Homeಕರೋನಾ ತಲ್ಲಣಕೊರೊನಾ ಮಾರ್ಗಸೂಚಿ ಉಲ್ಲಂಘನೆ: ಬಿಜೆಪಿ ಸಂಸದೆ ಕಛೇರಿ ಸೀಲ್!

ಕೊರೊನಾ ಮಾರ್ಗಸೂಚಿ ಉಲ್ಲಂಘನೆ: ಬಿಜೆಪಿ ಸಂಸದೆ ಕಛೇರಿ ಸೀಲ್!

ವೀಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಇದರಲ್ಲಿ ಅಪರಾಜಿತಾ ಸಾರಂಗಿಯನ್ನು ಹಲವು ಮಹಿಳೆಯರು ಸುತ್ತುವರೆದಿದ್ದು, ಅವರು ಮಾಸ್ಕ್‌ಗಳನ್ನು ಧರಿಸಲಿಲ್ಲ, ಮತ್ತು ಸಾಮಾಜಿಕ ಅಂತರವನ್ನು ಪಾಲಿಸಿರಲಿಲ್ಲ ಎಂಬುದು ಸ್ಪಷ್ಟವಾಗಿ ದಾಖಲಾಗಿದೆ

- Advertisement -
- Advertisement -

ಕೊರೊನಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿದೆ ಎಂದು ಆರೋಪಿಸಿ ಒಡಿಶಾ ಸರ್ಕಾರ ಕೇಂದ್ರಕ್ಕೆ ಪತ್ರ ಬರೆದ ಒಂದು ದಿನದ ನಂತರ ಬಿಜೆಪಿ ರಾಷ್ಟ್ರೀಯ ವಕ್ತಾರರಾದ, ಸಂಸದೆ ಅಪರಾಜಿತಾ ಸಾರಂಗಿ ಅವರ ಕಚೇರಿಯನ್ನು ಭುವನೇಶ್ವರ ಮುನ್ಸಿಪಲ್ ಕಾರ್ಪೊರೇಷನ್ (BMC) ಸೀಲ್ ಮಾಡಿದೆ.

BMC ವಲಯ ಉಪ ಆಯುಕ್ತ (ನೈರುತ್ಯ) ರಬಿನಾರಾಯಣ್ ಜೆಥಿ ನೇತೃತ್ವದ ತಂಡವು ಕಚೇರಿಯನ್ನು 15 ದಿನಗಳ ಕಾಲ ಸೀಲ್ ಮಾಡಿದೆ.

ಇದನ್ನೂ ಓದಿ: ಕಂಟೈನ್ಮೆಂಟ್ ಪ್ರದೇಶಗಳ ಸೀಲ್‌ಡೌನ್‌ಗೆ 20-25 ಕೋಟಿ ರೂ. ಖರ್ಚು ಮಾಡಿದ ಬಿಬಿಎಂಪಿ!

“ಕೋವಿಡ್ ಮಾನದಂಡಗಳ ಉಲ್ಲಂಘನೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ. 15 ದಿನಗಳ ನಂತರ ಕಛೇರಿಯನ್ನು ಮತ್ತೆ ತೆರೆಯುವ ಮೊದಲು ಸ್ವಚ್ಚಗೊಳಿಸಲಾಗುವುದು” ಎಂದು ರಬಿನಾರಾಯಣ್ ಜೆಥಿ ಹೇಳಿದರು ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಅಕ್ಟೋಬರ್ 8 ರಂದು ನಗರದಲ್ಲಿ ನಡೆದ ಹುಟ್ಟುಹಬ್ಬದ ಸಂಭ್ರಮಾಚರಣೆಯಲ್ಲಿ ಭುವನೇಶ್ವರದ ಸಂಸದರು ಕೋವಿಡ್ -19 ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಾರೆ ಎಂದು ರಾಜ್ಯ ಸಚಿವ (ಗೃಹ) ದಿಬ್ಯಾ ಶಂಕರ್ ಮಿಶ್ರಾ ಆರೋಪಿಸಿ, ಕೇಂದ್ರ ರಾಜ್ಯ ಸಚಿವ (ಗೃಹ) ನಿತ್ಯಾನಂದ್ ರೈ ಅವರಿಗೆ ಪತ್ರ ಬರೆದ ಒಂದು ದಿನದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಬಿಜೆಪಿ ಲಜ್ಜೆಗೆಟ್ಟ, ಕರೆಪ್ಟ್ ಪೊಲಿಟಿಕಲ್ ಪಾರ್ಟಿ: ಸಿದ್ದರಾಮಯ್ಯ ಟೀಕೆ

