Homeಕರ್ನಾಟಕಉಪಚುನಾವಣೆ ಭ್ರಷ್ಟ ಸರ್ಕಾರಕ್ಕೆ ಎಚ್ಚರಿಕೆ ಗಂಟೆ ಆಗಬೇಕು - ಸಿದ್ದರಾಮಯ್ಯ

ಉಪಚುನಾವಣೆ ಭ್ರಷ್ಟ ಸರ್ಕಾರಕ್ಕೆ ಎಚ್ಚರಿಕೆ ಗಂಟೆ ಆಗಬೇಕು – ಸಿದ್ದರಾಮಯ್ಯ

ಕೋವಿಡ್ ವಿಚಾರದಲ್ಲಿ ರಾಜ್ಯ ಸರ್ಕಾರ ಭ್ರಷ್ಟಾಚಾರ ನಡೆಸಿದೆ. ಪಿಪಿಇ ಕಿಟ್ ಸೇರಿದಂತೆ ಇತರೆ ಉಪಕರಣಗಳನ್ನು ಖರೀದಿಸುವಲ್ಲಿ ಸಾವಿರಾರು ಕೋಟಿ ಅವ್ಯವಹಾರ ನಡೆದಿದೆ ಎಂದು ಡಿಕೆ ಶಿವಕುಮಾರ್‌ ಆರೋಪಿಸಿದರು

- Advertisement -
- Advertisement -

ರಾಜ್ಯದಲ್ಲಿ ಜನವಿರೋಧಿ ನಿಷ್ಕ್ರಿಯ ಸರ್ಕಾರವಿದ್ದು ಹಣವನ್ನು ಲೂಟಿ ಮಾಡುತ್ತಿದೆ. ಇಂತಹ ಭ್ರಷ್ಟ ಸರ್ಕಾರಕ್ಕೆ ಉಪಚುನಾವಣೆ ಎಚ್ಚರಿಕೆ ನೀಡುವ ಗಂಟೆಯಾಗಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದರು.

ಶಿರಾದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಆರ್.ಆರ್.ನಗರ ಮತ್ತು ಶಿರಾ ಕ್ಷೇತ್ರಗಳ ಮತದಾರರು ರಾಜ್ಯದ ನಿಷ್ಕ್ರಿಯ ಸರ್ಕಾರದ ವಿರುದ್ಧ ಮತ ಚಲಾಯಿಸಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕೆಂದು ಮನವಿ ಮಾಡಿದರು.

ಇದನ್ನೂ ಓದಿ: ಉಪಚುನಾವಣೆ: 2 ವರ್ಷದಲ್ಲಿ BJP ಅಭ್ಯರ್ಥಿ ಮುನಿರತ್ನ ಆಸ್ತಿ ದುಪ್ಪಟ್ಟು!

ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ಕೋವಿಡ್ ಸೇರಿದಂತೆ ಎಲ್ಲದರಲ್ಲೂ ಹಣ ಕೊಳ್ಳೆಹೊಡೆಯುತ್ತಿದೆ. ಇಂತಹ ಸರ್ಕಾರ ಇರಬೇಕೆ ಎಂದು ಮತದಾರರನ್ನು ಕೇಳಿದರು. ಇದು ಸಾರ್ವತ್ರಿಕ ಚುನಾವಣೆಯಲ್ಲ, ಉಪಚುನಾವಣೆ. ಹಾಗಾಗಿ ಜನರು ಬಹಳ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು ಎಂದರು.

ಶಿರಾ ಕ್ಷೇತ್ರಕ್ಕೆ ಎರಡೂವರೆ ಸಾವಿರ ಕೋಟಿ ರೂ. ಅನುದಾನ ತಂದು ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದರು. ಆದರೆ ಚುನಾವಣೆಯಲ್ಲಿ ಜನತೆ ಸೋಲಿಸಿದ್ದರಿಂದ ಅಭಿವೃದ್ಧಿ ಅರ್ಧಕ್ಕೆ ಮೊಟಕುಗೊಂಡಿದೆ. ಕಂಠಿತವಾಗಿರುವ ಅಭಿವೃದ್ಧಿ ಕಾರ್ಯಗಳು ವೇಗ ಪಡೆಯಲು ಜಯಚಂದ್ರ ಅವರನ್ನು ಗೆಲ್ಲಿಸಬೇಕು ಎಂದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾತನಾಡಿ ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ದು ಜನರಲ್ಲಿ ಶಾಂತಿ, ನೆಮ್ಮದಿ ನೆಲೆಸುವಂತೆ ಮಾಡಿದ್ದೆವು. ಶಿರಾ ಕ್ಷೇತ್ರವೂ ಅಭಿವೃದ್ಧಿಯಲ್ಲಿ ಮುನ್ನಡೆ ಸಾಧಿಸಿತ್ತು. ಈ ಸರ್ಕಾರ ಬಂದ ಮೇಲೆ ಕ್ಷೇತ್ರದ ಅಭಿವೃದ್ದಿಯನ್ನು ಕಡೆಗಣಿಸಿದೆ ಎಂದು ಆರೋಪಿಸಿದರು.

