Homeಮುಖಪುಟದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ: ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ: ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಸದ್ಯ ಹತ್ರಾಸ್‌ನ 19 ವರ್ಷದ ದಲಿತ ಯುವತಿಯ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಕಾವು ದೇಶಾದ್ಯಂತ ಹೆಚ್ಚಾಗಿರುವ ಸಮಯದಲ್ಲಿ ಈ ತೀರ್ಪು ಹೊರಬಿದ್ದಿದೆ. ಒಂದೂವರೆ ವರ್ಷದ ಅವಧಿಯಲ್ಲಿ ಅಪರಾಧಿಗಳಿಗೆ ಶಿಕ್ಷೆಯಾಗಿದೆ.

- Advertisement -
- Advertisement -

ಕಳೆದ ವರ್ಷದ ಏಪ್ರಿಲ್‌ನಲ್ಲಿ ರಾಜಸ್ಥಾನದ ಅಲ್ವಾರ್‌ನಲ್ಲಿ ಪತಿಯ ಎದುರೇ 19 ವರ್ಷದ ದಲಿತ ಯುವತಿಯ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ನಾಲ್ವರು ಅಪರಾಧಿಗಳಿಗೆ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪರಿಶಿಷ್ಟ ಜಾತಿ ಮತ್ತು ಬುಡಕಟ್ಟು (ದೌರ್ಜನ್ಯ ತಡೆ) ಕಾಯ್ದೆಯನ್ನು ಉಲ್ಲೇಖಿಸಿ ನ್ಯಾಯಾಲಯ ಈ ತೀರ್ಪು ಪ್ರಕಟಿಸಿದೆ.

2019ರ ಏಪ್ರಿಲ್ 26 ರಂದು ತನ್ನ ಪತಿ ಜೊತೆಗೆ ತೆರಳುತ್ತಿದ್ದ 19 ವರ್ಷದ ದಲಿತ ಯುವತಿಯ ಮೇಲೆ ಥಾನಗಾಜಿ-ಅಲ್ವಾರ್ ಬೈಪಾಸ್‌ನಲ್ಲಿ 4 ಮಂದಿ ಅತ್ಯಾಚಾರ ಎಸಗಿದ್ದರು. ಅದನ್ನು ವಿಡಿಯೋ ಚಿತ್ರಿಕರಣ ಮಾಡಿ ದೂರು ನೀಡಿದರೆ ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿದ್ದರು. ನಂತರ ವಿಡಿಯೋ ಇಟ್ಟುಕೊಂಡು ಬ್ಲಾಕ್‌ಮೇಲ್ ಮಾಡಲು ಶುರು ಮಾಡಿದ್ದ ಆರೋಪಿಗಳು ವಿಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡಿದ್ದರು.

ಘಟನೆ ಕುರಿತು ದೇಶಾದ್ಯಂತ ಆಕ್ರೋಶ ಕಂಡುಬಂದ ಹಿನ್ನೆಲೆ ಮೇ 2 ರಂದು ಅತ್ಯಾಚಾರವೆಸಗಿದ್ದ ನಾಲ್ವರು ಆರೋಪಿಗಳು ಮತ್ತು ವಿಡಿಯೋ ಚಿತ್ರಿಕರಣ ಮಾಡಿದ್ದ ಮತ್ತೊಬ್ಬನ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು.

ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗಿರುವ ನಾಲ್ವರು ಅಪರಾಧಿಗಳಿಗೆ ಅಲ್ವಾರ್‌ನ ಸ್ಥಳೀಯ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ಘಟನೆಯ ವಿಡಿಯೋ ತುಣುಕನ್ನು ಚಿತ್ರೀಕರಿಸಿದ ಮತ್ತು ಪ್ರಸಾರ ಮಾಡಿದ್ದಕ್ಕಾಗಿ ಐಟಿ ಕಾಯ್ದೆಯಡಿ ಒಬ್ಬ ಅಪರಾಧಿಗೆ ನ್ಯಾಯಾಲಯ ಐದು ವರ್ಷಗಳ ಜೈಲು ಶಿಕ್ಷೆ ನೀಡಿದೆ.

