Homeಮುಖಪುಟಬಿಹಾರ: ನೀತಿ ಸಂಹಿತೆ ಉಲ್ಲಂಘನೆ; ಬಿಜೆಪಿ ಸಚಿವರ ವಿರುದ್ಧ ಎಫ್‌ಐಆರ್‌!

ಬಿಹಾರ: ನೀತಿ ಸಂಹಿತೆ ಉಲ್ಲಂಘನೆ; ಬಿಜೆಪಿ ಸಚಿವರ ವಿರುದ್ಧ ಎಫ್‌ಐಆರ್‌!

ಗಯಾ ಮೂಲದ ಶಾಸಕರಾಗಿರುವ ಪ್ರೇಮ್ ಕುಮಾರ್ ಬಿಜೆಪಿ ಪಕ್ಷದ ಕಮಲದ ಗುರುತಿರುವ ಮಾಸ್ಕ್ ಧರಿಸಿ ಮತ ಚಲಾಯಿಸಲು ಬೈಸಿಕಲ್‌ನಲ್ಲಿ ಬಂದಿದ್ದರು

- Advertisement -
- Advertisement -

ಗಯಾದ ಬಿಜೆಪಿ ಅಭ್ಯರ್ಥಿ ಮತ್ತು ಕೃಷಿ ಸಚಿವ ಪ್ರೇಮ್ ಕುಮಾರ್ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಕ್ಕಾಗಿ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಂಡ ಜಿಲ್ಲಾಡಳಿತ ಇಂದು ಕೊಟ್ವಾಲಿ ಪೊಲೀಸ್‌ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದೆ.

ತಮ್ಮ ಪಕ್ಷದ ಕಮಲದ ಗುರುತಿರುವ ಮುಖವಾಡ (ಮಾಸ್ಕ್) ಧರಿಸಿ ಗಯಾ ಮೂಲದ ಶಾಸಕರಾಗಿರುವ ಪ್ರೇಮ್ ಕುಮಾರ್ ಅವರು ಮತ ಚಲಾಯಿಸಲು ಬೈಸಿಕಲ್‌ನಲ್ಲಿ ಬಂದಿದ್ದರು. ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆ ಎಂದು ಮತದಾನದ ಕರ್ತವ್ಯದಲ್ಲಿದ್ದ ಅಧಿಕಾರಿಗಳು ಸಚಿವರನ್ನು ತಡೆದರು.

ಮುಖ್ಯ ಚುನಾವಣಾ ಅಧಿಕಾರಿ ಎಚ್.ಆರ್.ಶ್ರೀನವಾಸ ಅವರ ಪ್ರಕಾರ, “ಜಿಲ್ಲಾಡಳಿತದ ಅಧಿಕಾರಿಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಕೃಷಿ ಸಚಿವರು ತಮ್ಮ ಪಕ್ಷದ ಗುರುತು ಹೊಂದಿರುವ ಮಾಸ್ಕ್‌ ಧರಿಸಿ ಮತ ಚಲಾಯಿಸಿದರು ಮಾತ್ರವಲ್ಲದೆ ಗೆಲುವು ಸಾಧಿಸಿರುವುದಾಗಿಯೂ ಹೇಳಿಕೊಂಡಿದ್ದಾರೆ. ಕಮಲದ ಗುರುತಿನ ಮುಖವಾಡ ಧರಿಸಿ ಬೂತ್‌ಗೆ ಹೋಗಿದ್ದಕ್ಕಾಗಿ ಆತನ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆಯ ಪ್ರಕರಣ ದಾಖಲಾಗಿದೆ. ಡಿಎಂ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲು ಆದೇಶಿಸಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿ: ನೀತಿಸಂಹಿತೆ ಉಲ್ಲಂಘನೆ ಆರೋಪ: RR ನಗರ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ವಿರುದ್ಧ ಪ್ರಕರಣ ದಾಖಲು

ಇದರ ನಡುವೆ ಹೇಳಿಕೆ ನೀಡಿರುವ ಸಚಿವರು, ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸುವ ಉದ್ದೇಶವಿಲ್ಲ ಎಂದು ಮಾಧ್ಯಮಗಳಿಗೆ ತಿಳಿಸಿದರು. “ನಾನು ಬಿಜೆಪಿ ಚಿಹ್ನೆಯ ಕಮಲದ ಗುರುತಿನ ಮಾಸ್ಕ್‌ ಅನ್ನು ತೆಗೆದುಹಾಕಲು ಮರೆತು ಮತ ಚಲಾಯಿಸಿದೆ. ಅರಿತುಕೊಂಡ ಕೂಡಲೇ ನಾನು ಅದನ್ನು ತೆಗೆದುಹಾಕಿದೆ” ಎಂದು ಅವರು ಹೇಳಿದ್ದಾರೆ.

ಗಯಾದ 230 ಪ್ರದೇಶಗಳ ವಲಯ ಮ್ಯಾಜಿಸ್ಟ್ರೇಟ್ ಬಿಪಿನ್ ಕುಮಾರ್ ಅವರು ಕೊಟ್ವಾಲಿ ಪೊಲೀಸ್ ಠಾಣೆಗೆ ಎಫ್ಐಆರ್ ದಾಖಲಿಸಲು ಆದೇಶಿಸಿದ್ದಾರೆ. ಕೊಟ್ವಾಲಿ ಪೊಲೀಸರು, 171 (ಎಫ್)/188,128/130 ಆರ್‌ಪಿ ಕಾಯ್ದೆ 1951 ರ ಅಡಿಯಲ್ಲಿ ಎಫ್ಐಆರ್ (408/20) ಅನ್ನು ನೋಂದಾಯಿಸಿದ್ದಾರೆ.

ಇಂದು ಬಿಹಾರದಲ್ಲಿ ಮೊದಲ ಹಂತದ ಚುನಾವಣೆ ನಡೆದಿದೆ. ನವೆಂಬರ್‌ ೧೦ ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ.


ಇದನ್ನೂ ಓದಿ: ಚುನಾವಣಾ ನೀತಿಸಂಹಿತೆ ಉಲ್ಲಂಘನೆ ಆರೋಪದಡಿ ಯಡಿಯೂರಪ್ಪಗೆ ಸಮನ್ಸ್ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...