Homeಮುಖಪುಟಮಾಜಿ ಸಿಬಿಐ ನಿರ್ದೇಶಕ ಅಶ್ವನಿ ಕುಮಾರ್ ಅಸಹಜ ಸಾವು: ಆತ್ಮಹತ್ಯೆ ಎಂದ ಪೊಲೀಸರು

ಮಾಜಿ ಸಿಬಿಐ ನಿರ್ದೇಶಕ ಅಶ್ವನಿ ಕುಮಾರ್ ಅಸಹಜ ಸಾವು: ಆತ್ಮಹತ್ಯೆ ಎಂದ ಪೊಲೀಸರು

ಅಶ್ವನಿ ಕುಮಾರ್ ಸಿಬಿಐ ಮುಖ್ಯಸ್ಥರಾಗಿದ್ದ ಅಧಿಕಾರವಧಿಯಲ್ಲಿಯೇ ಸಿಬಿಐ ಈಗಿನ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಜುಲೈ 2010 ರಲ್ಲಿ ಸೊಹ್ರಾಬುದ್ದೀನ್ ಶೇಖ್ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಬಂಧಿಸಿತ್ತು.

- Advertisement -
- Advertisement -

ಮಾಜಿ ಸಿಬಿಐ ನಿರ್ದೇಶಕ ಅಶ್ವನಿ ಕುಮಾರ್‌ರವರು ತಮ್ಮ ಶಿಮ್ಲಾದ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಪೊಲೀಸರು ಪ್ರಕರಣವನ್ನು ಆತ್ಮಹತ್ಯೆ ಎಂದು ಕರೆದಿದ್ದರೂ ಈ ಕುರಿತು ಅಧಿಕೃತ ಬರಹ ನೀಡಿಲ್ಲ. ವಿಧಿವಿಜ್ಞಾನ ತಂಡದಿಂದ ಮಾದರಿಗಳನ್ನು ಸಂಗ್ರಹಿಸಿದ್ದು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಿಮ್ಲಾದ ಮನೆಯಲ್ಲಿ 69 ವರ್ಷದ ಅಶ್ವನಿ ಕುಮಾರ್‌ರವರು ಬರೆದಿರುವ ಆತ್ಮಹತ್ಯೆ ಪತ್ರ ಸಿಕ್ಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಶ್ವನಿ ಕುಮಾರ್ ನಂತರ ಸಿಬಿಐ ನಿರ್ದೇಶಕರಾಗಿದ್ದ, ಮಾಜಿ ಪೊಲೀಸ್ ಅಧಿಕಾರಿಯಾದ ಎ.ಪಿ ಸಿಂಗ್‌ರವರು “ನಾನು ಅವರೊಂದಿಗೆ ವಿಶೇಷ ನಿರ್ದೇಶಕರಾಗಿ ಹತ್ತಿರದಿಂದ ಕೆಲಸ ಮಾಡಿದ್ದೇನೆ. ಅವರು ಸಂಭಾವಿತ ವ್ಯಕ್ತಿ. ಎಂದಿಗೂ ತನ್ನ ಸಹನೆಯನ್ನು ಕಳೆದುಕೊಳ್ಳುತ್ತಿರಲಿಲ್ಲ. ಅವರ ಸಾವು ಆಘಾತಕಾರಿ” ಎಂದು ತಿಳಿಸಿದ್ದಾರೆ.

ಭಾರತೀಯ ಪೊಲೀಸ್ ಸೇವೆಯ 1973 ರ ಬ್ಯಾಚ್ ಅಧಿಕಾರಿಯಾಗಿದ್ದ ಅಶ್ವನಿ ಕುಮಾರ್ ಅವರು 2006 ರಿಂದ 2008 ರವರೆಗೆ ಹಿಮಾಚಲ ಪ್ರದೇಶ ಡಿಜಿಪಿ ಆಗಿದ್ದರು. ನಂತರ ಆಗಸ್ಟ್ 2008 ರಿಂದ ನವೆಂಬರ್ 2010 ರವರೆಗೆ ಕೇಂದ್ರೀಯ ತನಿಖಾ ದಳದ (ಸಿಬಿಐ) ಮುಖ್ಯಸ್ಥರಾಗಿದ್ದರು. ಮೂರು ವರ್ಷಗಳ ನಂತರ, ಮನಮೋಹನ್ ಸಿಂಗ್ ನೇತೃತ್ವದ ಕೇಂದ್ರ ಸರ್ಕಾರವು ಅವರನ್ನು ಮಾರ್ಚ್ 2013 ರಲ್ಲಿ ನಾಗಾಲ್ಯಾಂಡ್ ರಾಜ್ಯಪಾಲರಾಗಿ ನೇಮಕ ಮಾಡಿತು. ಇದಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿತ್ತು.

