Homeಅಂತರಾಷ್ಟ್ರೀಯ6 ಕೊರೊನಾ ಪ್ರಕರಣ ಪತ್ತೆ: ಇಡೀ ನಗರವನ್ನೇ ಪರೀಕ್ಷಿಸುತ್ತಿರುವ ಚೀನಾ ಆಡಳಿತ!

6 ಕೊರೊನಾ ಪ್ರಕರಣ ಪತ್ತೆ: ಇಡೀ ನಗರವನ್ನೇ ಪರೀಕ್ಷಿಸುತ್ತಿರುವ ಚೀನಾ ಆಡಳಿತ!

ಚೀನಾದ ಬಂದರು ನಗರವಾದ ಕಿಂಗ್ದಾವೊನಲ್ಲಿ ಸುಮಾರು 9 ಮಿಲಿಯನ್ (90 ಲಕ್ಷ) ಜನಸಂಖ್ಯೆಯಿದ್ದು, ಇವರೆಲ್ಲರನ್ನೂ ಕೇವಲ 5 ದಿನಗಳಲ್ಲಿ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ.

- Advertisement -
- Advertisement -

ಕೊರೊನಾ ವೈರಸ್‌ನ ಮೂಲ ಸ್ಥಾನವಾದ ಚೀನಾದ ನಗರವೊಂದರಲ್ಲಿ ಸಣ್ಣ ಪ್ರಮಾಣದಲ್ಲಿ ಕೊರೊನಾ ರೋಗಿಗಳು ಪತ್ತೆಯಾದ ಹಿನ್ನೆಲೆಯಲ್ಲಿ 5 ದಿನಗಳಲ್ಲಿ ಇಡೀ ನಗರವನ್ನೇ ಪರೀಕ್ಷೆಗೆ ಒಳಪಡಿಸುವ ಗುರಿಯನ್ನು ಹೊಂದಿದೆ ಎಂದು ಅಲ್ಲಿನ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಚೀನಾದ ಬಂದರು ನಗರವಾದ ಕಿಂಗ್ದಾವೊನಲ್ಲಿ ಸುಮಾರು 9 ಮಿಲಿಯನ್ (90 ಲಕ್ಷ) ಜನಸಂಖ್ಯೆಯಿದ್ದು, ಇಡೀ ನಗರವನ್ನೇ ಕೇವಲ 5 ದಿನಗಳಲ್ಲಿ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಇಲ್ಲಿ ಭಾನುವಾರ 6 ಪ್ರಕರಣಗಳು ದೃಢಪಟ್ಟಿದ್ದರಿಂದ ತ್ವರಿತವಾಗಿ ಪರೀಕ್ಷೆಗಳನ್ನು ನಡೆಸಬೇಕು ಎಂದು ನಗರದ ಪುರಸಭೆಯ ಆರೋಗ್ಯ ಸಮಿತಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. 5 ಜಿಲ್ಲೆಗಳನ್ನು 3 ದಿನದಲ್ಲಿ ಮತ್ತು ಇಡೀ ನಗರವನ್ನು 5 ದಿನದಲ್ಲಿ ಇಡೀ ನಗರವನ್ನು ಪರೀಕ್ಷಿಸಿಲಾಗುವುದು ಎಂದು ತಿಳಿಸಿದೆ.

ಇದನ್ನೂ ಓದಿ: ಕೊರೊನಾ ಮಾರ್ಗಸೂಚಿ ಉಲ್ಲಂಘನೆ: ಬಿಜೆಪಿ ಸಂಸದೆ ಕಛೇರಿ ಸೀಲ್!

