Homeಮುಖಪುಟಯುಪಿ ರಾಜ್ಯಸಭೆ ಚುನಾವಣೆ: 7 ಬಂಡಾಯ ಶಾಸಕರನ್ನು ಅಮಾನತುಗೊಳಿಸಿದ BSP!

ಯುಪಿ ರಾಜ್ಯಸಭೆ ಚುನಾವಣೆ: 7 ಬಂಡಾಯ ಶಾಸಕರನ್ನು ಅಮಾನತುಗೊಳಿಸಿದ BSP!

ಬಂಡಾಯ ಶಾಸಕರು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರನ್ನು ಬುಧವಾರ ಭೇಟಿಯಾಗಿದ್ದು, ಅವರು ಪಕ್ಷ ಬದಲಿಸಬಹುದು ಎಂಬ ಊಹಾಪೋಹಗಳಿಗೆ ಬಲ ನೀಡಿದ್ದರು.

- Advertisement -
- Advertisement -

ಉತ್ತರಪ್ರದೇಶದ ರಾಜ್ಯಸಭಾ ಚುನಾವಣೆಗೆ ಬಹುಜನ ಸಮಾಜ ಪಕ್ಷದ (BSP) ಅಧಿಕೃತ ಅಭ್ಯರ್ಥಿ ರಾಮ್‌ಜೀ ಗೌತಮ್ ಅವರನ್ನು ನಾಮನಿರ್ದೇಶನವನ್ನು ವಿರೋಧಿಸಿದ್ದ ಪಕ್ಷದ ಏಳು ಬಂಡಾಯ ಶಾಸಕರನ್ನು ಮುಖ್ಯಸ್ಥೆ ಮಾಯಾವತಿ ಇಂದು ಅಮಾನತುಗೊಳಿಸಿದ್ದಾರೆ. 7 ಶಾಸಕರಲ್ಲಿ ಚೌಧರಿ ಅಸ್ಲಂ ಅಲಿ, ಹಕೀಮ್ ಲಾಲ್ ಬೈಂದ್, ಮೊಹಮ್ಮದ್ ಮುಜತಾಬಾ ಸಿದ್ದಿಕಿ, ಅಸ್ಲಂ ರೈನಿ, ಸುಷ್ಮಾ ಪಟೇಲ್, ಹರ್ಗೋವಿಂದ್ ಭಾರ್ಗವ ಮತ್ತು ಬಂದನಾ ಸಿಂಗ್ ಸೇರಿದ್ದಾರೆ.

ಬಂಡಾಯ ಶಾಸಕರು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರನ್ನು ಬುಧವಾರ ಭೇಟಿಯಾಗಿದ್ದು, ಅವರು ಪಕ್ಷ ಬದಲಿಸಬಹುದು ಎಂಬ ಊಹಾಪೋಹಗಳಿಗೆ ಬಲ ನೀಡಿದ್ದರು.

ಇದನ್ನೂ ಓದಿ: ಕಾಂಗ್ರೆಸ್‌ಗೆ ಪಕ್ಷಾಂತರಗೊಂಡಿದ್ದ 6 ಶಾಸಕರ ಕುರಿತ ಬಿಎಸ್‌ಪಿ ಅರ್ಜಿ ವಜಾಗೊಳಿಸಿದ ಸುಪ್ರೀಂ

ಅವರಲ್ಲಿ ನಾಲ್ವರು, ರಾಮ್‌ಜೀ ಗೌತಮ್ ಅವರ ಹೆಸರನ್ನು ರಾಜ್ಯಸಭಾ ಚುನಾವಣೆಗೆ ನಾಮನಿರ್ದೇಶನ ಮಾಡುವ ಬಗ್ಗೆ ತಮ್ಮ ಸಹಿಯನ್ನು ನಕಲಿ ಮಾಡಲಾಗಿದೆ ಎಂದು ಅಫಿಡವಿಟ್ ಸಹ ಸಲ್ಲಿಸಿದ್ದರೆಂದು ಹಿಂದೂಸ್ಥಾನ್ ಟೈಮ್ಸ್ ವರದಿ ಮಾಡಿದೆ.

ಇದರ ನಡುವೆಯೇ ಖಾಲಿ ಬಿದ್ದಿರುವ 10 ಉತ್ತರ ಪ್ರದೇಶದ ಸ್ಥಾನಗಳಿಗೆ ನವೆಂಬರ್ 9 ರ ಚುನಾವಣೆಗೆ BSP ಅಭ್ಯರ್ಥಿಯಾಗಿ ರಾಮ್‌ಜೀ ಗೌತಮ್ ಅವರ ನಾಮನಿರ್ದೇಶನವನ್ನು ರಿಟರ್ನಿಂಗ್ ಅಧಿಕಾರಿ ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿ: ಸಿಎಎ, ಎನ್‌ಪಿಆರ್, ಆರ್ಥಿಕತೆಯ ವಿರುದ್ಧ ಪ್ರತಿಪಕ್ಷಗಳ ಸಭೆ ಇಂದು: ಟಿಎಂಸಿ, ಬಿಎಸ್‌ಪಿ, ಆಪ್‌ ಗೈರು..

ಮಾಯಾವತಿ ಅವರ ಪಕ್ಷವು ಸೋಮವಾರ ರಾಜ್ಯಸಭಾ ಚುನಾವಣೆಗೆ ರಾಮ್‌ಜೀ ಗೌತಮ್‌ಗೆ ಸಾಕಷ್ಟು ಬೆಂಬಲವಿಲ್ಲದಿದ್ದರೂ ಸಹ ಅವರನ್ನು ಕಣಕ್ಕಿಳಿಸಿತ್ತು. ಇತರ ಬಿಜೆಪಿಯೇತರ ಪಕ್ಷಗಳು ಅವರ ಉಮೇದುವಾರಿಕೆಯನ್ನು (ನಾಮನಿರ್ದೇಶನ) ಬೆಂಬಲಿಸುವ ನಿರೀಕ್ಷೆಯಿದೆ ಎಂದು BSP ನಾಯಕರು ಸೂಚಿಸಿದ್ದರು.

ಒಟ್ಟಾರೆಯಾಗಿ, ಬಿಜೆಪಿಯ ಎಂಟು ಮಂದಿ ಸೇರಿದಂತೆ 11 ಅಭ್ಯರ್ಥಿಗಳು ಉತ್ತರಪ್ರದೇಶದ 10 ರಾಜ್ಯಸಭಾ ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ.

ಖಾಲಿಯಿರುವ ಉತ್ತರ ಪ್ರದೇಶದ ಈ 10 ರಾಜ್ಯಸಭಾ ಸ್ಥಾನಗಳಲ್ಲಿ ಮೂರು ಸ್ಥಾನಗಳನ್ನು ಈ ಹಿಂದೆ ಭಾರತೀಯ ಜನತಾ ಪಕ್ಷ (ಬಿಜೆಪಿ), 4 ಎಸ್‌ಪಿ, 2 ಬಿಎಸ್‌ಪಿ ಮತ್ತು 1 ಕಾಂಗ್ರೆಸ್ ಗೆದ್ದುಕೊಂಡಿದೆ.


ಇದನ್ನೂ ಓದಿ: ಯುಪಿ ಉಪಚುನಾವಣೆ: ಹೆಚ್ಚುತ್ತಿರುವ ಅಪರಾಧಗಳ ನೆರಳಲ್ಲಿ ಮತದಾರರು ಯಾರ ಕೈಹಿಡಿಯಲಿದ್ದಾರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...