Homeಕರ್ನಾಟಕಜೆಡಿಎಸ್‌ ಮುಗಿಸುವುದೇ ಕಾಂಗ್ರೆಸ್‌ ನಾಯಕರ ಉದ್ದೇಶ: ಎಚ್‌.ಡಿ ಕುಮಾರಸ್ವಾಮಿ

ಜೆಡಿಎಸ್‌ ಮುಗಿಸುವುದೇ ಕಾಂಗ್ರೆಸ್‌ ನಾಯಕರ ಉದ್ದೇಶ: ಎಚ್‌.ಡಿ ಕುಮಾರಸ್ವಾಮಿ

ಸಿದ್ದರಾಮಯ್ಯ ಅವರು ಜೆಡಿಎಸ್‌ ಎಲ್ಲಿದೆ ಎಂದು ಪ್ರಶ್ನಿಸುತ್ತಾರೆ. ಜೆಡಿಎಸ್ ಎಲ್ಲಿದೆ ಎಂದು ಈಗಾಗಲೇ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ತೋರಿಸಿದ್ದೇವೆ- ಟಿ.ಎ.ಶರವಣ್

- Advertisement -
- Advertisement -

ಜೆಡಿಎಸ್‌ ಮುಗಿಸಬೇಕು ಎಂಬುದೇ ಕಾಂಗ್ರೆಸ್‌ ಲೀಡರ್‌ಗಳ ಅಜೆಂಡಾ ಆಗಿದೆ. ಅದು ಆಕ್ರೋಶವೋ, ಭಯವೋ ಗೊತ್ತಿಲ್ಲ. ಬಿಜೆಪಿಗಿಂತ ಜೆಡಿಎಸ್‌ ಮೇಲೆಯೇ ಅವರಿಗೆ ಹೆಚ್ಚು ಸಿಟ್ಟಿದೆ ಎಂದು ಕಾಂಗ್ರೆಸ್‌ ನಾಯಕರ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ರಾಜರಾಜೇಶ್ವರಿ ನಗರ ಉಪಚುನಾವಣೆ ಹಿನ್ನೆಲೆಯಲ್ಲಿ ಲಗ್ಗೆರೆಯಲ್ಲಿ ಜೆಡಿಎಸ್‌ ಅಭ್ಯರ್ಥಿ ವಿ.ಕೃಷ್ಣಮೂರ್ತಿ ಪರ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, “ಬಿಜೆಪಿ ಹಾಗೂ ಬಿಜೆಪಿ ಅಭ್ಯರ್ಥಿ ಬಗ್ಗೆ ಕುಮಾರಸ್ವಾಮಿ ಸಾಫ್ಟ್‌ಕಾರ್ನರ್‌ ಹೊಂದಿದ್ದಾರೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ, ಅದೆಲ್ಲಾ ಸುಳ್ಳು ಜನರ ಹಣ ಲೂಟಿ ಹೊಡೆಯೋರನ್ನು ಟೀಕಿಸದೇ ಬಿಡುವುದಿಲ್ಲ” ಎಂದಿದ್ದಾರೆ.

250 ಕೋಟಿ ರೂ. ಕಳ್ಳ ಬಿಲ್ ಮಾಡಿ ಹಣ ಗುಳುಂ ಮಾಡಿದ್ದಾರೆ. ಬೆವರು ಸುರಿಸಿ ದುಡಿದ ಹಣದಲ್ಲಿ ನಮ್ಮ ಅಭ್ಯರ್ಥಿ ಕೃಷ್ಣಮೂರ್ತಿ ಕೊರೊನಾ ಸಮಯದಲ್ಲಿ ಜನಕ್ಕೆ ಸಹಾಯ ಮಾಡಿದ್ದಾರೆ. ಆದರೆ, ಜನರ ಪಾಪದ ಹಣದಲ್ಲಿ ಬಿಜೆಪಿ ಅಭ್ಯರ್ಥಿ ಫುಡ್‌ಕಿಟ್‌ ನೀಡಿದ್ದಾರೆ ಎಂದು ಮುನಿರತ್ನ ವಿರುದ್ಧ ಸಹ ವಾಗ್ದಾಳಿ ನಡೆಸಿದರು.

