Homeಕರ್ನಾಟಕಕಟೀಲ್ ವಿರುದ್ಧ ಟೀಕಾಸ್ತ್ರ: ಸಿದ್ದರಾಮಯ್ಯ ಕಾಂಗ್ರೆಸ್ ’ವಿದೂಷಕ’ ಎಂದ ಬಿಜೆಪಿ!

ಕಟೀಲ್ ವಿರುದ್ಧ ಟೀಕಾಸ್ತ್ರ: ಸಿದ್ದರಾಮಯ್ಯ ಕಾಂಗ್ರೆಸ್ ’ವಿದೂಷಕ’ ಎಂದ ಬಿಜೆಪಿ!

ನಳೀನ್ ಕುಮಾರ್ ಕಟೀಲ್ ಅವರ ನಾಯಕತ್ವದಲ್ಲಿ 15 ಕ್ಷೇತ್ರಗಳಲ್ಲಿ 12 ಸ್ಥಾನ ಗೆದ್ದು ಬಿ.ಎಸ್.ಯಡಿಯೂರಪ್ಪ ಅವರ ಗದ್ದುಗೆ ಬಲಪಡಿಸಿದ್ದೇವೆ. ಈ ಉಪಚುನಾವಣೆಯಲ್ಲೂ ಬಿಜೆಪಿ ಗೆಲ್ಲಲಿದೆ.

- Advertisement -
- Advertisement -

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್‌ ಕಟೀಲ್ ವಿರುದ್ಧ ಟೀಕಾಸ್ತ್ರವನ್ನು ಪ್ರಯೋಗಿಸಿದ ಬೆನ್ನಲ್ಲೇ ಬಿಜೆಪಿ ಕೂಡ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸುತ್ತಿದ್ದು, ಅವರನ್ನು ಕಾಂಗ್ರೆಸ್ ’ವಿದೂಷಕ’ ಎಂದು ಕರೆದಿದೆ.

ಸಿದ್ದರಾಮಯ್ಯ ಅವರು ಮಾಡಿದ ಪ್ರತಿ ಪೋಸ್ಟ್‌ಗಳಿಗೂ ಉತ್ತರ ನೀಡುತ್ತಾ ಸರಣಿ ಟ್ವೀಟ್‌ಗಳನ್ನು BJP Karnataka ಅಧಿಕೃತ ಖಾತೆಯಲ್ಲಿ ಪೋಸ್ಟ್‌ ಮಾಡಲಾಗಿದೆ.

ಕಾಂಗ್ರೆಸ್ ಪಕ್ಷದ ಇಬ್ಬರು ನಾಯಕರು ಒಂದೊಂದು ಹಾದಿ ಹಿಡಿದಿದ್ದಾರೆ. ಶಿರಾದಲ್ಲಿ ತನ್ನ ಅಭ್ಯರ್ಥಿ ಗೆಲ್ಲಬೇಕು ಎಂದು ಒಬ್ಬರು ಸಾಹಸ ಪಡುತ್ತಿದ್ದರೆ, ರಾಜರಾಜೇಶ್ವರಿ ನಗರದಲ್ಲಿ ತನ್ನ ಅಭ್ಯರ್ಥಿ ಗೆಲ್ಲಬೇಕು ಎಂದು ಮತ್ತೊಬ್ಬರು ಹರಸಾಹಸ ಪಡುತ್ತಿದ್ದಾರೆ ಎಂದು ನಳೀನ್ ಕುಮಾರ್ ಕಟೀಲ್ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ವಿರುದ್ಧ ಮಾತನಾಡಿದ್ದರು.

ಉಪ ಚುನಾವಣೆ ಮುಗಿದ ಮೇಲೆ ಇಬ್ಬರು ತೆರೆಮರೆಗೆ ಸರಿಯಲಿದ್ದಾರೆ ಎಂಬ ಭವಿಷ್ಯ ನುಡಿದು, ಹುಲಿಯಾ, ಬಂಡೆ ಎಂಬ ಪದಗಳ ಬಗ್ಗೆ ವ್ಯಂಗ್ಯ ವ್ಯಕ್ತಪಡಿಸಿದ್ದರು. ಇದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದರು.

