Homeಮುಖಪುಟಮಾಧ್ಯಮಗಳ ವಿರುದ್ಧ ತಿರುಗಿಬಿದ್ದ ಬಾಲಿವುಡ್: ರಿಪಬ್ಲಿಕ್, ಟೈಮ್ಸ್‌ ನೌ ಚಾನೆಲ್ ಮೇಲೆ ಮೊಕದ್ದಮೆ!

ಮಾಧ್ಯಮಗಳ ವಿರುದ್ಧ ತಿರುಗಿಬಿದ್ದ ಬಾಲಿವುಡ್: ರಿಪಬ್ಲಿಕ್, ಟೈಮ್ಸ್‌ ನೌ ಚಾನೆಲ್ ಮೇಲೆ ಮೊಕದ್ದಮೆ!

4 ಚಲನಚಿತ್ರೋದ್ಯಮ ಸಂಘಗಳು ಮತ್ತು 34 ನಿರ್ಮಾಪಕರು ಇದರಲ್ಲಿ ದೂರುದಾರರಾಗಿದ್ದಾರೆ. ಕರಣ್ ಜೋಹರ್, ಯಶ್ ರಾಜ್, ಅಮೀರ್ ಖಾನ್, ಶಾರುಖ್ ಖಾನ್ ಮತ್ತು ಸಲ್ಮಾನ್ ಖಾನ್ ಅವರ ನಿರ್ಮಾಣ ಕಂಪನಿಗಳು ಈ ದೂರಿನ ಭಾಗವಾಗಿದ್ದಾರೆ.

- Advertisement -
- Advertisement -

ಸುಶಾಂತ್ ಸಿಂಗ್ ರಜಪೂತ್ ಪ್ರಕರಣದಲ್ಲಿ ಮಾಧ್ಯಮ ಸಂಸ್ಥೆಗಳು ಮಾಡಿದ ಬೇಜವಾಬ್ದಾರಿಯುತ ವರದಿ ಮತ್ತು ಬಾಲಿವುಡ್ ಅನ್ನು‌ ಅವಹೇಳಹನಕಾರಿಯಾಗಿ ಬಿಂಬಿಸಿದ್ದರ ವಿರುದ್ಧ ಬಾಲಿವುಡ್ ಸ್ಟಾರ್‌ಗಳಾದ ಅಮೀರ್‌ ಖಾನ್, ಶಾರುಖ್‌ ಖಾನ್ ಮತ್ತು ಸಲ್ಮಾನ್ ಖಾನ್ ಸೇರಿದಂತೆ ಚಿತ್ರೋದ್ಯಮದ ಹಲವರು ಸೇರಿ ದೆಹಲಿ ಹೈಕೋರ್ಟ್‌ನಲ್ಲಿ ಮೊಕದ್ದಮೆ ಹೂಡಿದ್ದಾರೆ.

ಇದನ್ನೂ ಓದಿ: ರಿಯಾ ಜೊತೆ ಮಾಧ್ಯಮಗಳ ದುರ್ವತನೆ: ಕೊನೆಗೂ ಎಚ್ಚೆತ್ತ ಮುಂಬೈ ಪೊಲೀಸರು

ರಿಪಬ್ಲಿಕ್ ಟಿವಿ ಮತ್ತು ಟೈಮ್ಸ್‌ ನೌ- ಎರಡು ಚಾನೆಲ್‌ಗಳ ಮುಖ್ಯಸ್ಥರಾದ ಅರ್ನಾಬ್ ಗೋಸ್ವಾಮಿ, ಪ್ರದೀಪ್ ಭಂಡಾರಿ, ರಾಹುಲ್ ಶಿವಶಂಕರ್ ಮತ್ತು ನವಿಕಾ ಕುಮಾರ್ ವಿರುದ್ಧ 4 ಚಲನಚಿತ್ರೋದ್ಯಮ ಸಂಘಗಳು ಮತ್ತು 34 ನಿರ್ಮಾಪಕರು ಇದರಲ್ಲಿ ದೂರುದಾರರಾಗಿದ್ದಾರೆ. ಕರಣ್ ಜೋಹರ್, ಯಶ್ ರಾಜ್, ಅಮೀರ್ ಖಾನ್, ಶಾರುಖ್ ಖಾನ್ ಮತ್ತು ಸಲ್ಮಾನ್ ಖಾನ್ ಅವರ ನಿರ್ಮಾಣ ಕಂಪನಿಗಳು ಈ ಪ್ರಕರಣದ ಒಂದು ಭಾಗವಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಒಂದು ಸ್ವತಂತ್ರ ಮಾಧ್ಯಮವನ್ನು ನನಗೆ ಕೊಡಿ, ಮರುಕ್ಷಣ ಈ ಸರ್ಕಾರ ಅಧಿಕಾರದಲ್ಲಿರುವುದಿಲ್ಲ: ರಾಹುಲ್ ಗಾಂಧಿ