ಪ್ರಧಾನಿ ಮೋದಿ ನಮ್ಮ ಮುಖ್ಯಮಂತ್ರಿ ಜೊತೆ ಮಾತನಾಡಲು ಸಮಯ ನೀಡುತ್ತಿಲ್ಲ. ಈ ರೀತಿ ರಾಷ್ಟ್ರೀಯ ಪಕ್ಷಗಳು ರಾಜ್ಯಕ್ಕೆ ಅವಮಾನ ಮಾಡುತ್ತಿವೆ. ಕನ್ನಡಿಗರ ಸ್ವಾಭಿಮಾನ, ಗೌರವ ಉಳಿಸಲು ಈ ಚುನಾವಣೆ ಮೂಲಕ ರಾಷ್ಟ್ರೀಯ ಪಕ್ಷಗಳಿಗೆ ಉತ್ತರ ನೀಡಿ ಎಂದು ಮತದಾರದಲ್ಲಿ ಮನವಿ ಮಾಡಿದರು.

ಆರು ವರ್ಷದಲ್ಲಿ ಪ್ರಧಾನಿ ಮೋದಿ ಅವರಿಂದ ದೇಶ ಚೀನಾ ವಿರುದ್ಧ ಸ್ಪರ್ಧೆ ಮಾಡುವುದು ಇರಲಿ, ಬಾಂಗ್ಲಾದೇಶದ ಜೊತೆ ಸ್ಪರ್ಧೆ ಮಾಡಬೇಕಾದ ಸನ್ನಿವೇಶ ಸೃಷ್ಟಿಯಾಗಿದೆ. ದಿನಕ್ಕೆ ಮೂರು ನಾಲ್ಕು ಡ್ರೆಸ್‌ ಹಾಕಿಕೊಂಡು ಚೆನ್ನಾಗಿ ಕಾಣುವುದೇ ಮೋದಿ ಅವರ ಸಾಧನೆಯಾಗಿದೆ ಎಂದು ವ್ಯಂಗ್ಯವಾಡಿದರು.

ಇಲ್ಲಿ ಕೃಷ್ಣಮೂರ್ತಿ ಅಭ್ಯರ್ಥಿಯಲ್ಲ, ಕಾರ್ಯಕರ್ತರೇ ಅಭ್ಯರ್ಥಿಗಳು. ಅವರನ್ನು ಗೆಲ್ಲಿಸುವ ಮೂಲಕ ಜೆಡಿಎಸ್‌ ಸಮಾಧಿ ಮಾಡುತ್ತೇವೆ ಎಂದವರಿಗೆ ಉತ್ತರ ನೀಡಿ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಮಾಜಿ ಪರಿಷತ್‌ ಸದಸ್ಯ ಟಿ.ಎ.ಶರವಣ್‌ ಮಾತನಾಡಿ, ಬಿಜೆಪಿ ಅಭ್ಯರ್ಥಿ ಮುನಿರತ್ನ ಅಲ್ಲ, ‘ಮನಿ’ರತ್ನ ಆಗಿದ್ದಾರೆ. ಸಿದ್ದರಾಮಯ್ಯ ಅವರು ಜೆಡಿಎಸ್‌ ಎಲ್ಲಿದೆ ಎಂದು ಪ್ರಶ್ನಿಸುತ್ತಾರೆ. ಜೆಡಿಎಸ್ ಎಲ್ಲಿದೆ ಎಂದು ಈಗಾಗಲೇ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ತೋರಿಸಿದ್ದೇವೆ. ಎಷ್ಟು ಬಾರಿ ನಿಮಗೆ ಜೆಡಿಎಸ್ ಎಲ್ಲಿದೆ ಎಂದು ತೋರಿಸಬೇಕು ಎಂದು ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದರು.

