Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಪ.ಬಂಗಾಳದಲ್ಲಿ ಹಿಂದೂಗಳ ಮೇಲೆ ಮತ್ತೊಮ್ಮೆ ಹಲ್ಲೆ ನಡೆದಿದೆಯೇ?

ಫ್ಯಾಕ್ಟ್‌ಚೆಕ್: ಪ.ಬಂಗಾಳದಲ್ಲಿ ಹಿಂದೂಗಳ ಮೇಲೆ ಮತ್ತೊಮ್ಮೆ ಹಲ್ಲೆ ನಡೆದಿದೆಯೇ?

ಫೇಸ್‌ಬುಕ್‌ನ ಬಳಕೆದಾರರೊಬ್ಬರು,"ಬಾಂಗ್ಲಾದಲ್ಲಿ ಮತ್ತೆ, ದೀದಿಯ ಪೊಲೀಸರು ಹಿಂದೂ ಧರ್ಮದ ಮೇಲೆ ಹಲ್ಲೆ ಮಾಡಿದ್ದನ್ನು ಖಂಡಿಸುತ್ತೇನೆ” ಎಂದು ಹೇಳಿಕೊಂಡಿದ್ದಾರೆ.

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಮತ್ತೊಮ್ಮೆ ಹಿಂದೂ ಧರ್ಮದ ಮೇಲೆ ಆಕ್ರಮಣ ಮಾಡಿದ್ದಾರೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವು ಬಳಕೆದಾರರು ಚಿತ್ರಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಫೇಸ್‌ಬುಕ್‌ನ ಬಳಕೆದಾರರೊಬ್ಬರು,”ಬಾಂಗ್ಲಾದಲ್ಲಿ ಮತ್ತೆ, ದೀದಿಯ ಪೊಲೀಸರು ಹಿಂದೂ ಧರ್ಮದ ಮೇಲೆ ಹಲ್ಲೆ ಮಾಡಿದ್ದನ್ನು ಖಂಡಿಸುತ್ತೇನೆ” ಎಂದು ಹೇಳಿಕೊಂಡಿದ್ದಾರೆ.

ಈ ಪೋಸ್ಟ್‌ನ ಆರ್ಕೈವ್ ಆವೃತ್ತಿಯನ್ನು ಇಲ್ಲಿ ನೋಡಬಹುದು. ಇದೇ ಹೇಳಿಕೆಯೊಡನೆ ಅನೇಕರು ಇದೇ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್:

ಈ ಚಿತ್ರಗಳು ಬಿಹಾರದ ಮುಂಗೆರ್‌ನಲ್ಲಿ ನಡೆದ ಘಟನೆಯದ್ದಾಗಿದೆ. ಅಕ್ಟೋಬರ್ 26, ಸೋಮವಾರ ಬಿಹಾರದ ಮುಂಗೆರ್‌ನಲ್ಲಿ ದುರ್ಗಾ ಪೂಜಾ ಮೆರವಣಿಗೆಯ ವೇಳೆ ನಡೆದ ಘರ್ಷಣೆಯ ನಡುವೆ ಪೊಲೀಸರು ಗುಂಡು ಹಾರಿಸಿದ ನಂತರ ಅನುರಾಗ್ ಪೋದ್ದಾರ್ (25) ಸಾವನ್ನಪ್ಪಿದ್ದರು ಎಂದು ಕ್ವಿಂಟ್ ವರದಿ ಮಾಡಿದ್ದ ವೈರಲ್ ವೀಡಿಯೊದಲ್ಲಿ ಈ ಚಿತ್ರಗಳು ಕಂಡುಬಂದಿವೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಹತ್ರಾಸ್‌ ಭೇಟಿಯ ಫೋಟೋದಲ್ಲಿ ಪ್ರಿಯಾಂಕಾ ಗಾಂಧಿ ಅಪ್ಪಿಕೊಂಡಿದ್ದ ಮಹಿಳೆ ಯಾರು?

ಜನಸಮೂಹವನ್ನು ಚದುರಿಸುವ ಪ್ರಯತ್ನದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಬೇಕಾಯಿತು ಎಂದು ಪೊಲೀಸರು ಹೇಳಿದ್ದಾರೆ. ಜನಸಮೂಹವು ತನ್ನ ಕಡೆಯಿಂದ ಪ್ರತಿದಾಳಿ ನಡೆಸಿತು ಎಂದು ಪೊಲೀಸರು ಆರೋಪಿಸಿದ್ದಾರೆ.

ಪಂಡಲ್ ಸಂಘಟಕರು ಮತ್ತು ಪೊಲೀಸರ ನಡುವಿನ ಘರ್ಷಣೆಯಲ್ಲಿ ಸುಮಾರು 30 ಜನರು ಗಾಯಗೊಂಡಿದ್ದರು.

ಘಟನೆಯ ಅದೇ ದೃಶ್ಯಗಳನ್ನು ಹೊತ್ತ ಟೈಮ್ಸ್ ಆಫ್ ಇಂಡಿಯಾ ವರದಿಯು ಮುಂಗೆರ್ ಎಸ್‌ಪಿ ಲಿಪಿ ಸಿಂಗ್ ಅವರ ಹೇಳಿಕೆಯನ್ನು ಉಲ್ಲೇಖಿಸಿ, “ಘಟನೆಯ ಸಮಯದಲ್ಲಿ ಭದ್ರತಾ ಸಿಬ್ಬಂದಿಯ ಕಡೆಯಿಂದ ಯಾವುದೇ ಗುಂಡಿನ ದಾಳಿ ನಡೆದಿಲ್ಲ. ಹಿಂಸಾತ್ಮಕ ಪ್ರಚೋದನೆ ನೀಡುತ್ತಿದ್ದ ಗುಂಪನ್ನು ಚದುರಿಸಲು ಲಾಠಿ ಚಾರ್ಜ್ ನಡೆಯಿತು. ಪೊಲೀಸರು ಗರಿಷ್ಠ ಸಂಯಮವನ್ನು ಕಾಯ್ದುಕೊಂಡಿದ್ದಾರೆ” ಎಂದು ವರದಿ ಮಾಡಿದೆ.

ಹಾಗಾಗಿ, ಈ ಘಟನೆ ನಡೆದದ್ದು ಪಶ್ಚಿಮ ಬಂಗಾಳದಲ್ಲಿ ಅಲ್ಲ. ಬದಲಿಗೆ ಬಿಹಾರದ ಮುಂಗೆರ್‌ನಲ್ಲಿ. ವರದಿಗಳ ಪ್ರಕಾರ ಒಬ್ಬ ವ್ಯಕ್ತಿಯನ್ನು ಮಾತ್ರ ಮೃತಪಟ್ಟನೆಂದು ಘೋಷಿಸಲಾಗಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ರಾಹುಲ್ ಗಾಂಧಿ ವಿಶ್ವದ ಏಳನೇ ಹೆಚ್ಚು ವಿದ್ಯಾವಂತ ನಾಯಕ ಎಂಬುದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...