Homeಮುಖಪುಟಮಹಾರಾಷ್ಟ್ರ ರಾಜ್ಯಪಾಲರ ಮಾತಿನಲ್ಲಿ ನಿಯಂತ್ರಣ ಇರಬೇಕಿತ್ತು: ಅಮಿತ್ ಶಾ!

ಮಹಾರಾಷ್ಟ್ರ ರಾಜ್ಯಪಾಲರ ಮಾತಿನಲ್ಲಿ ನಿಯಂತ್ರಣ ಇರಬೇಕಿತ್ತು: ಅಮಿತ್ ಶಾ!

ಪೂಜಾ ಸ್ಥಳಗಳನ್ನು ಪುನಃ ತೆರೆಯುವುದನ್ನು ಮುಂದೂಡಲು ನೀವು ಯಾವುದಾದರೂ ದೈವಿಕ ಮುನ್ಸೂಚನೆಯನ್ನು ಸ್ವೀಕರಿಸಿದ್ದೀರಾ ಅಥವಾ ನೀವು ಜಾತ್ಯತೀತರಾಗಿ ಪರಿವರ್ತನೆಗೊಂಡಿದ್ದೀರಾ ಎಂದು ರಾಜ್ಯಪಾಲರು ಉದ್ಧವ್‌ಗೆ ಪತ್ರ ಬರೆದಿದ್ದರು.

- Advertisement -
- Advertisement -

ಕೊರೊನಾ ವೈರಸ್ ಸಾಂಕ್ರಾಮಿಕದ ಮಧ್ಯೆ ಪೂಜಾ ಸ್ಥಳಗಳನ್ನು ಪುನಃ ತೆರೆಯುವ ಕುರಿತು ಮಹಾರಾಷ್ಟ್ರ ಗವರ್ನರ್ ಭಗತ್ ಸಿಂಗ್ ಕೊಶ್ಯರಿ, ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಬರೆದ ಪತ್ರವನ್ನು ಅಮಿತ್ ಶಾ ಉಲ್ಲೇಖೀಸಿ, “ನಿಮ್ಮ ಮಾತುಗಳ ಮೇಲೆ ನಿಯಂತ್ರಣ ಇರಬೇಕಿತ್ತು” ಎಂದು ಹೇಳಿದ್ದಾರೆ.

ಮಹಾರಾಷ್ಟ್ರ ರಾಜ್ಯಪಾಲರು ಸೋಮವಾರ ಉದ್ಧವ್ ಠಾಕ್ರೆಗೆ ಬರೆದ ಪತ್ರದಲ್ಲಿ, ರಾಜ್ಯದ ಧಾರ್ಮಿಕ ಸ್ಥಳಗಳನ್ನು ಮುಚ್ಚುವ ನಿರ್ಧಾರವನ್ನು ಪ್ರಶ್ನಿಸಿದ್ದು, “ನಮ್ಮ ದೇವರುಗಳು ಮತ್ತು ದೇವತೆಗಳನ್ನು ಲಾಕ್‌ಡೌನ್‌ನಲ್ಲಿಡುವ ನಿರ್ಧಾರಕ್ಕೆ ನನ್ನ ಖಂಡನೆಯಿದೆ. ಬಾರ್ ಮತ್ತು ರೆಸ್ಟೋರೆಂಟ್‌ಗಳನ್ನು ತೆರೆಯಲು ಅವಕಾಶ ನೀಡಿರುವುದು ವಿಪರ್ಯಾಸ. ಪೂಜಾ ಸ್ಥಳಗಳನ್ನು ಪುನಃ ತೆರೆಯುವುದನ್ನು ಮುಂದೂಡಲು ನೀವು ಯಾವುದಾದರೂ ದೈವಿಕ ಮುನ್ಸೂಚನೆಯನ್ನು ಸ್ವೀಕರಿಸಿದ್ದೀರಾ ಅಥವಾ ನೀವು ದ್ವೇಷಿಸುತ್ತಿದ್ದ ಪದವಾದ “ಜಾತ್ಯತೀತ”ವಾಗಿಯೇ ಪರಿವರ್ತನೆಗೊಂಡಿದ್ದೀರಾ ಎಂದು ನನಗೆ ಆಶ್ಚರ್ಯವಾಗುತ್ತಿದೆ” ಎಂದು ಹೇಳಿದ್ದರು.

ಇದನ್ನೂ ಓದಿ: ’ನೀವು ಜಾತ್ಯಾತೀತರಾದಿರಾ?’; ಮಹಾ ಮುಖ್ಯಮಂತ್ರಿಗೆ ರಾಜ್ಯಪಾಲರ ಪ್ರಶ್ನೆ- ಶರದ್ ಪವಾರ್ ಆಕ್ರೋಶ

ಇದರ ಕುರಿತು ಪ್ರತಿಕ್ರಿಯಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, “ಅವರಿಗೆ ಆ ನಿರ್ಧಿಷ್ಟ ಪದಗಳ ಮೇಲೆ ನಿಯಂತ್ರಣ ಇರಬೇಕಿತ್ತು” ಎಂದು ಹೇಳಿದ್ದಾರೆ.