ಜೆಡಿಎಸ್‌ ಅಭ್ಯರ್ಥಿ ಕೃಷ್ಣಮೂರ್ತಿ ಮಾತನಾಡಿ, ತಮ್ಮ ಲೋಪಗಳನ್ನು ಮುಚ್ಚಿಕೊಳ್ಳಲು ಮುನಿರತ್ನ‌ ಅವರು ಬಿಜೆಪಿಗೆ ಹೋಗಿದ್ದಾರೆ. ಹನುಮಂತರಾಯಪ್ಪನವರಿಗೆ ಜೆಡಿಎಸ್ ಎದುರು ನಿಲ್ಲಲು ಧೈರ್ಯ ಇಲ್ಲ. ನಮ್ಮ ಪಕ್ಷದ ನಾಯಕರನ್ನು ಸೆಳೆಯುವ ಕೆಲಸವನ್ನು ಕಾಂಗ್ರೆಸ್‌ನವರು ಮಾಡುತ್ತಿದ್ದಾರೆ. ಎರಡು ರಾಷ್ಟ್ರೀಯ ಪಕ್ಷಗಳು ನಿಮ್ಮ ಮತಗಳನ್ನ ಗಿರವಿ ಅಂಗಡಿಯಲ್ಲಿ ಅಡ ಇಡುವ ಕೆಲಸ ಮಾಡುತ್ತಿವೆ ಎಂದು ದೂರಿದರು.


ಇದನ್ನೂ ಓದಿ: ಶಿರಾ ಉಪಚುನಾವಣೆ: ಮೂಲ VS ವಲಸೆ ಬಿಜೆಪಿಗರ ನಡುವೆ ಬಿರುಕು! ಯಾರ ಕೈಹಿಡಿಯಲಿದ್ದಾನೆ ಮತದಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಅಧಿಕಾರಿಯ ಡೆತ್‌ ನೋಟ್‌ನಲ್ಲಿ ಗ್ಯಾನೇಶ್ ಕುಮಾರ್ ಹೆಸರು!: ಮತ್ತೆ ಮುನ್ನೆಲೆಗೆ ಬಂದ ಹಳೆ ಕೇಸ್

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ವಿರುದ್ಧ ದೇಶದಾದ್ಯಂತ ಆಕ್ರೋಶದ ಅಲೆ ಎದ್ದಿರುವ ಈ ಸಂದರ್ಭದಲ್ಲಿ, ಸುಮಾರು ಎರಡು ದಶಕಗಳ ಹಿಂದೆ, ಮಲೇಷ್ಯಾದ ಯೋಜನಾ ಅಧಿಕಾರಿಯೊಬ್ಬರ ಆತ್ಮಹತ್ಯೆ ಪತ್ರದಲ್ಲಿ ಗ್ಯಾನೇಶ್ ಕುಮಾರ್...

ಹಾಸನ| SIR ಅಕ್ರಮದ ವಿರುದ್ಧ ಸುಪ್ರೀಂ ಕೋರ್ಟ್ ತನಿಖೆಗೆ ನಟ ಪ್ರಕಾಶ್ ರಾಜ್ ಪಟ್ಟು

ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯ ನೆಪದಲ್ಲಿ ಲಕ್ಷಾಂತರ ನಾಗರಿಕರ ಮೂಲಭೂತ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ. ಇದು ಕೇವಲ ಮತದಾರರ ವೈಯಕ್ತಿಕ ಸಮಸ್ಯೆಯಲ್ಲ, ಬದಲಿಗೆ ದೇಶದ ಸಂವಿಧಾನ...

SIR ರದ್ದುಗೊಳಿಸಿ, ಗ್ಯಾನೇಶ್ ಕುಮಾರ್‌ನನ್ನು ವಜಾಗೊಳಿಸುವಂತೆ ಆಗ್ರಹಿಸಿ ಎಡಪಕ್ಷಗಳಿಂದ ಪ್ರತಿಭಟನೆ

ದೇಶಾದ್ಯಂತ ನಡೆಯುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯು ಸಂಪೂರ್ಣ ಅಪ್ರಜಾಸತ್ತಾತ್ಮಕವಾಗಿದ್ದು, ಲಕ್ಷಾಂತರ ಅರ್ಹ ಮತದಾರರನ್ನು ಪಟ್ಟಿಯಿಂದ ಹೊರಗಿಡುವ ಮೂಲಕ ಅವರ ಸಂವಿಧಾನಾತ್ಮಕ ಹಕ್ಕುಗಳನ್ನು ಕಸಿಯಲಾಗುತ್ತಿದೆ ಎಂದು ಎಡಪಕ್ಷಗಳು ಆರೋಪಿಸಿವೆ. ಈ ಪ್ರಕ್ರಿಯೆಯನ್ನು...

