Homeಮುಖಪುಟನಟಿ ಕಂಗನಾ ವಿರುದ್ಧ ಕರ್ನಾಟಕದಲ್ಲಿ FIR ದಾಖಲಿಸಲು ಕೋರ್ಟ್ ನಿರ್ದೇಶನ

ನಟಿ ಕಂಗನಾ ವಿರುದ್ಧ ಕರ್ನಾಟಕದಲ್ಲಿ FIR ದಾಖಲಿಸಲು ಕೋರ್ಟ್ ನಿರ್ದೇಶನ

ಕೇಂದ್ರ ಸರ್ಕಾರದ ಕೃಷಿ ಮಸೂದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಭಯೋತ್ಪಾದಕರಿಗೆ ಹೋಲಿಸಿ ಕಂಗನಾ ರಾಣಾವತ್ ಟ್ವೀಟ್ ಮಾಡಿದ್ದರು.

- Advertisement -
- Advertisement -

ವಿವಾದಿತ ರೈತ ಮಸೂದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಭಯೋತ್ಪಾದಕರಿಗೆ ಹೋಲಿಸಿ ಟ್ವೀಟ್ ಮಾಡಿದ್ದ ಬಾಲಿವುಡ್ ನಟಿ ಕಂಗನಾ ರಾಣಾವತ್ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ತುಮಕೂರು ಜೆಎಂಎಫ್‌ಸಿ ನ್ಯಾಯಾಲಯ ನಿರ್ದೇಶಿಸಿದೆ ಎಂದು ಲೈವ್ ಲಾ.ಇನ್ ವರದಿ ಮಾಡಿದೆ.

ನ್ಯಾಯಾಧೀಶ ವಿನೋದ್ ಬಾಲನಾಯಕ್ ಕ್ಯಾತ್ಸಂದ್ರ ಪೊಲೀಸರಿಗೆ ಎಫ್‌ಐಆರ್‌ ದಾಖಲಿಸಲು ನಿರ್ದೇಶನ ನೀಡಿದ್ದಾರೆ. ಕೇಂದ್ರ ಸರ್ಕಾರದ ಕೃಷಿ ಮಸೂದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಭಯೋತ್ಪಾದಕರಿಗೆ ಹೋಲಿಸಿ ಕಂಗನಾ ರಾಣಾವತ್ ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ರೈತರು ಮೋದಿಗೆ ಕೃತಜ್ಞತೆ ಹೇಳುತ್ತಿದ್ದಾರೆ ಎಂದು ಹಳೆಯ ಫೋಟೋ ಹಂಚಿಕೊಂಡ ಬಿಜೆಪಿ ನಾಯಕ!

ಕಂಗನಾ ವಿರುದ್ಧ ಡಿಜಿಪಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ತುಮಕೂರು ತಾಲ್ಲೂಕು ಕದರನಹಳ್ಳಿ ತಾಂಡಾ ವಾಸಿ ಹಾಗೂ ಹೈಕೋರ್ಟ್ ವಕೀಲ ಎಲ್‌.ರಮೇಶ್ ನಾಯಕ್ ಇ–ಮೇಲ್ ಮೂಲಕ ದೂರು ಸಲ್ಲಿಸಿದ್ದರು.

2020 ರ ಸೆಪ್ಟೆಂಬರ್ 21 ರಂದು ರಾಣಾವತ್ ತನ್ನ ಟ್ವಿಟ್ಟರ್ ಖಾತೆ ‘ಕಂಗನಾಟೀಮ್’ ನಿಂದ ಪೋಸ್ಟ್ ಮಾಡಿದ್ದಾರೆ ಎಂದು ಆರೋಪಿಸಿ ಕ್ರಿಮಿನಲ್ ಪ್ರೊಸೀಜರ್ ಸೆಕ್ಷನ್ 156 (3) ರ ಅಡಿಯಲ್ಲಿ ವಕೀಲ ಎಲ್. ರಮೇಶ್ ನಾಯಕ್ ದೂರು ದಾಖಲಿಸಿದ್ದರು.

ನಟಿಯ ವಿರುದ್ಧ ಪೊಲೀಸ್ ಅಧಿಕಾರಿಗಳು ಅಥವಾ ಸರ್ಕಾರ ಯಾವುದೇ ಕ್ರಮವನ್ನು ತೆಗೆದುಕೊಳ್ಳದ ಹಿನ್ನೆಲೆ ಎಫ್‌ಐಆರ್ ದಾಖಲಿಸಲು ಪೊಲೀಸರಿಗೆ ನಿರ್ದೇಶನ ನೀಡಬೇಕು ಅಥವಾ ನ್ಯಾಯಾಲಯವೇ ನೇರವಾಗಿ ಕ್ರಮಕೈಗೊಳ್ಳಬೇಕು ಎಂದು ರಮೇಶ್ ನಾಯಕ್ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು.

ನಟಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ, 504, 108 ರ ಅಡಿಯಲ್ಲಿ ಎಫ್ಐಆರ್ ದಾಖಲಿಸಲು ದೂರುದಾರರು ಕೋರಿದ್ದಾರೆ.

ನಟಿಯ ಟ್ವೀಟ್ ವಿರುದ್ಧ ದೇಶಾದ್ಯಂತ ಭಾರಿ ವಿರೋಧ ವ್ಯಕ್ತವಾಗಿತ್ತು. ರೈತ ಸಂಘಟನೆಗಳು, ರೈತ ಪರ ಹೋರಾಟಗಾರರು ಆಕ್ರೋಶ ಹೊರಹಾಕಿದ್ದರು.


ಇದನ್ನೂ ಓದಿ: ಕೃಷಿ ಮಸೂದೆ ವಿರೋಧಿಸುವ ರೈತರನ್ನು ಭಯೋತ್ಪಾದಕರು ಎಂದ ನಟಿ ಕಂಗನಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...