ವಿಶ್ವದಲ್ಲಿ ಕೊರೊನಾ ಸೋಂಕಿತ ಪ್ರಕರಣಗಳ ಸಂಖ್ಯೆ ಸಾಕಷ್ಟು ಪ್ರಮಾಣದಲ್ಲಿದೆ. ಈ ನಿಟ್ಟಿನಲ್ಲಿ ಸಾಂಕ್ರಾಮಿಕ ರೋಗಕ್ಕೆ ಲಸಿಕೆ ಕಂಡುಹಿಡಿಯುವ ಪ್ರಯೋಗದಲ್ಲಿ ಹಲವು ಕಂಪನಿಗಳು ಕಾರ್ಯನಿರ್ವಹಿಸುತ್ತಿವೆ. ಅಂತಹ ಕಂಪನಿಗಳಲ್ಲಿ ಅಮೆರಿಕ ಮೂಲದ ಜಾನ್ಸನ್ ಮತ್ತು ಜಾನ್ಸನ್ (ಜೆ & ಜೆ) ಕಂಪೆನಿ ಕೂಡ ಒಂದು.
ಸದ್ಯಕ್ಕೆ ಜಾನ್ಸನ್ & ಜಾನ್ಸನ್ ಕಂಪನಿ ತಾನು ತಯಾರಿಸಿರುವ ಲಸಿಕೆಯ ಪ್ರಾಯೋಗಿಕ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಪ್ರಯೋಗಕ್ಕೆ ಒಳಗಾದವರಿಗೆ ಡೋಸೆಜ್ ನೀಡುವುದನ್ನು ನಿಲ್ಲಿಸಲಾಗಿದೆ ಎಂದು ಕಂಪನಿ ತಿಳಿಸಿದೆ.
ಅಧ್ಯಯನದಲ್ಲಿ ಭಾಗವಹಿಸಿದವರಲ್ಲಿ ವಿವರಿಸಲಾಗದ ಅನಾರೋಗ್ಯದ ಲಕ್ಷಣಗಳು ಕಾಣಿಸಿಕೊಂಡ ಕಾರಣ ಮೂರನೇ ಮತ್ತು ಅಂತಿಮ ಹಂತದ ಕ್ಲಿನಿಕಲ್ ಪ್ರಯೋಗವನ್ನು ಅ.12ರಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ ಎಂದು ಕಂಪನಿ ಹೇಳಿಕೆಯಲ್ಲಿ ತಿಳಿಸಿದೆ.
ಇದನ್ನೂ ಓದಿ: ಕೊರೊನಾ ಲಸಿಕೆ ಮುಂದಿನ ವರ್ಷಕ್ಕೆ ಸಿದ್ಧವಾಗಬಹುದು: ಕೇಂದ್ರ ಸಚಿವ ಹರ್ಷವರ್ಧನ್
Johnson & Johnson is pausing all dosing in its coronavirus vaccine trials due to an unexplained illness in a study participant: Reuters
— ANI (@ANI) October 13, 2020
ಈ ಕಂಪನಿ ತಯಾರಿಸಿರುವ ಲಸಿಕೆಯ ಮೂರನೇ ಹಾಗೂ ಅಂತಿಮ ಹಂತದಲ್ಲಿ 60 ಸಾವಿರ ಜನರ ಮೇಲೆ ಕ್ಲಿನಿಕಲ್ ಪರೀಕ್ಷೆ ನಡೆಸುತ್ತಿತ್ತು.
ಕೊರೊನಾ ಲಸಿಕೆ ಪ್ರಯೋಗಗಳು ನಡೆಯುತ್ತಿರುವ ಇತರ ದೇಶಗಳ ಪಟ್ಟಿಯಲ್ಲಿ ಅರ್ಜೆಂಟಿನಾ, ಬ್ರೆಜಿಲ್, ಚಿಲಿ, ಕೊಲಂಬಿಯಾ, ಮೆಕ್ಸಿಕೊ, ಪೆರು ಮತ್ತು ದಕ್ಷಿಣ ಆಫ್ರಿಕಾ ಸೇರಿವೆ.
ಭಾರತದಲ್ಲಿ ಕೊರೊನಾ ಲಸಿಕೆ ಬಿಡುಗಡೆ ಮಾಡಲು ಇನ್ನೂ ಯಾವುದೇ ದಿನಾಂಕವನ್ನು ನಿಗದಿಪಡಿಸಿಲ್ಲ. ಮುಂದಿನ ವರ್ಷದ ಮೊದಲ ತ್ರೈಮಾಸಿಕದ ವೇಳೆಗೆ ಇದು ಸಿದ್ಧವಾಗಬಹುದು ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ.


