Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: TMC ಕಾರ್ಯಕರ್ತರಿಂದ BJP ಸದಸ್ಯನ ಕೊಲೆ ಎಂಬ ಈ ಚಿತ್ರ 2018ರದ್ದು!

ಫ್ಯಾಕ್ಟ್‌ಚೆಕ್: TMC ಕಾರ್ಯಕರ್ತರಿಂದ BJP ಸದಸ್ಯನ ಕೊಲೆ ಎಂಬ ಈ ಚಿತ್ರ 2018ರದ್ದು!

TMC ಕಾರ್ಯಕರ್ತರು ಈತನನ್ನು ಕೊಂದು 'ಟಿ-ಶರ್ಟ್ ಮೇಲೆ' ಬಿಜೆಪಿಯ ಭಾಗವಾಗಿದ್ದಕ್ಕಾಗಿ ಇದು ಶಿಕ್ಷೆ 'ಎಂದು ಬರೆದಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

- Advertisement -
- Advertisement -

ತೃಣಮೂಲ ಕಾಂಗ್ರೆಸ್ (TMC) ಕಾರ್ಯಕರ್ತರು 18 ವರ್ಷದ ಬಿಜೆಪಿ ಸದಸ್ಯನನ್ನು ಕೊಂದಿದ್ದಾರೆ ಎಂಬ ಹೇಳಿಕೆಯೊಂದಿಗೆ ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಮರಕ್ಕೆ ನೇಣುಬಿಗಿದ ಸ್ಥಿತಿಯಲ್ಲಿರುವ ಯುವಕನ ಚಿತ್ರವನ್ನು ಹಂಚಿಕೊಳ್ಳುತ್ತಿದ್ದಾರೆ.

ಈ ಚಿತ್ರವನ್ನು ಅರ್ಪಿತ ಜನ ಎಂಬುವವರು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದು, “ಈತ ಪಶ್ಚಿಮ ಬಂಗಾಳದ 18 ವರ್ಷದ ವ್ಯಕ್ತಿ ತ್ರಿಲೋಚನ್ ಮಹತೋ. TMC ಕಾರ್ಯಕರ್ತರು ಈತನನ್ನು ಕೊಂದು ‘ಟಿ-ಶರ್ಟ್ ಮೇಲೆ’ ಬಿಜೆಪಿಯ ಭಾಗವಾಗಿದ್ದಕ್ಕಾಗಿ ಈ ಶಿಕ್ಷೆ ‘ಎಂದು ಬರೆದಿದ್ದಾರೆ. ಆದರೆ TMC ನಾಯಕ ಡೆರೆಕ್ ಒ’ಬ್ರಿಯೆನ್, ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಮಾತನಾಡಲು ನೀಡಲು ಯುಪಿಗೆ ಹೋಗಿದ್ದಾರೆ. ಅವರ ಕರುಣಾಜನಕ ರಾಜಕಾರಣವನ್ನು ನೀವು ನೋಡುತ್ತಿದ್ದೀರಾ?” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪ್ರಧಾನಿ ಉದ್ಘಾಟಿಸಿದ ಅಟಲ್ ಸುರಂಗ ಎಂದು ಅಮೇರಿಕಾ ಸುರಂಗದ ಚಿತ್ರ ಹಂಚಿಕೊಂಡ ಮಾಧ್ಯಮಗಳು!

ಇದನ್ನೂ ಓದಿ: ನರೇಂದ್ರ ಮೋದಿ ಗುಜರಾತ್‌ನಲ್ಲಿ ಕ್ರೂಸ್ ಹಡಗು ಸೇವೆಯನ್ನು ಪ್ರಾರಂಭಿಸಿದ್ದಾರೆಯೇ? ಇಲ್ಲಿದೆ ವಿವರ

ಈ ಟ್ವೀಟ್‌ಗೆ, ಈ ವರದಿ ಬರೆಯುವ ವೇಳೆಗೆ, ಸುಮಾರು 12,000 ಟ್ವಿಟ್ಟರ್‌ ಬಳಕೆದಾರರು ಲೈಕ್ ನೀಡಿದ್ದು, 8,000 ಜನ ಇದನ್ನು ರೀಟ್ವೀಟ್ ಮಾಡಿದ್ದಾರೆ.