ಲಾಕ್‌ಡೌನ್ ಮತ್ತು ಹೆಚ್ಚಿನ ಪ್ರಕರಣಗಳು ದಾಖಲಾಗುತ್ತಿರುವ ಹಲವು ದೇಶಗಳು ಇದರಿಂದ ಬಳಲುತ್ತಿರುವಾಗ, ಜಗತ್ತಿನಲ್ಲಿ ಮೊದಲು ವೈರಸ್ ಕಾಣಿಸಿಕೊಂಡಿದ್ದ ಚೀನಾದಲ್ಲಿ ಸಾಂಕ್ರಾಮಿಕ ರೋಗ ಗಣನೀಯವಾಗಿ ನಿಯಂತ್ರಣಕ್ಕೆ ಬಂದಿದೆ. ಇದಕ್ಕೆ ಕಾರಣ ಚೀನಾ ತನ್ನ ಪರೀಕ್ಷಾ ಸಾಮರ್ಥ್ಯವನ್ನು ಹೆಚ್ಚಿಸಿಕೊಂಡಿರುವುದು ಮತ್ತು ಅಲ್ಲಿನ ನಿರ್ದಿಷ್ಟ ಆರೋಗ್ಯ ಸೌಲಭ್ಯಗಳಿಂದ ಎಂದು ಹಲವು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಜೂನ್‌ನಲ್ಲಿ ಬೀಜಿಂಗ್‌ನ ದೊಡ್ಡ ದೊಡ್ಡ ಪ್ರದೇಶಗಳು ಸಾಮೂಹಿಕ ಪರೀಕ್ಷೆಗಳಿಗೆ ಒಳಪಟ್ಟಿದ್ದವು. 20 ದಶಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಈ ನಗರಗಳು ಆಹಾರ ಮಾರುಕಟ್ಟೆಗೆ ಸಂಬಂಧಿಸಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಇನ್ನೂ ಹೆಚ್ಚಿನ ಕೊರೊನಾ ಪರಿಹಾರ ಸಾಧ್ಯವಿಲ್ಲ: ಸುಪ್ರೀಂ‌ಗೆ ಕೇಂದ್ರ ಸರ್ಕಾರ

ಕಳೆದ ವರ್ಷದ ಕೊನೆಯಲ್ಲಿ ವೈರಸ್ ಪತ್ತೆಯಾದಾಗ ಇಡೀ ದೇಶವನ್ನು ಲಾಕ್‌ಡೌನ್ ಮಾಡಿ, ಮತ್ತೆ ಪುಟಿದೇಳುವ ಮೂಲಕ ವಿಶ್ವದ ಎರಡನೇ ಅತಿದೊಡ್ಡ ಆರ್ಥಿಕತೆಯನ್ನು ಹೊಂದಿರುವ ದೇಶವಾಗಿ ಹೊರಹೊಮ್ಮಿತ್ತು.

ದೇಶವು ಸಹಜ ಸ್ಥಿತಿಯತ್ತ ಮರಳಿದ ಪರಿಣಾಮ ಚೀನಾ ಸರ್ಕಾರವು, ಕಳೆದ ವಾರ ‘ಗೋಲ್ಡನ್ ವೀಕ್’ ರಜೆ ನೀಡಿದ್ದು, ನೂರಾರು ಮಿಲಿಯನ್ ಜನರು ಪ್ರಯಾಣ ಕೈಗೊಂಡಿದ್ದರು. ಹೆಚ್ಚುತ್ತಿರುವ ಪರೀಕ್ಷೆಗಳು ಮತ್ತು ಶೀಘ್ರ ಕೈಗೊಂಡ ಲಾಕ್‌ಡೌನ್‌ನಿಂದ ಕೊರೊನಾ ಸೋಂಕಿನ ಎರಡನೇ ಅಲೆಯನ್ನು ತಡೆಯುವಲ್ಲಿ ಚೀನಾವು ಯಶಸ್ವಿಯಾಗಿದೆ.

ಇದನ್ನೂ ಓದಿ: ಲಕ್ಷದ್ವೀಪ: 8 ತಿಂಗಳಾದರೂ ಒಂದೂ ಕೊರೊನಾ ಸೊಂಕಿತರಿಲ್ಲದ ಪ್ರದೇಶ!

ಇನ್ನು ಈಗಾಗಲೇ ಕೊರೊನಾ ಲಸಿಕೆ ತಯಾರಿಸುವಲ್ಲಿ ಸ್ಪರ್ಧೆಯಲ್ಲಿರುವ ದೇಶಗಳ ಪೈಕಿ ಬೀಜಿಂಗ್ ಕೂಡಾ ಕೊರೊನಾ ಲಸಿಕೆಯನ್ನು ರೂಪಿಸುವ ಕೊನೆಯ ಹಂತದಲ್ಲಿ ನಿರಾಶೆಗೊಂಡಿದೆ.

ಭಾರತದಲ್ಲಿ ಹೊಸದಾಗಿ 66,732 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ದೇಶದಲ್ಲಿ ಇದುವರೆಗೂ ಒಟ್ಟು 71,20,538 ಪ್ರಕರಣಗಳು ದಾಖಲಾಗಿವೆ.


ಇದನ್ನೂ ಓದಿ: 10 ಕೋಟಿ ಜನರನ್ನು ತೀವ್ರ ಬಡತನಕ್ಕೆ ದೂಡಲಿದೆ ಕೊರೊನಾ: ವಿಶ್ವಬ್ಯಾಂಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...