Homeಮುಖಪುಟಶಿರಾ ಉಪಚುನಾವಣೆ: ಕಾಂಗ್ರೆಸ್- ಜೆಡಿಎಸ್ ನಡುವೆ ನೇರ ಹಣಾಹಣಿ

ಶಿರಾ ಉಪಚುನಾವಣೆ: ಕಾಂಗ್ರೆಸ್- ಜೆಡಿಎಸ್ ನಡುವೆ ನೇರ ಹಣಾಹಣಿ

ಜೆಡಿಎಸ್ ಮತ್ತು ಬಿಜೆಪಿ ನಡುವೆ ಒಳ ಒಪ್ಪಂದ ಇರಬಹುದು. ಅದು ಕೆಲಸ ಮಾಡಿದರೆ ಕಾಂಗ್ರೆಸ್‌ಗೆ ಹಿನ್ನಡೆ ಆಗುವುದು ಖಚಿತ. ಆ ಮರ್ಮವೇ ತಿಳಿಯುತ್ತಿಲ್ಲ ಎನ್ನುತ್ತಾರೆ ಸ್ಥಳೀಯ ಪತ್ರಕರ್ತರು.

- Advertisement -
- Advertisement -

ತ್ರಿಕೋನ ಸ್ಪರ್ಧೆ ಕಂಡುಬರುತ್ತಿದ್ದ ಶಿರಾ ಉಪಚುನಾವಣೆಯಲ್ಲಿ ಬಿಜೆಪಿಗೆ ಸ್ವಲ್ಪಮಟ್ಟಿನ ಹಿನ್ನಡೆಯಾಗಿದ್ದು ಈಗ ಕಾಂಗ್ರೆಸ್-ಜೆಡಿಎಸ್ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕ್ಷೇತ್ರದಲ್ಲಿ ಠಿಕಾಣಿ ಹೂಡಿದ ಮೇಲೆ ಪಕ್ಷದ ಅಭ್ಯರ್ಥಿಗೆ ಆನೆಬಲ ಬಂದಂತಾಗಿದೆ. ಗೌಡಗೆರೆ-ಬರಗೂರು, ಕಳ್ಳಂಬೆಳ್ಳ ಭಾಗಗಳಲ್ಲಿ ಬೃಹತ್ ಸಮಾವೇಶ ಆಯೋಜಿಸಿ ಕಾರ್ಯಕರ್ತರಲ್ಲಿ ಉತ್ಸಾಹ ತುಂಬುವಂತಹ ಕೆಲಸ ಮಾಡಲಾಗಿದೆ. ಕಾಂಗ್ರೆಸ್ ಪಕ್ಷದ ಪ್ರಮುಖ ಮುಖಂಡರು ಇಡೀ ತಾಲೂಕಿನಾದ್ಯಂತ ತಂಡೋಪತಂಡವಾಗಿ ಪ್ರಚಾರ ನಡೆಸಿರುವುದು ಪ್ರಬಲ ಪೈಪೋಟಿಗೆ ಕಾರಣವಾಗಿದೆ.

ದೇವೇಗೌಡರು ಮಧುಗಿರಿ ತಾಲೂಕು ಬಡವನಹಳ್ಳಿ ಸಮೀಪದ ಕೈಮರದ ಶಾಸಕ ವೀರಭದ್ರಯ್ಯ ಅವರ ಮನೆಯಲ್ಲಿ ಬೀಡುಬಿಟ್ಟಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಗೌಡಗೆರೆ ಹೋಬಳಿಯಲ್ಲಿ ನೆಲೆಸಿದ್ದಾರೆ. ಸಂಸದ ಪ್ರಜ್ವಲ್ ರೇವಣ್ಣ ಕೂಡ ಶಿರಾ ಕ್ಷೇತ್ರದಲ್ಲೇ ಉಳಿದು ಪಕ್ಷದ ಅಭ್ಯರ್ಥಿ ಪರ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಮತದಾರರ ನಿರೀಕ್ಷೆಯಂತೆ ಜೆಡಿಎಸ್ ವರಿಷ್ಠರು ಕ್ಷೇತ್ರದಲ್ಲಿ ಕೊನೆಯ ಗಳಿಗೆಯಲ್ಲಿ ಪ್ರಚಾರವನ್ನು ತೀವ್ರಗೊಳಿಸಿದ್ದು ಮತದಾರರ ಮನ ಗೆಲ್ಲಲು ಹರಸಾಹಸಪಡುತ್ತಿದ್ದಾರೆ.

