Homeಮುಖಪುಟಶ್ರೀನಗರ: ರಾಷ್ಟ್ರಧ್ವಜ ಹಾರಿಸಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರ ಬಂಧನ

ಶ್ರೀನಗರ: ರಾಷ್ಟ್ರಧ್ವಜ ಹಾರಿಸಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರ ಬಂಧನ

ಜಮ್ಮು ಮತ್ತು ಕಾಶ್ಮೀರದ ಧ್ವಜವನ್ನು ಪುನಃಸ್ಥಾಪಿಸುವವರೆಗೆ ತ್ರಿವರ್ಣಧ್ವಜ ಹಿಡಿಯುವುದಿಲ್ಲ ಎಂದು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಹೇಳಿದ್ದರು.

- Advertisement -
- Advertisement -

ಶ್ರೀನಗರದ ಲಾಲ್ ಚೌಕ್‌ನಲ್ಲಿರುವ ಘಂಟಾ ಘರ್‌ (ಗಡಿಯಾರ ಗೋಪುರ‌) ಮೇಲೆ ರಾಷ್ಟ್ರಧ್ವಜ ಹಾರಿಸಲು ಯತ್ನಿಸುತ್ತಿದ್ದ ಮೂವರು ಭಾರತೀಯ ಜನತಾ ಪಕ್ಷ (ಬಿಜೆಪಿ) ಕಾರ್ಯಕರ್ತರನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಂಧಿಸಿದ್ದಾರೆ.

‘ಭಾರತ್ ಮಾತಾ ಕಿ ಜೈ’ ಎಂಬ ಘೋಷಣೆಗಳನ್ನು ಕೂಗುತ್ತಾ, ನಗರದಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಲು ಬಿಜೆಪಿ ಕಾರ್ಯಕರ್ತರು ಪ್ರಯತ್ನಿಸಿದರು. ಜೊತೆಗೆ ಶ್ರೀನಗರದ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಕಚೇರಿ ಮುಂದೆಯೂ ಬಿಜೆಪಿ ಕಾರ್ಯಕರ್ತರು ರಾಷ್ಟ್ರಧ್ವಜವನ್ನು ಹಾರಿಸುವ ಪ್ರಯತ್ನ ಮಾಡಿದ್ದಾರೆ.

ಅಕ್ಟೋಬರ್ 13 ರಂದು ಬಂಧನದಿಂದ ಬಿಡುಗಡೆಯಾದ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಮುಖ್ಯಸ್ಥೆ ಮೆಹಬೂಬಾ ಮುಫ್ತಿ, ಜಮ್ಮು ಮತ್ತು ಕಾಶ್ಮೀರದ ಧ್ವಜವನ್ನು ಪುನಃಸ್ಥಾಪಿಸುವವರೆಗೆ ತ್ರಿವರ್ಣಧ್ವಜ ಹಿಡಿಯುವುದಿಲ್ಲ ಎಂದು ಹೇಳಿದರು. ಇದನ್ನು ವಿರೋಧಿಸಿದ್ದ ಬಿಜೆಪಿ, ದೇಶದ್ರೋಹದ ಹೇಳಿಕೆ ನೀಡಿರುವ ಮುಫ್ತಿ ಅವರನ್ನು ಬಂಧಿಸಬೇಕೆಂದು ಒತ್ತಾಯಿಸಿತ್ತು.