ಅಕ್ಟೋಬರ್ 5 ರಂದು ಕ್ರೆಟಿಲಿ ಎಂಬ ವೆಬ್‌ಸೈಟ್ ಇದೇ ಪ್ರತಿಪಾದನೆಯೊಂದಿಗೆ ಈ ಚಿತ್ರವನ್ನು ಬಳಸಿಕೊಂಡು ಲೇಖನವೊಂದನ್ನು ಪ್ರಕಟಿಸಿದೆ. ಈ ಲೇಖನವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಇದೇ ಪ್ರತಿಪಾದನೆಯೊಂದಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ಸಾವಿರಾರು ಜನ ಬಳಕೆದಾರರು ಈ ಪೋಸ್ಟನ್ನು ಹಂಚಿಕೊಂಡಿದ್ದಾರೆ. ಅದರ ಆರ್ಕೈವ್ ಪೋಸ್ಟನ್ನು ಇಲ್ಲಿ ಕಾಣಬಹುದು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಎಡಿಟೆಡ್‌ ವಿಡಿಯೋ ಹಂಚಿದ ಮಧ್ಯಪ್ರದೇಶ ಕಾಂಗ್ರೆಸ್‌!

ಫ್ಯಾಕ್ಟ್‌ಚೆಕ್:

ಈ ಚಿತ್ರವನ್ನು ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ, ಇದಕ್ಕೆ ಸಂಬಂಧಿಸಿದಂತೆ 2018 ರಲ್ಲಿ ಇಂಡಿಯಾ ಟುಡೆಯಲ್ಲಿ ಪ್ರಕಟವಾದ ಲೇಖನ ಸಿಗುತ್ತದೆ. ಈ ಲೇಖನವು ಇದೇ ಚಿತ್ರವನ್ನು ಹೊಂದಿದೆ. ಪಶ್ಚಿಮ ಬಂಗಾಳದ ಪುರುಲಿಯಾ ಜಿಲ್ಲೆಯ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ 18 ವರ್ಷದ ಯುವಕನ ಶವ ಪತ್ತೆಯಾಗಿದೆ ಎಂದು ಲೇಖನದಲ್ಲಿ ಉಲ್ಲೇಖಿಸಲಾಗಿದೆ. ಇದಾದ ನಂತರ ಈತ ತಮ್ಮ ಪಕ್ಷದ ಸದಸ್ಯ ಎಂದು ಅಲ್ಲಿನ ಬಿಜೆಪಿ ಹೇಳಿಕೊಂಡಿತ್ತು ಎಂದು ದಿ ಕ್ವಿಂಟ್ ವರದಿ ಮಾಡಿದೆ.

ಅಷ್ಟೆ ಅಲ್ಲದೇ, ಗೃಹ ಸಚಿವ ಅಮಿತ್ ಶಾ ಅವರು ಮೇ 2018 ರಲ್ಲಿ ಚಿತ್ರವನ್ನು ಟ್ವೀಟ್ ಮಾಡಿದ್ದು, “ಯುವ ಸದಸ್ಯನನ್ನು ಮರದಲ್ಲಿ ಗಲ್ಲಿಗೇರಿಸಲಾಗಿದೆ. ಏಕೆಂದರೆ ಆತನ ಸಿದ್ಧಾಂತವು ರಾಜ್ಯ ಪ್ರಾಯೋಜಿತ ಗೂಂಡಾಗಳಿಗಿಂತ ಭಿನ್ನವಾಗಿದೆ” ಎಂದು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಕೇಂದ್ರ ಸರ್ಕಾರ ಪ್ರತಿ ಹೆಣ್ಣು ಮಕ್ಕಳಿಗೆ ಮಾಸಿಕ ತಲಾ 2000 ರೂ. ನೀಡುತ್ತಿರುವುದು…

