Homeಮುಖಪುಟಪಂಜಾಬ್: ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಮಗನಿಗೆ ಜಾರಿ ನಿರ್ದೇಶನಾಲಯ ನೋಟಿಸ್!

ಪಂಜಾಬ್: ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಮಗನಿಗೆ ಜಾರಿ ನಿರ್ದೇಶನಾಲಯ ನೋಟಿಸ್!

2016 ರ ಹಿಂದೆಯೇ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಅಥವಾ ಫೆಮಾವನ್ನು ಉಲ್ಲಂಘಿಸಿದ ಆರೋಪದ ಮೇಲೆ ರಣಿಂದರ್ ಸಿಂಗ್ ಅವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು

- Advertisement -
- Advertisement -

ಅಕ್ರಮ ವಿದೇಶಿ ನಿಧಿ ವರ್ಗಾವಣೆ ಪ್ರಕರಣದಲ್ಲಿ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರ ಮಗ ರಣಿಂದರ್ ಸಿಂಗ್‌ಗೆ ಜಾರಿ ನಿರ್ದೇಶನಾಲಯ ಮಂಗಳವಾರ ನೋಟಿಸ್ ನೀಡಿದೆ.

2016 ರ ಹಿಂದೆಯೇ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಅಥವಾ ಫೆಮಾವನ್ನು ಉಲ್ಲಂಘಿಸಿದ ಆರೋಪದ ಮೇಲೆ ರಣಿಂದರ್ ಸಿಂಗ್ ಅವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು.

ಬ್ರಿಟಿಷ್ ವರ್ಜಿನ್ ದ್ವೀಪಗಳ ತೆರಿಗೆ ಧಾಮದಲ್ಲಿ ಸ್ವಿಟ್ಜರ್ಲೆಂಡ್‌ಗೆ ಹಣದ ವರ್ಗಾವಣೆ ಸೇರಿದಂತೆ ಟ್ರಸ್ಟ್ ಮತ್ತು ಕೆಲವು ಅಂಗಸಂಸ್ಥೆಗಳನ್ನು ರಚಿಸಲಾಗಿರುವುದರ ಕುರಿತು ವಿವರಣೆ ನೀಡಲು ರಣಿಂದರ್ ಸಿಂಗ್ ಅವರಿಗೆ ಸಮನ್ಸ್ ನೀಡಲಾಗಿದೆ.

ಈ ಹಿಂದೆ ಉಲ್ಲಂಘನೆ ಕುರಿತು ಆದಾಯ ತೆರಿಗೆ ಇಲಾಖೆ ತನಿಖೆ ನಡೆಸಿ ಪಂಜಾಬ್‌ನ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ನಾನು ಬಂಡೆ ಅಲ್ಲ; ಬಿಜೆಪಿ ಸರ್ಕಾರದ ವಿರುದ್ಧ ಜನ ಬೀಸುವ ಕಲ್ಲು: ಡಿ.ಕೆ.ಶಿವಕುಮಾರ್

ರಣಿಂದರ್ ಸಿಂಗ್ ಅವರು ಈ ಹಿಂದೆ, “ಮರೆಮಾಡಲು ಏನೂ ಇಲ್ಲ ಮತ್ತು ತನಿಖೆಗೆ ಸಹಕರಿಸಲು ಸಿದ್ಧವಾಗಿದ್ದೇನೆ” ಎಂದು ಹೇಳಿದ್ದರು.

2011 ರಲ್ಲಿ ಸೆಂಟ್ರಲ್ ಬೋರ್ಡ್ ಆಫ್ ಡೈರೆಕ್ಟ್ ಟ್ಯಾಕ್ಸ್ ಇಲಾಖೆಯು ತನ್ನ ಫ್ರೆಂಚ್ ಸಹವರ್ತಿಗಳಿಂದ ಪಡೆದ ವಿವರಗಳ ಭಾಗವಾಗಿ, ಆಲ್ಪೈನ್ ರಾಷ್ಟ್ರದಲ್ಲಿ ರಣಿಂದರ್ ಸಿಂಗ್ ಅವರು ಕಡಲಾಚೆಯ ಖಾತೆಯನ್ನು ಹೊಂದಿದ್ದಾರೆಂದು ಮಾಹಿತಿ ಬಂದಿದ್ದರಿಂದ ಈ ಪ್ರಕರಣ ದಾಖಲಾಗಿದೆ.

ರಣಿಂದರ್ ಸಿಂಗ್ ಮತ್ತು ಅವರ ತಂದೆ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಈ ಎಲ್ಲಾ ಆರೋಪಗಳನ್ನೂ ನಿರಾಕರಿಸಿ, ಇದನ್ನು ಸುಳ್ಳು ಎಂದಿದ್ದಾರೆ.


ಇದನ್ನೂ ಓದಿ: ನ.9ರಂದು ಲಾಲೂ ಜೈಲಿನಿಂದ ಹೊರಗೆ; ಮರುದಿನ ನಿತೀಶ್‌ಗೆ ಬೀಳ್ಕೊಡುಗೆ: ತೇಜಸ್ವಿ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...