್ರಸ್ತ ಕುಟುಂಬಕ್ಕೆ ಸುಳ್ಳು ಹೇಳಲು 50 ಲಕ್ಷ ಆಮಿಷ- ಯುಪಿ ಪೊಲೀಸರು
ಹತ್ರಾಸ್‌ನಲ್ಲಿ ದಲಿತ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಇಡೀ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿತ್ತು. ಸಂತ್ರಸ್ತ ಯುವತಿಯ ಕುಟುಂಬವನ್ನು ಭೇಟಿಯಾಗಲು ಪತ್ರಕರ್ತರು ಸೋಮವಾರ ರಾತ್ರಿ ಹತ್ರಾಸ್‌ಗೆ ಹೋಗುತ್ತಿದ್ದಾಗ ಪೊಲೀಸರು ಅವರನ್ನು ಬಂಧಿಸಿದ್ದಾರೆ.
ಇದನ್ನೂ ಓದಿ: ಹತ್ರಾಸ್ ಕುರಿತು ಹೇಳಿಕೆ: ವಿಶ್ವಸಂಸ್ಥೆಯ ಭಾರತೀಯ ಅಧಿಕಾರಿ ವಿರುದ್ಧ ವಿದೇಶಾಂಗ ಸಚಿವಾಲಯ ಗರಂ


