Homeಮುಖಪುಟಚರ್ಚೆ ಇಲ್ಲದೇ NEP 2020 ಜಾರಿಗೆ ಮುಂದಾದ ಕೇಂದ್ರ: ಶಿಕ್ಷಣ ತಜ್ಞರ ಆಕ್ರೋಶ

ಚರ್ಚೆ ಇಲ್ಲದೇ NEP 2020 ಜಾರಿಗೆ ಮುಂದಾದ ಕೇಂದ್ರ: ಶಿಕ್ಷಣ ತಜ್ಞರ ಆಕ್ರೋಶ

NEP 2020 ಕುರಿತು ಸಂಸತ್ತಿನಲ್ಲಿ, 30 ರಾಜ್ಯಗಳ ವಿಧಾನ ಮಂಡಲಗಳಲ್ಲಿ ಚರ್ಚೆಯಾಗದೇ ಜಾರಿಗೊಳಿಸಲು ಹೊರಟಿರುವುದು ಸಂವಿಧಾನದ ಉಲ್ಲಂಘನೆಯಾಗಿದೆ - ಬಿ. ಶ್ರೀಪಾದ ಭಟ್

- Advertisement -
- Advertisement -

ವಿವಾದಿತ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ. ಈ ಕುರಿತು ಎಲ್ಲ ಉನ್ನತ ಶಿಕ್ಷಣ ಸಂಸ್ಥೆಗಳು, ವಿ.ವಿ. ಗಳ ಉಪಕುಲಪತಿಗಳನ್ನು ಉದ್ದೇಶಿಸಿ ‘NEP 2020 ಯನ್ನು ಯಾವ ರೀತಿ ಜಾರಿಗೊಳಿಸಬೇಕು, ಅದಕ್ಕೆ ಬೇಕಾದ ಆಡಳಿತಾತ್ಮಕ ಕ್ರಮಗಳು ಕುರಿತು ಸಿದ್ದತೆ ಮಾಡಿಕೊಳ್ಳಬೇಕೆಂದು’ ಅಕ್ಟೋಬರ್ 20, ರಂದು UGC ಸುತ್ತೋಲೆಯೊಂದನ್ನು ಹೊರಡಿಸಿದೆ.

ಕೊರೊನಾ ಸಾಂಕ್ರಮಿಕದ ಸಂದರ್ಭದಲ್ಲಿ ಸುಗ್ರೀವಾಜ್ಞೆಗಳನ್ನು ಬಳಸಿ ಕೇಂದ್ರ ಸರ್ಕಾರ ರೈತ ಮಸೂದೆಗಳನ್ನು ಜಾರಿಗೊಳಿಸಿತ್ತು. ಇದಕ್ಕೆ ದೇಶಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾದರೂ ಸಹ ಸಂಸತ್ತಿನ ಎರಡು ಸದನಗಳಲ್ಲಿ ಅನುಮೋದಿಸಿದೆ. ಇದೇ ರೀತಿಯಲ್ಲಿ NEP 2020 ಸಹ ವಿವಾದಾತ್ಮಕ ನೀತಿಯಾಗಿದ್ದು ಇದಕ್ಕೆ ಹಲವು ಶಿಕ್ಷಣ ತಜ್ಞರು ವಿರೋಧ ವ್ಯಕ್ತಪಡಿಸಿದ್ದಾರೆ. ಆದರೆ ಸರ್ಕಾರ ಅದನ್ನು ಕಡೆಗಣಿಸಿ ಕೊರೊನಾ ಸಮಯದಲ್ಲಿ ಜಾರಿಗೊಳಿಸಲು ತಯಾರಿ ನಡೆಸಿರುವುದು ಪ್ರಜ್ಞಾವಂತರ ಆಕ್ರೋಶಕ್ಕೆ ಗುರಿಯಾಗಿದೆ.