ರಾಜ್ಯಪಾಲರ ಈ ಹೇಳಿಕೆಗೆ ಪ್ರತಿಯಾಗಿ ಉದ್ಧವ್ ಠಾಕ್ರೆ, “ಹಿಂದುತ್ವದ ಪ್ರಮಾಣಪತ್ರವನ್ನು ನಾವು ಯಾರಿಂದಲೂ ಪಡೆದುಕೊಳ್ಳಬೆಕಾಗಿಲ್ಲ” ಎಂದು ಖಾರವಾಗಿ ಹೇಳಿದ್ದರು.

ಅಕ್ಟೋಬರ್ 5 ರಿಂದ ರಾಜ್ಯದಲ್ಲಿ ಬಾರ್ ಮತ್ತು ರೆಸ್ಟೋರೆಂಟ್‌ಗಳು 50% ಗ್ರಾಹಕರಿಗೆ ಮಾತ್ರ ಅವಕಾಶ ನೀಡಿ ಕಾರ್ಯನಿರ್ವಹಿಸಲು ಮಹಾರಾಷ್ಟ್ರ ಸರ್ಕಾರ ಅನುಮತಿ ನೀಡಿದೆ.

ಇದನ್ನೂ ಓದಿ: ಮಹಾರಾಷ್ಟ್ರ ಸರ್ಕಾರ ಗಟ್ಟಿಯಾಗಿದೆ : ಸುಳ್ಳು ಹರಡುತ್ತಿರುವವರಿಗೆ ಹೊಟ್ಟೆ ನೋವು- ಶಿವಸೇನೆ

ಈ ಹಿಂದೆ ಹೊರಾಂಗಣ ಕ್ರೀಡಾ ಚಟುವಟಿಕೆಗಳು, ಎಲ್ಲಾ ಅನಿವಾರ್ಯವಲ್ಲದ ಅಂಗಡಿಗಳು ಮತ್ತು ಅಂತರ ಜಿಲ್ಲೆಗಳ ಪ್ರಯಾಣವನ್ನು ನಿರ್ಬಂಧಗಳಿಲ್ಲದೆ ಪುನಃ ಪ್ರಾರಂಭಿಸಲು ಅನುಮತಿ ನೀಡಿತ್ತು. ಆದಾಗ್ಯೂ, ಪೂಜಾ ಸ್ಥಳಗಳನ್ನು ಮತ್ತೆ ತೆರೆಯಲು ಅನುಮತಿಸದಿರಲು ಜನದಟ್ಟಣೆ ಕಾರಣ ಎಂದು ಸರ್ಕಾರ ಉಲ್ಲೇಖಿಸಿದೆ.

ಭಾರತದ ಎಲ್ಲ ರಾಜ್ಯಗಳಲ್ಲಿ ಪೈಕಿ ಅತಿ ಹೆಚ್ಚು ಕೊರೊನಾ ವೈರಸ್ ಪ್ರಕರಣಗಳು ಮಹಾರಾಷ್ಟ್ರದಲ್ಲಿವೆ.

ಇಂದು 10,259 ಹೊಸ ಪ್ರಕರಣಗಳು ದಾಖಲಾಗುವುದರೊಂದಿಗೆ ರಾಜ್ಯದ ಒಟ್ಟು ಪ್ರಕರಣಗಳ ಸಂಖ್ಯೆ, 15,86,321 ಆಗಿದೆ. 1,58,750 ಸಕ್ರಿಯ ಪ್ರಕರಣಗಳಿದ್ದು, 13,58,606 ಸೋಂಕಿತರು ಚೇತರಿಸಿಕೊಂಡಿದ್ದಾರೆ. ಇದುವರೆಗೂ 41,965 ಜನ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.


ಇದನ್ನೂ ಓದಿ: ಸಮಾನಾಂತರ ಆಡಳಿತ ಅನಗತ್ಯ: ಮಹಾರಾಷ್ಟ್ರ ರಾಜ್ಯಪಾಲರನ್ನು ತರಾಟೆ ತೆಗೆದುಕೊಂಡ ಶಿವಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಾಂಕ್ರಾಮಿಕ (ಸಂಸ್ಕ್ರುತ)>ಸೋಂಕು (ಕನ್ನಡ)
    ಪುನಃ(ಸಂಸ್ಕ್ರುತ)_ಮರು
    ನಿಯಂತ್ರಣ… ಕಡಿವಾಣ,ಅಂಕೆ
    ಸ್ಥಳ…ನೆಲೆ
    ದ್ವೇಷ.. ಹಗೆತನ
    ಕ್ರೀಡೆ…ಆಟ
    ಕ್ರೀಡಾ…ಆಟೋಟ

LEAVE A REPLY

Please enter your comment!
Please enter your name here

- Advertisment -

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...