ಪಕ್ಷದ ಅಭ್ಯರ್ಥಿ ಅಮ್ಮಾಜಮ್ಮ ಮತ್ತು ಪುತ್ರ ಪ್ರಕಾಶ್ ವೇದಿಕೆಯಲ್ಲಿ ಕಣ್ಣೀರು ಸುರಿಸುತ್ತಾ ಮತದಾರರ ಅನುಕಂಪ ಗಿಟ್ಟಿಸುತ್ತಿದ್ದಾರೆ. ಅವರಿಬ್ಬರಿಗೆ ಭಾಷಣ ಕಲೆ ಗೊತ್ತಿಲ್ಲ. ಆದರೆ ಮಾಜಿ ಪ್ರಧಾನಿ ಮತ್ತು ಮಾಜಿ ಮುಖ್ಯಮಂತ್ರಿಗಳು ತಮ್ಮ ಅವಧಿಯಲ್ಲಿ ರೈತರ ಸಾಲ ಮನ್ನಾ ಮಾಡಿದ್ದನ್ನು ಪ್ರಸ್ತಾಪಿಸಿ ಜೆಡಿಎಸ್ ಅಭ್ಯರ್ಥಿಗೆ ಮತ ಚಲಾಯಿಸುವಂತೆ ಮನವಿ ಮಾಡುತ್ತಿರುವುದು ಸಾಮಾನ್ಯವಾಗಿ ಕಂಡುಬಂದಿದೆ. ಪಕ್ಷದ ಪ್ರಮುಖ ಮುಖಂಡರ ಅಗಮನ ಜೆಡಿಎಸ್‌ಗೆ ಚೈತನ್ಯ ಬಂದಂತಾಗಿದೆ. ಕಾರ್ಯಕರ್ತರು ಹುರುಪಿನಿಂದ ಪ್ರಚಾರದಲ್ಲಿ ಭಾಗವಹಿಸುವುದು ಕಂಡುಬರುತ್ತಿದೆ. ಇದುವರೆಗೆ ಮಂಕಾಗಿದ್ದ ಮತದಾರರು ಮತ್ತು ಸ್ಥಳೀಯ ಮುಖಂಡರಲ್ಲಿ ಪಕ್ಷದ ಪ್ರಮುಖರ ಆಗಮನದಿಂದ ಅತ್ಯಂತ ಉತ್ಸಾಹದ ಬುಗ್ಗೆ ಚಿಮ್ಮುತ್ತಿದೆ.

ಕಾಂಗ್ರೆಸ್ ಮೊದಲಿನಿಂದಲೂ ಪ್ರಚಾರದಲ್ಲಿ ಮುಂದಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಸಂತೋಷ ಲಾಡ್, ಕಂಪ್ಲಿಯ ಗಣೇಶ್, ಪುಟ್ಟರಂಗಶೆಟ್ಟಿ, ಷಡಕ್ಷರಿ, ಎಂ.ಡಿ. ಲಕ್ಷ್ಮೀನಾರಾಯಣ, ಬಿ.ಎಲ್.ಶಂಕರ್, ಬಿ.ಕೆ.ಹರಿಪ್ರಸಾದ್ ಮತ್ತು ಜಿಲ್ಲೆಯ ಪ್ರಮುಖ ನಾಯಕರ ತಂಡ ಪ್ರತಿಯೊಂದು ಹೋಬಳಿಯಲ್ಲೂ ಪ್ರಚಾರ ನಡೆಸಿ ಹೋಗಿದೆ. ಜಾತಿ ಲೆಕ್ಕಾಚಾರವನ್ನೂ ಕಾಂಗ್ರೆಸ್ ಹಾಕಿದಂತೆ ಕಾಣುತ್ತಿದೆ. ಅದೇ ಕಾರಣಕ್ಕಾಗಿಯೇ ಪಕ್ಷದ ಎಲ್ಲಾ ವಿಭಾಗಗಳ ಮುಖಂಡರು ಕೂಡ ಪ್ರಚಾರದಲ್ಲಿ ಭಾಗಿಯಾಗಿರುವುದು ಕಾಂಗ್ರೆಸ್‌ಗೆ ಲಾಭವಾಗಲಿದೆ.