ಇದನ್ನೂ ಓದಿ: ಹತ್ರಾಸ್: ಘಟನೆಯನ್ನು ’ಅಸಾಧಾರಣ ಮತ್ತು ಆಘಾತಕಾರಿ’ ಎಂದು ಕರೆದ ಸುಪ್ರೀಂ

2019 ರ ಮೇ 2 ರಂದು ದಾಖಲಾದ ಎಫ್‌ಐಆರ್ ಪ್ರಕಾರ, ಐವರು ಪುರುಷರು ಸಂತ್ರಸ್ತೆಯ ಗಂಡನನ್ನು ಸುಮಾರು 3 ಗಂಟೆಗಳ ಕಾಲ ಥಳಿಸಿದ್ದಾರೆ. ನಂತರ ಆಕೆಯ ಮೇಲೆ ಅತ್ಯಾಚಾರ ನಡೆಸಿ, ವಿಡಿಯೋ ಮಾಡಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹಾಕುವ ಬೆದರಿಕೆ ಹಾಕಿ 10,000 ಸಾವಿರ ರೂಪಾಯಿ ಕೇಳಿದ್ದಾರೆ. ಆದರೂ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋ ಹರಿಬಿಟ್ಟಿದ್ದಾರೆ. ಆ ದಿನವೇ ಎಫ್‌ಐಆರ್‌ ದಾಖಲಾಗಿದೆ.

ಎಫ್‌ಐಆರ್ ದಾಖಲಿಸಿದ 16 ದಿನಗಳ ನಂತರ ಪೊಲೀಸರು ಮೇ 18, 2019 ರಂದು ಆರೋಪಿಗಳಾದ ಚೋಟೇ ಲಾಲ್ (22), ಹನ್ಸ್‌ರಾಜ್ ಗುರ್ಜರ್ (20), ಅಶೋಕ್ ಕುಮಾರ್ ಗುರ್ಜರ್ (20) ಮತ್ತು ಇಂದ್ರಜ್ ಸಿಂಗ್ ಗುರ್ಜರ್ (22) ವಿರುದ್ಧ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಚಾರ್ಜ್‌ಶೀಟ್ ದಾಖಲಿಸಿದ್ದರು.  ಐದನೇ ಆರೋಪಿ ಮುಖೇಶ್ ಗುರ್ಜರ್ (28) ವಿರುದ್ಧ ವಿಡಿಯೋ ಪ್ರಸಾರ ಮಾಡಿದ್ದಕ್ಕಾಗಿ ಐಟಿ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ದೂರು ದಾಖಲಿಸಲಾಗಿತ್ತು.

ಪ್ರಕರಣದಲ್ಲಿ ಅಂದಿನ ಎಸ್‌ಪಿ ರಾಜೀವ್ ಪಚಾರ್ ಮತ್ತು ಥಾನಗಾಜಿ ಎಸ್‌ಎಚ್‌ಒ ಸರ್ದಾರ್ ಸಿಂಗ್ ಅವರನ್ನ ರಾಜ್ಯ ಸರ್ಕಾರ ಅಮಾನತುಗೊಳಿಸಿತು. ಜೂನ್ 7 ರಂದು, ರಾಜ್ಯ ಸರ್ಕಾರವು ಐಪಿಸಿಯ ಸೆಕ್ಷನ್ 166 ಎ (ಸಿ) ಅಡಿಯಲ್ಲಿ ಎಸ್‌ಎಚ್‌ಒ ಸರ್ದಾರ್ ಸಿಂಗ್ ವಿರುದ್ಧ ಎಫ್‌ಐಆರ್ ದಾಖಲಿಸಲು ಆದೇಶಿಸಿತ್ತು.  ಸರ್ಕಲ್ ಅಧಿಕಾರಿ ಜಗಮೋಹನ್ ಶರ್ಮಾ ಅವರನ್ನು ಚಾರ್ಜ್‌ಶೀಟ್ ಮಂಡಿಸಿದ ನಂತರ ಜಿಲ್ಲೆಯಿಂದ ವರ್ಗಾಯಿಸಲಾಯಿತು. ಥಾನಗಾಜಿ ಪೊಲೀಸ್ ಠಾಣೆಯ ಇತರ ಸಿಬ್ಬಂದಿಯನ್ನು ಜೈಪುರ ಪೊಲೀಸ್ ಠಾಣಾ ವ್ಯಾಪ್ತಿಯಿಂದ ಹೊರಗೆ ಕಳುಹಿಸಲಾಗಿತ್ತು.