ಸಂವಿಧಾನದ ಉಲ್ಲಂಘನೆ – ಬಿ. ಶ್ರೀಪಾದ ಭಟ್ ಆರೋಪ

ಈ ಕುರಿತು ಆತಂಕ ವ್ಯಕ್ತಪಡಿಸಿರುವ ಶಿಕ್ಷಣ ತಜ್ಞರು ಮತ್ತು ಹೋರಾಟಗಾರರಾದ ಬಿ. ಶ್ರೀಪಾದ ಭಟ್, “ಇದು ಮೇಲ್ನೋಟಕ್ಕೆ ಕಾಣುವಂತೆ ಸಂವಿಧಾನದ ನೀತಿಸಂಹಿತೆಯ ಉಲ್ಲಂಘನೆಯಾಗಿದೆ. ಸಂವಿಧಾನದ ಶೆಡ್ಯೂಲ್ 7ರ ಅನುಸಾರ ಶಿಕ್ಷಣವು ಸಮವರ್ತಿ ಪಟ್ಟಿಯಲ್ಲಿ ಬರುತ್ತದೆ. ಶಿಕ್ಷಣದ ಕುರಿತಾದ ಯಾವುದೇ ಬಗೆಯ ನೀತಿ, ನಿಯಮಾವಳಿಗಳನ್ನು, ಕಾನೂನು, ಮಾರ್ಗಸೂಚಿಗಳನ್ನು (policies, rules & guidelines) ರೂಪಿಸಲು ರಾಜ್ಯ ಸರಕಾರಗಳಿಗೆ ಸಮಾನ ಅಧಿಕಾರವಿದೆ. ಈಗಿರುವಾಗ NEP 2020 ಕುರಿತು ಸಂಸತ್ತಿನಲ್ಲಿ, 30 ರಾಜ್ಯಗಳ ವಿಧಾನ ಮಂಡಲಗಳಲ್ಲಿ ಚರ್ಚೆಯಾಗದೇ ಜಾರಿಗೊಳಿಸಲು ಹೊರಟಿರುವುದು ಸಂವಿಧಾನದ ಉಲ್ಲಂಘನೆಯಾಗಿದೆ” ಎಂದಿದ್ದಾರೆ.

ಭಾರತೀಯ ಸಂವಿದಾನದ ಪರಿಚ್ಚೇದ 246, ಶೆಡ್ಯೂಲ್ 7, ಪಟ್ಟಿ 2, Entry 32ರ ಅನುಸಾರ ವಿಶ್ವವಿದ್ಯಾಲಯಗಳ ಆಡಳಿತವು (governance) ರಾಜ್ಯಗಳ ವ್ಯಾಪ್ತಿಯಲ್ಲಿ ಬರುತ್ತದೆ. ಅಲ್ಲದೇ ರಾಜ್ಯ ಸರಕಾರಗಳು NEP ಕುರಿತು ಶಿಕ್ಷಣ ಹಕ್ಕುದಾರರಾದ (stake holders) ಪೋಷಕ ಸಂಘಟನೆ, ವಿದ್ಯಾರ್ಥಿ ಸಂಘಟನೆ, ಶಿಕ್ಷಕ ಸಂಘಟನೆ, ಎಸ್‌ಡಿಎಂಸಿ, ಸ್ಥಳೀಯ ಸಂಸ್ಥೆಗಳು, ಶಿಕ್ಷಣ ತಜ್ಞರೊಂದಿಗೆ ಸಮಾಲೋಚನೆ ನಡೆಸಿಲ್ಲ. ಈ ಎಲ್ಲಾ ಹಿನ್ನೆಲೆಯಲ್ಲಿ UGC ಚುನಾಯಿತ ರಾಜ್ಯ ಸರಕಾರಗಳನ್ನು ಕಡೆಗಣಿಸಿ ನೇರವಾಗಿ ಉಪಕುಲಪತಿಗಳಿಗೆ ಸುತ್ತೋಲೆ ಹೊರಡಿಸಿ, ಜಾರಿಗೊಳಿಸುವ UGCಯ ಈ ನಡೆ ಸಂವಿಧಾನದ ಗೌರವಕ್ಕೆ ಚ್ಯುತಿ ತಂದಿದೆ ಎಂದು ಎಂದಿದ್ದಾರೆ.

ಮೊದಲಿಗೆ ಈ ಸುತ್ತೋಲೆ ವಿರುದ್ಧ ನ್ಯಾಯಾಲಯದಲ್ಲಿ ಅರ್ಜಿ ಹಾಕಬೇಕು. ಎಲ್ಲ ಪ್ರಜ್ಞಾವಂತರು, ಪ್ರಗತಿಪರ ಸಂಘಟನೆಗಳು ಸಾಮಾಜಿಕ ಜಾಲತಾಣಗಳಲ್ಲಿ ಇದರ ಕುರಿತು ನಿರಂತರ ಚರ್ಚೆ ನಡೆಸಬೇಕು ಎಂದು ಕರೆ ನೀಡಿರುವ ಅವರು ಸಾರ್ವಜನಿಕ ಪ್ರತಿಭಟನೆ ಹಮ್ಮಿಕೊಳ್ಳುತ್ತೇವೆ ಎಂದಿದ್ದಾರೆ.


ಇದನ್ನೂ ಓದಿ: ಹೊಸ ಶಿಕ್ಷಣ ನೀತಿ ಏನು? ಎತ್ತ?