ಇದನ್ನೂ ಓದಿ: ಮಂಗಳೂರಿನಲ್ಲಿ ಬೀದಿ ಅಲೆಯುತ್ತಿದ್ದವ ಬಿಜೆಪಿ ರಾಜ್ಯಾಧ್ಯಕ್ಷ- ಸಿದ್ದರಾಮಯ್ಯ ವ್ಯಂಗ್ಯ

ಕಟೀಲ್ ಅವರನ್ನು ಸಿದ್ದರಾಮಯ್ಯ, ಕಾಡು ಮನುಷ್ಯ, ನಾಲಾಯಕ್, ಬೀದಿ ಅಲೆಯುತ್ತಿದ್ದವ, ಎಲುಬಿಲ್ಲದ ನಾಲಿಗೆ ಮನುಷ್ಯ ಎಂದು ತಮ್ಮ ಟ್ವೀಟ್‌ಗಳಲ್ಲಿ ತಿವಿದಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ, “ಮಾನ್ಯ ಸಿದ್ದರಾಮಯ್ಯ, ನೀವು ಬಳಸುತ್ತಿರುವ ಪದಗಳೇ ಯಾರು ʼಕಾಡು ಮನುಷ್ಯʼ ಎಂಬುದನ್ನು ಸಾಬೀತು ಪಡಿಸುತ್ತಿದೆ. ಕಾಡುಮನುಷ್ಯ, ನಾಲಾಯಕ್‌, ಬೀದಿ ಅಲೆಯುತ್ತಿದ್ದವ, ಎಲುಬಿಲ್ಲದವ ಎಂಬ ನಿಮ್ಮ ಮಾತುಗಳೇ ಕಾಂಗ್ರೆಸ್ ಸಂಸ್ಕೃತಿಯನ್ನು ಬಿಂಬಿಸುತ್ತಿದೆ. ನೀವು ಕರ್ನಾಟಕ ಕಾಂಗ್ರೆಸ್‌ನ ವಿದೂಷಕ ಇದ್ದ ಹಾಗೆ ಆಗಿದೆ!” ಎಂದು ಕಿಡಿಕಾರಿದೆ.

 

ಇನ್ನೊಂದು ಟ್ವೀಟ್‌ನಲ್ಲಿ, “ಸಿದ್ದರಾಮಯ್ಯನವರೇ, ಕಾಂಗ್ರೆಸ್ ಸೇರುವುದುಕ್ಕೂ ಮುನ್ನ ಮೊದಲು ಜೆಡಿಎಸ್‌ನಲ್ಲಿ ಸಕಲ ಅಧಿಕಾರ ಭಾಗ್ಯಗಳನ್ನು ಅನುಭವಿಸಿ, ಅವರಿಗೇ ನಾಮ ಹಾಕಿದ ಮಹಾನುಭಾವರು ನೀವೇ ಅಲ್ಲವೇ? ಬಿಜೆಪಿಯಲ್ಲಿ ಕಷ್ಟಪಟ್ಟು ಕೆಲಸ ಮಾಡಿದರೆ ಉನ್ನತ ಸ್ಥಾನ ಸಿಗುವುದೆಂದು ನೀವೇ ಒಪ್ಪಿಕೊಂಡಿದ್ದಕ್ಕೆ ಧನ್ಯವಾದಗಳು” ಎಂದಿದೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಪಕ್ಷದ ನಾಯಕರೇ ಸಂಚು ರೂಪಿಸುತ್ತಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ, “ಚುನಾವಣೆಯಲ್ಲಿ ಸ್ವಾರ್ಥಕ್ಕಾಗಿ ಪರಮೇಶ್ವರರನ್ನೇ ಸೋಲಿಸಿದ ಕುತಂತ್ರಿ ನೀವಲ್ಲವೇ? ಈ ಹಿಂದಿನ ಉಪಚುನಾವಣೆಯಲ್ಲಿ ನಳೀನ್ ಕುಮಾರ್ ಕಟೀಲ್ ಅವರ ನಾಯಕತ್ವದಲ್ಲಿ 15 ಕ್ಷೇತ್ರಗಳಲ್ಲಿ 12 ಸ್ಥಾನ ಗೆದ್ದು ಬಿ.ಎಸ್.ಯಡಿಯೂರಪ್ಪ ಅವರ ಗದ್ದುಗೆ ಬಲಪಡಿಸಿದ್ದೇವೆ. ಈ ಉಪಚುನಾವಣೆಯಲ್ಲೂ ಬಿಜೆಪಿ ಗೆಲ್ಲಲಿದೆ” ಎಂದು ತಿರುಗೇಟು ನೀಡಿದೆ.