ಪ್ರಚಾರ ಸಂದರ್ಭದಲ್ಲಿ ಕಾಡುಗೊಲ್ಲರ ಮುಖಂಡರು ಸಿದ್ದರಾಮಯ್ಯ ಅವರಿಗೆ ಕಂಬಳಿ ಸನ್ಮಾನ ಮಾಡಿ ಕುರಿಯೊಂದನ್ನು ನೀಡಿರುವುದು ಕಾಂಗ್ರೆಸ್ ಅಭ್ಯರ್ಥಿಗೆ ಪ್ಲಸ್ ಪಾಯಿಂಟ್ ಆಗಲಿದೆ. ಕಾಂಗ್ರೆಸ್ ಪಕ್ಷ ಒಕ್ಕಲಿಗರು, ದಲಿತರು, ಬಲಜಿಗರು, ಕಾಡುಗೊಲ್ಲರು, ಕುರುಬರು, ಅಲ್ಪಸಂಖ್ಯಾತರು, ನೇಕಾರರು ಹೀಗೆ ಎಲ್ಲಾ ಸಮುದಾಯಗಳ ಮುಖಂಡರನ್ನು ಕರೆಸಿ ಪ್ರಚಾರದಲ್ಲಿ ತೊಡಗುವಂತೆ ಮಾಡಿ ಆಯಾ ಸಮುದಾಯದ ಮತದಾರರಿಗೆ ಸಂದೇಶ ಹೋಗುವಂತೆ ಮಾಡಿದೆ. ಕುರುಬರು, ಕಾಡುಗೊಲ್ಲರು, ಅಲ್ಪಸಂಖ್ಯಾತರು, ನಾಯಕರು, ದಲಿತರು ಸೇರಿದಂತೆ ಅಹಿಂದ ವರ್ಗದ ಮತದಾರರನ್ನು ತನ್ನಡೆಗೆ ಸೆಳೆಯುವಂತಹ ಎಲ್ಲಾ ಪ್ರಯತ್ನಗಳಲ್ಲೂ ಕಾಂಗ್ರೆಸ್ ಯಶಸ್ವಿಯಾಗಿದೆ ಎಂದು ಹೇಳಲಾಗುತ್ತಿದೆ.

ಶಿರಾ, ಮಡಕಶಿರಾ, ಪಾವಗಡ ಕ್ಷೇತ್ರದಲ್ಲಿ ಸ್ವಲ್ಪಮಟ್ಟಿನ ಪ್ರಭಾವವನ್ನು ಹೊಂದಿರುವ ಆಂಧ್ರಪ್ರದೇಶದ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಘುವೀರಾ ರೆಡ್ಡಿ ಅವರನ್ನು ಟಿ.ಬಿ.ಜಯಚಂದ್ರ ಭೇಟಿ ಮಾಡಿದ್ದಾರೆ. ಯುವ ಮುಖಂಡ ಕೆ.ಎನ್.ರಾಜಣ್ಣ ಪುತ್ರ ಆರ್.ರಾಜೇಂದ್ರ ಕೂಡ ಭೇಟಿ ಮಾಡಿ ಪಕ್ಷದ ಅಭ್ಯರ್ಥಿಗೆ ಗೆಲುವಿಗೆ ನೆರವಾಗುವಂತೆ ಮನವಿ ಮಾಡಿ ಬಂದಿದ್ದು ಬಿಜೆಪಿ ಎಲ್ಲಾ ಪಟ್ಟುಗಳನ್ನು ತಿರುವುಮುರುವಾಗುವಂತೆ ಮಾಡಿದೆ. ತಂಡತಂಡಗಳಲ್ಲಿ ಮಹಿಳಾ ಮುಖಂಡರು ಕೂಡ ಹೆಚ್ಚಿನ ಪ್ರಚಾರ ನಡೆಸಿದ್ದು ಮತದಾರರನ್ನು ಭೇಟಿ ಮಾಡುವಲ್ಲಿ ಸಫಲರಾಗಿದ್ದಾರೆ.

