Homeಮುಖಪುಟಜಮ್ಮು ಕಾಶ್ಮೀರ: 370 ನೇ ವಿಧಿಯ ಮರುಸ್ಥಾಪನೆಗೆ ’ಪೀಪಲ್ಸ್ ಅಲಯನ್ಸ್’!

ಜಮ್ಮು ಕಾಶ್ಮೀರ: 370 ನೇ ವಿಧಿಯ ಮರುಸ್ಥಾಪನೆಗೆ ’ಪೀಪಲ್ಸ್ ಅಲಯನ್ಸ್’!

ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರಕ್ಷಿಸಲು ಮತ್ತು ಅದನ್ನು ದುರ್ಬಲಗೊಳಿಸುವ ಯಾವುದೇ ಹೆಜ್ಜೆಯ ವಿರುದ್ಧ ಹೋರಾಡಲು ಕಾಂಗ್ರೆಸ್ ಮತ್ತು ಪ್ರಾದೇಶಿಕ ಪಕ್ಷಗಳು ಸೇರಿ ’ಗುಪ್ಕರ್‌ ಡಿಕ್ಲರೇಷನ್’ ಅನ್ನು ಅಂಗೀಕರಿಸಿದ್ದವು.

- Advertisement -
- Advertisement -

ನ್ಯಾಷನಲ್ ಕಾನ್ಫರೆನ್ಸ್, ಪಿಡಿಪಿ, ಪೀಪಲ್ಸ್ ಕಾನ್ಫರೆನ್ಸ್, ಪೀಪಲ್ಸ್ ಮೂವ್‌ಮೆಂಟ್‌ ಹಾಗೂ ಸಿಪಿಐಎಂ ಸೇರಿದಂತೆ ಜಮ್ಮು ಕಾಶ್ಮೀರದ ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ಕಾಶ್ಮೀರದಲ್ಲಿ ಮತ್ತೇ 370 ರ ವಿಧಿ ಮರುಸ್ಥಾಪನೆ ಬೇಕಾಗಿ ಒಂದಾಗಿದ್ದಾರೆ. ಅಲ್ಲದೆ ತಮ್ಮ ಮೈತ್ರಿ ಕೂಟಕ್ಕೆ ’ಪೀಪಲ್ಸ್ ಅಲಯನ್ಸ್ ಫಾರ್‌ ಗುಪ್ಕರ್‌ ಡಿಕ್ಲರೇಷನ್’ ಎಂದು ಹೆಸರಿಟ್ಟಿದ್ದಾರೆ.

ನಿನ್ನೆ ಸಂಜೆ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ನಿವಾಸದಲ್ಲಿ ಸಭೆ ನಡೆದಿದ್ದು, ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ, ಪೀಪಲ್ಸ್ ಕಾನ್ಫರೆನ್ಸ್ ಅಧ್ಯಕ್ಷ ಸಜಾದ್ ಲೋನ್, ಪೀಪಲ್ಸ್ ಮೂವ್ಮೆಂಟ್ ನಾಯಕ ಜಾವೈದ್ ಮಿರ್ ಮತ್ತು ಸಿಪಿಐಎಂ ಮುಖಂಡ ಮೊಹಮ್ಮದ್ ಯೂಸುಫ್ ತರಿಗಾಮಿ ಸಭೆಯಲ್ಲಿ ಹಾಜರಿದ್ದರು. ಮೆಹಬೂಬಾ ಮುಫ್ತಿಯನ್ನು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಕಿತ್ತು ಹಾಕಿದ ಬೆನ್ನಿಗೆ ಬಂಧಿಸಲಾಗಿತ್ತು, ಮಂಗಳವಾರ ಬಿಡುಗಡೆಗೊಳಿಸಲಾಗಿದೆ. ಫಾರೂಕ್ ಅಬ್ದುಲ್ಲಾ ಅವರನ್ನು ಮಾರ್ಚ್‌ನಲ್ಲಿ ಬಿಡುಗಡೆಗೊಳಿಸಲಾಗಿತ್ತು.

ಇದನ್ನೂ ಓದಿ: ಜಮ್ಮು-ಕಾಶ್ಮೀರದಲ್ಲಿ ಯಾರನ್ನೂ ಗೃಹಬಂಧನದಲ್ಲಿಟ್ಟಿಲ್ಲ ಎಂದು ಅಮಿತ್ ಶಾ ಸುಳ್ಳು ಹೇಳಿದ್ದಾರೆ: ಪ್ರೊ.ಸೈಫುದ್ದೀನ್ ಸೋಜ್

“ನಮ್ಮದು ಸಾಂವಿಧಾನಿಕ ಹೋರಾಟವಾಗಿದ್ದು, 2019 ರ ಆಗಸ್ಟ್ 5 ಕ್ಕೆ ಮುನ್ನ ರಾಜ್ಯದ ಜನರು ಹೊಂದಿದ್ದ ಹಕ್ಕುಗಳನ್ನು ಸರಕಾರವು ಮರಳಿಸಬೇಕು” ಎಂದು ಅವರು ಫಾರೂಕ್ ಅಬ್ದುಲ್ಲಾ ಸ್ಪಷ್ಟಪಡಿಸಿದ್ದಾರೆ.

ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರಕ್ಷಿಸಲು ಮತ್ತು ಅದನ್ನು ದುರ್ಬಲಗೊಳಿಸುವ ಯಾವುದೇ ಹೆಜ್ಜೆಯ ವಿರುದ್ಧ ಹೋರಾಡಲು ಕಾಂಗ್ರೆಸ್ ಮತ್ತು ಪ್ರಾದೇಶಿಕ ಪಕ್ಷಗಳು ಸೇರಿ ”ಗುಪ್ಕರ್‌ ಡಿಕ್ಲರೇಷನ್” ಅನ್ನು ಅಂಗೀಕರಿಸಿದ್ದವು. 2019 ಆಗಸ್ಟ್ 4 ರಂದು ಫಾರೂಕ್ ಅಬ್ದುಲ್ಲಾ ಅವರ ಗುಪ್ಕರ್ ರೋಡ್ ನಿವಾಸದಲ್ಲಿ ”ಗುಪ್ಕರ್ ಘೋಷಣೆ’’ಗೆ ಸಹಿ ಹಾಕಲಾಗಿತ್ತು.

ಇದನ್ನೂ ಓದಿ: ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಒಂದುಗೂಡಿದ ಆರು ಪಕ್ಷಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...