ಗುವಾಹಟಿಯಲ್ಲಿ ಸಿಜೆಪಿ ಸಭೆಗೆ ಪೊಲೀಸರಿಂದ ಅಡ್ಡಿ; ಅಶುತೋಷ್ ರಾಂಕಾ ಮತ್ತು ತಂಡ ವಶಕ್ಕೆ

ಅಸ್ಸಾಂ ಪೊಲೀಸರು ಭಾನುವಾರ (ಸೆ.27) ಬೆಳಿಗ್ಗೆ ಗುವಾಹಟಿಯಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ'ಯ (ಸಿಜೆಪಿ) ಸಹ-ಸಂಯೋಜಕ ಅಶುತೋಷ್ ರಾಂಕಾ ಮತ್ತು ಸಂಘಟನೆಯ ಹಲವು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಅಸ್ಸಾಂ ಸಚಿವಾಲಯದ ಸಮೀಪದಲ್ಲಿ...

ಬಿಜೆಪಿಯಿಂದ ಸ್ಪರ್ಧಿಸುವಂತೆ ಗ್ಯಾನೇಶ್ ಕುಮಾರ್ ಈ ಹಿಂದೆ ನನಗೆ ಆಫರ್ ನೀಡಿದ್ದರು! — ಕೇರಳದ ಮಾಜಿ ಚೀಫ್ ಸೆಕ್ರೆಟರಿ ಜಿಜಿ ತೋಮ್ಸನ್ ಸ್ಪೋಟಕ ಹೇಳಿಕೆ!

ಚುನಾವಣಾ ಆಯೋಗದಲ್ಲಿ 'ವಿಶೇಷ ತೀವ್ರ ಪರಿಷ್ಕರಣೆ' (SIR) ಹೆಸರಿನಲ್ಲಿ ನಡೆಯುತ್ತಿರುವ ಬೃಹತ್ ಮತ ಕಡಿತ ಹಾಗೂ ಏಕಪಕ್ಷೀಯ ನಿರ್ಧಾರಗಳ ಆರೋಪದ ಹಿನ್ನೆಲೆಯಲ್ಲಿ ದೇಶಾದ್ಯಂತ ಜನಾಕ್ರೋಶ ಭುಗಿಲೆದ್ದಿರುವ ಬೆನ್ನಲ್ಲೇ, ಹಾಲಿ ಮುಖ್ಯ ಚುನಾವಣಾ ಆಯುಕ್ತ...

ಕರ್ನಾಟಕ ಎಸ್ಐಆರ್: ಅಳಿಸುವಿಕೆಗೆ ಸಂಬಂಧಿಸಿದ ದತ್ತಾಂಶದಿಂದ ಸುಮಾರು 6000 ಮತದಾರರು ನಾಪತ್ತೆ: ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದ ಅಂಕಿಅಂಶಗಳ ವ್ಯತ್ಯಾಸ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ನಡುವೆ, ಚುನಾವಣಾ ಆಯೋಗದ ಅಂಕಿಅಂಶಗಳಲ್ಲೇ ಸುಮಾರು 6 ಸಾವಿರ ಮತದಾರರ ಅಳಿಸುವಿಕೆಗೆ ಸಂಬಂಧಿಸಿದ ವ್ಯತ್ಯಾಸ ಬೆಳಕಿಗೆ ಬಂದಿದೆ. ಮತದಾರರ...

