Homeಕರ್ನಾಟಕಉಪಚುನಾವಣೆ: 2 ವರ್ಷದಲ್ಲಿ BJP ಅಭ್ಯರ್ಥಿ ಮುನಿರತ್ನ ಆಸ್ತಿ ದುಪ್ಪಟ್ಟು!

ಉಪಚುನಾವಣೆ: 2 ವರ್ಷದಲ್ಲಿ BJP ಅಭ್ಯರ್ಥಿ ಮುನಿರತ್ನ ಆಸ್ತಿ ದುಪ್ಪಟ್ಟು!

ಆರ್‌ಆರ್‌ ನಗರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಎಚ್ ಎರಡೂವರೆ ಕೋಟಿ ರೂ. ಆಸ್ತಿ ಹೊಂದಿದ್ದರೆ, ಜೆಡಿಎಸ್‌ ಅಭ್ಯರ್ಥಿ ಕೃಷ್ಣಮೂರ್ತಿ.ವಿ ತಮ್ಮ ಮತ್ತು ಪತ್ನಿಯ ಆಸ್ತಿ ಸೇರಿ 19 ಕೋಟಿ ರೂ ಎಂದು ಘೋಷಿಸಿಕೊಂಡಿದ್ದಾರೆ.

- Advertisement -
- Advertisement -

ನವೆಂಬರ್ 3 ರಂದು ನಡೆಯಲಿರುವ ಆರ್‌.ಆರ್‌.ನಗರ, ಶಿರಾ ಉಚಚುನಾವಣೆ ನಡೆಯಲಿದೆ. ಇಷ್ಟು ದಿನ ಅಭ್ಯರ್ಥಿಗಳು ಯಾರು ಎಂಬುದು ಒಂಥರಾ ಕುತೂಹಲವಾಗಿದ್ದರೇ, ನಾಮಪತ್ರ ಸಲ್ಲಿಕೆ ನಂತರ ಅಭ್ಯರ್ಥಿಗಳ ಆಸ್ತಿ ವಿವರಗಳು ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ.

ರಾಜರಾಜೇಶ್ವರಿನಗರ ಉಪಚುನಾವಣೆಯ ಬಿಜೆಪಿಯ ಅಭ್ಯರ್ಥಿ, ಅನರ್ಹ ಶಾಸಕ ಮುನಿರತ್ನ ಅವರು ತಮ್ಮ ಚುನಾವಣಾ ಅಫಿಡವಿಟ್ ಸಲ್ಲಿಸಿದ್ದು, ಅಫಿಡವಿಟ್ ಪ್ರಕಾರ ಎರಡು ವರ್ಷಗಳಲ್ಲಿ ಮುನಿರತ್ನ ಅವರ ಆಸ್ತಿ ದುಪ್ಪಟ್ಟಾಗಿದೆ. ಕೆಲವೇ ವರ್ಷಗಳಲ್ಲಿ ಮುನಿರತ್ನ ನೂರು ಕೋಟಿ ಆಸ್ತಿಯ ಒಡೆಯನಾಗಲಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿಯಾಗಿ 2018ರ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿದಿದ್ದ ಮುನಿರತ್ನ ಆ ಸಮಯದಲ್ಲಿ ಅವರ ಹಾಗೂ ಅವರ ಪತ್ನಿ ಒಟ್ಟು 43.71 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹೊಂದಿರುವುದಾಗಿ ಚುನಾವಣಾಧಿಕಾರಿಗೆ ಸಲ್ಲಿಸಿದ್ದ ಪ್ರಮಾಣಪತ್ರದಲ್ಲಿ ತಿಳಿಸಿದ್ದರು.

ಇದನ್ನೂ ಓದಿ: ಕೇಂದ್ರ ಸರ್ಕಾರ ನಮ್ಮಿಂದ ಕಿತ್ತುಕೊಂಡದ್ದನ್ನು ಮರಳಿ ಪಡೆಯಬೇಕಾಗಿದೆ: ಮೆಹಬೂಬಾ ಮುಫ್ತಿ

ಈಗ ಬಿಜೆಪಿ ಅಭ್ಯರ್ಥಿಯಾಗಿ ಉಪಚುನಾವಣೆಗೆ ಸ್ಪರ್ಧಿಸಿ ನಾಮಪತ್ರ ಸಲ್ಲಿಸುವಾಗ ನೀಡಿರುವ ಪ್ರಮಾಣಪತ್ರದಲ್ಲಿ 89.13 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ. ಮುನಿರತ್ನ ಅನೇಕ ಕಡೆಗಳಲ್ಲಿ ಕೃಷಿ ಭೂಮಿಯನ್ನು ಹೊಂದಿದ್ದು, ಅವುಗಳಲ್ಲಿ ಕೆಲವು ಈ ವರ್ಷದ ಸೆಪ್ಟೆಂಬರ್, ಆಗಸ್ಟ್, ಜುಲೈ ಮತ್ತು ಫೆಬ್ರವರಿಗಳಲ್ಲಿ ಖರೀದಿಸಲ್ಪಟ್ಟಿವೆ.

