HomeಮುಖಪುಟBJP ಇನ್ನೂ ಯಾಕೆ ಸಾವರ್ಕರ್‌‌ಗೆ ಭಾರತ ರತ್ನ ನೀಡಿಲ್ಲ: ಶಿವಸೇನೆ ಪ್ರಶ್ನೆ

BJP ಇನ್ನೂ ಯಾಕೆ ಸಾವರ್ಕರ್‌‌ಗೆ ಭಾರತ ರತ್ನ ನೀಡಿಲ್ಲ: ಶಿವಸೇನೆ ಪ್ರಶ್ನೆ

ಸಾವರ್ಕರ್ ಅವರನ್ನು ಅವಮಾನಿಸಿದ ಕಾಂಗ್ರೆಸ್ ಜೊತೆ ಶಿವಸೇನೆ ಮೈತ್ರಿ ಮಾಡಿಕೊಂಡಿದೆ ಎಂದು ಬಿಜೆಪಿ ನಾಯಕರು ಹಿಂದುತ್ವ ಕುರಿತು ಶಿವಸೇನೆಯನ್ನು ತರಾಟೆಗೆ ಪಡೆದಿದ್ದರು.

- Advertisement -
- Advertisement -

ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ತನ್ನ ಹಿಂದಿನ ಮೈತ್ರಿ ಪಕ್ಷವಾದ ಬಿಜೆಪಿ ಮೇಲೆ ಹಿಂದುತ್ವದ ಬಗ್ಗೆ ವಾಗ್ದಾಳಿ ನಡೆಸಿದ್ದರು, ಇದೀಗ ಮತ್ತೇ ಉಭಯ ಪಕ್ಷಗಳ ನಡುವೆ ವಾಗ್ದಾಳಿ ಮುಂದುವರೆದಿದ್ದು, ಇದೀಗ ಶಿವಸೇನೆಯ ಸಂಸದ ಸಂಜಯ್ ರಾವತ್‌, ಬಿಜೆಪಿ ಸಾವರ್ಕರ್‌ಗೆ ಇನ್ನೂ ಯಾಕೆ ಭಾರತ ರತ್ನ ನೀಡಿಲ್ಲ? ಎಂದು ಪ್ರಶ್ನಿಸಿದ್ದಾರೆ.

ಸಾವರ್ಕರ್ ಅವರನ್ನು ಅವಮಾನಿಸಿದ ಕಾಂಗ್ರೆಸ್ ಜೊತೆ ಶಿವಸೇನೆ ಮೈತ್ರಿ ಮಾಡಿಕೊಂಡಿದೆ ಎಂದು ಬಿಜೆಪಿ ನಾಯಕರು ಹಿಂದುತ್ವ ಕುರಿತು ಶಿವಸೇನೆಯನ್ನು ತರಾಟೆಗೆ ಪಡೆದಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಶಿವಸೇನೆ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ದೇಶದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ಸಾವರ್ಕರ್‌ಗೆ ಏಕೆ ನೀಡುತ್ತಿಲ್ಲ ಕೇಳಿದೆ.

ಇದನ್ನೂ ಓದಿ: ಅರ್ನಾಬ್ ಗೋಸ್ವಾಮಿ ಕೈಮುಗಿದು ಕ್ಷಮೆಯಾಚಿಸಲಿ: ಶಿವಸೇನೆ ಮುಖಂಡನ ಆಗ್ರಹ

“ಶಿವಸೇನೆಯ ದಸರಾ ರ್‍ಯಾಲಿಯಲ್ಲಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸಾವರ್ಕರ್ ಹಿಂದುತ್ವದ ಬಗ್ಗೆ ಪಾಠ ಮಾಡಿದರು. ರ್‍ಯಾಲಿಯಲ್ಲಿ ಸಾವರ್ಕರ್‌ ಬಗ್ಗೆ ಒಂದೇ ಒಂದು ಪ್ರಶಂಸೆ ಯಾಕೆ ಆಡಲಿಲ್ಲ ಎಂಬುದು ಪ್ರಶ್ನೆ. ಬಹುಶಃ, ಸಾವರ್ಕರ್ ವಿರುದ್ಧ ಪದೇ ಪದೇ ಅವಹೇಳನಕಾರಿ ಹೇಳಿಕೆಗಳನ್ನು ಬಳಸುತ್ತಿರುವ ತನ್ನ ಹೊಸ ಸ್ನೇಹಿತರ ಬಗ್ಗೆ ಅವರು ಹೆದರುತ್ತಿದ್ದಾರೆ” ಎಂದು ಬಿಜೆಪಿ ವಕ್ತಾರ ರಾಮ್ ಕದಮ್ ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ಶಿವಸೇನೆ ಮುಖ್ಯ ವಕ್ತಾರ ಸಂಜಯ್ ರಾವತ್, ”ಸಾವರ್ಕರ್ ಬಗ್ಗೆ ಪಕ್ಷದ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಅವರನ್ನು ಅವಮಾನಿಸಲು ಅನುಚಿತವಾದ ಕಾಮೆಂಟ್ ಮಾಡಿದಾಗಲೆಲ್ಲಾ ನಾವು ಸಾವರ್ಕರ್‌ ಪರವಾಗಿ ನಿಂತಿದ್ದೇವೆ. ನಾವು ಯಾವಾಗಲೂ ಅವರೊಂದಿಗೆ ಭಾವನಾತ್ಮಕ ಸಂಪರ್ಕವನ್ನು ಹೊಂದಿದ್ದೇವೆ. ನಮ್ಮನ್ನು ಟೀಕಿಸುವವರು ಈಗ ಆರು ವರ್ಷದಿಂದ ಅಧಿಕಾರದಲ್ಲಿದ್ದಾರೆ, ಅವರಿಗೆ ಭಾರತ್ ರತ್ನವನ್ನು ಯಾಕೆ ನೀಡಲಿಲ್ಲ ಎಂದು ಉತ್ತರಿಸಬೇಕು” ಎಂದು ಹೇಳಿದರು.

ಮುಖ್ಯಮಂತ್ರಿಯಾದ ನಂತರ ನೀಡಿದ ಮೊಲದ ದಸರಾ ರ್‍ಯಾಲಿಯಲ್ಲಿ ಮಾತನಾಡಿದ ಉದ್ದವ್ ಠಾಕ್ರೆ, ತನ್ನ ತಂದೆ ಬಾಲಾಸಾಹೇಬ್ ಠಾಕ್ರೆ ಅವರ ಹಿಂದುತ್ವವೆಂದರೆ ಘಂಟೆಗಳು ಮತ್ತು ಪಾತ್ರೆಗಳನ್ನು ಬಡಿಯುವುದಲ್ಲ ಎಂದು ಅವರು ಬಿಜೆಪಿಯನ್ನು ಟೀಕಿಸಿದ್ದರು.

ಇದನ್ನೂ ಓದಿ: ಉಚಿತ ಕೊರೊನಾ ಲಸಿಕೆ ವಿವಾದ: ಬಿಹಾರೇತರ ರಾಜ್ಯದವರು ಬಾಂಗ್ಲಾದೇಶದವರೇ- ಶಿವಸೇನೆ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...