ಸದ್ಯ ಹತ್ರಾಸ್‌ನ 19 ವರ್ಷದ ದಲಿತ ಯುವತಿಯ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಕಾವು ದೇಶಾದ್ಯಂತ ಹೆಚ್ಚಾಗಿರುವ ಸಮಯದಲ್ಲಿ ಈ ತೀರ್ಪು ಹೊರಬಿದ್ದಿದೆ. ಒಂದೂವರೆ ವರ್ಷದ ಅವಧಿಯಲ್ಲಿ ಅಪರಾಧಿಗಳಿಗೆ ಶಿಕ್ಷೆಯಾಗಿದೆ.


ಇದನ್ನೂ ಓದಿ: ಹತ್ರಾಸ್ ಕುರಿತು ಹೇಳಿಕೆ: ವಿಶ್ವಸಂಸ್ಥೆಯ ಭಾರತೀಯ ಅಧಿಕಾರಿ ವಿರುದ್ಧ ವಿದೇಶಾಂಗ ಸಚಿವಾಲಯ ಗರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನ.1ರ ಇಂಡಿಯಾ ಒಕ್ಕೂಟದ ರ‍್ಯಾಲಿಗೆ ಬೆಂಬಲ ಘೋಷಿಸಿದ ‘ಪೀಪಲ್ ಅಗೆನ್ಸ್ಟ್ ಎಸ್‌ಐಆರ್’

ವಿರೋಧ ಪಕ್ಷಗಳ ಇಂಡಿಯಾ ಒಕ್ಕೂಟ ನವೆಂಬರ್ 1ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಸಲಿರುವ ಬೃಹತ್ ರ‍್ಯಾಲಿಗೆ ಪೀಪಲ್ ಅಗೆನೆಸ್ಟ್ ಎಸ್‌ಐಆರ್‌ ಬೆಂಬಲ ಘೋಷಿಸಿದೆ. ಪ್ರಜಾಪ್ರಭುತ್ವವನ್ನು ಉಳಿಸಲು, ಎಸ್‌ಐಆರ್ ರದ್ದುಗೊಳಿಸಲು, ಮುಖ್ಯ ಚುನಾವಣಾ ಆಯುಕ್ತ...

‘ನುಸುಳುಕೋರರನ್ನು’ ಹೊರಹಾಕಲು SIR ಎಂದಿತ್ತು ಬಿಜೆಪಿ ಮತ್ತು ಚು. ಆಯೋಗ : ಆರು ರಾಜ್ಯಗಳಲ್ಲಿ ಪತ್ತೆಯಾಗಿದ್ದು ಕೇವಲ 1,600 ವಿದೇಶಿಯರು ಮಾತ್ರ

'ನುಸುಳುಕೋರರನ್ನು' ಪತ್ತೆ ಹಚ್ಚುವುದು ಅಥವಾ 'ವಿದೇಶಿ ಅಕ್ರಮ ವಲಸಿಗರನ್ನು' ಪತ್ತೆ ಹಚ್ಚುವುದು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಪ್ರಮುಖ ಉದ್ದೇಶಗಳಲ್ಲಿ ಒಂದಾಗಿದೆ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಹೇಳಿತ್ತು....