ಕ್ವಿಂಟ್ ಕೂಡ 2018 ರಲ್ಲಿ ನಡೆದ ಘಟನೆಯ ಬಗ್ಗೆ ವರದಿ ಮಾಡಿತ್ತು. ಸಂತ್ರಸ್ತನ ಗುರುತನ್ನು ಸ್ವತಂತ್ರವಾಗಿ ಪರಿಶೀಲಿಸಲಾಗದಿದ್ದರೂ, ಅಮಿತ್ ಷಾ ಅವರ ಟ್ವೀಟ್‌ನಲ್ಲಿ ಸಂತ್ರಸ್ತನ ಹೆಸರು “ತ್ರಿಲೋಚನ್ ಮಹಾತೋ” ಎಂದು ಉಲ್ಲೇಖವಾಗಿದೆ.

18 ವರ್ಷದ ಮೃತ ಯುವಕನ ಬಟ್ಟೆಯ ಮೇಲೆ ಟಿಪ್ಪಣಿಯೊಂದು ಕಂಡುಬಂದಿದೆ. “ಬಿಜೆಪಿಯೊಂದಿಗಿನ ನಿನ್ನ ಒಡನಾಟವೇ ನಿನ್ನ ಸಾವಿಗೆ ಕಾರಣ. ಚುನಾವಣೆಯ ನಂತರ ನಾನು ನಿನ್ನನ್ನು ಕೊಲ್ಲಲ್ಲು ಯತ್ನಿಸಿದ್ದೆ. ಆದರೆ ನಾನು ಆಗ ವಿಫಲವಾಗಿದ್ದೆ. ಇಂದು ನಿನ್ನ ಜೀವನ ಕೊನೆಗೊಂಡಿದೆ” ಎಂದು ಬರೆಯಲಾಗಿತ್ತು.

ಘಟನೆಯ ಹಿಂದಿನ ದಿನ ಸಂಜೆ ಯುವಕನು ತನ್ನ ಹಳ್ಳಿಯಿಂದ ಕೇವಲ ಮೂರು ಕಿಲೋಮೀಟರ್ ದೂರದಲ್ಲಿರುವ ಸ್ಥಳಕ್ಕೆ ಹೋಗಿದ್ದು, ಮನೆಗೆ ಹಿಂದಿರುಗಿರಲಿಲ್ಲ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ಯುವತಿಯನ್ನು ಅಮಾನುಷವಾಗಿ ಕೊಲ್ಲುತ್ತಿರುವ ಈ ವಿಡಿಯೋ ಭಾರತದ್ದಲ್ಲ

“ಅವರ ಕುಟುಂಬದಿಂದ ನಮಗೆ ಮಾಹಿತಿ ಬಂದ ನಂತರ, ಇಡೀ ರಾತ್ರಿ ಹುಡುಕಾಡಿದರೂ ಆತನನ್ನು ಪತ್ತೆಹಚ್ಚಲಾಗಲಿಲ್ಲ” ಎಂದು ಹಿರಿಯ ಜಿಲ್ಲಾ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದರು. ಈ ಸಾವಿನ ಹಿಂದೆ ಪಶ್ಚಿಮ ಬಂಗಾಳದ TMC ಸರ್ಕಾರವಿದೆ ಎಂದು ಅಮಿತ್ ಷಾ ಆರೋಪಿಸಿದ್ದರೆ, ಟಿಎಂಸಿ ಈ ಆರೋಪಗಳನ್ನು ಆಧಾರರಹಿತ ಮತ್ತು ಸಂಚು ಎಂದು ಹೇಳಿದೆ.

ಹಾಗಾಗಿ, ಇದರಿಂದ ತಿಳಿದುಬರುವುದೇನೆಂದರೆ 2 ವರ್ಷಗಳ ಹಿಂದಿನ ಹತ್ಯೆಯನ್ನು ಪ್ರಸ್ತುತ ನಡೆದಿರುವ ಹತ್ಯೆ ಎಂದು ತಪ್ಪು ಮಾಹಿತಿಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ.


ಇದನ್ನೂ ಓದಿ: ಕೇರಳದ ಹಿಂದೂ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ? ಇಲ್ಲಿದೆ ಫ್ಯಾಕ್ಟ್‌ಚೆಕ್‌ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...