ಚುನಾವಣೆ ಘೋಷಣೆ ಆಗುವುದಕ್ಕೂ ಮೊದಲಿನಿಂದ ಇದುವರೆಗೆ ಬಿಜೆಪಿ ಮತ್ತು ಜೆಡಿಎಸ್‌ನಿಂದ ಕಾಂಗ್ರೆಸ್ ಪಕ್ಷಕ್ಕೆ 5 ಸಾವಿರ ಕಾರ್ಯಕರ್ತರು ಸೇರ್ಪಡೆಯಾಗಿದ್ದಾರೆ ಎನ್ನುತ್ತವೆ ಕಾಂಗ್ರೆಸ್ ಮೂಲಗಳು. ಬಿಜೆಪಿಯ ನಗರ ಘಟಕದ ಅಧ್ಯಕ್ಷ ಬಂಡಿ ರಮೇಶ್, ಗ್ರಾಮ ಪಂಚಾಯ್ತಿ ಮುಖಂಡ ರಾಜಕುಮಾರ್ ಹೀಗೆ ಅಕ್ಟೋಬರ್ ೨೪ರಂದೇ ೪೦ ಮಂದಿ ಬೇರೆ ಪಕ್ಷಗಳ ಪ್ರಮುಖ ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಇದು ಕಾಂಗ್ರೆಸ್‌ಗೆ ಚುನಾವಣಾ ಸಮಯದಲ್ಲಿ ಒಂದು ರೀತಿಯಲ್ಲಿ ಒಳ್ಳೆಯದೇ ಆದರೂ ಮುಂದಿನ ದಿನಗಳಲ್ಲಿ ಕಿರಿಕಿರಿಗೆ ಕಾರಣವಾಗಲೂಬಹುದು.
ಕಾಂಗ್ರೆಸ್ ಮತ್ತು ಜೆಡಿಎಸ್ ಪ್ರಮುಖ ನಾಯಕರು ಬಂದ ನಂತರ ಶಿರಾ ಕ್ಷೇತ್ರದ ಚಿತ್ರಣವೇ ಬದಲಾಗಿದೆ ಮತ್ತು ಬಿಜೆಪಿಯಲ್ಲಿ ಮೊದಲು ಇದ್ದ ಉತ್ಸಾಹ ಕುಸಿದಿದೆ. ಹಾಗಾಗಿ ಬಿಜೆಪಿ ಮೂರನೇ ಸ್ಥಾನಕ್ಕೆ ಹೋಗುವಂತಹ ಸನ್ನಿವೇಶ ನಿರ್ಮಾಣವಾಗಿದೆ ಎನ್ನುತ್ತಾರೆ ಜನ.