ಇದನ್ನೂ ಓದಿ: ಪಕ್ಷಾಂತರದಿಂದ ಆರ್‌ಆರ್ ನಗರ ಉಪಚುನಾವಣೆ: ರಾಜಕೀಯ ದಿಕ್ಕು ಬದಲಿಸುತ್ತಾ?

ನಾಮಪತ್ರ ಸಲ್ಲಿಸಿದ ನಂತರ ಮಾತನಾಡಿದ ಟಿ.ಬಿ.ಜಯಚಂದ್ರ ಉಪಚುನಾವಣೆ ಬೇಕು ಎಂದು ಯಾರೂ ಬಯಸಿರಲಿಲ್ಲ. ಸತ್ಯನಾರಾಯಣ ಅವರೇ ಇದು ನನ್ನ ಕೊನೆ ಚುನಾವಣೆ ಎಂದು ಮತದಾರರಲ್ಲಿ ಮನವಿ ಮಾಡಿದ್ದರಿಂದ ನಾನು ಸೋಲಬೇಕಾಯಿತು. ಆದರೆ ಈ ಬಾರಿ ಶಿರಾ ಮತದಾರರ ಬಗ್ಗೆ ನನಗೆ ನಂಬಿಕೆ ಇದೆ ಎಂದರು.

ಕಳೆದ ಬಾರಿ ರಾಜ್ಯಕ್ಕೆ ಅಭಿವೃದ್ಧಿಶೀಲ ಸರ್ಕಾರವನ್ನು ಕೊಟ್ಟಿದ್ದೆವು. ಅಭಿವೃದ್ಧಿ ಹೇಗಿರುತ್ತದೆ ಎಂಬುದನ್ನು ಕಳೆದ ಕಾಂಗ್ರೆಸ್ ಸರ್ಕಾರದಲ್ಲಿ ಕೆಲಸ ಮಾಡುವ ಮೂಲಕ ತೋರಿಸಿದ್ದೇವೆ. ನಿರುದ್ಯೋಗ ಸಮಸ್ಯೆ, ಮಹಿಳೆಯರು, ವೃದ್ಧರು ಸೇರಿದಂತೆ ಎಲ್ಲ ವರ್ಗದವರಿಗೂ ವಿಶೇಷ ಒತ್ತು ನೀಡಿದ್ದೇವೆ ಎಂದು ಜನರಿಗೆ ತಿಳಿಸಿದರು.

ಕೋವಿಡ್ ವಿಚಾರದಲ್ಲಿ ರಾಜ್ಯ ಸರ್ಕಾರ ಭ್ರಷ್ಟಾಚಾರ ನಡೆಸಿದೆ. ಪಿಪಿಇ ಕಿಟ್ ಸೇರಿದಂತೆ ಇತರೆ ಉಪಕರಣಗಳನ್ನು ಖರೀದಿಸುವಲ್ಲಿ ಸಾವಿರಾರು ಕೋಟಿ ಅವ್ಯವಹಾರ ನಡೆದಿದೆ. ಈ ಬಗ್ಗೆ ನಾನು ಮತ್ತು ಸಿದ್ದರಾಮಯ್ಯ ಅವರು ಧ್ವನಿ ಎತ್ತಿದ್ದೇವೆ ಎಂದರು.

ಇದನ್ನೂ ಓದಿಳ: ಶಿರಾ ಉಪಚುನಾವಣೆ: ಪ್ರತಿಷ್ಠೆಯ ಜಿದ್ದಾಜಿದ್ದಿನಲ್ಲಿ ಯಾವ ಪಕ್ಷ ಮುಂದು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...