Homeಮುಖಪುಟತಮಿಳುನಾಡು ಲಾಕಪ್ ಡೆತ್ ಕೇಸ್: ಮೃತರಿಗೆ ಸತತ 6 ಗಂಟೆ ಚಿತ್ರಹಿಂಸೆ ನೀಡಲಾಗಿತ್ತು- ಸಿಬಿಐ

ತಮಿಳುನಾಡು ಲಾಕಪ್ ಡೆತ್ ಕೇಸ್: ಮೃತರಿಗೆ ಸತತ 6 ಗಂಟೆ ಚಿತ್ರಹಿಂಸೆ ನೀಡಲಾಗಿತ್ತು- ಸಿಬಿಐ

ಪೊಲೀಸರು ತಮ್ಮ ಅಪರಾಧವನ್ನು ಮುಚ್ಚಿಹಾಕಲು ಬೆನ್ನಿಕ್ಸ್ ಮತ್ತು ಜಯರಾಜ್ ವಿರುದ್ಧ ಸುಳ್ಳು ಎಫ್ಐಆರ್ ದಾಖಲಿಸಿದ್ದಾರೆ. ಇಬ್ಬರು ಲಾಕ್‌ಡೌನ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿಲ್ಲ ಎಂದು ಸಿಬಿಐ ಹೇಳಿದೆ.

- Advertisement -
- Advertisement -

ಕಳೆದ ಜೂನ್‌ನಲ್ಲಿ ದೇಶಾದ್ಯಂತ ಭಾರಿ ಕೋಲಾಹಲಕ್ಕೆ ಕಾರಣವಾದ ತಮಿಳುನಾಡಿನ ಜಯರಾಜ್ ಮತ್ತು ಅವರ ಪುತ್ರ ಬೆನ್ನಿಕ್ಸ್ ಅವರ ಲಾಕಪ್ ಡೆತ್  ಪ್ರಕರಣದಲ್ಲಿ ಪೊಲೀಸರು ಸತತ ಆರುಗಂಟೆಗಳ ಕಾಲ ಇಬ್ಬರನ್ನು ಹಿಂಸಿದ್ದಾರೆ ಎಂದು ಸಿಬಿಐ ದೃಢಪಡಿಸಿದೆ.

ಕಳೆದ ಜೂನ್‌ನಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ಮೊಬೈಲ್ ಫೋನ್ ಅಂಗಡಿಯೊಂದನ್ನು ನಡೆಸುತ್ತಿದ್ದ ತಂದೆ-ಮಗ ಜೋಡಿಯನ್ನು ಲಾಕ್‌ಡೌನ್ ನಿಯಮ ಉಲ್ಲಂಘನೆ ಎಂಬ ಆರೋಪದ ಮೇಲೆ ಸಾಥನ್‌ಕುಲಂ ಪೊಲೀಸರು ಬಂಧಿಸಿದ್ದರು. ಇಬ್ಬರಿಗೂ ಠಾಣೆಯಲ್ಲಿ ಚಿತ್ರಹಿಂಸೆ ನೀಡಲಾಗಿತ್ತು. ಚಿತ್ರಹಿಂಸೆಯಿಂದ ಇಬ್ಬರ ಗುದನಾಳಗಳಿಂದ ರಕ್ತ ಹರಿಯುತ್ತಿತ್ತು. ನಂತರ ಅವರಿಬ್ಬರೂ  ಜೈಲಿನಲ್ಲೇ ಮೃತಪಟ್ಟಿದ್ದರು.

ಸಿಬಿಐ ಚಾರ್ಜ್‌ಶೀಟ್‌ನಲ್ಲಿ ಇವರಿಬ್ಬರನ್ನು “ಸಂಜೆ 7.45 ರಿಂದ ಮುಂಜಾನೆ 3 ಗಂಟೆಯ ವರೆಗೂ ಹಲವಾರು ಬಾರಿ ಕ್ರೂರ ಚಿತ್ರಹಿಂಸೆಗೊಳಪಡಿಸಲಾಗಿದೆ” ಎಂದು ಹೇಳಿದೆ. ತಂದೆ-ಮಗನನ್ನು ಎಷ್ಟು ಕ್ರೂರವಾಗಿ ಹಿಂಸಿಸಲಾಗಿತ್ತು ಎಂದರೆ, ಪೊಲೀಸ್ ಠಾಣೆಯ ಗೋಡೆಗಳ ಮೇಲೆಲ್ಲಾ ರಕ್ತ ಚೆಲ್ಲಿತ್ತು ಎಂದು ವಿಧಿವಿಜ್ಞಾನದ ಸಾಕ್ಷ್ಯಗಳು ತಿಳಿಸಿವೆ.

ಇದನ್ನೂ ಓದಿ: ತಮಿಳುನಾಡು ಲಾಕಪ್ ಡೆತ್: ಪೊಲೀಸರನ್ನು ವೈಭವೀಕರಿಸಿದ್ದಕ್ಕೆ ಬೇಸರವಿದೆಯೆಂದ ಸಿಂಗಂ ನಿರ್ದೇಶಕ ’ಹರಿ’

ಚಿತ್ರಹಿಂಸೆಯಿಂದಾದ ಗಾಯಗಳು ಬೆನ್ನಿಕ್ಸ್‌ ಸಾವಿಗೆ ಕಾರಣವಾಗಿವೆ ಎಂದು ಮರಣೋತ್ತರ ವರದಿಯಲ್ಲಿ ತಿಳಿಸಲಾಗಿದೆ. ಚಿತ್ರಹಿಂಸೆಯಿಂದ  ಪೊಲೀಸ್ ಠಾಣೆಯಲ್ಲಿ ಚೆಲ್ಲಿದ ರಕ್ತದ ಕಲೆಗಳನ್ನು ತನ್ನದೆ ಬಟ್ಟೆಯಲ್ಲಿ ಒರೆಸಲು ಬೆನ್ನಿಕ್ಸ್‌ಗೆ ಪೊಲೀಸರು ಒತ್ತಾಯಿಸಿದ್ದರು.

