Homeಮುಖಪುಟನಿಮ್ಮ ಸ್ವಂತ ಮಗಳ ಅಂತ್ಯಕ್ರಿಯೆ ಹೀಗೆ ಮಾಡುತ್ತೀರಾ..? ಹತ್ರಾಸ್‌ ಡಿಸಿಗೆ ಲಕ್ನೋ ಪೀಠ ಪ್ರಶ್ನೆ

ನಿಮ್ಮ ಸ್ವಂತ ಮಗಳ ಅಂತ್ಯಕ್ರಿಯೆ ಹೀಗೆ ಮಾಡುತ್ತೀರಾ..? ಹತ್ರಾಸ್‌ ಡಿಸಿಗೆ ಲಕ್ನೋ ಪೀಠ ಪ್ರಶ್ನೆ

ನಿಮಗೆ ಮುಖ್ಯಮಂತ್ರಿಯ ನಿಧಿಯಿಂದ 25 ಲಕ್ಷ ರೂಪಾಯಿ ದೊರೆಯುತ್ತಿದೆ. ನಿಮ್ಮ ಮಗಳು ಕೊರೊನಾವೈರಸ್‌ನಿಂದ ಮೃತಪಟ್ಟಿದ್ದರೆ ನಿಮಗೆ ಇಷ್ಟು ಹಣ ಸಿಗುತ್ತಿತ್ತಾ..? ಎಂದು ಡಿಸಿ ಆಮಿಷವೊಡ್ಡಿದ್ದರು ಎಂದು ಸಂತ್ರಸ್ತೆಯ ತಂದೆ ತಿಳಿಸಿದ್ದಾರೆ.

- Advertisement -
- Advertisement -

ಹತ್ರಾಸ್‌ನ ದಲಿತ ಯುವತಿಯ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸಂಬಂಧ ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠ ಉತ್ತರ ಪ್ರದೇಶದ ಸರ್ಕಾರಿ ಅಧಿಕಾರಿಗಳು ಮತ್ತು ಪೊಲೀಸರ ಕ್ರಮವನ್ನು ಕಟುವಾಗಿ ಟೀಕಿಸಿದೆ. ಮೃತ ಸಂತ್ರಸ್ತೆಯ ಅಂತ್ಯಕ್ರಿಯೆ ವಿಚಾರಕ್ಕೆ ಸಂಬಂಧಿಸಿದಂತೆ ಗಂಭೀರ ಪ್ರಶ್ನೆಗಳನ್ನು ಕೇಳಿದೆ.

ಕಳೆದ ವಾರ ನ್ಯಾಯಾಲಯವು ಈ ಪ್ರಕರಣ ಕುರಿತು ಸುಮೋಟೋ ಕೇಸ್ ದಾಖಲಿಸಿಕೊಂಡಿತ್ತು. ನಿನ್ನೆ ನಡೆದ ವಿಚಾರಣೆಯಲ್ಲಿ ಹತ್ರಾಸ್ ಸಂತ್ರಸ್ತ ಕುಟುಂಬ ನಮ್ಮ ಇಚ್ಛೆಗೆ ವಿರುದ್ಧವಾಗಿ ಶವ ಸಂಸ್ಕಾರ ಮಾಡಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