ಸಂತ್ರಸ್ತೆ ಮತ್ತು ಆರೋಪಿ ನಡುವಿನ ‘ಒಪ್ಪಂದ’ವನ್ನಷ್ಟೇ ಆಧರಿಸಿ ಅತ್ಯಾಚಾರ ಪ್ರಕರಣ ರದ್ದುಗೊಳಿಸಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಪಕ್ಷಕಾರರ (ಸಂತ್ರಸ್ತೆ ಮತ್ತು ಆರೋಪಿ) ನಡುವಿನ ರಾಜಿ ಸಂಧಾನದ ಆಧಾರದ ಮೇಲೆ ಅತ್ಯಾಚಾರ ಪ್ರಕರಣವನ್ನು ರದ್ದುಗೊಳಿಸಿದ್ದ ಮಧ್ಯಪ್ರದೇಶ ಹೈಕೋರ್ಟ್‌ನ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಕೇವಲ ಒಪ್ಪಂದದ ಆಧಾರದ ಮೇಲೆ ಗಂಭೀರ ಅಪರಾಧಗಳನ್ನು...

DELHI SIR : 2026ರ ಮತದಾರರ ಪಟ್ಟಿಯಲ್ಲಿದ್ದರೂ ಕೂಡ ಡಿಲಿಟೆಡ್ ವೋಟರ್ಸ್ ಫಾರಂ-6 ಸಲ್ಲಿಸುವಂತೆ ಸೂಚಿಸಿದ್ದು ಏಕೆ? ಚು. ಆಯೋಗಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

ದೆಹಲಿಯ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಸಂಬಂಧಿಸಿದಂತೆ, 2026ರ ಮತದಾರರ ಪಟ್ಟಿಯಲ್ಲಿದ್ದರೂ ಸಹ ಗಣತಿ ನಮೂನೆಗಳನ್ನು (enumeration forms) ಭರ್ತಿ ಮಾಡದ ಕಾರಣಕ್ಕಾಗಿ ಕರಡು ಪಟ್ಟಿಯಿಂದ ಹೆಸರನ್ನು ಕಳೆದುಕೊಂಡಿರುವ ವ್ಯಕ್ತಿಗಳು,...

ಮರ್ಯಾದೆಗೇಡು ಹತ್ಯೆ ಶಂಕೆ: ದಲಿತ ಯುವಕನನ್ನು ಇಟ್ಟಿಗೆಯಿಂದ ಹೊಡೆದು ಕೊಂದ ಪತ್ನಿಯ ಸಹೋದರ ಬಂಧನ

ಉತ್ತರ ಪ್ರದೇಶದ ಮುಜಫ್ಫರ್‌ನಗರ ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನನ್ನು ಇಟ್ಟಿಗೆಗಳಿಂದ ಹೊಡೆದು ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಇದು ಮರ್ಯಾದೆಗೇಡು ಹತ್ಯೆ ಶಂಕೆಗೆ ಕಾರಣವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನ ಪತ್ನಿಯ ಹಿರಿಯ...

Karnataka SIR | ಅಂತಿಮ ಮತದಾರರ ಪಟ್ಟಿಯನ್ನು ತಿರಸ್ಕರಿಸಿದ ಹೋರಾಟಗಾರರು : ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್‌ಗೆ ಬಹಿರಂಗ ಸವಾಲು

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಳಿಕ ಮಂಗಳವಾರ (ಅ.27) ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿರುವ ಅಂತಿಮ ಮತದಾರರ ಪಟ್ಟಿಯನ್ನು ಹೋರಾಟಗಾರರು ತಿರಸ್ಕರಿಸಿದ್ದು, ಹೋರಾಟ ಮುಂದುವರಿಸುವ ಘೋಷಣೆ ಮಾಡಿದ್ದಾರೆ. ಬುಧವಾರ (ಅ.28) ಬೆಂಗಳೂರಿನ ಶಾಸಕರ ಭವನದಲ್ಲಿ...

