Homeಮುಖಪುಟಡಿಡಿಎಲ್‌ಜೆಗೆ 25ರ ಸಂಭ್ರಮ: ಹೆಸರು ಬದಲಾಯಿಸಿಕೊಂಡ ಕಾಜೋಲ್, ಶಾರುಖ್!

ಡಿಡಿಎಲ್‌ಜೆಗೆ 25ರ ಸಂಭ್ರಮ: ಹೆಸರು ಬದಲಾಯಿಸಿಕೊಂಡ ಕಾಜೋಲ್, ಶಾರುಖ್!

ನಟಿ ಕಾಜೋಲ್ ಮತ್ತು ನಟ ಶಾರುಖ್ ತಮ್ಮ ಸಾಮಾಜಿಕ ಮಾಧ್ಯಮಗಳ ಖಾತೆಗಳ ಹೆಸರನ್ನು ಡಿಡಿಎಲ್‌ಜೆ ಚಿತ್ರದ ಪಾತ್ರಗಳ ಹೆಸರಾದ ರಾಜ್ ಮತ್ತು ಸಿಮ್ರಾನ್ ಎಂದು ಬದಲಿಸಿಕೊಂಡಿದ್ದಾರೆ.

- Advertisement -
- Advertisement -

25 ವರ್ಷಗಳ ಹಿಂದೆ ಇದೆ ದಿನ ಬಾಲಿವುಡ್‌ನಲ್ಲಿ’ದಿಲ್ವಾಲೆ ದುಲ್ಹಾನಿಯಾ ಲೆ ಜಯೆಂಗೆ’ (DDLJ) ಚಿತ್ರ ಬಿಡುಗಡೆಯಾಗಿತ್ತು. ಅಂದು ಈ ಚಿತ್ರ ಈ ಮಟ್ಟಿಗೆ ಯಶಸ್ಸು, ದಾಖಲೆಗಳನ್ನು ಸಾಧಿಸುತ್ತದೆ ಎಂಬ ಕಲ್ಪನೆಯನ್ನು ಯಾರು ಇಟ್ಟುಕೊಂಡಿರಲಿಲ್ಲ.

ಬಾಲಿವುಡ್‌ನ ಎಲ್ಲಾ ದಾಖಲೆಗಳನ್ನು ಚೂರು ಮಾಡಿದ ಚಿತ್ರ ಇದು. ನಟ ಶಾರುಖ್ ಖಾನ್‌ಗೆ ರೊಮ್ಯಾಂಟಿಕ್ ಹೀರೋ ಪಟ್ಟ ಕೊಟ್ಟ ಚಿತ್ರ. ನಟಿ ಕಾಜೋಲ್ ಸಿನಿ ಜೀವನದ ಮೈಲುಗಲ್ಲು. ಚಿತ್ರ ನಿರ್ಮಿಸಿದ, ಚಿತ್ರದಲ್ಲಿ ನಟಿಸಿದ ಪ್ರತಿರೊಬ್ಬರ ಬದುಕನ್ನು ಬದಲಿಸಿದ ಚಿತ್ರ ಎಂದರೆ ಅತಿಶಯೋಕ್ತಿಯಲ್ಲ.

‘ದಿಲ್ವಾಲೆ ದುಲ್ಹಾನಿಯಾ ಲೆ ಜಯಂಗೆ’ ಚಿತ್ರವನ್ನು ಆದಿತ್ಯ ಚೋಪ್ರಾ ನಿರ್ದೇಶಿಸಿದ್ದರು. ಈ ಚಿತ್ರದಲ್ಲಿ ಅಂಬರಿಷ್ ಪುರಿ, ಅನುಪಮ್ ಖೇರ್, ಫರಿದಾ ಜಲಾಲ್ ಮುಂತಾದವರು ನಟಿಸಿದ್ದಾರೆ. ಇದು ಭಾರತೀಯ ಚಿತ್ರರಂಗದ ಅತ್ಯಂತ ಯಶಸ್ವಿ ಚಿತ್ರಗಳಲ್ಲಿ ಒಂದಾಗಿದೆ. ಈ ಚಿತ್ರ ಮುಂಬೈನ ಥಿಯೇಟರ್‌ ಒಂದರಲ್ಲಿ ಎರಡು ದಶಕಗಳಿಗೂ ಹೆಚ್ಚು ಕಾಲ ಪ್ರದರ್ಶನಗೊಂಡಿದೆ.