ಇದನ್ನೂ ಓದಿ: ಬಿಹಾರ: ನಿಯಮಗಳ ಉಲ್ಲಂಘನೆ, ಪಕ್ಷಗಳಿಗೆ ಚುನಾವಣಾ ಆಯೋಗ ಎಚ್ಚರಿಕೆ

ಬಿಜೆಪಿ ರಾಜ್ಯಾಧ್ಯಕ್ಷ  ನಳೀನ್ ಕುಮಾರ್ ಕಟೀಲ್ ನಾಲಗೆಯಲ್ಲಿ ಮಾತ್ರ ಅಲ್ಲ, ಬೆನ್ನಿನಲ್ಲಿಯೂ ಎಲುಬಿಲ್ಲ. ಈ ಬೆನ್ನೆಲುಬಿಲ್ಲದ ಅಧ್ಯಕ್ಷನಿಗೆ ತಮ್ಮದೇ ಪಕ್ಷದ ಶಾಸಕರು ಪ್ರತಿದಿನ ತಮ್ಮದೇ ಮುಖ್ಯಮಂತ್ರಿ ವಿರುದ್ಧ ಟೀಕಾಪ್ರಹಾರ ಮಾಡುತ್ತಿದ್ದರೂ ಅವರ ವಿರುದ್ಧ ಕ್ರಮಕೈಗೊಳ್ಳುವ ತಾಕತ್ ಇಲ್ಲ. ನಮ್ಮ ಪಕ್ಷದ ಬಗ್ಗೆ ಕೂಗಾಡ್ತಾರೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.

ಇದಕ್ಕೆ ಕರ್ನಾಟಕ ಬಿಜೆಪಿ, ನಳೀನ್ ಕುಮಾರ್‌ ಕಟೀಲ್ ಅವರು 2019 ರಲ್ಲಿ 2 ಲಕ್ಷಕ್ಕೂ ಅಧಿಕ ಮತಗಳಿಂದ ಗೆದ್ದರು. ಜನತೆ ನಿಮ್ಮ ಬೆನ್ನುಮೂಳೆ ಮುರಿದ ಇತಿಹಾಸ ನೆನಪಿಸಿಕೊಳ್ಳಿ, ಗೆದ್ದದ್ದು ಕೇವಲ 1,696 ಮತಗಳಿಂದ! ಸ್ವಲ್ಪ ವ್ಯತ್ಯಾಸ ಆಗಿದ್ದರೂ ನೀವು ಕಾಡುಮನುಷ್ಯರಂತೆ ಜೀವನ ಮಾಡಬೇಕಿತ್ತು!” ಎಂದು ಟಾಂಗ್ ನೀಡಿದೆ.

ಕಾಂಗ್ರೆಸ್, ಬಿಜೆಪಿ ಜಗಳ ತಾರಕಕ್ಕೆ ಏರುತ್ತಿದ್ದು, ಇವುಗಳ ನಡುವೆ ಜೆಡಿಎಸ್ ಲಾಭ ಪಡೆಯುವ ನಿರೀಕ್ಷೆಯಿದೆ. ಇಷ್ಟು ದಿನ ಕಾಂಗ್ರೆಸ್-ಬಿಜೆಪಿ ಪರಸ್ಪರ ಕೆಸರೆರಚಾಟ ನಡೆಸುತ್ತಿದ್ದವು. ಪಕ್ಷಗಳ ನಡುವಿನ ಜಗಳ ಏನೇ ಇದ್ದರೂ ಸಹ ಉಪ ಚುನಾವಣೆಯಲ್ಲಿ ಮತದಾರನ ತೀರ್ಪು ಅಂತಿಮವಾಗಿರುತ್ತದೆ.


ಇದನ್ನೂ ಓದಿ: ಉಪಚುನಾವಣೆ: ಮೂರೂ ಪಕ್ಷಗಳಿಗೂ ಪ್ರತಿಷ್ಠೆಯ ವಿಷಯವಾಗಿದೆ; ಯಾಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನ.1ರ ಇಂಡಿಯಾ ಒಕ್ಕೂಟದ ರ‍್ಯಾಲಿಗೆ ಬೆಂಬಲ ಘೋಷಿಸಿದ ‘ಪೀಪಲ್ ಅಗೆನ್ಸ್ಟ್ ಎಸ್‌ಐಆರ್’

ವಿರೋಧ ಪಕ್ಷಗಳ ಇಂಡಿಯಾ ಒಕ್ಕೂಟ ನವೆಂಬರ್ 1ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಸಲಿರುವ ಬೃಹತ್ ರ‍್ಯಾಲಿಗೆ ಪೀಪಲ್ ಅಗೆನೆಸ್ಟ್ ಎಸ್‌ಐಆರ್‌ ಬೆಂಬಲ ಘೋಷಿಸಿದೆ. ಪ್ರಜಾಪ್ರಭುತ್ವವನ್ನು ಉಳಿಸಲು, ಎಸ್‌ಐಆರ್ ರದ್ದುಗೊಳಿಸಲು, ಮುಖ್ಯ ಚುನಾವಣಾ ಆಯುಕ್ತ...

