ಕೊರೊನಾ ಲಸಿಕೆಯನ್ನು ಉಚಿತವಾಗಿ ಕೊಡುತ್ತೇವೆ ಎಂದು ನಿರ್ಮಲಾ ಸೀತಾರಾಮನ್ ಬಿಹಾರ ಚುನಾವಣೆಯ ತಮ್ಮ ಪಕ್ಷದ ಪ್ರನಾಳಿಕೆಯಲ್ಲಿ ಘೋಷಿಸಿದ್ದಾರೆ. ಇದು ದೇಶದಾದ್ಯಂತ ವ್ಯಾಪಕ ಟೀಕೆಗೆ ಗುರಿಯಾಗಿತ್ತು. ಈಗ ಕರ್ನಾಟಕದ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿ, “ಕೊರೊನಾ ಭೀತಿಗೆ ಒಳಗಾಗಿರುವ ಜನತೆಗೆ ಉಚಿತ ಕೊರೊನಾ ಲಸಿಕೆ ಕೊಡಿಸುವ ಧಮ್ ಇದೆಯಾ ನಳಿನ್ ಕುಮಾರ್ ಕಟೀಲ್” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದರ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ಪ್ರಾಣ ರಕ್ಷಕ ಕೊರೊನಾ ಲಸಿಕೆಯನ್ನು ಬಿಹಾರ ರಾಜ್ಯಕ್ಕೆ ಉಚಿತವಾಗಿ ನೀಡುವ ಭರವಸೆ ನೀಡಿರುವ ನಮ್ಮ ರಾಜ್ಯದ ರಾಜ್ಯಸಭಾ ಸದಸ್ಯೆ ಮತ್ತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಔದಾರ್ಯದ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸುವಿರಾ ನಳಿನ್ ಕುಮಾರ್ ಅವರೇ? ನಮ್ಮ ರಾಜ್ಯದಿಂದಲೇ ರಾಜ್ಯಸಭೆಗೆ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್ ಅವರ ಮನವೊಲಿಸಿ, ನಿಮ್ಮದೇ ಪಕ್ಷ ಅಧಿಕಾರದಲ್ಲಿರುವ ಕರ್ನಾಟಕದದಲ್ಲಿ ಕೊರೊನಾದಿಂದ ಭೀತಿಗೊಳಗಾಗಿರುವ ಜನರಿಗೆ ಕೊರೊನಾ ಲಸಿಕೆಯನ್ನು ಉಚಿತವಾಗಿ ಕೊಡಿಸುವ ‘ಧಮ್’ (ಇದು ನಿಮ್ಮದೇ ಭಾಷೆ) ನಿಮಗಿದೆಯೇ ಶ್ರೀ ನಳಿನ್ ಕುಮಾರ್ ಅವರೇ?” ಎಂದು ಟ್ವೀಟ್ ಮಾಡಿದ್ದಾರೆ.
ಪ್ರಾಣ ರಕ್ಷಕ ಕೊರೊನಾ ಲಸಿಕೆಯನ್ನು ಬಿಹಾರ ರಾಜ್ಯಕ್ಕೆ ಉಚಿತವಾಗಿ ನೀಡುವ ಭರವಸೆ ನೀಡಿರುವ ನಮ್ಮ ರಾಜ್ಯದ ರಾಜ್ಯಸಭಾ ಸದಸ್ಯೆ ಮತ್ತು ಕೇಂದ್ರ ಹಣಕಾಸು ಸಚಿವೆ @nsitharaman ಅವರ ಔದಾರ್ಯದ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸುವುರಾ @nalinkateel ಅವರೇ?
1/2— Siddaramaiah (@siddaramaiah) October 23, 2020
ನಮ್ಮ ರಾಜ್ಯದಿಂದಲೇ ರಾಜ್ಯಸಭೆಗೆ ಆಯ್ಕೆಯಾಗಿರುವ @nsitharaman ಅವರ ಮನವೊಲಿಸಿ,
ನಿಮ್ಮದೇ ಪಕ್ಷ ಅಧಿಕಾರದಲ್ಲಿರುವ ಕರ್ನಾಟಕದದಲ್ಲಿ ಕೊರೊನಾದಿಂದ ಭೀತಿಗೊಳಗಾಗಿರುವ ಜನರಿಗೆ ಕೊರೊನಾ ಲಸಿಕೆಯನ್ನು ಉಚಿತವಾಗಿ ಕೊಡಿಸುವ 'ಧಮ್' (ಇದು ನಿಮ್ಮದೇ ಭಾಷೆ) ನಿಮಗಿದೆಯೇ ಶ್ರೀ @nalinkateel ಅವರೇ?
2/2— Siddaramaiah (@siddaramaiah) October 23, 2020
ನಿನ್ನೆ ನಳಿನ್ ಕುಮಾರ್ ಕಟೀಲ್ ಮತ್ತು ಸಿದ್ದರಾಮಯ್ಯ ನಡುವೆ ವಾಕ್ಸಮರ ನಡೆದಿದ್ದು, ಉಭಯ ನಾಯಕರು ಪರಸ್ಪರ ಆರೋಪ ಪ್ರತ್ಯಾರೋಪಗಳನ್ನು ಮಾಡಿದ್ದರು.
ಇದನ್ನೂ ಓದಿ: ’ಹೋರಾಟಕ್ಕಾಗಿ ಮತ್ತೆ ಬೀದಿಗೆ ಇಳಿಯಲಿದ್ದೇವೆ’: ಸುಪ್ರೀಂ ತೀರ್ಪಿಗೆ ಖಂಡನೆ