ಚಿತ್ರಕ್ಕೆ 25ರ ಸಂಭ್ರಮದ ಹಿನ್ನೆಲೆ ನಟಿ ಕಾಜೋಲ್ ಮತ್ತು ನಟ ಶಾರುಖ್ ತಮ್ಮ ಸಾಮಾಜಿಕ ಮಾಧ್ಯಮಗಳ ಖಾತೆಗಳ ಹೆಸರನ್ನು ಡಿಡಿಎಲ್‌ಜೆ ಚಿತ್ರದ ಪಾತ್ರಗಳ ಹೆಸರಾದ ರಾಜ್ ಮತ್ತು ಸಿಮ್ರಾನ್ ಎಂದು ಬದಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಬಾಲಿವುಡ್ ನಟಿ ಶ್ರೀದೇವಿಯ ಸಾವು ಸಹಜವಲ್ಲವೇ?

 

PC: screenshot@twitter

ಈ ಚಿತ್ರವು ರಾಜ್ (ಶಾರುಖ್) ಮತ್ತು ಸಿಮ್ರಾನ್ (ಕಾಜೋಲ್) ಎಂಬ ಪ್ರೇಮಿಗಳ ಪ್ರೀತಿಯ ಸುತ್ತ ಗಿರಕಿ ಹೊಡೆಯುತ್ತದೆ. ಇದು ಸಾರ್ವಕಾಲಿಕ ಹಿಂದಿ ಚಲನಚಿತ್ರವಾಗಿ ಹೊರಹೊಮ್ಮಿದ್ದು ಮಾತ್ರವಲ್ಲದೆ  10 ಫಿಲ್ಮ್ ಫೇರ್ ಪ್ರಶಸ್ತಿಗಳನ್ನು ಗೆದ್ದುಕೊಂಡಿತ್ತು.

PC: screenshot@twitter

ಡಿಡಿಎಲ್‌ಜೆ ಚಿತ್ರದ ಅಪ್ರತಿಮ ಜೋಡಿ ಶಾರುಖ್ ಖಾನ್ ಮತ್ತು ಕಾಜೋಲ್ ಅವರ ಕಂಚಿನ ಪ್ರತಿಮೆ ಲಂಡನ್ನಿನ  ಲೀಸೆಸ್ಟರ್ ಸ್ಕ್ವೇರ್ ನ  ‘ಸೀನ್ಸ್ ಇನ್ ದಿ ಸ್ಕ್ವೇರ್’ ನಲ್ಲಿ ಅನಾವರಣಗೊಳ್ಳಲಿದೆ. ಈ ಪ್ರತಿಮೆಯು ಲೀಸೆಸ್ಟರ್ ಚೌಕದಲ್ಲಿ ಚಿತ್ರೀಕರಿಸಿದ ದೃಶ್ಯದ ಒಂದು ಭಾಗವನ್ನು ಪ್ರತಿನಿಧಿಸುತ್ತದೆ.

“ಈ ಚಿತ್ರ ಬರುವ ಮುನ್ನ ರೋಮ್ಯಾಂಟಿಕ್ ರೀತಿಯ ಪಾತ್ರವನ್ನು ನಿರ್ವಹಿಸಲು ನನ್ನಿಂದ ಸಾಧ್ಯವೇ ಇಲ್ಲ ಎಂದೇ ನಾನು ಭಾವಿಸಿದ್ದೆ” ಎಂದು ಚಿತ್ರದ 25 ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ‘ಕಿಂಗ್ ಆಫ್ ರೋಮ್ಯಾನ್ಸ್’ ಶಾರುಖ್ ಖಾನ್ ಹೇಳಿದ್ದಾರೆ.

ಇಂದಿಗೂ ಈ ಚಿತ್ರಕ್ಕೆ ಅತ್ಯಧಿಕ ಅಭಿಮಾನಿ ಬಳಗವಿದೆ. 25 ವರ್ಷಗಳನ್ನು ಪೂರೈಸಿದರೂ ಕೂಡ ಈ ಚಿತ್ರದ ಜನಪ್ರಿಯತೆ ಎಂದಿಗೂ ಕಡಿಮೆಯಾಗಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ #DilwaleDulhaniaLeJayenge # DDLJ ಹ್ಯಾಶ್‌ಟ್ಯಾಗ್‌ಗಳು ಟ್ರೆಂಡಿಂಗ್‌ನಲ್ಲಿವೆ.


ಇದನ್ನೂ ಓದಿ: ಆಟೋರಾಜ’ನ ನೆನಪಲ್ಲಿ… ಶಂಕರ್ ‌ನಾಗ್‌ ನಮ್ಮನ್ನಗಲಿ ಇಂದಿಗೆ 30 ವರ್ಷ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...