Homeಮುಖಪುಟತೆಲಂಗಾಣ ಪ್ರವಾಹ: ತೆಲುಗು ಚಿತ್ರ ರಂಗದಿಂದ ನೆರವಿನ ’ಮಹಾಮಳೆ’!

ತೆಲಂಗಾಣ ಪ್ರವಾಹ: ತೆಲುಗು ಚಿತ್ರ ರಂಗದಿಂದ ನೆರವಿನ ’ಮಹಾಮಳೆ’!

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರೀವಾಲ್ ಕೂಡಾ ರಾಜ್ಯಕ್ಕೆ 15 ಕೋಟಿ ನೆರವು ನೀಡುವುದಾಗಿ ಹೇಳಿದ್ದಾರೆ.

- Advertisement -
- Advertisement -

ತೆಲಂಗಾಣದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಇದುವರೆಗೂ 70 ಜನರು ಮೃತಪಟ್ಟಿದ್ದು ಕೋಟ್ಯಾಂತರ ರೂ. ಗಳ ಆಸ್ತಿ ಪಾಸ್ತಿ ನಷ್ಟ ಉಂಟಾಗಿದೆ. ಮಳೆಯಿಂದಾದ ಹಾನಿಗೆ ಪರಿಹಾರ ನೀಡಲು ತೆಲಂಗಾಣ ಮುಖ್ಯಮಂತ್ರಿ ಸ್ಥಾಪಿಸಿದ್ದ ಪರಿಹಾರ ನಿಧಿಗೆ, ತೆಲುಗು ಚಿತ್ರರಂಗದ ಚಿತ್ರ ನಟರಾದ ಚಿರಂಜೀವಿ, ನಾಗಾರ್ಜುನ, ಜೂನಿಯರ್ ಎನ್‌ಟಿಆರ್, ವಿಜಯ್ ದೇವೇರಕೊಂಡ, ಮಹೇಶ್ ಬಾಬು ಸೇರಿದಂತೆ ಹಲವಾರು ನಟರು ಕೊಡುಗೆ ನೀಡಿದ್ದಾರೆ.

ಇಂದು ಟ್ವೀಟ್ ಮಾಡಿರುವ ತೆಲುಗು ಸೂಪರ್‌ ಸ್ಟಾರ್‌ ಚಿರಂಜೀವಿ, “ಹೈದರಾಬಾದ್‌ನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಭಾರಿ ಪ್ರಮಾಣದ ವಿನಾಶ, ಪ್ರಾಣಹಾನಿ ಮತ್ತು ಸಾವಿರಾರು ಜನರಿಗೆ ತೀವ್ರ ಸಂಕಷ್ಟ ಉಂಟಾಗಿದೆ. ಪ್ರಕೃತಿ ವಿಕೋಪಕ್ಕೊಳಗಾದವರ ಪರವಾಗಿ ನನ್ನ ಹೃದಯ ಮಿಡಿಯುತ್ತಿದೆ. ನಾನು ಸಿಎಂ ರಿಲೀಫ್ ಫಂಡ್‌ಗೆ ವಿನಮ್ರತೆಯಿಂದ 1 ಕೋಟಿ ದೇಣಿಗೆ ನೀಡಿದೆ. ಅಷ್ಟೇ ಅಲ್ಲದೆ ಅಗತ್ಯವಿರುವವರಿಗೆ ಸಹಾಯ ಮಾಡಲು ಮುಂದೆ ಬರುವಂತೆ ನಾನು ಮನವಿ ಮಾಡುತ್ತೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪ್ರವಾಹ: ಪ್ರಧಾನಿ ಮಾಡಿದ ಕನ್ನಡದ ಒಂದು ಟ್ವೀಟ್ ನೆರೆ ಪರಿಹಾರವಾಗಬಲ್ಲುದೇ?

ತೆಲುಗಿನ ಮತ್ತೊಬ್ಬ ತಾರೆ ಅಕ್ಕಿನೇನಿ ನಾಗಾರ್ಜುನ, ಮುಖ್ಯಮಂತ್ರಿ ಪರಿಹಾರ ನಿಧಿಗೆ ತಾನು ಕೊಡುಗೆಯಾಗಿ 50 ಲಕ್ಷ ನೀಡುವುದಾಗಿ ವಾಗ್ದಾನ ಮಾಡಿದರು.