ಅಶ್ವನಿ ಕುಮಾರ್ ರಾಜ್ಯವೊಂದರ ರಾಜ್ಯಪಾಲರಾಗಿ ನೇಮಕವಾದ ಮೊದಲ ಮಾಜಿ ಸಿಬಿಐ ಅಧಿಕಾರಿಯಾಗಿದ್ದರು. ಕೆಲವು ತಿಂಗಳುಗಳ ನಂತರ, ಅವರನ್ನು ಡಿಸೆಂಬರ್ 2013 ರವರೆಗೆ ಮಣಿಪುರಕ್ಕೂ ರಾಜ್ಯಪಾಲರಾಗಿ ನೇಮಿಸಲಾಗಿತ್ತು. ಆದರೆ 2014 ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಅವರನ್ನು ರಾಜ್ಯಪಾಲ ಹುದ್ದೆಯಿಂದ ತೆಗೆದುಹಾಕಲಾಯಿತು.

ಅಶ್ವನಿ ಕುಮಾರ್ ಸಿಬಿಐ ಮುಖ್ಯಸ್ಥರಾಗಿದ್ದ ಅಧಿಕಾರವಧಿಯಲ್ಲಿಯೇ ಸಿಬಿಐ ಈಗಿನ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಜುಲೈ 2010 ರಲ್ಲಿ ಸೊಹ್ರಾಬುದ್ದೀನ್ ಶೇಖ್ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಬಂಧಿಸಿತ್ತು. ಆಗ ಮುಖ್ಯಮಂತ್ರಿ ನರೇಂದ್ರ ಮೋದಿ ನೇತೃತ್ವದ ಗುಜರಾತ್ ಸರ್ಕಾರದಲ್ಲಿ ಅಮಿತ್‌ ಶಾ ಅವರು ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ಸಚಿವರಾಗಿದ್ದರು. ಈ ಪ್ರಕರಣದಲ್ಲಿ ಅಮಿತ್‌ ಶಾ ಸೇರಿದಂತೆ ವಿಚಾರಣೆಯನ್ನು ಎದುರಿಸಿದ 22 ಆರೋಪಿಗಳನ್ನು 2018 ರ ಡಿಸೆಂಬರ್‌ನಲ್ಲಿ ಖುಲಾಸೆಗೊಳಿಸಲಾಗಿದೆ.

ಅಶ್ವನಿ ಕುಮಾರ್ ಅವರು ಹಿಮಾಚಲ ಪ್ರದೇಶದ ಯುವ ಐಪಿಎಸ್ ಅಧಿಕಾರಿಯಾಗಿ 1985 ರಲ್ಲಿ ಶಿಮ್ಲಾ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದರು. ಈ ನಿಯೋಜನೆಯ ಸಮಯದಲ್ಲಿಯೇ ಆಗಿನ ಪ್ರಧಾನಿ ರಾಜೀವ್ ಗಾಂಧಿಯವರ ಸುರಕ್ಷತೆಯ ಜವಾಬ್ದಾರಿಯನ್ನು ಹೊಂದಿದ ತಂಡದ ಭಾಗವಾಗಿದ್ದರು. ಅವರು 1985 ರಿಂದ 1990 ರವರೆಗೆ ಪ್ರಧಾನ ಮಂತ್ರಿ ಕಚೇರಿಯಲ್ಲಿ ಸಹಾಯಕ ನಿರ್ದೇಶಕರು ಸೇರಿದಂತೆ ವಿವಿಧ ಹುದ್ದೆಗಳಲ್ಲಿದ್ದರು. ಈ ಅಧಿಕಾರಾವಧಿಯಲ್ಲಿ ಅವರು ಗಾಂಧಿ ಕುಟುಂಬದೊಂದಿಗೆ ನಿಕಟ ಸಂಪರ್ಕದಲ್ಲಿದ್ದರು ಎನ್ನಲಾಗಿದೆ.


ಇದನ್ನೂ ಓದಿ: ’ಪ್ರಜಾಭಾರತ’ ದನಿ ಅಡಗಿಸಲು ಸಂಚು; ಹೊರಾಟಗಾರ ಪತ್ರಕರ್ತ ಕೆ. ದೀಪಕ್ ಮೇಲೆ FIR

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...