Homeಮುಖಪುಟಅ.21 ರವರೆಗೂ ಮಹಾಮಳೆ: ಹೈದರಾಬಾದ್‌ನಲ್ಲಿ ಪ್ರವಾಹ ಪರಿಸ್ಥಿತಿ ಗಂಭೀರ!

ಅ.21 ರವರೆಗೂ ಮಹಾಮಳೆ: ಹೈದರಾಬಾದ್‌ನಲ್ಲಿ ಪ್ರವಾಹ ಪರಿಸ್ಥಿತಿ ಗಂಭೀರ!

ತೆಲಂಗಾಣದಲ್ಲಿ ಅಕ್ಟೋಬರ್​ 17ರಿಂದ 21ರವರೆಗೆ ಗುಡುಗು ಸಿಡಿಲು ಸಹಿತ ಧಾರಾಕಾರ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

- Advertisement -
- Advertisement -

ಮಹಾಮಳೆಯಿಂದ ಪ್ರವಾಹಕ್ಕೆ ಒಳಗಾಗಿರುವ ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ ಮತ್ತು ಕರ್ನಾಟಕ ರಾಜ್ಯಗಳು ತತ್ತರಿಸಿವೆ. ಇವುಗಳ ನಡುವೆ ಹೈದರಾಬಾದ್‌ನಲ್ಲಿ ಪ್ರವಾಹ ಪರಿಸ್ಥಿತಿ ಗಂಭೀರವಾಗಿದೆ. ರಾತ್ರಿಯಿಡೀ ಸುರಿದ ಭಾರಿ ಮಳೆಯಿಂದಾಗಿ ಹೈದರಾಬಾದ್‌ನ ಹಲವಾರು ಭಾಗಗಳು ಪ್ರವಾಹಕ್ಕೆ ಸಿಲುಕಿದ್ದವು.

ಹೈದರಾಬಾದ್‌ನಲ್ಲಿ ಕಳೆದ ರಾತ್ರಿ ಬಾಲನಗರ ಕೆರೆ ಕೋಡಿ ಒಡೆದಿದ್ದು, ಹತ್ತಿರದ ಪ್ರದೇಶಗಳಲ್ಲಿ ಭಾರಿ ಪ್ರಮಾಣದ ಪ್ರವಾಹ ಉಂಟಾಗಿದೆ. ಬೀದಿಗಳಲ್ಲಿ ಕೆರೆ ನೀರು ನುಗ್ಗಿದ್ದರಿಂದ ವಾಹನಗಳು ಕೊಚ್ಚಿಹೋಗಿದ ದೃಶ್ಯಗಳು ಕಂಡು ಬಂದವು.

ಮಳೆಯ ಪರಿಣಾಮ ನಗರದಲ್ಲಿ ಟ್ರಾಫಿಕ್‌ ಜಾಮ್‌ ಉಂಟಾಗಿ ವಾಹನ ಸವಾರರು ಪರದಾಡಿದ್ದಾರೆ. ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿದ ಪರಿಣಾಮ ಅಲ್ಲಿ ವಾಸವಿದ್ದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಹೈದರಾಬಾದ್‌ ಮಹಾನಗರ ಪಾಲಿಕೆ(ಜಿಎಚ್‌ಎಂಸಿ) ಸಿಬ್ಬಂದಿ ತಿಳಿಸಿದ್ದಾರೆ.

ಇದನ್ನೂ ಓದಿ: ಭಾರೀ ಮಳೆ: ಕರ್ನಾಟಕ, ಮಹಾರಾಷ್ಟ್ರ ಮತ್ತು ತೆಲಂಗಾಣದಲ್ಲಿ 83 ಜನರು ಬಲಿ!