ಬಿಜೆಪಿಯ ಆರಂಭ ಶೂರತ್ವ ನಂತರದ ದಿನಗಳಲ್ಲಿ ಕಾಣದಂತಾಗಿದೆ. ನಾಮಪತ್ರ ಸಲ್ಲಿಸುವ ಮುನ್ನ ಕೆಲ ಬಿಜೆಪಿ ನಾಯಕರು ಕ್ಷೇತ್ರಕ್ಕೆ ಬಂದು ಹೋದರು. ನಂತರ ವಿಜಯೇಂದ್ರ ಕ್ಷೇತ್ರದಲ್ಲಿ ಠಿಕಾಣಿ ಹೂಡಿದ ಮೇಲೆ ನೆಪ ಮಾತ್ರಕ್ಕೆ ಉಪಮುಖ್ಯಮಂತ್ರಿಗಳಾದ ಗೋವಿಂದಕಾರಜೋಳ, ಅಶ್ವತ್ಥನಾರಾಯಣ ಒಂದು ದಿನ ಬಂದು ಪ್ರಚಾರ ನಡೆಸಿ ಹೋದರು. ಬಳಿಕ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಯುವ ಮುಖಂಡ-ಸಂಸದ ತೇಜಸ್ವಿ ಸೂರ್ಯ ಬಂದು ಜೆಡಿಎಸ್ ನಾಯಕರನ್ನು ಕೆಣಕಿ ಹೋದರು. ಮತ್ತೆ ಯಾವೊಬ್ಬ ನಾಯಕರು ಇತ್ತ ಸುಳಿದಿಲ್ಲ. ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಗೆದ್ದರೆ ಅದರ ಕ್ರೆಡಿಟ್ ವಿಜಯೇಂದ್ರ ಅವರಿಗೆ ಸಲ್ಲುತ್ತದೆ; ಆ ಕಾರಣಕ್ಕಾಗಿ ಬಿಜೆಪಿ ನಾಯಕರು ಪ್ರಚಾರದಲ್ಲಿ ಸಾಕಷ್ಟು ಭಾಗಿಯಾಗದೆ ಹಿಂದೆಸರಿದರು ಎಂದು ಹೇಳಲಾಗುತ್ತಿದೆ.

ಶಿರಾ ಕ್ಷೇತ್ರದ ಚುನಾವಣೆ ಘೋಷಣೆಯಾಗಿ ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಸಿದ ಮೇಲೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇತ್ತ ತಿರುಗಿಯೂ ನೋಡಿಲ್ಲ. ಆರ್.ಅಶೋಕ್, ಎಸ್.ಆರ್. ಬೊಮ್ಮಾಯಿ ಮತ್ತು ಆರ್.ಎಸ್.ಎಸ್ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಬಿಜೆಪಿ ಮುಖಂಡರು ಯಾರೂ ರಾಜೇಶ್ ಗೌಡ ಪರ ಪ್ರಚಾರಕ್ಕೆ ಬಂದಿಲ್ಲ. ಇದು ಬಿಜೆಪಿ ಕಾರ್ಯಕರ್ತರಲ್ಲಿ ನಿರುತ್ಸಾಹಕ್ಕೆ ಕಾರಣವಾಗಿದೆ. ಅಭ್ಯರ್ಥಿ ರಾಜೇಶ್ ಗೌಡ ಪರ ಬಿಜೆಪಿ ನಾಯಕರಲ್ಲಿ ಹೆಚ್ಚಿನ ಒಲವು ಇಲ್ಲದಿರುವುದು ಮತ್ತು ದುಡ್ಡು ಕೊಟ್ಟು ಟಿಕೆಟ್ ತಂದಿದ್ದಾರೆಂಬ ಆರೋಪಗಳು ಬಿಜೆಪಿ ಕಾರ್ಯಕರ್ತರ ಬೇಸರಕ್ಕೆ ಕಾರಣವಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಗುಸುಗುಸು ಸುದ್ದಿ:

ಜೆಡಿಎಸ್ ಮತ್ತು ಬಿಜೆಪಿ ನಡುವೆ ಒಳ ಒಪ್ಪಂದ ಇರಬಹುದು. ಅದು ಕೆಲಸ ಮಾಡಿದರೆ ಕಾಂಗ್ರೆಸ್‌ಗೆ ಹಿನ್ನಡೆ ಆಗುವುದು ಖಚಿತ. ಆ ಮರ್ಮವೇ ತಿಳಿಯುತ್ತಿಲ್ಲ ಎನ್ನುತ್ತಾರೆ ಸ್ಥಳೀಯ ಪತ್ರಕರ್ತರು.

  • ಕೆ.ಈ ಸಿದ್ದಯ್ಯ

ಇದನ್ನೂ ಓದಿ; RR ನಗರ ಉಪಚುನಾವಣೆ: ಮತದಾರರ ಹಾಟ್ ಫೇವರಿಟ್ ಯಾರು ಎಂಬುದು ಇನ್ನೂ ನಿಗೂಢ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...