ಈ ಘಟನೆಯ ವೀಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಇದರಲ್ಲಿ ಅಪರಾಜಿತಾ ಸಾರಂಗಿಯನ್ನು ಹಲವು ಮಹಿಳೆಯರು ಸುತ್ತುವರೆದಿದ್ದು, ಅವರು ಮಾಸ್ಕ್‌ಗಳನ್ನು ಧರಿಸಲಿಲ್ಲ, ಮತ್ತು ಸಾಮಾಜಿಕ ಅಂತರವನ್ನು ಪಾಲಿಸಿರಲಿಲ್ಲ ಎಂಬುದು ಸ್ಪಷ್ಟವಾಗಿ ದಾಖಲಾಗಿದೆ. ಇದನ್ನು ತನಿಖೆಗೆ ಒಳಪಡಿಸಿದಾಗ, ಈ ಸ್ಥಳವು ಪಾಲಸ್‌ಪಲ್ಲಿಯ ಸಂಸದರ ಕಛೇರಿ ಎಂದು ತಿಳಿಯಿತು ಎಂದು ರಬಿನಾರಾಯಣ್ ಜೆಥಿ

ಆದರೆ ಈ ಕ್ರಮವನ್ನು ಸಂಸದೆ, ‘ಪ್ರತೀಕಾರಕ’ ಎಂದು ಹೇಳಿದ್ದಾರೆ. ಶೀಘ್ರದಲ್ಲೇ ಅವರು ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.

ಇದನ್ನೂ ಓದಿ: ಒಂದು ಭಾರತದೊಳಗೆ ಹಲವು ಭಾರತಗಳಿವೆ; ಇದು ಬಿಜೆಪಿಯವರಿಗೆ ಗೊತ್ತಿಲ್ಲ

ದಿವಂಗತ ಪ್ರದೀಪ್ ಮಹಾರಾತಿ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದ, ಶಾಲಾ ಶಿಕ್ಷಣ ಸಚಿವ ಸಮೀರ್ ದಾಶ್ ಮತ್ತು ಬಿಜೆಡಿ ಶಾಸಕ ಉಮಾಕಾಂತ್ ಸಮಂತ್ರೇ ಅವರ ವಿಷಯದಲ್ಲಿ ರಾಜ್ಯ ಸರ್ಕಾರ ಏಕೆ ಮೌನವಾಗಿದೆ. ಮಾನದಂಡಗಳು ಎಲ್ಲರಿಗೂ ಒಂದೇ ಇರಬೇಕು” ಎಂದು ತಮ್ಮ ವಿರುದ್ಧದ ದೂರಿಗೆ ಪ್ರತಿಕ್ರಿಯೆಯಾಗಿ ಹೇಳಿದ್ದಾರೆ.

ಕುತೂಹಲಕಾರಿಯೆಂಬಂತೆ, ಸಂಸದೆ ಈ ವಿಷಯವನ್ನು ಪ್ರಸ್ತಾಪಿಸಿದ ನಂತರ, ಬಿಜೆಡಿ ಶಾಸಕ ಉಮಾಕಾಂತ್ ಸಮಂತ್ರೇ ಅವರು ಶನಿವಾರ ವೀಡಿಯೊ ಸಂದೇಶವೊಂದನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಪ್ರದೀಪ್ ಮಹಾರಾತಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದಕ್ಕಾಗಿ ಕ್ಷಮೆಯಾಚಿಸಿದ್ದಾರೆ.

“ಇದು ಭಾವನಾತ್ಮಕ ಪ್ರತಿಕ್ರಿಯೆಯಾಗಿದೆ. ಆದರೆ ಕಾನೂನಿನ ಪ್ರಕಾರ ಯಾವುದೇ ಕ್ರಮವನ್ನು ಸ್ವೀಕರಿಸಲು ನಾನು ಸಿದ್ಧನಿದ್ದೇನೆ. ಕಾನೂನಿನ ದೃಷ್ಟಿಯಲ್ಲಿ ಯಾರೂ ಮೇಲಲ್ಲ. ನಾನು ಕಾನೂನಿನ ನಿಯಮಕ್ಕೆ ಬದ್ಧನಾಗಿರುತ್ತೇನೆ” ಎಂದು ವೀಡಿಯೋದಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: ’ಬಿಜೆಪಿಯದ್ದು ಕೊಳಕು ರಾಜಕೀಯ’-ಹೋರಾಟಗಾರ ಸ್ಟ್ಯಾನ್ ಸ್ವಾಮಿ ಬಂಧನಕ್ಕೆ ದೇಶದಾದ್ಯಂತ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...