ಜಿಎಸ್‌ಟಿ ಜಾರಿಯಿಂದಾಗಿ ರಾಜ್ಯ ಸರ್ಕಾರಗಳಿಗೆ ಉಂಟಾಗಿರುವ ಆದಾಯ ನಷ್ಟವನ್ನು ಸರಿದೂಗಿಸಲು 1.1 ಲಕ್ಷ ಕೋಟಿ ರೂ. ಸಾಲ ಪಡೆಯಲು ಕೇಂದ್ರ ಸರ್ಕಾರ ಒಪ್ಪಿಕೊಂಡಿದೆ. ಇದರ ಬಗ್ಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಾಜ್ಯಗಳಿಗೆ ಪತ್ರವನ್ನು ಬರೆದ್ದಾರೆ.
ಜಿಎಸ್‌ಟಿ ಪರಿಹಾರ ನೀಡಲು ಹಣಕಾಸಿನ ಕೊರತೆಯಿದೆ ಎಂದಿದ್ದ ಕೇಂದ್ರವು, ರಾಜ್ಯ ಸರ್ಕಾರಗಳಿಗೆ ಮಾರುಕಟ್ಟೆ ಸಾಲಗಳನ್ನು ಪಡೆಯಲು ಸೂಚಿಸಿದ್ದವು. ಇದಕ್ಕೆ ಕರ್ನಾಟಕ ಸೇರಿದಂತೆ ಬಿಜೆಪಿ ಆಡಳಿತದ ರಾಜ್ಯಗಳು ಒಪ್ಪಿತ್ತಾದರೂ, ಬಿಜೆಪಿಯೇತರ ಆಡಳಿತವಿರುವ ರಾಜ್ಯಗಳು ಅಸಮಧಾನಗೊಂಡಿದ್ದವು. ಇದೀಗ ತನ್ನ ನಿರ್ಧಾರವನ್ನು ಬದಲಿಸಿರುವ ಕೇಂದ್ರವು, ರಾಜ್ಯ ಸರಕಾರಗಳ ನಡುವಿನ ಬಿಕ್ಕಟ್ಟನ್ನು ಶಮನಗೊಳಿಸಲು ಪ್ರಯತ್ನಿಸಿದೆ.
ಇದನ್ನೂ ಓದಿ: ಜಿಎಸ್‌ಟಿ ಪಾಲು ನೀಡುವಂತೆ ಒತ್ತಾಯಿಸಿ ವಿಪಕ್ಷಗಳ ಪ್ರತಿಭಟನೆ
ಪ್ರಸ್ತುತ ಕೇಂದ್ರ ಸರಕಾರವು ರಾಜ್ಯಗಳಿಗೆ ಅನುದಾನ ಸೆಸ್ ಬಿಡುಗಡೆಯಡಿ ನೀಡಲಿದೆ. ಹಾಗಾಗಿ ಕೇಂದ್ರ ಸರಕಾರವು ಸಾಲದ ಹಣವನ್ನು ರಾಜ್ಯಗಳಿಗೆ ನೀಡುವ ಅನುದಾನದ ರೂಪದಲ್ಲಿ ತೋರಿಸಲಿದೆ.
ಸಮಸ್ಯೆಯನ್ನು ಬಗೆಹರಿಸಲು ರಚನಾತ್ಮಕ ಸಹಕಾರವನ್ನು ನೀಡಿರುವುದಕ್ಕಾಗಿ ರಾಜ್ಯಗಳಿಗೆ ಕೃತಜ್ಞತೆ ಸಲ್ಲಿಸಿರುವ ನಿರ್ಮಲಾ ಸೀತಾರಾಮನ್, “ಕೇಂದ್ರ ಸರಕಾರ ಕಂತುಗಳಲ್ಲಿ ಅಗತ್ಯವಿರುವ ಸಾಲವನ್ನು ಪಡೆದುಕೊಳ್ಳಲಿವೆ ಹಾಗೂ ಅದನ್ನು ರಾಜ್ಯಗಳಿಗೆ ಒಂದಾದ ಬಳಿಕ ಒಂದರಂತೆ ಸಾಲಗಳನ್ನು ವರ್ಗಾಯಿಸಲಿವೆ. ಇದರಿಂದಾಗಿ ಸಮನ್ವಯತೆ ಹಾಗೂ ಸರಳವಾದ ಸಾಲ ದೊರೆಯುವಿಕೆ ಸಾಧ್ಯವಾಗಲಿದೆ. ಅಷ್ಟೇ ಅಲ್ಲದೆ ಅನುಕೂಲಕರವಾದ ಬಡ್ಡಿದರವೂ ಕೂಡಾ ಲಭ್ಯವಾಗಲಿದೆ” ಎಂದು ಹೇಳಿದ್ದಾರೆ.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ತೆಲಂಗಾಣದ ಹಣಕಾಸು ಸಚಿವ ಟಿ. ಹರೀಶ್ ರಾವ್, ಸಾಲದ ಹಣವನ್ನು ಅನುದಾನದ ರೂಪದಲ್ಲಿ ತೋರಿಸುವುದರಿಂದ ರಾಜ್ಯದ ಬೊಕ್ಕಸಕ್ಕೆ ಹೊರೆಯಾಗಲಿದೆ ಎಂದು ಹೇಳಿದ್ದಾರೆ. ಕೇರಳದ ಹಣಕಾಸು ಸಚಿವ ಥಾಮಸ್ ಐಸಾಕ್ ಕೂಡಾ ಅಸಮಧಾನ ವ್ಯಕ್ತಪಡಿಸಿದ್ದು, ”2023ರಲ್ಲಿ ರಾಜ್ಯಗಳಿಗೆ ಎಷ್ಟು ಜಿಎಸ್‌ಟಿ ಪರಿಹಾರ ನೀಡಲಾಗುವುದೆಂಬ ಬಗ್ಗೆ ಕೇಂದ್ರ ಸರಕಾರ ಸ್ಪಷ್ಟನೆ ನೀಡಬೇಕು” ಎಂದು ಕೇಳಿದ್ದಾರೆ.
ಇದನ್ನೂ ಓದಿ: ಜೆಪಿ ಐಟಿಸೆಲ್‌ನ ನಿಜಸ್ವರೂಪ ಬಿಚ್ಚಿಡುತ್ತಿರುವ ನೆಟ್ಟಿಗರು