Breaking News: ಎಸ್‌ಐಆರ್‌ನಲ್ಲಿ ಮಹಿಳೆಯರಿಗೇ ಹೆಚ್ಚು ನೋಟಿಸ್: ಕರ್ನಾಟಕದ ಅಂಕಿಅಂಶಗಳು ಎತ್ತಿದ ಗಂಭೀರ ಪ್ರಶ್ನೆಗಳು

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕರ್ನಾಟಕದಲ್ಲಿ ಮುಂದುವರಿಯುತ್ತಿರುವ ಬೆನ್ನಲ್ಲೇ, ಅದರ ಲಿಂಗಾನುಪಾತದ ಅಂಕಿಅಂಶಗಳು ಗಂಭೀರವಾದ ಸಾಮಾಜಿಕ ನ್ಯಾಯದ ಪ್ರಶ್ನೆಯನ್ನು ಮುನ್ನೆಲೆಗೆ ತಂದಿವೆ. ಲಭ್ಯವಿರುವ 34 ಜಿಲ್ಲೆ/ನಗರ ಆಡಳಿತ ಘಟಕಗಳ...

ಎಸ್ಐಆರ್‌ನಲ್ಲಿ ಬದುಕಿದ್ದರೂ ‘ಮೃತ’, ಮನೆಯಲ್ಲಿದ್ದರೂ ‘ಸ್ಥಳಾಂತರ’: ಚಿಕ್ಕಬಳ್ಳಾಪುರದ ಸಂತ್ರಸ್ತರನ್ನು ಭೇಟಿಯಾದ ಪ್ರಕಾಶ್ ರಾಜ್ 

ಚಿಕ್ಕಬಳ್ಳಾಪುರ: ಚುನಾವಣಾ ಆಯೋಗದ ಎಸ್ಐಆರ್ ಪ್ರಕ್ರಿಯೆಯಲ್ಲಿ ಬದುಕಿರುವ ಮತದಾರರನ್ನೇ ಮೃತಪಟ್ಟವರು ಎಂದು ಗುರುತಿಸಿರುವ ಆರೋಪಗಳು ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆಯಲ್ಲಿ ಕೇಳಿಬಂದಿವೆ. ಎಸ್ಐಆರ್ ಪರಿಶೋಧನೆ-ಪ್ರತಿರೋಧ ಜಾಥಾದ ಭಾಗವಾಗಿ ಗುಡಿಬಂಡೆ ತಾಲೂಕು ಕಚೇರಿ ಆವರಣಕ್ಕೆ ಆಗಮಿಸಿದ್ದ...

“ಚುನಾವಣಾ ಆಯೋಗದ ‘ಕೊಳೆತ ವ್ಯವಸ್ಥೆ’ ಗ್ಯಾನೇಶ್ ಕುಮಾರ್ ಅವರಿಂದಷ್ಟೇ ಶುರುವಾಗಿದ್ದಲ್ಲ!” – ಬಂಗಾಳ ಚುನಾವಣೆಯ ಅಸಲಿ ಸತ್ಯ ಬಿಚ್ಚಿಟ್ಟ ಪ್ರಶಾಂತ್ ಕಿಶೋರ್

ಭಾರತೀಯ ಚುನಾವಣಾ ಆಯೋಗದ ಒಳಗಿನ 'ಸರ್ವಾಧಿಕಾರಿ' ಧೋರಣೆ, ಇಬ್ಬರು ಆಯುಕ್ತರ ಬಂಡಾಯ ಮತ್ತು ನಿಯಮಬಾಹಿರ ನಿರ್ಧಾರಗಳ ಕುರಿತು ಇಡೀ ದೇಶಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗುತ್ತಿರುವ ಹೊತ್ತಿನಲ್ಲೇ, ಖ್ಯಾತ ಚುನಾವಣಾ ತಂತ್ರಜ್ಞ ಹಾಗೂ 'ಜನ್...

ಎಸ್ಐಆರ್ ಅಕ್ರಮ: ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ; ಪೊಲೀಸರಿಂದ ಹಲವೆಡೆ ಅಶ್ರುವಾಯು, ಜಲಫಿರಂಗಿ ಪ್ರಯೋಗ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ದೇಶದಾದ್ಯಂತ ಪ್ರತಿಭಟನೆ ನಡೆಸಿದ್ದು, ಕನಿಷ್ಠ 20 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪಕ್ಷದ ಕಾರ್ಯಕರ್ತರು ಬೀದಿಗಿಳಿದಿದ್ದಾರೆ. ಚುನಾವಣಾ...