ಪೊಲೀಸರು ತಮ್ಮ ಅಪರಾಧವನ್ನು ಮುಚ್ಚಿಹಾಕಲು ಬೆನ್ನಿಕ್ಸ್ ಮತ್ತು ಜಯರಾಜ್ ವಿರುದ್ಧ ಸುಳ್ಳು ಎಫ್ಐಆರ್ ದಾಖಲಿಸಿದ್ದಾರೆ. ಇಬ್ಬರು ಲಾಕ್‌ಡೌನ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿಲ್ಲ ಎಂದು ತನಿಖೆಯಿಂದ ತಿಳಿದುಬಂದಿದೆ ಎಂದು ಸಿಬಿಐ ಹೇಳಿದೆ.

ಪೊಲೀಸರು ಸಾಕ್ಷಿಗಳನ್ನು ನಾಶಪಡಿಸಿದರು. ರಕ್ತದಿಂದ ತುಂಬಿದ್ದ ತಂದೆ ಮತ್ತು ಮಗನ ಬಟ್ಟೆಗಳನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಡಸ್ಟ್‌ಬಿನ್‌ನಲ್ಲಿ ಎಸೆದಿದ್ದರು ಎಂದು ಸಿಬಿಐ ತನ್ನ ಚಾರ್ಜ್‌ಶೀಟ್‌ನಲ್ಲಿ ತಿಳಿಸಿದೆ.

“ಬೆನ್ನಿಕ್ಸ್ ಮತ್ತು ಜಯರಾಜ್ ಅವರಿಗೆ ಸಾಥನ್‌ಕುಲಂ ಪೊಲೀಸ್ ಠಾಣೆಯಲ್ಲಿ ಜೂನ್ 19 ಮತ್ತು20ರ ಮಧ್ಯರಾತ್ರಿ ಪೊಲೀಸ್ ಅಧಿಕಾರಿಗಳು ಕ್ರೂರ ಚಿತ್ರಹಿಂಸೆ ಮಾಡಿದ್ದಾರೆ ಎಂಬ ಅಂಶವು ದೃಢಪಟ್ಟಿದೆ” ಎಂದು ಸಿಬಿಐ ತಿಳಿಸಿದೆ. ಹಿಂಸೆಯ ಪರಿಣಾಮವಾಗಿ ಜೂನ್ 22 ಮತ್ತು ಜೂನ್ 23ರ ಮಧ್ಯರಾತ್ರಿಯಲ್ಲಿ ಇಬ್ಬರೂ ಸಾವನ್ನಪ್ಪಿದರು.

ಇಬ್ಬರಿಗೂ ಚಿತ್ರಹಿಂಸೆ ನೀಡಿದ ದಿನದ ಯಾವುದೇ ಸಿಸಿಟಿವಿ ದೃಶ್ಯಾವಳಿಗಳು ಇರಲಿಲ್ಲ. ಸಿಸ್ಟಂನ ಹಾರ್ಡ್ ಡಿಸ್ಕ್ನಲ್ಲಿ ಸಾಕಷ್ಟು ಶೇಖರಣಾ ಸ್ಥಳವಿದ್ದರೂ ಪೊಲೀಸ್ ಠಾಣೆಯಲ್ಲಿ ಭದ್ರತಾ ಕ್ಯಾಮೆರಾಗಳನ್ನು ಪ್ರತಿದಿನ ಸ್ವಯಂಚಾಲಿತವಾಗಿ ದೃಶ್ಯಗಳನ್ನು ಅಳಿಸುವ ರೀತಿ ಸೆಟ್ ಮಾಡಲಾಗಿದೆ ಎಂದು ನ್ಯಾಯಾಲಯಕ್ಕೆ ಮ್ಯಾಜಿಸ್ಟ್ರೇಟ್ ತಿಳಿಸಿದ್ದರು.

ಲಾಕಪ್ ಡೆತ್ ಪ್ರಕರಣ ರಾಷ್ಟ್ರವ್ಯಾಪಿ ಆಘಾತ ಮತ್ತು ಆಕ್ರೋಶಕ್ಕೆ ಕಾರಣವಾಗಿತ್ತು. ಘಟನೆಯಲ್ಲಿ ಭಾಗಿಯಾಗಿರುವ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವ ಅಭಿಯಾನವನ್ನು ಆರಂಭವಾಗಿತ್ತು. ಲಾಕಪ್ ಡೆತ್‌ ಪ್ರಕರಣದಲ್ಲಿ ಒಂಬತ್ತು ಪೊಲೀಸರ ಮೇಲೆ ಕೊಲೆ, ಪಿತೂರಿ ಮತ್ತು ಇತರ ಅಪರಾಧಗಳಿಗೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಚಾರ್ಜ್‌‌ಶೀಟ್ ದಾಖಲಿಸಿತ್ತು.


ಇದನ್ನೂ ಓದಿ: ತಮಿಳುನಾಡು ಲಾಕಪ್ ಡೆತ್‌ ಪ್ರಕರಣ: 9 ಪೊಲೀಸರ ವಿರುದ್ಧ ಚಾರ್ಜ್‌ಶೀಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...