“ಸಂತ್ರಸ್ತೆ ಶ್ರೀಮಂತ ಕುಟುಂಬದಿಂದ ಬಂದಿದ್ದರೆ ನೀವು ಆಕೆಯ ಮೃತದೇಹವನ್ನು ಇದೇ ರೀತಿ ಸುಟ್ಟುಹಾಕುತ್ತಿದ್ದಿರೇ.. ?” ಎಂದು ನ್ಯಾಯಮೂರ್ತಿ ಪಂಕಜ್ ಮಿಥಾಲ್ ಮತ್ತು ನ್ಯಾಯಮೂರ್ತಿ ರಾಜನ್ ರಾಯ್ ಅವರನ್ನೊಳಗೊಂಡ ನ್ಯಾಯಪೀಠ, ಜಿಲ್ಲಾ ಮ್ಯಾಜಿಸ್ಟ್ರೇಟ್ ಪ್ರವೀಣ್ ಕುಮಾರ್ ಲಕ್ಷ್ಕರ್ ಅವರನ್ನು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಹತ್ರಾಸ್: ಸಂತ್ರಸ್ತೆ ಮನೆ ಸುತ್ತ 8 ಸಿಸಿಟಿವಿ ಅಳವಡಿಕೆ, 60 ಪೊಲೀಸರ ನಿಯೋಜನೆ

ಪ್ರವೀಣ್ ಕುಮಾರ್ ಲಕ್ಷ್ಕರ್ ಮೃತ ಸಂತ್ರಸ್ತೆಯ ಅಂತ್ಯಸಂಸ್ಕಾರವನ್ನು ಮಧ್ಯರಾತ್ರಿಯಲ್ಲಿ, ಯುವತಿಯ  ಕುಟುಂಬ ಸದಸ್ಯರ ಉಪಸ್ಥಿತಿಯಿಲ್ಲದೆ ನಡೆಸಿದ ಶವಸಂಸ್ಕಾರದಲ್ಲಿ ಪ್ರಮುಖ ಪಾತ್ರ ವಹಿಸಿದ್ದವರು.
ಜೊತೆಗೆ ’ನಿಮ್ಮ ಸ್ವಂತ ಮಗಳನ್ನು ಇದೇ ರೀತಿ ಅಂತ್ಯಸಂಸ್ಕಾರ ಮಾಡಲು ಅನುಮತಿ ನೀಡುತ್ತೀರಾ..? ಎಂದು ನ್ಯಾಯಪೀಠ ಕುಮಾರ್ ಅವರನ್ನು ಪ್ರಶ್ನಿಸಿದೆ.

ಸಂತ್ರಸ್ತೆಯ ತಂದೆ ನ್ಯಾಯಾಲಯದ ಮುಂದೆ ಜಿಲ್ಲಾ ಮ್ಯಾಜಿಸ್ಟ್ರೇಟ್, ’ನಿಮಗೆ ಮುಖ್ಯಮಂತ್ರಿಯ ನಿಧಿಯಿಂದ 25 ಲಕ್ಷ ರೂಪಾಯಿ ದೊರೆಯುತ್ತಿದೆ. ನಿಮ್ಮ ಮಗಳು ಕೊರೊನಾವೈರಸ್‌ನಿಂದ ಮೃತಪಟ್ಟಿದ್ದರೆ ನಿಮಗೆ ಇಷ್ಟು ಹಣ ಸಿಗುತ್ತಿತ್ತಾ..? ಎಂದು ಹೇಳಿದ್ದರು ಎಂಬುದನ್ನು ಬಹಿರಂಗ ಪಡಿಸಿದ್ದಾರೆ.

ಹತ್ರಾಸ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಪ್ರವೀಣ್ ಕುಮಾರ್ ಲಕ್ಷ್ಕರ್ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಅವಸರದಲ್ಲಿ ಅಂತ್ಯಕ್ರಿಯೆ ಮಾಡಲಾಯಿತು ಎಂಬ ಹೇಳಿಕೆ ನ್ಯಾಯಪೀಠದ ಮೇಲೆ ಯಾವುದೇ ಪ್ರಭಾವ ಬೀರಲಿಲ್ಲ.

