Homeಮುಖಪುಟಪ್ರತಿಯೊಬ್ಬರ ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣಿಡಲು ಖಾಸಗಿ ಕಂಪನಿಗಳಿಗೆ ಟೆಂಡರ್ ಕರೆದ ಸರ್ಕಾರ!

ಪ್ರತಿಯೊಬ್ಬರ ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣಿಡಲು ಖಾಸಗಿ ಕಂಪನಿಗಳಿಗೆ ಟೆಂಡರ್ ಕರೆದ ಸರ್ಕಾರ!

ದೇಶದ ಪ್ರತಿಯೊಬ್ಬರ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಏನನ್ನು ಬರೆಯಲಾಗುತ್ತದೆ, ಯಾರ ಪರ ಮತ್ತು ವಿರುದ್ಧ ಬರೆಯಲಾಗುತ್ತದೆ, ಟ್ರೆಂಡ್ ಹೇಗಿರುತ್ತದೆ ಎಂಬುದನ್ನು ಮೇಲ್ವಿಚಾರಣೆ ನಡೆಸಲು ಐಟಿ ಕಂಪನಿಗಳಿಗೆ ಜವಾಬ್ದಾರಿ ನೀಡಲು ಸರ್ಕಾರ ಮುಂದಾಗಿದೆ.

- Advertisement -
- Advertisement -

ನಾವೆಲ್ಲರೂ ಸಾಮಾಜಿಕ ಜಾಲತಾಣಗಳಲ್ಲೊಂದಾದ ವಾಟ್ಸಾಪ್ ಬಳಕೆ ಸುರಕ್ಷಿತ ಎಂದುಕೊಳ್ಳುತ್ತಿರುವಾಗಲೇ ಕಳೆದ ವರ್ಷ ಪೆಗಾಸಸ್ ಸ್ಪೈವೇರ್ ಎಂಬ ಇಸ್ರೇಲ್ ಮೂಲದ ಸಾಫ್ಟ್‌ವೇರ್ ಬಳಸಿ ನಮ್ಮ ವಯಕ್ತಿಕ ವಾಟ್ಸಾಪ್‌ ಅನ್ನು ಕಣ್ಗಾವಲು ಮಾಡಬಹುದು, ಅಲ್ಲಿಯ ಮಾಹಿತಿಯನ್ನು ಕದಿಯಬಹುದು ಎಂಬ ಬೆಚ್ಚಿ ಬೀಳಿಸುವ ಅಂಶ ಬೆಳಕಿಗೆ ಬಂದಿತು. ಸ್ವತಃ ಇದನ್ನು ಸರ್ಕಾರವೇ ಬಳಸಿ ಹಲವು ಸಾಮಾಜಿಕ ಕಾರ್ಯಕರ್ತರ, ವಕೀಲರ, ಪತ್ರಕರ್ತರ ಮಾಹಿತಿ ಕದ್ದು ಟೀಕೆಗೊಳಗಾಗಿತ್ತು.

ಈಗ ಕೊರೊನಾ ಸಾಂಕ್ರಾಮಿಕದ ಕಾಲದಲ್ಲಿ ನಮ್ಮೆಲ್ಲರ ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣಿಡುವ ಮತ್ತು ಕ್ರಮತೆಗೆದುಕೊಳ್ಳುವ ಹೊಸ ಅಧಿಕೃತ ವ್ಯವಸ್ಥೆಯನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಅಂದರೆ ದೇಶದ ಪ್ರತಿಯೊಬ್ಬರ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಏನನ್ನು ಬರೆಯಲಾಗುತ್ತದೆ, ಯಾರ ಪರ ಮತ್ತು ವಿರುದ್ಧ ಬರೆಯಲಾಗುತ್ತದೆ, ಟ್ರೆಂಡ್ ಹೇಗಿರುತ್ತದೆ ಎಂಬುದನ್ನು ಮೇಲ್ವಿಚಾರಣೆ ನಡೆಸಲು ಐಟಿ ಕಂಪನಿಗಳಿಗೆ ಜವಾಬ್ದಾರಿ ನೀಡಲು ಸರ್ಕಾರ ಮುಂದಾಗಿದೆ.

ಭಾರತದಂತಹ ವಿಶಾಲ ದೇಶದಲ್ಲಿ ಎಲ್ಲರ ಖಾತೆಗಳನ್ನು ಮಾನಿಟರ್ ಮಾಡಲು ಸಾಧ್ಯವಿಲ್ಲ ಎಂದು ಬಹುತೇಕರು ಭಾವಿಸಿದ್ದಾರೆ. ಅದಕ್ಕಾಗಿಯೇ ಬ್ರಾಡ್ ಕಾಸ್ಟ್ ಎಂಜಿನೀರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ಎಂಬ ಸರ್ಕಾರಿ ಸ್ವಾಮ್ಯದ (I and B ಸಚಿವಾಲಯ) ಸಂಸ್ಥೆಯ ಮೂಲಕ ಈ ಕೆಲಸ ನಿರ್ವಹಿಸಲು ಖಾಸಗಿ ಕಂಪನಿಗಳಿಗೆ ಟೆಂಡರ್ ಕರೆದಿದೆ.

ಅವರು ಮಾಡಬೇಕಾದ ಮಾನಿಟರಿಂಗ್ ಸೇವೆಗಳ ಕೆಲಸದ ವ್ಯಾಪ್ತಿ ಈ ಕೆಳಗಿನಂತಿರುತ್ತದೆ:

ಪತ್ತೆ ಹಚ್ಚುವಿಕೆ – ಸಾಮಾಜಿಕ ಮಾಧ್ಯಮದಲ್ಲಿ ನಡೆಯುತ್ತಿರುವ ವಿವಿಧ ಚಟುವಟಿಕೆಗಳನ್ನು ವಿಶ್ಲೇಷಿಸುವುದು.