ನಮ್ಮ ಸಂವಿಧಾನವು ಹೇಳಿರುವ ಸಾಮಾಜಿಕ ನ್ಯಾಯ, ಸಮಾನತೆ, ಪ್ರಜಾಸತ್ತಾತ್ಮಕ ಜಾತ್ಯಾತೀತ ಸಮಾಜವಾದಿ ಗಣತಂತ್ರದ ಮೌಲ್ಯಗಳನ್ನು ಎತ್ತಿ ಹಿಡಿಯುವಂತಹ ಶಿಕ್ಷಣ ನಮಗೆ ಬೇಕಿದೆ. ಆದರೆ ಹಣವಂತರಿಗೆ ಮಾತ್ರ ಶಿಕ್ಷಣ ಸಿಗುವಂತೆ ಮಾಡುವ, ಖಾಸಗೀಕರಣವನ್ನು ಪ್ರೋತ್ಸಾಹಿಸುವ, ತ್ರಿಭಾಷಾ ಸೂತ್ರದ ಹೆಸರಿನಲ್ಲಿ ಹಿಂದಿ ಹೇರಿಕೆ ಮಾಡುವ ಈ ಶಿಕ್ಷಣ ನೀತಿ ನಮಗೆ ಬೇಡ ಎಂದು ಕೆವಿಎಸ್‌ ಸಂಚಾಲಕರಾದ ಸರೋವರ್ ಬೆಂಕಿಕೆರೆ ಅಭಿಪ್ರಾಯಪಟ್ಟಿದ್ದಾರೆ.

ಸಂಸತ್ತಿನಲ್ಲಿ ಈ ಮಸೂದೆ ಚರ್ಚೆಯಾಗದೇ ಅಂಗೀಕರಿಸಿರುವುದೇ ಅಪ್ರಜಾತಂತ್ರಕಾರಿ. ಈ ಕರಡನ್ನು ಸಂಪೂರ್ಣವಾಗಿ ಎಲ್ಲಾ ಭಾಷೆಗಳಲ್ಲಿ ಅನುವಾದಗೊಂಡು ಸಾರ್ವಜನಿಕ ಚರ್ಚೆಗೆ ಬಿಟ್ಟಿಲ್ಲ. ಆರ್‌ಎಸ್‌ಎಸ್‌ ಮತ್ತು ಬಿಜೆಪಿಯ ರಾಜಕೀಯ ಅಜೆಂಡಾವನ್ನು ಜಾರಿಗೊಳಿಸುವುದು ಎನ್‌ಇಪಿ ಜಾರಿಯ ಉದ್ದೇಶವಾಗಿದೆ. ಶಿಕ್ಷಣವು ಸಮವರ್ತಿ ಪಟ್ಟಿಯಲ್ಲಿರುವುದರಿಂದ ಈಗಾಗಲೇ ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಕೇರಳ ಸರ್ಕಾರಗಳು ಇದನ್ನು ಜಾರಿಗೊಳಿಸುವುದಿಲ್ಲ ಎಂದು ಘೋಷಿಸಿವೆ. ನಾವು ಈ ಕುರಿತು ರಾಜ್ಯದ ವಿರೋಧ ಪಕ್ಷದ ಮುಖಂಡರ ಬಳಿ ಚರ್ಚೆ ಮಾಡಿದ್ದೇವೆ. ನಾಡಿನ ಭವಿಷ್ಯವನ್ನು ತೀರ್ಮಾನ ಮಾಡುವ ಈ ನೀತಿ ಎಲ್ಲರ ಅಭಿಪ್ರಾಯ ಒಳಗೊಂಡು ಸಮಗ್ರವಾಗಿರಬೇಕೆಂದು ನಾವು ಒತ್ತಾಯಿಸುತ್ತೇವೆ ಎಂದು ಎಸ್‌ಎಫ್‌ಐ ಕಾರ್ಯದರ್ಶಿ ವಾಸುದೇವರೆಡ್ಡಿ ತಿಳಿಸಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿಯ ಕೆಲವು ಅಂಶಗಳು ಗೊಂದಲಕಾರಿಯಾಗಿದ್ದು ಅವುಗಳನ್ನು ಮರೆಮಾಚುವ ಮತ್ತು ಶಿಕ್ಷಣವನ್ನು ಖಾಸಗೀಕರಣಗೊಳಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಅದನ್ನು ಜಾರಿಗೊಳಿಸಲು ಹೊರಟಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಹಾಗಾಗಿ ಜಾರಿಗೂ ಮುನ್ನ ರಾಜ್ಯ ಅಧಿವೇಶನದಲ್ಲಿ NEP-2020 ಚರ್ಚೆಯಾಗಲಿ ಎಂದು ಎಸ್.ಐ.ಓ ಸಂಘಟನೆ ಆಗ್ರಹಿಸಿದೆ.


ಇದನ್ನೂ ಓದಿ: ಹೊಸ ಶಿಕ್ಷಣ ನೀತಿ: ದುರ್ಬಲ ವರ್ಗಗಳ ವಿದ್ಯಾರ್ಥಿಗಳಿಗೆ ಮಾಡಿದ ವ್ಯವಸ್ಥಿತ ವಂಚನೆ!

Also Read: NEP 2020: What Hindutva Domination in Education Will Look Like

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...