ಜಾಮಿಯಾ ವಿದ್ಯಾರ್ಥಿಗಳ ಪ್ರತಿಭಟನೆಗೆ ಕಾಂಗ್ರೆಸ್ ಬೆಂಬಲ; ಪ್ರತಿಭಟನಾ ಸ್ಥಳಕ್ಕೆ ರಾಹುಲ್ ಗಾಂಧಿ ಭೇಟಿ ಸಾಧ್ಯತೆ

ಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಪ್ರತಿಭಟನಾ ಸ್ಥಳಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ನೀಡುವ ನಿರೀಕ್ಷೆಯಿರುವ ಬೆನ್ನಲ್ಲೇ, ವಿದ್ಯಾರ್ಥಿಗಳ ಹೋರಾಟಕ್ಕೆ ಪಕ್ಷವು ಬೆಂಬಲ ವ್ಯಕ್ತಪಡಿಸಿದೆ. ವಿದ್ಯಾರ್ಥಿ ಸಂಘವನ್ನು (ಜೆಎಂಐಎಸ್‌ಯು)...

ಎಂಎಲ್‌ಸಿ ಚುನಾವಣೆ ಸೋಲಿನ ಹಿಂದಿರುವ ರಾಜಕೀಯ – ಸಂಘಟನಾತ್ಮಕ ಕಾರಣಗಳ ಕುರಿತು ಪರಾಮರ್ಶಿಸುತ್ತೇವೆ: ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್

ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳಿಗೆ ನಡೆದ ವಿಧಾನ ಪರಿಷತ್ ಚುನಾವಣೆಯ ಸೋಲಿನ ಹಿಂದಿರುವ ರಾಜಕೀಯ ಹಾಗೂ ಸಂಘಟನಾತ್ಮಕ ಕಾರಣಗಳ ಕುರಿತು ಸಮಗ್ರ ಪರಾಮರ್ಶೆ ನಡೆಸುತ್ತೇವೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್...

ಸ್ಪೇನ್‌ನಲ್ಲಿ ಅತಿ ವೇಗದ ರೈಲುಗಳ ನಡುವೆ ಡಿಕ್ಕಿ; ಕನಿಷ್ಠ 46 ಮಂದಿ ಸಾವು

ಸ್ಪೇನ್‌ನ ಟೊಲೆಡೊ ಪ್ರಾಂತ್ಯದಲ್ಲಿ ಬುಧವಾರ ಬೆಳಿಗ್ಗೆ ಎರಡು ಅತಿ ವೇಗದ ರೈಲುಗಳ ನಡುವೆ ಡಿಕ್ಕಿ ಸಂಭವಿಸಿ ಕನಿಷ್ಠ 46 ಮಂದಿ ಮೃತಪಟ್ಟಿದ್ದಾರೆ ಎಂದು ಸ್ಪೇನ್‌ನ ಎಬಿಸಿ (ಎಬಿಸಿ) ಸುದ್ದಿ ಸಂಸ್ಥೆ ವರದಿ ಮಾಡಿದೆ....

ಇಸ್ರೇಲ್ ಚುನಾವಣೆಯಲ್ಲಿ ಸಿಗದ ಬಹುಮತ; ಆದರೂ ಗೆಲುವಿನ ಹಕ್ಕು ಮಂಡಿಸಿದ ನೆತನ್ಯಾಹು

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಅರಬ್ ಪಕ್ಷಗಳ ಬೆಂಬಲದೊಂದಿಗೆ ಸರ್ಕಾರ ರಚಿಸುವ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ. ಜೆರುಸಲೇಮ್‌ನಲ್ಲಿರುವ ಲಿಕುಡ್ ಪಕ್ಷದ ಪ್ರಧಾನ ಕಚೇರಿಯಲ್ಲಿ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಅವರು, ಯಹೂದಿ ಮತ್ತು ಝಿಯೋನಿಸ್ಟ್...