‘ನುಸುಳುಕೋರರನ್ನು’ ಹೊರಹಾಕಲು SIR ಎಂದಿತ್ತು ಬಿಜೆಪಿ ಮತ್ತು ಚು. ಆಯೋಗ : ಆರು ರಾಜ್ಯಗಳಲ್ಲಿ ಪತ್ತೆಯಾಗಿದ್ದು ಕೇವಲ 1,600 ವಿದೇಶಿಯರು ಮಾತ್ರ

'ನುಸುಳುಕೋರರನ್ನು' ಪತ್ತೆ ಹಚ್ಚುವುದು ಅಥವಾ 'ವಿದೇಶಿ ಅಕ್ರಮ ವಲಸಿಗರನ್ನು' ಪತ್ತೆ ಹಚ್ಚುವುದು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಪ್ರಮುಖ ಉದ್ದೇಶಗಳಲ್ಲಿ ಒಂದಾಗಿದೆ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಹೇಳಿತ್ತು....

ಸಂತ್ರಸ್ತೆ ಮತ್ತು ಆರೋಪಿ ನಡುವಿನ ‘ಒಪ್ಪಂದ’ವನ್ನಷ್ಟೇ ಆಧರಿಸಿ ಅತ್ಯಾಚಾರ ಪ್ರಕರಣ ರದ್ದುಗೊಳಿಸಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಪಕ್ಷಕಾರರ (ಸಂತ್ರಸ್ತೆ ಮತ್ತು ಆರೋಪಿ) ನಡುವಿನ ರಾಜಿ ಸಂಧಾನದ ಆಧಾರದ ಮೇಲೆ ಅತ್ಯಾಚಾರ ಪ್ರಕರಣವನ್ನು ರದ್ದುಗೊಳಿಸಿದ್ದ ಮಧ್ಯಪ್ರದೇಶ ಹೈಕೋರ್ಟ್‌ನ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಕೇವಲ ಒಪ್ಪಂದದ ಆಧಾರದ ಮೇಲೆ ಗಂಭೀರ ಅಪರಾಧಗಳನ್ನು...

DELHI SIR : 2026ರ ಮತದಾರರ ಪಟ್ಟಿಯಲ್ಲಿದ್ದರೂ ಕೂಡ ಡಿಲಿಟೆಡ್ ವೋಟರ್ಸ್ ಫಾರಂ-6 ಸಲ್ಲಿಸುವಂತೆ ಸೂಚಿಸಿದ್ದು ಏಕೆ? ಚು. ಆಯೋಗಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

ದೆಹಲಿಯ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಸಂಬಂಧಿಸಿದಂತೆ, 2026ರ ಮತದಾರರ ಪಟ್ಟಿಯಲ್ಲಿದ್ದರೂ ಸಹ ಗಣತಿ ನಮೂನೆಗಳನ್ನು (enumeration forms) ಭರ್ತಿ ಮಾಡದ ಕಾರಣಕ್ಕಾಗಿ ಕರಡು ಪಟ್ಟಿಯಿಂದ ಹೆಸರನ್ನು ಕಳೆದುಕೊಂಡಿರುವ ವ್ಯಕ್ತಿಗಳು,...

ಮರ್ಯಾದೆಗೇಡು ಹತ್ಯೆ ಶಂಕೆ: ದಲಿತ ಯುವಕನನ್ನು ಇಟ್ಟಿಗೆಯಿಂದ ಹೊಡೆದು ಕೊಂದ ಪತ್ನಿಯ ಸಹೋದರ ಬಂಧನ

ಉತ್ತರ ಪ್ರದೇಶದ ಮುಜಫ್ಫರ್‌ನಗರ ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನನ್ನು ಇಟ್ಟಿಗೆಗಳಿಂದ ಹೊಡೆದು ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಇದು ಮರ್ಯಾದೆಗೇಡು ಹತ್ಯೆ ಶಂಕೆಗೆ ಕಾರಣವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನ ಪತ್ನಿಯ ಹಿರಿಯ...