“ಚಾನೆಲ್‌ಗಳು ಮತ್ತು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳು, ಬಾಲಿವುಡ್ ಮತ್ತು ಅದರ ಸದಸ್ಯರ ವಿರುದ್ಧ ಬೇಜವಾಬ್ದಾರಿಯುತ, ಅವಹೇಳನಕಾರಿ ಮತ್ತು ಮಾನಹಾನಿಕರವಾದ ಹೇಳಿಕೆ ನೀಡುವುದನ್ನು ತಡೆಯಬೇಕು” ಎಂದು ದೂರಿನಲ್ಲಿ ಕೋರಲಾಗಿದೆ.

ಚಾನೆಲ್‌ಗಳು 1994 ರ ಪ್ರೋಗ್ರಾಂ ಕೋಡ್‌ಗೆ ಬದ್ಧವಾಗಿರಬೇಕು ಮತ್ತು ಬಾಲಿವುಡ್ ವಿರುದ್ಧ ಪ್ರಕಟಿಸಿದ ಎಲ್ಲಾ ಮಾನಹಾನಿಕರ ವಿಷಯವನ್ನು ಹಿಂತೆಗೆದುಕೊಳ್ಳಿ ಅಥವಾ ತೆಗೆದುಹಾಕಿ” ಎಂದು ಚಲನಚಿತ್ರ ನಿರ್ಮಾಪಕರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಡಿಜಿಟಲ್ ಮಾಧ್ಯಮಗಳ ಕಡೆ ಗಮನಹರಿಸಿ: ಸುಪ್ರೀಂಗೆ ಅಫಿಡವಿಟ್ ಸಲ್ಲಿಸಿದ ಕೇಂದ್ರ ಸರ್ಕಾರ

ಈ ಮಾಧ್ಯಮ ಸಂಸ್ಥೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದು ಇದೇ ಮೊದಲಲ್ಲ. ಮಾನಹಾನಿಕರ, ಆಧಾರರಹಿತ ಮತ್ತು ತಪ್ಪಾದ ಸುದ್ದಿಗಳನ್ನು ಪ್ರಸಾರ ಮಾಡಿದ ತಪ್ಪಿತಸ್ಥರೆಂದು ಕಂಡುಬಂದಿದ್ದು, ಮೊದಲಿನಿಂದಲೂ ಅವರನ್ನು ಖಂಡಿಸಲಾಗಿದ್ದು, ದಂಡವನ್ನೂ ವಿಧಿಸಲಾಗಿದೆ ಎಂದು ನಿರ್ಮಾಪಕರು ಹೇಳಿದ್ದಾರೆ.

“ಬಾಲಿವುಡ್ ಎನ್ನುವುದು ಲಕ್ಷಾಂತರ ಜನರಿಗೆ ಬದುಕು ಕಲ್ಪಿಸಿದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೂ ಲಾಭವುಂಟಾಗಿದೆ. ಯಾವುದೋ ಒಂದು ಪ್ರಕರಣವನ್ನಿಟ್ಟುಕೊಂಡು ಇಡೀ ಉದ್ಯಮವನ್ನು ದೂರುವುದು ಸರಿಯಲ್ಲ. ಮಾಧ್ಯಮ ಸಂಸ್ಥೆಗಳು ಬಳಸುತ್ತಿದ್ದ ಅಸಂವಿಧಾನಿಕ ಪದಗಳಂತೂ ಖಂಡನೀಯ” ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಮೋದಿ ಸರ್ಕಾರ ಭಾರತವನ್ನು ಪ್ರಪಾತಕ್ಕೆ ತಳ್ಳಿದೆ, ಮಾಧ್ಯಮಗಳು ’ಸಬ್‌ ಚಂಗಾಸಿ’ ಎನ್ನುತ್ತಿವೆ: ರಾಹುಲ್

