Homeಮುಖಪುಟಸೀತಾ ದೇವಿಗಾಗಿ ರಾಮಮಂದಿರಕ್ಕಿಂತ ದೊಡ್ಡ ಭವ್ಯ ಮಂದಿರ ನಿರ್ಮಾಣ - ಚಿರಾಗ್ ಪಾಸ್ವಾನ್

ಸೀತಾ ದೇವಿಗಾಗಿ ರಾಮಮಂದಿರಕ್ಕಿಂತ ದೊಡ್ಡ ಭವ್ಯ ಮಂದಿರ ನಿರ್ಮಾಣ – ಚಿರಾಗ್ ಪಾಸ್ವಾನ್

'ಮಹಿಳಾ ಸಬಲೀಕರಣದ ಬಗ್ಗೆ ನಾವು ತುಂಬಾ ಮಾತನಾಡುತ್ತೇವೆ. ಮಹಿಳಾ ಸಬಲೀಕರಣದ ಸಂಕೇತವಾದ ಸೀತಾ ದೇವಿಗಾಗಿ, ಅಯೋಧ್ಯೆಯ ರಾಮ್ ಮಂದಿರಕ್ಕಿಂತ ದೊಡ್ಡದಾದ ದೇವಾಲಯವನ್ನು ಬಿಹಾರದಲ್ಲಿ ನಿರ್ಮಿಸಬೇಕೆಂದು ನಾನು ಬಯಸುತ್ತೇನೆ'

- Advertisement -
- Advertisement -

ಬಿಹಾರ ಚುನಾವಣಾ ಪ್ರಚರದಲ್ಲಿರುವ ಎಲ್‌ಜೆಪಿ ನಾಯಕ ಚಿರಾಗ್ ಪಾಸ್ವಾನ್, ಬಿಹಾರದ ಸೀತಮಾರ್ಹಿಯಲ್ಲಿ ರಾಮಮಂದಿರಕ್ಕಿಂತ ದೊಡ್ಡ ಭವ್ಯ ಸೀತಾ ಮಂದಿರ ನಿರ್ಮಾಣ ಮಾಡಲಾಗುವುದು. ಸೀತಾ ದೇವಿಯಿಲ್ಲದೆ ಭಗವಾನ್ ರಾಮ ಅಪೂರ್ಣ ಎಂದಿದ್ದಾರೆ.

1990ರ ದಶಕದಲ್ಲಿ ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿಯ ರಥಯಾತ್ರೆ, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಬಿಜೆಪಿಯ ಯಶಸ್ವಿ ಅಭಿಯಾನವಾಗಿತ್ತು. ಈಗ ಅದನ್ನೇ ಚಿರಾಗ್ ಪಾಸ್ವಾನ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಸೀತಾಮರ್ಹಿಯನ್ನು ಮಾತೆ ಸೀತಾ ದೇವಿಯ ಜನ್ಮಸ್ಥಳವೆಂದು ನಂಬಲಾಗಿದೆ.

“ದೇವಾಲಯವು ಎಲ್ಲಾ ಮೂಲಸೌಕರ್ಯಗಳ ಯೋಜನೆಯೊಂದಿಗೆ ನಿಮಾಣವಾಗಲಿದೆ. “ಸೀತಾ ದೇವಿಯಿಲ್ಲದೆ ಭಗವಾನ್ ರಾಮ ಅಪೂರ್ಣ. ಆದ್ದರಿಂದ, ಅಯೋಧ್ಯೆಯ ರಾಮ ದೇವಾಲಯ ಮತ್ತು ಸೀತಾಮರ್ಹಿಯನ್ನು ಸಂಪರ್ಕಿಸುವ ಕಾರಿಡಾರ್ ಯೋಜನೆ ಕೂಡ ಮಾಡಲಾಗುವುದು” ಎಂದು ಚಿರಾಗ್ ಪಾಸ್ವಾನ್ ಹೇಳಿದ್ದಾರೆ. ಈ ಭರವಸೆ ತನ್ನ ಚುನಾವಣಾ ಪ್ರಣಾಳಿಕೆಯ ಭಾಗವಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ನಕಲಿ ಚೆಕ್ ಮೂಲಕ ಅಯೋಧ್ಯೆ ಮಂದಿರ ಟ್ರಸ್ಟ್‌ನಿಂದ 6 ಲಕ್ಷ ರೂ ಕಳ್ಳತನ!

‘ಮಹಿಳಾ ಸಬಲೀಕರಣದ ಬಗ್ಗೆ ನಾವು ತುಂಬಾ ಮಾತನಾಡುತ್ತೇವೆ. ಮಹಿಳಾ ಸಬಲೀಕರಣದ ಸಂಕೇತವಾದ ಸೀತಾ ದೇವಿಗಾಗಿ, ಅಯೋಧ್ಯೆಯ ರಾಮ್ ಮಂದಿರಕ್ಕಿಂತ ದೊಡ್ಡದಾದ ದೇವಾಲಯವನ್ನು ಬಿಹಾರದಲ್ಲಿ ನಿರ್ಮಿಸಬೇಕೆಂದು ನಾನು ಬಯಸುತ್ತೇನೆ’ ಎಂದು ಬಿಹಾರದ ಸೀತಮಾರ್ಹಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಹೇಳಿದ್ದಾರೆ.