ಇದನ್ನೂ ಓದಿ: ದೇಶ ನಡೆಯುತ್ತಿರುವುದು ಸಂವಿಧಾನದ ಮೇಲೆ; ಬಿಜೆಪಿ ಪ್ರಣಾಳಿಕೆಯ ಮೇಲಲ್ಲ: ಮೆಹಬೂಬಾ ಮುಫ್ತಿ

370 ನೇ ವಿಧಿಯನ್ನು ಪುನಃ ಸ್ಥಾಪಿಸುವವರೆಗೆ ಮತ್ತು ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಪುನಃಸ್ಥಾಪಿಸುವವರೆಗೆ ತಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಮುಫ್ತಿ ಘೋಷಿಸಿದ್ದಾರೆ. ಆರ್ಟಿಕಲ್ 370 ರ ಪುನಃಸ್ಥಾಪನೆಗಾಗಿ ಒಟ್ಟಾಗಿ ಹೋರಾಡಲು, ಪೀಪಲ್ಸ್ ಅಲಯನ್ಸ್ ಆಫ್ ಗುಪ್ಕರ್ ಡಿಕ್ಲರೇಷನ್ (PAGD) ಅಧ್ಯಕ್ಷರಾಗಿ ನ್ಯಾಷನಲ್‌ ಕಾನ್ಫರೆನ್ಸ್‌ ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರನ್ನು ಆಯ್ಕೆ ಮಾಡಿದ ನಂತರ ಈ ಬೆಳವಣಿಗೆ ಕಂಡುಬಂದಿದೆ.

ಕಳೆದ ವಾರ ರಾಜ್ಯದ ಏಳು ಮುಖ್ಯ ರಾಜಕೀಯ ಪಕ್ಷಗಳು ಸೇರಿ PAGD ರಚಿಸಿ, 2019ರ ಆಗಸ್ಟ್ 5 ಕ್ಕಿಂತ  ಮೊದಲು ಜಮ್ಮು ಕಾಶ್ಮೀರ ಮತ್ತು ಲಡಾಖ್ ಜನರು ಹೊಂದಿದ್ದ ಎಲ್ಲಾ ಹಕ್ಕುಗಳನ್ನು ಹಿಂದಿರುಗಿಸುವಂತೆ ಭಾರತ ಸರ್ಕಾರವನ್ನು ಒತ್ತಾಯಿಸಿತ್ತು. ಜೊತೆಗೆ ಈ ಅಲಯನ್ಸ್ ಬಿಜೆಪಿ ವಿರೋಧಿ ಆದರೆ ರಾಷ್ಟ್ರ ವಿರೋಧಿ ಅಲ್ಲ ಎಂದು ಹೇಳಿತ್ತು.

ಮೂವರು ಬಿಜೆಪಿ ಕಾರ್ಯಕರ್ತರ ಗುಂಪು ಘಂಟಾ ಘರ್‌ ಮೇಲೆ ರಾಷ್ಟ್ರಧ್ವಜ ಹಾರಿಸಲು ಮುಂದಾಗಿತ್ತು. ಕೂಡಲೇ ಅವರನ್ನು ತಡೆದ ‍ಪೊಲೀಸರು ಬಂಧಿಸಿ ಕೋಟಿಬಾಗ್‌ ಠಾಣೆಗೆ ಕರೆದೊಯ್ದರು. ರಾಷ್ಟ್ರಧ್ವಜವನ್ನು  ತಮ್ಮ ಸುಪರ್ದಿಗೆ ತೆಗೆದುಕೊಂಡರು ಎಂದು ಹೇಳಲಾಗಿದೆ.

ಈ ನಡುವೆ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಹೇಳಿಕೆ ಖಂಡಿಸಿ, ಉತ್ತರ ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಮೂವರು ಮುಖಂಡರಾದ ಟಿ.ಎಸ್.ಬಜ್ವಾ, ವೇದ ಮಹಾಜನ್ ಮತ್ತು ಹುಸೇನ್-ಎ-ವಾಫಾ ಪಿಡಿಪಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.


ಇದನ್ನೂ ಓದಿ: ಚೀನಾದೊಂದಿಗೆ ರಾಜತಾಂತ್ರಿಕ ಮಾತುಕತೆ ಸಾಧ್ಯವಾದರೆ, ಪಾಕಿಸ್ತಾನದೊಂದಿಗೆ ಯಾಕಿಲ್ಲ: ಫಾರೂಕ್ ಅಬ್ದುಲ್ಲಾ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...