ಸುಶಾಂತ್ ಸಿಂಗ್ ಅಸಹಜ ಸಾವಿನ ಆರಂಭದಿಂದ ಇಲ್ಲಿಯವರೆಗೂ ಮಾಧ್ಯಮಗಳನ್ನು ನಿಯಂತ್ರಿಸಲು ನ್ಯಾಯಾಲಯ ಮತ್ತು ಸರ್ಕಾರ ಸಾಕಷ್ಟು ಪ್ರಯತ್ನ ಮಾಡಿದಾಗ್ಯೂ ಅವುಗಳನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುವುದಕ್ಕೆ ಸಾಧ್ಯವಾಗಲಿಲ್ಲ. ಸುಶಾಂತ್ ಪ್ರಕರಣವನ್ನು ಸಿಬಿಐ ವಹಿಸಿಕೊಳ್ಳುವುದಕ್ಕೂ ಮೊದಲು ಮತ್ತು ನಂತರ ತಮ್ಮದೇ ಆದ ಊಹಾಪೂಹದ ತನಿಖಾ ವರದಿಗಳನ್ನು ಈ ಸುದ್ಧಿ ಸಂಸ್ಥೆಗಳು ಪ್ರಸಾರ ಮಾಡುತ್ತಿದ್ದವು. ಮಹಾರಾಷ್ಟ್ರ ಸರ್ಕಾರ ಮತ್ತು ಅದರ ಮುಖಂಡರು ಸೇರಿದಂತೆ ಅರ್ನಾಬ್ ಗೋಸ್ವಾಮಿ ಮೇಲೆ ಪ್ರಕರಣ ದಾಖಲಿಸಿದ್ದರು. ಸಿಬಿಐ ಕೂಡ ಮಾಧ್ಯಮಗಳನ್ನು ನಿಯಂತ್ರಿಸಬೇಕು ಎಂದು ಹೇಳಿಕೆ ನೀಡಿ, ನಾವು ತನಿಖೆಯ ಯಾವುದೇ ಅಂಶಗಳನ್ನು ಮಾಧ್ಯಮಗಳೊಟ್ಟಿಗೆ ಹಂಚಿಕೊಂಡಿಲ್ಲ. ಮಾಧ್ಯಮಗಳಲ್ಲಿ ಸುಳ್ಳನ್ನು ಪ್ರಚಾರ ಮಾಡಲಾಗುತ್ತಿದೆ ಎಂದು ಹೇಳಿತ್ತು.

ಇನ್ನು ಸುಶಾಂತ್ ಸಿಂಗ್ ಸಾವನ್ನು, ಇದು ಆತ್ಮಹತ್ಯೆಯಲ್ಲ, ಕೊಲೆ ಎಂದು ಈ ಮಾಧ್ಯಮ ಸಂಸ್ಥೆಗಳು ಕೂಗಾಡುತ್ತಿದ್ದವು. ಆದರೆ ವೈದ್ಯಕೀಯ ಸಂಸ್ಥೆ ಏಮ್ಸ್ ನೀಡಿದ ಆತ್ಮಹತ್ಯೆ ವರದಿಯ ನಂತರ ಈಗ ಸುಮ್ಮನಾಗಿವೆ. ಇದಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ವಿರುದ್ಧ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸದ್ಯ ವಿಚಾರಣೆ ನಡೆಸುತ್ತಿದ್ದಾರೆ. ಇತ್ತೀಚೆಗೆ ರಿಪಬ್ಲಿಕ್ ಟಿವಿಯ ಟಿಆರ್‌ಪಿ ಹಗರಣ ಬಯಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆಯೂ ವಿಚಾರಣೆಯನ್ನು ಎದುರಿಸುತ್ತಿದೆ. ಬಜಾಜ್ ಮತ್ತು ಪಾರ್ಲೆಜಿ ಕಂಪನಿಗಳು ಈ ರೀತಿಯ ಚಾನೆಲ್‌ಗಳಿಗೆ ಜಾಹೀರಾತು ನೀಡುವುದಿಲ್ಲ ಎಂದು ಘೋಷಿಸಿವೆ.


ಇದನ್ನೂ ಓದಿ: ಸುಶಾಂತ್ ಸಿಂಗ್ ಸಾವಿನ ಪ್ರಕರಣದಲ್ಲಿ ಮಾಧ್ಯಮಗಳು ಸುಳ್ಳು ಹೇಳುತ್ತಿವೆ: ಸಿಬಿಐ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...