ಮಳೆಯಿಂದಾಗಿ ಪಿವಿಎನ್ಆರ್ ಎಕ್ಸ್‌ಪ್ರೆಸ್‌ ವೇ ಇಂದ ವಿಮಾನ ನಿಲ್ದಾಣದ ಕಡೆಗೆ ಹಳೆಯ ಕರ್ನೂಲ್ ರಸ್ತೆಯ ಮೇಲೆ ನೀರು ಹರಿಯುತ್ತಿದೆ.  ಪರಿಸ್ಥಿತಿ ಹೀಗಿರುವಾಗ ವಿಮಾನ ನಿಲ್ದಾಣ, ಬೆಂಗಳೂರು ಕಡೆಗೆ ಸಂಚರಿಸುವ ಎಲ್ಲಾ ಸಾರ್ವಜನಿಕರಿಗೆ ಹೊರಗಿನ ರಿಂಗ್ ರಸ್ತೆಯನ್ನು ಬಳಸಲು ಶಮ್‌ಶಾಬಾದ್‌ನ ಡಿಸಿಪಿ ಪ್ರಕಾಶ್ ರೆಡ್ಡಿ ತಿಳಿಸಿದ್ದಾರೆ.

ನಗರದ ಕೆಲವು ಪ್ರದೇಶಗಳಲ್ಲಿ ದಿನವಿಡೀ 150 ಮಿ.ಮೀ ಗಿಂತ ಹೆಚ್ಚು ಮಳೆಯಾಗಿದೆ. ಆದರೆ ರಾತ್ರಿ ಮತ್ತೆ 170 ಮಿ.ಮೀಟರ್‌ನಷ್ಟು ಮಳೆ ಸುರಿದಿದೆ. ರಾತ್ರಿ ಸಾಕಷ್ಟು ಅವಘಡಗಳು ಸಂಭವಿಸಿದ್ದು, ಯಾವುದೇ ಪ್ರಾಣಹಾನಿಯಾದ ಬಗ್ಗೆ ವರದಿಯಾಗಿಲ್ಲ.

ಹೈದರಾಬಾದ್‌ನಲ್ಲಿ ಮಳೆಯಿಂದಾಗಿ ಈ ವಾರದಲ್ಲಿ 50 ಜನರು ಮೃತಪಟ್ಟಿದ್ದಾರೆ. ಸುಮಾರು, 6,000 ಕೋಟಿ ಮೌಲ್ಯದ ಆಸ್ತಿ-ಪಾಸ್ತಿಗಳು ನಷ್ಟವಾಗಿದೆ ಎಂದು ತೆಲಂಗಾಣ ಸರ್ಕಾರ ತಿಳಿಸಿತ್ತು. ಎನ್‌ಡಿಆರ್‌ಎಫ್‌ ಹಾಗೂ ಪಾಲಿಕೆ ಸಿಬ್ಬಂದಿಗಳನ್ನು ರಕ್ಷಣ ಕಾರ್ಯಾಚರಣೆಗೆ ನಿಯೋಜಿಸಲಾಗಿದೆ ಎಂದು ಸರ್ಕಾರದ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ತೆಲಂಗಾಣ, ಆಂಧ್ರದಲ್ಲಿ ಭಾರಿ ಮಳೆ: ಕಾಂಪೌಂಡ್ ಕುಸಿದು 2 ತಿಂಗಳ ಮಗು ಸೇರಿ 9 ಮಂದಿ ದುರ್ಮರಣ

ತೆಲಂಗಾಣದಲ್ಲಿ ಇನ್ನೂ ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಕ್ಟೋಬರ್​ 17ರಿಂದ 21ರವರೆಗೆ ಗುಡುಗು ಸಿಡಿಲು ಸಹಿತ ಧಾರಾಕಾರ ಮಳೆ ಸುರಿಯಲಿದೆ ಎಂದು ಹೇಳಿದೆ.

ಪ್ರವಾಹದಿಂದ ತೆಲಂಗಾಣ ಹೆಚ್ಚು ಹಾನಿಗೊಳಗಾಗಿದ್ದರೆ, ಮಳೆ ನೆರೆಯ ರಾಜ್ಯಗಳಾದ ಆಂಧ್ರಪ್ರದೇಶ ಮತ್ತು ಕರ್ನಾಟಕದ ಮೇಲೂ ಸಹ ಪರಿಣಾಮ ಬೀರಿವೆ.


ಇದನ್ನೂ ಓದಿ: ಪ್ರವಾಹ ಭೀತಿ: ರೈತರಿಗೆ ತೊಂದರೆಯಾಗದಂತೆ ನೋಡಿಕೊಳ್ಳುತ್ತೇವೆ- ಸಿಎಂ ಯಡಿಯೂರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...