ಈ ಹಿಂದೆ ಏಪ್ರಿಲ್‌ನಲ್ಲಿ ಬಿಹಾರದ ಪುರಾಣ ಧಾಮ್‌ನಲ್ಲಿರುವ ಹಳೆಯ ಸೀತಾ ದೇವಾಲಯದ ಸುತ್ತ ವಾಯುವಿಹಾರವನ್ನು ನಿರ್ಮಿಸುವುದಾಗಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಘೋಷಿಸಿದರು. ಈಗ ಅದಕ್ಕಿಂತ ಮುಂದೆ ಹೋಗಿರುವ ಚಿರಾಗ್ ಪಾಸ್ವಾನ್ ರಾಮಮಂದಿರಕ್ಕಿಂತ ಭವ್ಯ ಮಂದಿರವನ್ನು ಸೀತಾಮಾತೆಗಾಗಿ ಕಟ್ಟಲಾಗುವುದು ಎಂದು ಘೋಷಿಸಿದ್ದಾರೆ.

ಇದನ್ನೂ ಓದಿ: ಓದುಗರ ಪತ್ರ: ಅಯೋಧ್ಯೆಯಲ್ಲಿ ಶ್ರೀರಾಮನಿದ್ದ ಎಂಬುದಕ್ಕೆ ಕೆಲವು ಪ್ರಶ್ನೆಗಳು

ಡಿಸೆಂಬರ್ 6, 1992 ರಂದು, ಅಯೋಧ್ಯೆಯಲ್ಲಿ ರಾಮನ ಜನ್ಮಸ್ಥಳದ ಮೇಲೆ ಮಸೀದಿ ಕಟ್ಟಲಾಗಿದೆ ಎಂದು, ಕರ ಸೇವಕರು 16 ನೇ ಶತಮಾನದಲ್ಲಿ ಮೊಘಲ್ ಚಕ್ರವರ್ತಿ ಬಾಬರ್ ನಿರ್ಮಿಸಿದನೆಂದು ನಂಬಲಾಗಿದ್ದ ಬಾಬರಿ ಮಸೀದಿಯನ್ನು ಧ್ವಂಸ ಮಾಡಿದರು. ಆ ನಂತರದ ಹಿಂಸಾಚಾರದಲ್ಲಿ 2,000ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು. ಸುಪ್ರೀಂಕೋರ್ಟ್ ತೀರ್ಪು ರಾಮ ಮಂದಿರ ನಿರ್ಮಾಣಕ್ಕೆ ಅವಕಾಶ ನಿಡಿದ ಹಿನ್ನೆಲೆ, ಈಗ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ನಡೆಯುತ್ತಿದೆ.

ಚಿರಾಗ್ ಪಾಸ್ವಾನ್, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್‌ ಅವರನ್ನು ಬೆಂಬಲಿಸದ ಬಿಜೆಪಿ ಮತದಾರರಿಂದಲೂ ಮತಗಳನ್ನು ಕೋರಿ ಇಂದು ತಮ್ಮ ಅಭಿಯಾನವನ್ನು ನಡೆಸಿದ್ದಾರೆ.

ಬಿಹಾರ ಚುನಾವಣೆಯಲ್ಲಿ ಚಿರಾಗ್ ನೇತೃತ್ವದ ಎಲ್‌ಜೆಪಿ, 243 ಸದಸ್ಯರ ವಿಧಾನಸಭೆಗೆ 143 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಅಕ್ಟೋಬರ್ 21ರಿಂದ ಚಿರಾಗ್ ಪ್ರಚಾರ ಆರಂಭಿಸಿದ್ದಾರೆ. ಅಕ್ಟೋಬರ್ 28, ನವೆಂಬರ್ 3 ಮತ್ತು 7 ರಂದು ಮತದಾನ ನಡೆಯಲಿದ್ದು, ನವೆಂಬರ್ 10 ರಂದು ಫಲಿತಾಂಶ ಹೊರಬೀಳಲಿದೆ.


ಇದನ್ನೂ ಓದಿ: ಬಿಹಾರ ಚುನಾವಣೆ: ಉಚಿತ ಕೊರೊನಾ ಲಸಿಕೆ ಪ್ರಸ್ತಾಪ; ಟ್ರೋಲ್‌ ಆದ ಬಿಜೆಪಿ ಪ್ರಣಾಳಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮಹಿಳೆರಿಗೆ ಸಮಾನ ಅವಕಾಶವನ್ನು ಕಲ್ಪಿಸಿಕೊಟ್ಟ೧೨ನೆ ಶತಮಾನದ ಬಸವಾದಿ ಶರಣರು ಜಗತಿನ ಮೊಟ್ಟ ಮೊದಲನೆಯ ಸಂಸತ್ತಿನಲ್ಲಿ ಅದು ಬಸವಣ್ಣವರು ನಿರ್ಮಿಸಿದ ಅನುಅಭವ ಮಂಟಪ
    ವಿಶ್ವಕ್ಕೆ ಮಾದರಿ ಯಾದ ಅನುಭವ ಮಂಟಪ ನಿರ್ಮಾಣ ಮಾಡಿ .
    ಜಗತ್ತಿಗೆ ಬೆಳಕು ನೀಡಿದ ವಚನ ಸಾಹಿತ್ಯದ ಚಿಂತನೆ ಆಗ್ಬೇಕು ಮೊದಲು

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...