ಸಂತ್ರಸ್ತೆಯ ಕುಟುಂಬ ಮತ್ತು ಹತ್ರಾಸ್ ಜಿಲ್ಲಾ ಮ್ಯಾಜಿಸ್ಟ್ರೇಟ್, ಉತ್ತರ ಪ್ರದೇಶದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಗೃಹ) ಅವನಿಶ್ ಕುಮಾರ್ ಅವಾಸ್ತಿ, ಪೊಲೀಸ್ ಮಹಾನಿರ್ದೇಶಕ ಹೆಚ್.ಸಿ.ಅವಾಸ್ತಿ, ಹೆಚ್ಚುವರಿ ಮಹಾನಿರ್ದೇಶಕರು (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್ ಮತ್ತು ಹತ್ರಾಸ್ ಪೊಲೀಸ್ ವರಿಷ್ಠಾಧಿಕಾರಿ ವಿನೀತ್ ಜೈಸ್ವಾಲ್ ನ್ಯಾಯಾಲಯದಲ್ಲಿ ಹಾಜರಾಗಿದ್ದರು.

ಇದನ್ನೂ ಓದಿ: ಹತ್ರಾಸ್ ಸಂತ್ರಸ್ತೆಯನ್ನೇ ಬಲಿಪಶುಮಾಡುವ ಹುನ್ನಾರ: ಸುಪ್ರೀಂ ಮೆಟ್ಟಿಲೇರಿದ ಸಿಜೆಪಿ

ನಿರ್ಭಯಾ ಪ್ರಕರಣದಲ್ಲಿ ಸಂತ್ರಸ್ತೆಯ ಕಾನೂನು ಸಲಹೆಗಾರರೂ ಆಗಿದ್ದ ವಕೀಲೆ ಸೀಮಾ ಕುಶ್ವಾಹ ಅವರು ಸಂತ್ರಸ್ತೆಯ ಕುಟುಂಬವನ್ನು ಪ್ರತಿನಿಧಿಸುತ್ತಿದ್ದಾರೆ. ರಾಜ್ಯ ಸರ್ಕಾರವನ್ನು ಹೆಚ್ಚುವರಿ ಅಡ್ವೊಕೇಟ್ ಜನರಲ್ ವಿನೋದ್ ಶಾಹಿ ಪ್ರತಿನಿಧಿಸುತ್ತಿದ್ದಾರೆ.

“ಕುಟುಂಬವು ಈ ಪ್ರಕರಣವನ್ನು ರಾಜ್ಯದಿಂದ ಹೊರಗೆ ದೆಹಲಿ ಅಥವಾ ಮುಂಬೈಗೆ ವರ್ಗಾಯಿಸಬೇಕೆಂದು ಬಯಸಿದೆ” ಎಂದು ಕುಟುಂಬ ಸದಸ್ಯರ ಸಲಹೆಗಾರರಾದ ಸೀಮಾ ಕುಶ್ವಾಹ ಹೇಳಿದ್ದಾರೆ.

ನ್ಯಾಯಮೂರ್ತಿಗಳಾದ ಪಂಕಜ್ ಮಿಥಾಲ್ ಮತ್ತು ರಾಜನ್ ರಾಯ್ ಅವರ ವಿಭಾಗೀಯ ಪೀಠ ಈ ಪ್ರಕರಣದ ವಿಚಾರಣೆ ನಡೆಸುತ್ತಿದೆ. ಉತ್ತರಗಳನ್ನು ಸಲ್ಲಿಸಲು ಸಾಕಷ್ಟು ಸಮಯ ಬೇಕು ಎಂದು ರಾಜ್ಯದ ಮನವಿಯನ್ನು ಗಮನದಲ್ಲಿಟ್ಟುಕೊಂಡು, ಪ್ರಕರಣದ ವಿಚಾರಣೆಯನ್ನು ನವೆಂಬರ್ 2 ಕ್ಕೆ ನಿಗದಿಪಡಿಸಲಾಗಿದೆ.


ಇದನ್ನೂ ಓದಿ: ಹತ್ರಾಸ್: ಘಟನೆಯನ್ನು ’ಅಸಾಧಾರಣ ಮತ್ತು ಆಘಾತಕಾರಿ’ ಎಂದು ಕರೆದ ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...