 

ನಟ ಮಹೇಶ್ ಬಾಬು, “ತೆಲಂಗಾಣದ ಸಿಎಂ ಪರಿಹಾರ ನಿಧಿಗೆ ₹ 1 ಕೋಟಿ ಕೊಡುಗೆ ನೀಡುತ್ತೇನೆ. ಎಲ್ಲರೂ ತಮ್ಮ ಕೊಡುಗೆಯನ್ನು ನೀಡಬೇಕು ಎಂದು ಬಯಸುತ್ತೇನೆ. ಈ ಕಷ್ಟದ ಸಮಯದಲ್ಲಿ ನಮ್ಮ ಜನರೊಂದಿಗೆ ನಿಲ್ಲಿರಿ” ಎಂದು ಹೇಳಿದರು.

ಇದನ್ನೂ ಓದಿ: ಅ.21 ರವರೆಗೂ ಮಹಾಮಳೆ: ಹೈದರಾಬಾದ್‌ನಲ್ಲಿ ಪ್ರವಾಹ ಪರಿಸ್ಥಿತಿ ಗಂಭೀರ!

ನಟ ಜೂನಿಯರ್‌ ಎನ್‌ಟಿಆರ್‌‌, “ಮಳೆ ಮತ್ತು ಪ್ರವಾಹದಿಂದ ಹೈದರಾಬಾದ್‌ನಲ್ಲಿ ಅನೇಕರು ಜೀವ ಕಳೆದು ಕೊಂಡಿದ್ದಾರೆ. ನಮ್ಮ ನಗರದ ಪುನರ್ವಸತಿಗಾಗಿ ನಾನು ತೆಲಂಗಾಣ ಸಿಎಂ ರಿಲೀಫ್ ಫಂಡ್‌ಗೆ 50 ಲಕ್ಷ ರೂಪಾಯಿಗಳನ್ನು ನೀಡುತ್ತಿದ್ದೇನೆ. ನಾವೆಲ್ಲರೂ ನಮ್ಮ ಹೈದರಾಬಾದ್ ಅನ್ನು ಪುನರ್ನಿರ್ಮಿಸೋಣ” ಎಂದು ಹೇಳಿದ್ದಾರೆ.

 

 

 

ನಟ ವಿಜಯ್ ದೇವೇರಕೊಂಡ  ಮುಖ್ಯಮಂತ್ರಿ ಪರಿಹಾರ ನಿಧಿಗೆ 10 ಲಕ್ಷ ದೇಣಿಗೆ ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ.

ಇಷ್ಟೇ ಅಲ್ಲದೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರೀವಾಲ್ ಕೂಡಾ ರಾಜ್ಯಕ್ಕೆ 15 ಕೋಟಿ ನೆರವು ನೀಡುವುದಾಗಿ ಘೋಷಿಸಿದ್ದಾರೆ.

ಹೈದರಾಬಾದ್ ಕೆಳೆದೊಂದು ವಾರದಿಂದ ಶತಮಾನದ ಭೀಕರ ಮಳೆಯನ್ನು ಕಂಡಿದ್ದು, ಮುಂದಿನ ಕೆಲವು ದಿನಗಳವರೆಗೆ ಭಾರಿ ಮಳೆಯಾಗುವ ಬಗ್ಗೆ ಹವಾಮಾನ ಕಚೇರಿ ಎಚ್ಚರಿಕೆ ನೀಡಿದೆ. ಅಕ್ಟೋಬರ್ 19 ರಂದು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ನಗರದ ಪ್ರವಾಹ ಪೀಡಿತರಿಗೆ ತಕ್ಷಣದ ಪರಿಹಾರವಾಗಿ ₹ 10,000 ಘೋಷಿಸಿದ್ದಾರೆ.

ಇದನ್ನೂ ಓದಿ: ರಾಜ್ಯದ 130 ತಾಲೂಕುಗಳು ‘ಪ್ರವಾಹಪೀಡಿತ’: ಸರ್ಕಾರದ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...