ಜನತೆಗೆ ಕರ್ತವ್ಯಪಾಲನೆಯ ಪಾಠ ಮಾಡುವ ಮೊದಲು ಪ್ರಧಾನಿ ನರೇಂದ್ರ ಮೋದಿಯವರು ತನ್ನ ಕರ್ತವ್ಯಪಾಲನೆ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿತ್ತು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತು ಸರಣಿ ಟ್ವೀಟ್‌ಗಳನ್ನು ಮಾಡಿರುವ ಅವರು, “ಕೊರೊನಾ ಸೋಂಕಿನ ನಿಯಂತ್ರಣ ಮತ್ತು ಅದರಿಂದಾಗಿ ಕಷ್ಟ-ನಷ್ಟಕ್ಕೀಡಾಗಿರುವ ಜನತೆಗೆ ಪರಿಹಾರ ನೀಡಲು ಕೇಂದ್ರ ಸರ್ಕಾರ ಏನು ಮಾಡಿದೆ ಮತ್ತು ಮುಂದಿನ ದಿನಗಳಲ್ಲಿ ಏನು ಮಾಡಲಿದೆ ಎನ್ನುವುದನ್ನು ಮೋದಿಯವರು ಇಂದಿನ ತಮ್ಮ ಭಾಷಣದಲ್ಲಿ ದೇಶದ ಜನತೆಗೆ ತಿಳಿಸಬೇಕಾಗಿತ್ತು” ಎಂದು ಅಭಿಪ್ರಾಯಪಟ್ಟಿದ್ದಾರೆ.
ಜಾಗಟೆ ಬಾರಿಸಿ, ದೀಪ ಹಚ್ಚಿ ಕೊರೊನಾ ಎದುರಿಸಲು ಕರೆನೀಡಿದ ಪ್ರಧಾನ ಮಂತ್ರಿಯವರ ಮೂಢತನದ ಭಾಷಣಗಳೇ ಕೊರೊನಾ ಸೋಂಕಿನ ಬಗ್ಗೆ ಜನರ ನಿರ್ಲಕ್ಷಕ್ಕೆ ಮುಖ್ಯ ಕಾರಣ. ರೋಗವನ್ನು ವೈಜ್ಞಾನಿಕವಾಗಿ ಎದುರಿಸಲು ಕರೆನೀಡಬೇಕಾದ ಪ್ರಧಾನಿ, ಟಿವಿ ಜ್ಯೋತಿಷಿಗಳ ರೀತಿಯಲ್ಲಿ ಪ್ರವಚನ ನೀಡಿದರೆ ಜನ ಮೂಢಮತಿಗಳಾಗದೆ ಇನ್ನೇನು ಆಗಲು ಸಾಧ್ಯ? 4/7#modifailsindia
— Siddaramaiah (@siddaramaiah) October 20, 2020
ದೇಶದ ಜನತೆಗೆ ಬುದ್ದಿವಾದ ಹೇಳುವ ಮೂಲಕ ಪ್ರಧಾನಿಯವರು ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳುವ ಹತಾಶ ಪ್ರಯತ್ನವನ್ನಷ್ಟೇ ಮಾಡಿದ್ದಾರೆ. ಕೊರೊನಾ ಸೋಂಕು ಉಲ್ಬಣಕ್ಕೆ ಜನರ ನಿರ್ಲಕ್ಷಕ್ಕಿಂತಲೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಹೊಣೆಗೇಡಿತನ ಕಾರಣ ಎನ್ನುವುದನ್ನು ಪ್ರಧಾನಿಯವರು ಒಪ್ಪಿಕೊಂಡು ದೇಶದ ಜನತೆಯಲ್ಲಿ ಕ್ಷಮೆಯಾಚಿಸಬೇಕಾಗಿತ್ತು ಎಂದು ಸಿದ್ದು ಹೇಳಿದ್ದಾರೆ.