Karnataka SIR | ಅಂತಿಮ ಮತದಾರರ ಪಟ್ಟಿಯನ್ನು ತಿರಸ್ಕರಿಸಿದ ಹೋರಾಟಗಾರರು : ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್‌ಗೆ ಬಹಿರಂಗ ಸವಾಲು

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಳಿಕ ಮಂಗಳವಾರ (ಅ.27) ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿರುವ ಅಂತಿಮ ಮತದಾರರ ಪಟ್ಟಿಯನ್ನು ಹೋರಾಟಗಾರರು ತಿರಸ್ಕರಿಸಿದ್ದು, ಹೋರಾಟ ಮುಂದುವರಿಸುವ ಘೋಷಣೆ ಮಾಡಿದ್ದಾರೆ. ಬುಧವಾರ (ಅ.28) ಬೆಂಗಳೂರಿನ ಶಾಸಕರ ಭವನದಲ್ಲಿ...

ಜಾಮಿಯಾ ವಿದ್ಯಾರ್ಥಿಗಳ ಪ್ರತಿಭಟನೆಗೆ ಕಾಂಗ್ರೆಸ್ ಬೆಂಬಲ; ಪ್ರತಿಭಟನಾ ಸ್ಥಳಕ್ಕೆ ರಾಹುಲ್ ಗಾಂಧಿ ಭೇಟಿ ಸಾಧ್ಯತೆ

ಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಪ್ರತಿಭಟನಾ ಸ್ಥಳಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ನೀಡುವ ನಿರೀಕ್ಷೆಯಿರುವ ಬೆನ್ನಲ್ಲೇ, ವಿದ್ಯಾರ್ಥಿಗಳ ಹೋರಾಟಕ್ಕೆ ಪಕ್ಷವು ಬೆಂಬಲ ವ್ಯಕ್ತಪಡಿಸಿದೆ. ವಿದ್ಯಾರ್ಥಿ ಸಂಘವನ್ನು (ಜೆಎಂಐಎಸ್‌ಯು)...

ಎಂಎಲ್‌ಸಿ ಚುನಾವಣೆ ಸೋಲಿನ ಹಿಂದಿರುವ ರಾಜಕೀಯ – ಸಂಘಟನಾತ್ಮಕ ಕಾರಣಗಳ ಕುರಿತು ಪರಾಮರ್ಶಿಸುತ್ತೇವೆ: ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್

ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳಿಗೆ ನಡೆದ ವಿಧಾನ ಪರಿಷತ್ ಚುನಾವಣೆಯ ಸೋಲಿನ ಹಿಂದಿರುವ ರಾಜಕೀಯ ಹಾಗೂ ಸಂಘಟನಾತ್ಮಕ ಕಾರಣಗಳ ಕುರಿತು ಸಮಗ್ರ ಪರಾಮರ್ಶೆ ನಡೆಸುತ್ತೇವೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್...

ಸ್ಪೇನ್‌ನಲ್ಲಿ ಅತಿ ವೇಗದ ರೈಲುಗಳ ನಡುವೆ ಡಿಕ್ಕಿ; ಕನಿಷ್ಠ 46 ಮಂದಿ ಸಾವು

ಸ್ಪೇನ್‌ನ ಟೊಲೆಡೊ ಪ್ರಾಂತ್ಯದಲ್ಲಿ ಬುಧವಾರ ಬೆಳಿಗ್ಗೆ ಎರಡು ಅತಿ ವೇಗದ ರೈಲುಗಳ ನಡುವೆ ಡಿಕ್ಕಿ ಸಂಭವಿಸಿ ಕನಿಷ್ಠ 46 ಮಂದಿ ಮೃತಪಟ್ಟಿದ್ದಾರೆ ಎಂದು ಸ್ಪೇನ್‌ನ ಎಬಿಸಿ (ಎಬಿಸಿ) ಸುದ್ದಿ ಸಂಸ್ಥೆ ವರದಿ ಮಾಡಿದೆ....

ಇಸ್ರೇಲ್ ಚುನಾವಣೆಯಲ್ಲಿ ಸಿಗದ ಬಹುಮತ; ಆದರೂ ಗೆಲುವಿನ ಹಕ್ಕು ಮಂಡಿಸಿದ ನೆತನ್ಯಾಹು

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಅರಬ್ ಪಕ್ಷಗಳ ಬೆಂಬಲದೊಂದಿಗೆ ಸರ್ಕಾರ ರಚಿಸುವ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ. ಜೆರುಸಲೇಮ್‌ನಲ್ಲಿರುವ ಲಿಕುಡ್ ಪಕ್ಷದ ಪ್ರಧಾನ ಕಚೇರಿಯಲ್ಲಿ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಅವರು, ಯಹೂದಿ ಮತ್ತು ಝಿಯೋನಿಸ್ಟ್...