ಮುನಿರತ್ನ ಒಟ್ಟು 29.11 ಕೋಟಿ ರೂ. ಅವರ ಪತ್ನಿ ಮಂಜುಳಾ ₹ 40.97 ಲಕ್ಷ ಮೌಲ್ಯದ ಚರಾಸ್ತಿ ಹೊಂದಿದ್ದಾರೆ. ದಂಪತಿಯ ಆಸ್ತಿಯ ಮೌಲ್ಯ ಶೇಕಡ 103ರಷ್ಟು ಹೆಚ್ಚಳವಾಗಿದೆ.

ಚಲನಚಿತ್ರ ನಿರ್ಮಾಪಕರು ಆಗಿರುವ ಮುನಿರತ್ನ ಆದಾಯಕ್ಕಿಂತ ಸಾಲ ಹೆಚ್ಚಿದೆ ಎಂದು ಹೇಳಿಕೊಂಡಿದ್ದಾರೆ. ದಂಪತಿ ಒಟ್ಟು 46.41 ಕೋಟಿ ರೂ. ಮೊತ್ತದ ಸಾಲ ಹೊಂದಿದ್ದಾರೆ. ಜೊತೆಗೆ ವಿವಿಧ ವ್ಯಕ್ತಿಗಳು ಮತ್ತು ಸಂಸ್ಥೆಗಳಿಗೆ 21.37 ಕೋಟಿ ರೂಪಾಯಿ ಸಾಲ ನೀಡಿದ್ದಾರೆ.

ಮುನಿರತ್ನ ಬಳಿ 3,930 ಗ್ರಾಂ ಬಂಗಾರ, 111.27 ಕ್ಯಾರೆಟ್ ವಜ್ರ ಇದ್ದರೆ, ಬೆಳ್ಳಿ 40 ಕೆಜಿ ಇದೆ. ಅವರ ಪತ್ನಿ ಬಳಿ 4.40 ಲಕ್ಷ ಮೌಲ್ಯದ 360 ಗ್ರಾಂ ಬಂಗಾರವಿದೆ. ಮುನಿರತ್ನ ಬಳಿ 1.31 ಕೋಟಿ ಮೌಲ್ಯದ  30 ವಾಹನಗಳು ಅವರ ಬಳಿ ಇದ್ದು, ಹೆಂಡತಿಯ ಬಳಿ ಯಾವುದೇ ವಾಹನಗಳಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಉಪಚುನಾವಣೆ: ಆರ್‌.ಆರ್‌ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿ.ಕೆ.ರವಿ ಪತ್ನಿ ಕುಸುಮಾ-ಸಿದ್ದರಾಮಯ್ಯ

ಚುನಾವಣಾ ಅಕ್ರಮಕ್ಕೆ ಸಂಬಂಧಿಸಿದ ಒಂದು ಪ್ರಕರಣ, ನಂಬಿಕೆ ದ್ರೋಹ, ಫೋರ್ಜರಿ, ಒಳಸಂಚು ಸೇರಿದಂತೆ ಜನರ ಪ್ರಾತಿನಿಧ್ಯ ಕಾಯ್ದೆಯಡಿ ತನ್ನ ವಿರುದ್ಧ ಮೂರು ಎಫ್‌ಐಆರ್‌ ಮತ್ತು ಐದು ಕ್ರಿಮಿನಲ್‌ ಪ್ರಕರಣಗಳು ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇವೆ ಎಂದು ತಿಳಿಸಿದ್ದಾರೆ.

56 ವರ್ಷದ ಮುನಿರತ್ನ ಅವರು 2013 ಮತ್ತು 2018 ರ ಚುನಾವಣೆಯಲ್ಲಿ ರಾಜರಾಜೇಶ್ವರಿನಗರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಯಗಳಿಸಿದರು. ನಂತರ ಬಿಜೆಪಿ ಸೇರಿದ್ದರು. ಕಳೆದ ವರ್ಷ ಅವರು ಪಕ್ಷಾಂತರ ವಿರೋಧಿ ಕಾನೂನಿನಡಿಯಲ್ಲಿ ಅನರ್ಹಗೊಂಡ 17 ಜನ ಶಾಸಕರಲ್ಲಿ ಒಬ್ಬರಾಗಿದ್ದರು.

ಇನ್ನು ಆರ್‌ಆರ್‌ ನಗರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಎಚ್ ಎರಡೂವರೆ ಕೋಟಿ ರೂ. ಆಸ್ತಿ ಮತ್ತು 20 ಲಕ್ಷ ರೂಪಾಯಿ ಸಾಲ ಇರುವುದಾಗಿ ಘೋಷಿಸಿಕೊಂಡಿದ್ದಾರೆ. ಜೆಡಿಎಸ್‌ ಅಭ್ಯರ್ಥಿ ಕೃಷ್ಣಮೂರ್ತಿ.ವಿ ತಮ್ಮ ಮತ್ತು ತಮ್ಮ ಪತ್ನಿಯ ಬಳಿಯ ಆಸ್ತಿ ಸೇರಿ 19 ಕೋಟಿ ರೂಪಾಯಿ ಎಂದು ಘೋಷಿಸಿಕೊಂಡಿದ್ದಾರೆ.


ಇದನ್ನೂ ಓದಿ: ಪಕ್ಷಾಂತರದಿಂದ ಆರ್‌ಆರ್ ನಗರ ಉಪಚುನಾವಣೆ: ರಾಜಕೀಯ ದಿಕ್ಕು ಬದಲಿಸುತ್ತಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...