ಜಾಗಟೆ ಬಾರಿಸಿ, ದೀಪ ಹಚ್ಚಿ ಕೊರೊನಾ ಎದುರಿಸಲು ಕರೆನೀಡಿದ ಪ್ರಧಾನ ಮಂತ್ರಿಯವರ ಮೂಢತನದ ಭಾಷಣಗಳೇ ಕೊರೊನಾ ಸೋಂಕಿನ ಬಗ್ಗೆ ಜನರ ನಿರ್ಲಕ್ಷಕ್ಕೆ ಮುಖ್ಯ ಕಾರಣ. ರೋಗವನ್ನು ವೈಜ್ಞಾನಿಕವಾಗಿ ಎದುರಿಸಲು ಕರೆನೀಡಬೇಕಾದ ಪ್ರಧಾನಿ, ಟಿವಿ ಜ್ಯೋತಿಷಿಗಳ ರೀತಿಯಲ್ಲಿ ಪ್ರವಚನ ನೀಡಿದರೆ ಜನ ಮೂಢಮತಿಗಳಾಗದೆ ಇನ್ನೇನು ಆಗಲು ಸಾಧ್ಯ ಎಂದು ಪ್ರಶ್ನಿಸಿದ್ದಾರೆ.
ದೇಶದ ಜನತೆಗೆ ಕರ್ತವ್ಯಪಾಲನೆಯ ಪ್ರವಚನ ನೀಡಿದ ಪ್ರಧಾನಿಗಳು ಅದರ ಜೊತೆಗೆ ಕೊರೊನಾ ಪರಿಹಾರದ ರೂ.20 ಲಕ್ಷ ಕೋಟಿ ಪ್ಯಾಕೇಜ್ ಏನಾಯಿತು? ಯಾರಿಗೆ ಎಷ್ಟು ತಲುಪಿದೆ? ಪಿ.ಎಂ. ಕೇರ್ಸ್ ನಿಧಿಗೆ ಬಂದ ದುಡ್ಡೆಷ್ಟು? ಕೊರೊನಾ ನಿಯಂತ್ರಣ ಮತ್ತು ಪರಿಹಾರಕ್ಕಾಗಿ ಆ ನಿಧಿಯಿಂದ ಬಳಕೆಯಾದ ದುಡ್ಡಿನ ಮೊತ್ತವೆಷ್ಟು? ಎಂಬುದನ್ನೂ ತಿಳಿಸಬೇಕಿತ್ತು ಎಂದಿದ್ದಾರೆ.
ಕೊರೊನಾ ಸೋಂಕು ಪ್ರಾರಂಭಗೊಂಡಾಗ ಪ್ರಧಾನಿಯವರು ‘ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯನ್ನು ಜೂನ್ ನಲ್ಲಿ ಪ್ರಕಟಿಸಿದ್ದರು. ಅದು ಎಷ್ಟು ಜನರಿಗೆ ತಲುಪಿದೆ? ರಾಜ್ಯದ ಬಿಜೆಪಿ ಸರ್ಕಾರ ಅನ್ನಭಾಗ್ಯದಲ್ಲಿ ನೀಡಲಾಗುತ್ತಿದ್ದ ಅಕ್ಕಿಯನ್ನು 7 ರಿಂದ 5 ಕಿಲೋಗೆ ಇಳಿಸಿದೆ, ಇಂದಿರಾ ಕ್ಯಾಂಟೀನ್ ಗಳನ್ನು ಮುಚ್ಚಲು ಹೊರಟಿದೆ ಎಂದು ಕಿಡಿಕಾರಿದ್ದಾರೆ.
ಮಿತವ್ಯಯ ಪಾಲನೆ ಮಾಡಿ ಲಭ್ಯ ಇರುವ ಸಂಪನ್ಮೂಲವನ್ನು ಕೊರೊನಾ ನಿಯಂತ್ರಣಕ್ಕಾಗಿ ಬಳಸಬೇಕಾದ ರಾಜ್ಯ ಬಿಜೆಪಿ ಸರ್ಕಾರ ಕೊರೊನಾ ಕಾಯಿಲೆಯ ಪರಿಹಾರದ ನೆಪದಲ್ಲಿ ಜನರ ತೆರಿಗೆ ಹಣವನ್ನು ಲೂಟಿ ಮಾಡುತ್ತಿದೆ. ಇದೇನಾದರೂ ಪ್ರಧಾನಿ ಮೋದಿಯವರ ಗಮನಕ್ಕೆ ಬಂದಿದೆಯೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: ಲಾಕ್‌ಡೌನ್ ಮುಗಿದಿದೆ, ಆದರೆ ಕೊರೊನಾ ಮುಗಿದಿಲ್ಲ: ಪ್ರಧಾನಿ ಮೋದಿ ಎಚ್ಚರಿಕೆ