ನಿರ್ಧಾರ- ಸಮಸ್ಯಾತ್ಮಕವಾಗಿವೆ ಎಂಬ ಪೋಸ್ಟ್‌ಗಳನ್ನು ವಿಂಗಡಣೆ ಮಾಡುವುದು.

ಪಾವತಿಸಿದ ಮತ್ತು ಖಾಸಗಿ ಮಾಧ್ಯಮ ಡೇಟಾವನ್ನು ಒಳಗೊಂಡಂತೆ ಸಂಪೂರ್ಣ ಸಾಮಾಜಿಕ ಮಾಧ್ಯಮವನ್ನು ಮೇಲ್ವಿಚಾರಣೆ ನಡೆಸುವ ಸಾಮರ್ಥ್ಯವನ್ನು ಅಭಿವೃದ್ದಿಪಡಿಸುವುದು.

ಸೋಷಿಯಲ್ ಮೀಡಿಯಾ ಟ್ರೆಂಡ್ಸ್ ಅನ್ನು ಮಾನಿಟರಿಂಗ್ ಮಾಡುವುದು.

ಸೋಷಿಯಲ್ ಮೀಡಿಯಾದ ಭಾವನೆಗಳನ್ನು ಮೇಲ್ವಿಚಾರಣೆ ಮಾಡುವುದು

ಸೋಶಿಯಲ್ ಮೀಡಿಯಾದ ಸೂಚಕಗಳ ಅನ್ವಯ ಮೇಲ್ವಿಚಾರಣೆ

ಸರ್ಕಾರಕ್ಕೆ ಸಂಬಂಧಿಸಿದ ಚಟುವಟಿಕೆಗಳಿಗೆ ಸಂಬಂಧಿಸಿದ ಟ್ರೆಂಡ್‌ಗಳ ಜಾಡು ಹಿಡಿಯುವುದು.

ಸಾಮಾಜಿಕ ಅಭಿಯಾನಗಳು / ಕಾರ್ಯಕ್ರಮಗಳ ಮೇಲ್ವಿಚಾರಣೆ

ಆಲಿಸುವ ಸಾಧನ ಅಭಿವೃದ್ದಿಪಡಿಸುವುದು.

ಕ್ರಿಯಾತ್ಮಕ ಡೇಟಾವನ್ನು ಗುರುತಿಸುವುದು, ಯಾರಿಂದ ಪ್ರಭಾವಿತರಾಗಿದ್ದಾರೆ ಎಂದು ತಿಳಿಯುವುದು ಇತ್ಯಾದಿ

ಆರಂಭಿಕ ಎಚ್ಚರಿಕೆ ನೀಡುವ ವ್ಯವಸ್ಥೆ

ವಿಶ್ಲೇಷಣಾತ್ಮಕ ವರದಿಗಳನ್ನು ರಚಿಸುವುದು

ಇಷ್ಟೆಲ್ಲಾ ಕೆಲಸಗಳನ್ನು ನಿರ್ವಹಿಸಲು, ಡಾಟಾ ಸಂಗ್ರಹಿಸಲು ಐಟಿ ಕಂಪನಿಗಳನ್ನು ಸರ್ಕಾರ ಆಹ್ವಾನಿಸಿದೆ. ಮೇಲಿನ ಇಷ್ಟು ಮಾಹಿತಿ ಸಿಕ್ಕ ನಂತರ ಯಾರು ಸರ್ಕಾರದ ಪರವಿದ್ದಾರೆ ಮತ್ತು ಯಾರು ವಿರುದ್ಧವಿದ್ದಾರೆ ಎಂದು ತಿಳಿದ ಸರ್ಕಾರ ಅವರ ಮೇಲೆ ಏನೆಲ್ಲಾ ಕ್ರಮಗಳನ್ನು ಕೈಗೊಳ್ಳಬಹುದು ಊಹಿಸಿ.

ಈಗಾಗಲೇ ಸರ್ಕಾರಗಳು ಹಲವು ರೀತಿಯಲ್ಲಿ ನಮ್ಮನ್ನು ಮೇಲ್ವಿಚಾರಣೆ ನಡೆಸುತ್ತಿದೆ. ಪ್ರತಿಯೊಬ್ಬ ಪ್ರಜೆಯ ಎಲ್ಲಾ ಮಾಹಿತಿಗಳನ್ನು ಅದು ಪಡೆದುಕೊಂಡಿದೆ. ಈಗ ನಾವು ಮಾಡುವ ಚಟುವಟಿಕೆಗಳನ್ನು ಮಾನಿಟರ್ ಮಾಡುವ ಮೂಲಕ ಸರ್ವೈಲೆನ್ಸ್ ಸ್ಟೇಟ್ ಕಡೆಗೆ ದಾಪುಗಾಲಿಡುತ್ತಿದೆ ಎಂದು ಹಲವು ಚಿಂತಕರು ಆತಂಕ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಸಾಂಕ್ರಾಮಿಕ ಪಿಡುಗಿನ ನಿಯಂತ್ರಣದ ಸಂದರ್ಭದ ಕಣ್ಗಾವಲು ಮತ್ತು ಪ್ರಭುತ್ವದ ಬೇಹುಗಾರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...